• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ದೀಪಾವಳಿ ಸಂಭ್ರಮದಲ್ಲಿ ರೈತರಿಗೆ ಡಬಲ್ ಖುಷಿ; ಬರ ಪರಿಹಾರ ಮೊತ್ತ ಹೆಚ್ಚಿಸಿದ ಸರ್ಕಾರ!

ದೀಪಾವಳಿ ಸಂಭ್ರಮದಲ್ಲಿ ರೈತರಿಗೆ ಡಬಲ್ ಖುಷಿ; ಬರ ಪರಿಹಾರ ಮೊತ್ತ ಹೆಚ್ಚಿಸಿದ ಸರ್ಕಾರ!

ಸರ್ಕಾರದ ನಿರ್ಧಾರದಂತೆ ಪ್ರತಿ ರೈತನಿಗೆ ಒಟ್ಟು ₹5,000 ಬರ ಪರಿಹಾರ ಸಿಗಲಿದೆ. ಇದರಲ್ಲಿ ಮೊದಲ ಕಂತಿನ ₹2,500 ಅನ್ನ ಗುರುವಾರ ಬಿಡುಗಡೆ ಮಾಡಲಾಗಿದೆ. ಉಳಿದ ₹2,500 ಹಣವನ್ನ ದೀಪಾವಳಿ ಹಬ್ಬ ಮುಗಿದ ಬಳಿಕ ಎರಡನೇ ಕಂತಿನಲ್ಲಿ ಪಾವತಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Written ByPuttaraj K Alur
Published: Nov 05, 2026, 15:07 IST|Updated: Nov 05, 2026, 15:14 IST
joinshare
ದೀಪಾವಳಿ ಸಂಭ್ರಮದಲ್ಲಿ ರೈತರಿಗೆ ಡಬಲ್ ಖುಷಿ; ಬರ ಪರಿಹಾರ ಮೊತ್ತ ಹೆಚ್ಚಿಸಿದ ಸರ್ಕಾರ!
Image Credit: DK Shivakumar

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Diwali Gift for Farmers: ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯದ ರೈತರಿಗೆ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೀಡಲಾಗುತ್ತಿರುವ ಮಧ್ಯಂತರ ಪರಿಹಾರದ ಮೊತ್ತವನ್ನ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಈ ಹಿಂದೆ ಘೋಷಿಸಲಾಗಿದ್ದ ₹2,500 ಪರಿಹಾರದ ಮೊತ್ತಕ್ಕೆ ಹೆಚ್ಚುವರಿಯಾಗಿ ಮತ್ತೊಂದು ₹2,500 ಸೇರಿಸಲಾಗಿದ್ದು, ಪ್ರತಿ ರೈತನಿಗೆ ಒಟ್ಟು ₹5,000 ಬರ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ.

ಗುರುವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ರೈತರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಮೂಲಕ ಬರ ಪರಿಹಾರ ವಿತರಣೆಗೆ ಚಾಲನೆ ನೀಡಲಾಯಿತು. ಮೊದಲ ಕಂತಿನ ₹2,500 ಹಣವನ್ನ ನೇರ ನಗದು ವರ್ಗಾವಣೆ (DBT) ವ್ಯವಸ್ಥೆಯ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

ಎರಡು ಕಂತುಗಳಲ್ಲಿ ₹5,000 ಪರಿಹಾರ

ಸರ್ಕಾರದ ನಿರ್ಧಾರದಂತೆ ಪ್ರತಿ ರೈತನಿಗೆ ಒಟ್ಟು ₹5,000 ಬರ ಪರಿಹಾರ ಸಿಗಲಿದೆ. ಇದರಲ್ಲಿ ಮೊದಲ ಕಂತಿನ ₹2,500 ಅನ್ನ ಗುರುವಾರ ಬಿಡುಗಡೆ ಮಾಡಲಾಗಿದೆ. ಉಳಿದ ₹2,500 ಹಣವನ್ನ ದೀಪಾವಳಿ ಹಬ್ಬ ಮುಗಿದ ಬಳಿಕ ಎರಡನೇ ಕಂತಿನಲ್ಲಿ ಪಾವತಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರೈತರಿಗೆ ನೀಡುವುದಾಗಿ ಘೋಷಿಸಿದ್ದ ಪರಿಹಾರದ ಹಣವನ್ನ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು. ಮೊದಲ ಕಂತಿನಲ್ಲಿ ₹1,250 ಕೋಟಿ ಹಣವನ್ನ ರೈತರ ಖಾತೆಗಳಿಗೆ ವರ್ಗಾಯಿಸಲಾಗುತ್ತಿದೆ. ಡಿಬಿಟಿ ಮೂಲಕ ನೇರವಾಗಿ ಹಣ ತಲುಪಲಿದೆ. ದೀಪಾವಳಿ ಮುಗಿದ ನಂತರ ಉಳಿದ ₹2,500 ಪಾವತಿಸಲಾಗುವುದು. ಹೀಗಾಗಿ ಪ್ರತಿಯೊಬ್ಬ ರೈತನಿಗೂ ಒಟ್ಟು ₹5,000 ಪರಿಹಾರ ದೊರೆಯಲಿದೆ ಎಂದು ತಿಳಿಸಿದರು.

ಎರಡು ಎಕರೆಗಿಂತ ಹೆಚ್ಚು ಜಮೀನು ಇದ್ದರೂ ₹5,000 ಮಾತ್ರ

ಬರ ಪರಿಹಾರ ವಿತರಣೆಯಲ್ಲಿ ಸರ್ಕಾರ ನಿಗದಿಪಡಿಸಿರುವ ಮೊತ್ತದ ಕುರಿತು ಮತ್ತೊಂದು ಸ್ಪಷ್ಟನೆ ನೀಡಲಾಗಿದೆ. ರೈತರು ಹೊಂದಿರುವ ಜಮೀನಿನ ವಿಸ್ತೀರ್ಣ ಎಷ್ಟೇ ಇದ್ದರೂ ಒಬ್ಬ ರೈತನಿಗೆ ಒಟ್ಟು ₹5,000 ಮಾತ್ರ ಪರಿಹಾರವಾಗಿ ದೊರೆಯಲಿದೆ. ಪ್ರತಿ ಎಕರೆಗೆ ₹2,500ರಂತೆ ಲೆಕ್ಕ ಹಾಕಿ, ಎರಡು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರಿಗೆ ಹೆಚ್ಚಿನ ಮೊತ್ತ ನೀಡಲಾಗುವುದಿಲ್ಲ. ಎರಡು ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಜಮೀನು ಹೊಂದಿರುವ ರೈತರಿಗೂ ಒಟ್ಟು ₹5,000 ಮಾತ್ರ ಸಿಗಲಿದೆ. ಮೊದಲ ಕಂತಿನಲ್ಲಿ ₹2,500 ಹಾಗೂ ಎರಡನೇ ಕಂತಿನಲ್ಲಿ ಉಳಿದ ₹2,500 ಪಾವತಿಯಾಗಲಿದೆ. ಹೀಗಾಗಿ ಜಮೀನಿನ ವಿಸ್ತೀರ್ಣ ಎರಡು ಎಕರೆಗಿಂತ ಹೆಚ್ಚಿದ್ದರೂ ಹೆಚ್ಚುವರಿ ಪರಿಹಾರದ ಹಣ ದೊರೆಯುವುದಿಲ್ಲ. ಪ್ರತಿಯೊಬ್ಬ ರೈತನಿಗೆ ನಿಗದಿಪಡಿಸಿರುವ ಒಟ್ಟು ಪರಿಹಾರದ ಮೊತ್ತ ₹5,000 ಆಗಿರಲಿದೆ.

57 ಲಕ್ಷ ರೈತರಿಗೆ ಪರಿಹಾರದ ಲಾಭ

ರಾಜ್ಯದ ಒಟ್ಟು 57 ಲಕ್ಷ ರೈತರು ಈ ಪರಿಹಾರದ ಫಲಾನುಭವಿಗಳಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಸರ್ಕಾರ ಪ್ರತಿ ಎಕರೆಗೆ ಪರಿಹಾರ ನೀಡುವುದಾಗಿ ಹೇಳಿರಲಿಲ್ಲ. ಪ್ರತಿ ರೈತನಿಗೆ ಪರಿಹಾರ ನೀಡುವುದಾಗಿ ತಿಳಿಸಿತ್ತು. ಅದರಂತೆ ಈಗ ಪ್ರತಿಯೊಬ್ಬ ರೈತನಿಗೂ ಹಣ ಪಾವತಿಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಮೊದಲ ಕಂತಿನ ಇನ್‌ಪುಟ್ ಸಬ್ಸಿಡಿ ರೂಪದಲ್ಲಿ ₹2,500 ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎರಡನೇ ಕಂತಿನ ₹2,500 ಹಣವನ್ನೂ ರೈತರ ಖಾತೆಗಳಿಗೆ ಜಮೆ ಮಾಡಲಾಗುವುದು. ಈ ಮೂಲಕ ಒಬ್ಬ ರೈತನಿಗೆ ಒಟ್ಟು ₹5,000 ಪರಿಹಾರ ಸಿಗಲಿದೆ ಎಂದು ಹೇಳಿದರು. ಎರಡು ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವ ರೈತರಿಗೂ ₹5,000 ಮಾತ್ರ ನೀಡಲಾಗುತ್ತದೆ ಎಂಬುದನ್ನ ಡಿಸಿಎಂ ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಡಿಬಿಟಿ ಮೂಲಕ ರೈತರ ಖಾತೆಗೆ ನೇರ ಹಣ

ಬರ ಪರಿಹಾರದ ಹಣವನ್ನ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಮೊದಲ ಹಂತದಲ್ಲಿ ₹1,250 ಕೋಟಿ ಬಿಡುಗಡೆ ಮಾಡಲಾಗಿದ್ದು, ಯಾದಗಿರಿ ಜಿಲ್ಲೆಯ ರೈತರ ಖಾತೆಗಳಿಗೆ ಹಣ ಜಮೆ ಮಾಡುವ ಮೂಲಕ ವಿತರಣಾ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಒಟ್ನಲ್ಲಿ ರಾಜ್ಯದ 57 ಲಕ್ಷ ರೈತರಿಗೆ ಎರಡು ಕಂತುಗಳಲ್ಲಿ ತಲಾ ₹5,000 ಬರ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೊದಲ ಕಂತಿನ ₹2,500 ಬಿಡುಗಡೆ ಮಾಡಲಾಗಿದ್ದು, ಹಬ್ಬದ ಬಳಿಕ ಉಳಿದ ₹2,500 ಪಾವತಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Add Zee News as a Preferred Source
TAGS:
Karnataka Politics
Kannada News