• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಬೆಂಗಳೂರಿನಲ್ಲಿ ಮುಂದುವರಿದ ಇಡಿ ದಾಳಿ: ಬೆಟ್ಟಿಂಗ್ ಆ್ಯಪ್ ಕಂಪನಿಗಳ ಮೇಲೆ ಅಧಿಕಾರಿಗಳ ನಿಗಾ!

ಬೆಂಗಳೂರಿನಲ್ಲಿ ಮುಂದುವರಿದ ಇಡಿ ದಾಳಿ: ಬೆಟ್ಟಿಂಗ್ ಆ್ಯಪ್ ಕಂಪನಿಗಳ ಮೇಲೆ ಅಧಿಕಾರಿಗಳ ನಿಗಾ!

ದುಬೈ ಸಂಪರ್ಕದ ಶಂಕೆ... ಹವಾಲಾ ಮೂಲಕ ಕೋಟ್ಯಂತರ ರೂಪಾಯಿ ವರ್ಗಾವಣೆ ಆರೋಪದ ಹಿನ್ನೆಲೆ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ.

Written ByChetana Devarmani
Published: Oct 23, 2026, 11:17 AM IST|Updated: Oct 23, 2026, 11:18 AM IST
joinshare
ಬೆಂಗಳೂರಿನಲ್ಲಿ ಮುಂದುವರಿದ ಇಡಿ ದಾಳಿ: ಬೆಟ್ಟಿಂಗ್ ಆ್ಯಪ್ ಕಂಪನಿಗಳ ಮೇಲೆ ಅಧಿಕಾರಿಗಳ ನಿಗಾ!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳು ಪಲ್ಟಿ

ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳು ಪಲ್ಟಿ

2

ಕೈ ನಾಯಕರ ನಡುವೆ ತೆರೆಮರೆಯಲ್ಲಿ ನಡೆಯುತ್ತಿದೆಯಾ ಹಾವು ಏಣಿಯಾಟ ?

3

ಕಳ್ಳರೆಂದು ಭಾವಿಸಿ ಇಬ್ಬರ ಮೇಲೆ ಹಲ್ಲೆ: 10 ಜನರ ವಿರುದ್ಧ ಎಫ್‌ಐಆರ್ ದಾಖಲು

4

ಬೆಂಗಳೂರಿನಲ್ಲಿ ಮುಂದುವರಿದ ಇಡಿ ದಾಳಿ: ಬೆಟ್ಟಿಂಗ್ ಆ್ಯಪ್ ಕಂಪನಿಗಳ ಮೇಲೆ ಅಧಿಕಾರಿಗಳ ನಿಗಾ!

5

ದೀಪಾವಳಿಗೂ ಮೊದಲೇ ಡಿಎ/ಡಿಆರ್ ಹೆಚ್ಚಳ! ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಸಿಗುವ ಹಣವೆಷ್ಟು?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಟ್ಟಿಂಗ್ ಆ್ಯಪ್ ಕಂಪನಿಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ದಾಳಿ ಮುಂದುವರಿದಿದೆ. ದೆಹಲಿಯಿಂದ ಆಗಮಿಸಿರುವ ಇಡಿ ಅಧಿಕಾರಿಗಳ ತಂಡವು ಬೆಂಗಳೂರಿನ ಮೂರು ಸ್ಥಳಗಳಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ ಎಂದು ತಿಳಿದುಬಂದಿದೆ.

ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳ ಮೂಲಕ ಹಣಕಾಸು ವಹಿವಾಟು ನಡೆಸಿರುವ ಶಂಕೆಯ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ. ರಮ್ಮಿ ಸರ್ಕಲ್ ಸೇರಿದಂತೆ ಹಲವು ಬೆಟ್ಟಿಂಗ್ ಆ್ಯಪ್‌ಗಳನ್ನು ಅಕ್ರಮವಾಗಿ ನಡೆಸುತ್ತಿದ್ದ ಕಂಪನಿಗಳ ಮೇಲೆ ಅಧಿಕಾರಿಗಳು ಗಮನ ಹರಿಸಿದ್ದಾರೆ. ಈ ಜಾಲಕ್ಕೆ ದುಬೈ ಸಂಪರ್ಕ ಹೊಂದಿರುವ ವ್ಯಕ್ತಿಗಳ ನಂಟು ಇರುವ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಹವಾಲಾ ಮಾರ್ಗದ ಮೂಲಕ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆಯಾಗಿರುವ ಶಂಕೆಯೂ ತನಿಖೆಯ ಪ್ರಮುಖ ಭಾಗವಾಗಿದೆ. ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಜಾರಿ ನಿರ್ದೇಶನಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಸಿಐಆರ್ ದಾಖಲಿಸಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಕಳೆದ ಒಂದು ತಿಂಗಳಿನಿಂದ ದೇಶದ ವಿವಿಧ ರಾಜ್ಯಗಳಲ್ಲಿ ಹಂತ ಹಂತವಾಗಿ ಕಾರ್ಯಾಚರಣೆ ನಡೆಸುತ್ತಿರುವ ಇಡಿ ಅಧಿಕಾರಿಗಳು, ಬೆಟ್ಟಿಂಗ್ ಆ್ಯಪ್‌ಗಳ ಹಣಕಾಸು ವಹಿವಾಟು, ಸಂಬಂಧಿತ ಕಂಪನಿಗಳ ದಾಖಲೆಗಳು ಹಾಗೂ ಹಣದ ಮೂಲದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ದಾಳಿಯ ವೇಳೆ ಯಾವೆಲ್ಲ ದಾಖಲೆಗಳು ಪತ್ತೆಯಾಗಿವೆ ಮತ್ತು ಎಷ್ಟು ಮೊತ್ತದ ಹಣಕಾಸು ವಹಿವಾಟು ನಡೆದಿದೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ಬಳಿಕ ಪ್ರಕರಣದ ಸಂಪೂರ್ಣ ಚಿತ್ರಣ ಸ್ಪಷ್ಟವಾಗಬೇಕಿದೆ. ತನಿಖೆಯ ಅಂತಿಮ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
 

Add Zee News as a Preferred Source
TAGS:
Kannada News