• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ದೇಶ ಸೇವೆ ಸಲ್ಲಿಸಿದ ಮಾಜಿ ಸೈನಿಕರ ಸಂಘಕ್ಕೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹೊಸ ಭರವಸೆ.. ಏನದು?

ದೇಶ ಸೇವೆ ಸಲ್ಲಿಸಿದ ಮಾಜಿ ಸೈನಿಕರ ಸಂಘಕ್ಕೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹೊಸ ಭರವಸೆ.. ಏನದು?

ಅವರ ಬೇಡಿಕೆಗಳನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ನಿಯಮಾನುಸಾರ ಸಾಧ್ಯವಿರುವ ಪರಿಹಾರಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Written ByBhimappa
Published: Sep 21, 2026, 02:21 PM IST|Updated: Sep 21, 2026, 02:28 PM IST
joinshare
ದೇಶ ಸೇವೆ ಸಲ್ಲಿಸಿದ ಮಾಜಿ ಸೈನಿಕರ ಸಂಘಕ್ಕೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹೊಸ ಭರವಸೆ.. ಏನದು?
Image Credit: File Photo

About the Author

Bhimappa

Bhimappa

ಭೀಮಪ್ಪ (Bhimappa) ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

2

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

3

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

4

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

5

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ದೇಶದ ರಕ್ಷಣೆಗಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರು ಮತ್ತು ಅವರ ಕುಟುಂಬಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಆಲಿಸಿ ಈಡೇರಿಸುವ ಭರವಸೆಯನ್ನು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಜೊತ ಚರ್ಚಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳಿಗೆ ಭರವಸೆ ನೀಡಿದ್ದಾರೆ.

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಮಾಜಿ ಸೈನಿಕರಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು. ಮಾಜಿ ಸೈನಿಕರ ಉದ್ಯೋಗ, ಮೀಸಲಾತಿ, ವಸತಿ, ನಿವೇಶನ, ಕಲ್ಯಾಣ ಸೌಲಭ್ಯಗಳು ಸೇರಿದಂತೆ ಹಲವು ವಿಷಯಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಗಡಿ ಕಾಯ್ದು ಬಂದ ಮೇಲೆ ಸಮಾಜದಲ್ಲಿ ಒಂದೇ ಬಾರಿಗೆ ಎಲ್ಲವನ್ನ ತಿಳಿದುಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಮಾಜಿ ಸೈನಿಕರ ಕಡೆಗೆ ಗಮನ ಹರಿಸುವಂತೆ ವಿಶೇಷವಾಗಿ ತಿಳಿಸಲಾಯಿತು.

ಮಾಜಿ ಸೈನಿಕರಿಗೆ ಮೀಸಲಾಗಿರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವುದು, ಮೀಸಲಾತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಹಾಗೂ ಅರ್ಹ ಮಾಜಿ ಸೈನಿಕರ ಅವಲಂಬಿತರಿಗೆ ಉದ್ಯೋಗಾವಕಾಶ ಕಲ್ಪಿಸುವ ಕುರಿತು ಸಂಘದ ಪ್ರತಿನಿಧಿಗಳು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಬಳಿ ಮನವಿ ಮಾಡಿದರು. ಇದರೊಂದಿಗೆ ಮಾಜಿ ಸೈನಿಕರ ಕಲ್ಯಾಣ ನಿಧಿ ಮತ್ತು ವಿವಿಧ ಕಲ್ಯಾಣ ಸೌಲಭ್ಯಗಳನ್ನು ಮತ್ತಷ್ಟು ಬಲಪಡಿಸುವಂತೆ ಇದೇ ವೇಳೆ ಗೃಹ ಸಚಿವರ ಬಳಿ ಕೋರಲಾಯಿತು.

ಮಾಜಿ ಸೈನಿಕರು ಹಾಗೂ ವೀರನಾರಿಯರಿಗೆ ವಸತಿ ಮತ್ತು ನಿವೇಶನ ಸೌಲಭ್ಯ ಕಲ್ಪಿಸುವುದು, ಜಿಲ್ಲಾಮಟ್ಟದಲ್ಲಿ ಸೈನಿಕ ಸಹಾಯ ಕೇಂದ್ರಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದು, ಸರ್ಕಾರಿ ಸೇವೆಗಳನ್ನು ಕಾಲಮಿತಿಯಲ್ಲಿ ಒದಗಿಸುವುದು ಹಾಗೂ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆಯೂ ಮನವಿ ಮಾಡಲಾಯಿತು. ಜಿಲ್ಲಾವಾರು ಮಾಜಿ ಸೈನಿಕರ ಸಹಾಯ ಕೇಂದ್ರಗಳಿಗೆ ಸಂಬಂಧಿಸಿದಂತೆ ಭೂಮಿ ಹಾಗೂ ಇತರ ಮೂಲಸೌಕರ್ಯಗಳ ಲಭ್ಯತೆ ಕುರಿತು ಇಲಾಖಾ ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳನ್ನೂ ಸಚಿವರ ಗಮನಕ್ಕೆ ತರಲಾಯಿತು.

ಮಾಜಿ ಸೈನಿಕರ ವಿವಿಧ ಬೇಡಿಕೆಗಳ ಕುರಿತು ಈಗಾಗಲೇ ಜಾರಿಯಲ್ಲಿರುವ ಸರ್ಕಾರದ ನಿಯಮಗಳು, ಆದೇಶಗಳು ಮತ್ತು ನೀತಿಗಳನ್ನು ಪರಿಶೀಲಿಸಿ, ಅರ್ಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನಿರ್ದಿಷ್ಟ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಭರವಸೆ ನೀಡಿದ್ದಾರೆ.

ಮಾಜಿ ಸೈನಿಕರು ದೇಶದ ಭದ್ರತೆಗಾಗಿ ಸಲ್ಲಿಸಿರುವ ಸೇವೆ ಅತ್ಯಂತ ಮಹತ್ವದ್ದಾಗಿದೆ. ಮಾಜಿ ಸೈನಿಕರ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರ ಸೂಕ್ತವಾಗಿ ಸ್ಪಂದಿಸಲಿದೆ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರೊಂದಿಗೆ ಚರ್ಚಿಸಿ ಚರ್ಚಿಸಿ, ನಿಯಮಾನುಸಾರ ಸಾಧ್ಯವಿರುವ ಪರಿಹಾರಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ. ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ವಿ.ಶರಶ್ಚಂದ್ರ ಸಭೆಯಲ್ಲಿ ಹಾಜರಿದ್ದರು. 

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಮಾಜಿ ಸೈನಿಕರಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು. ಇದಾದ ಮೇಲೆ ಎಲ್ಲರೂ ಸೇರಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಜೊತೆ ಫೋಟೋಗೆ ಪೋಸ್‌ ನೀಡಿದರು. ವೀರನಾರಿಯರು ಕೂಡ ಸಚಿವರೊಂದಿಗೆ ನಿಂತು ಫೋಟೋ ತೆಗೆಸಿಕೊಂಡರು. ಇನ್ನು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳ ಬೇಡಿಕೆಗೆ ಗೃಹ ಸಚಿವರು ಈಡೇರಿಸುವ ಭರವಸೆ ನೀಡಿದ್ದಾರೆ. ಇದರಿಂದ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸಂತಸದಲ್ಲೇ ಇದ್ದರು.     

 

Add Zee News as a Preferred Source
TAGS:
Kannada News