• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಪ್ರತಿ ಲೀಟರ್‌ ಹಾಲಿಗೆ 8 ರಿಂದ 10 ರೂಪಾಯಿ ಹೆಚ್ಚಳ.. ದರ ಏರಿಕೆ ಮಾಡದಿದ್ರೆ ವಿಧಾನಸೌಧ ಮುತ್ತಿಗೆ, ಎಚ್ಚರಿಕೆ!

ಪ್ರತಿ ಲೀಟರ್‌ ಹಾಲಿಗೆ 8 ರಿಂದ 10 ರೂಪಾಯಿ ಹೆಚ್ಚಳ.. ದರ ಏರಿಕೆ ಮಾಡದಿದ್ರೆ ವಿಧಾನಸೌಧ ಮುತ್ತಿಗೆ, ಎಚ್ಚರಿಕೆ!

ಸಾಗಾಣಿಕೆ ವೆಚ್ಚ ಮತ್ತು ಮೇವಿನ ಅಭಾವದಿಂದ ಹೈನುಗಾರಿಕೆ ಸಂಪೂರ್ಣ ನಷ್ಟದ ಹಾದಿ ಹಿಡಿದಿದೆ. ಈ ಆಕ್ರೋಶದ ಬೆಂಕಿ ಇಂದು ಫ್ರೀಡಂ ಪಾರ್ಕ್‌ನಲ್ಲಿ ಜ್ವಾಲೆಯಾಗಿ ಸಿಡಿದಿದೆ.

Written ByBhimappa
Published: Sep 22, 2026, 05:43 PM IST|Updated: Sep 22, 2026, 05:53 PM IST
joinshare
ಪ್ರತಿ ಲೀಟರ್‌ ಹಾಲಿಗೆ 8 ರಿಂದ 10 ರೂಪಾಯಿ ಹೆಚ್ಚಳ.. ದರ ಏರಿಕೆ ಮಾಡದಿದ್ರೆ ವಿಧಾನಸೌಧ ಮುತ್ತಿಗೆ, ಎಚ್ಚರಿಕೆ!
Image Credit: dairy_farmers

About the Author

Bhimappa

Bhimappa

ಭೀಮಪ್ಪ (Bhimappa) ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Karnataka dairy farmers and district milk unions: ಹೈನುಗಾರಿಕೆಯನ್ನೇ ನಂಬಿ ಬದುಕುತ್ತಿರುವ ಅನ್ನದಾತ ಇಂದು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾನೆ. ಸಾಗಣೆ ವೆಚ್ಚ, ದನಗಳ ಮೇವಿನ ಬೆಲೆ ಗಗನಕ್ಕೇರಿದ್ದರೂ ಹಾಲಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾದ ಸಾವಿರಾರು ರೈತರು ಇಂದು ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಪ್ರತಿ ಲೀಟರ್ ಹಾಲಿಗೆ 8 ರಿಂದ 10 ರೂಪಾಯಿ ಹೆಚ್ಚಿಸಲೇಬೇಕು ಎಂದು ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಸಾಗರದಂತೆ ಹರಿದು ಬಂದ ರೈತ ಸಮೂಹ, ಇದೇ ಅಧಿವೇಶನದಲ್ಲಿ ದರ ಏರಿಕೆ ಮಾಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದೆ.

ಹೈನುಗಾರಿಕೆಯನ್ನೇ ನಂಬಿ ಬದುಕುತ್ತಿರುವ ರೈತರಿಗೆ ತಪ್ಪದ ಸಂಕಷ್ಟ
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ರೈತರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ
ಪ್ರತಿ ಲೀಟರ್ ಹಾಲಿಗೆ 8–10 ದರ ಹೆಚ್ಚಳಕ್ಕೆ ಆಗ್ರಹ
ಇದೇ ಅಧಿವೇಶನದಲ್ಲಿ ದರ ಏರಿಕೆ ಮಾಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ.

ಇನ್ನು ಬೆಳಗಿನ ಜಾವ 4 ಗಂಟೆಗೆ ಎದ್ದು, ತಮ್ಮ ಹಸುಗಳನ್ನು ಮಕ್ಕಳಂತೆ ಸಾಕಿ, ಬೆವರು ಸುರಿಸಿ ಹಾಲು ಕರೆಯುವ ರೈತನಿಗೆ ಇಂದು ಕನಿಷ್ಠ ಲಾಭವೂ ಸಿಗುತ್ತಿಲ್ಲ. ಸಾಗಾಣಿಕೆ ವೆಚ್ಚ ಮತ್ತು ಮೇವಿನ ಅಭಾವದಿಂದ ಹೈನುಗಾರಿಕೆ ಸಂಪೂರ್ಣ ನಷ್ಟದ ಹಾದಿ ಹಿಡಿದಿದೆ. ಈ ಆಕ್ರೋಶದ ಬೆಂಕಿ ಇಂದು ಫ್ರೀಡಂ ಪಾರ್ಕ್‌ನಲ್ಲಿ ಜ್ವಾಲೆಯಾಗಿ ಸಿಡಿದಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಹಾಗೂ ಧಾರವಾಡ ಸೇರಿದಂತೆ ರಾಜ್ಯದ ಸುಮಾರು 16 ಹಾಲು ಒಕ್ಕೂಟಗಳ ಸಾವಿರಾರು ರೈತರು ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಧುಮುಕಿದ್ದಾರೆ.

ರಾಜ್ಯದಲ್ಲಿ ದಿನಕ್ಕೆ 10 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳು ಹಾಲನ್ನೇ ನಂಬಿ ಬದುಕುತ್ತಿವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದಾಗ ಯಾರೂ ಧ್ವನಿ ಎತ್ತಿಲ್ಲ. ಆದರೆ ರೈತನ ಹಾಲಿನ ದರ ಏರಿಕೆಯಾದಾಗ ಮಾತ್ರ ವಿರೋಧ ವ್ಯಕ್ತಪಡಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ರೈತರು ಪ್ರಶ್ನಿಸುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಹಕಾರ ಸಚಿವ ಲಕ್ಷ್ಮಣ ಸವದಿ ಮತ್ತು ಪಶುಸಂಗೋಪನೆ ಸಚಿವ ಪುಟ್ಟರಂಗಶೆಟ್ಟಿ ಅವರಿಗೆ ಮನವಿ ಸಲ್ಲಿಸಿದ ಮುಖಂಡರು, ರೈತರ ಈ ಆಕ್ರೋಶವನ್ನು ಅಧಿವೇಶನದಲ್ಲಿ ಚರ್ಚಿಸಿ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಬೆವರು ಹರಿಸಿ ನಾಡಿಗೆ ಹಾಲು ನೀಡುವ ಅನ್ನದಾತ ಇವತ್ತು ತನ್ನ ಹಕ್ಕಿಗಾಗಿ ರಸ್ತೆಗಿಳಿದು ಹೋರಾಡುವ ಸ್ಥಿತಿ ಬಂದೊದಗಿದೆ. ಒಕ್ಕೂಟಗಳಿಗೂ ಕೋಟಿಗಟ್ಟಲೆ ನಷ್ಟವಾಗುತ್ತಿದ್ದು, ರೈತರ ತಾಳ್ಮೆ ಗಡಿ ದಾಟುತ್ತಿದೆ. ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲೇ ಸರ್ಕಾರ ರೈತರ ಕಣ್ಣೀರು ಒರೆಸುವ ನಿರ್ಧಾರ ಕೈಗೊಳ್ಳುತ್ತದೆಯೇ ಅಥವಾ ರೈತರ ಆಕ್ರೋಶ ವಿಧಾನಸೌಧದ ಬಾಗಿಲು ತಟ್ಟಲಿದೆಯೇ ಎಂಬುದನ್ನು ಕಾಯ್ದು ನೋಡಬೇಕಿದೆ.

ರೈತರು ಇಂದು ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಕೋಲಾರ, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಧಾರವಾಡ ಮತ್ತು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ಇನ್ನು ಕೆಲವು ಜಿಲ್ಲೆಗಳ ರೈತರು ಆಗಮಿಸಿದ್ದರು. ಹಾಲು ಒಕ್ಕೂಟಗಳ ಸಾವಿರಾರು ರೈತರು ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಧುಮುಕಿದ್ದಾರೆ. ಅನ್ನದಾತ ಇವತ್ತು ತನ್ನ ಹಕ್ಕಿಗಾಗಿ ರಸ್ತೆಗೆ ಇಳಿದು ಹೋರಾಡುವ ಸ್ಥಿತಿ ಬಂದೊದಗಿದೆ. ಒಕ್ಕೂಟಗಳಿಗೂ ಕೋಟಿಗಟ್ಟಲೇ ನಷ್ಟವಾಗುತ್ತಿದೆ. ಪ್ರತಿ ಲೀಟರ್ ಹಾಲಿಗೆ 8 ರಿಂದ 10 ರೂಪಾಯಿ ದರ ಏರಿಕೆ ಮಾಡಬೇಕು ಎಂದು ರೈತರು ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ. 

Add Zee News as a Preferred Source
TAGS:
Kannada News