SOCIAL MEDIA

Newsletter

PARTNER SITES
Select Language Select State

ಹಣಕಾಸು ಇಲಾಖೆಯ ಶಾಕ್: 10 ಸಾವಿರ ಕೋಟಿ ರಸ್ತೆ ಯೋಜನೆಗೆ ಬ್ರೇಕ್

ಈಗ ಅನುದಾನ ನೀಡಿದರೆ ರಾಜ್ಯದ ಹಣದ ಹರಿವು ಹಾಗೂ ವಿತ್ತೀಯ ನಿರ್ವಹಣೆ ಸಂಪೂರ್ಣ ಅಸ್ತವ್ಯಸ್ತಗೊಳ್ಳಲಿದೆ ಎಂದು ಖಡಕ್ ಎಚ್ಚರಿಕೆ ನೀಡಿದೆ. ರಾಜ್ಯ ಈಗಾಗಲೇ ತನ್ನ ಸಾಲ ಪಡೆಯುವ ಗರಿಷ್ಠ ಮಿತಿಯನ್ನು ತಲುಪಿದ್ದು, ಹೆಚ್ಚುವರಿ ಸಾಲ ಪಡೆಯಲು ಅವಕಾಶವೇ ಇಲ್ಲ ಎಂದು ಸ್ಪಷ್ಟಪಡಿಸಿದೆ.

Reported By Chetana Devarmani Written By Chetana Devarmani
Published: Sep 22, 2026, 04:22 PM IST | Updated: Sep 22, 2026, 04:24 PM IST
Join

ಬೆಂಗಳೂರು: ರಾಜ್ಯ ಸರ್ಕಾರದ ಹೊಸ ಯೋಜನೆಗಳಿಗೆ ಹಣಕಾಸು ಇಲಾಖೆ ಬ್ರೇಕ್ ? ಪ್ರಸಕ್ತ ಸಾಲಿನ ರಾಜ್ಯದ ಆರ್ಥಿಕ ಸ್ಥಿತಿಗತಿ ತೀವ್ರ ಸಂಕಷ್ಟದಲ್ಲಿದೆ ಎಂದು ಇಲಾಖೆಯಿಂದ ಮಾಹಿತಿ.  ಮಂಗಳೂರು ಸಂಪುಟ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಮುಂದಿಟ್ಟಿದ್ದ 10,000 ಕೋಟಿ ರೂಪಾಯಿ ವೆಚ್ಚದ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ ಪ್ರಸ್ತಾವನೆಗೆ ಹಣಕಾಸು ಇಲಾಖೆ ತೀವ್ರ ಆಕ್ಷೇಪ. ಸಾಲದ ಮಿತಿ ಮೀರಿರುವುದು, ಬಿಲ್ ಬಾಕಿ ಹಾಗೂ ಬರ ಪರಿಹಾರದ ಹೆಚ್ಚುವರಿ ಹೊರೆಯಿಂದಾಗಿ ಹೊಸ ಯೋಜನೆಗೆ ಹಣ ನೀಡಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ಕುರಿತು ಬಿಜೆಪಿ ಶಾಸಕ ಭರತ್ ಶೆಟ್ಟಿ ದಾಖಲೆ ಬಿಡುಗಡೆ ಮಾಡಿ ಶ್ವೇತಪತ್ರಕ್ಕೆ ಆಗ್ರಹಿಸಿದ್ದರೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

2026-27 ಹಾಗೂ 2027-28ನೇ ಸಾಲಿನಲ್ಲಿ ರಾಜ್ಯದಾದ್ಯಂತ 15,000 ಕಿಲೋಮೀಟರ್ ಗ್ರಾಮೀಣ ರಸ್ತೆಗಳನ್ನು 10,000 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯನ್ನು ಸಿದ್ಧಪಡಿಸಲಾಗಿತ್ತು. ಹೆಚ್ಚುವರಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಈ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ಸಂಪೂರ್ಣವಾಗಿ ತಳ್ಳಿಹಾಕಿದೆ ಬಜೆಟ್‌ನಲ್ಲಿ ಈ ಯೋಜನೆಗೆ ಯಾವುದೇ ಹಣ ಮೀಸಲಿಟ್ಟಿಲ್ಲ. ಈಗ ಅನುದಾನ ನೀಡಿದರೆ ರಾಜ್ಯದ ಹಣದ ಹರಿವು ಹಾಗೂ ವಿತ್ತೀಯ ನಿರ್ವಹಣೆ ಸಂಪೂರ್ಣ ಅಸ್ತವ್ಯಸ್ತಗೊಳ್ಳಲಿದೆ ಎಂದು ಖಡಕ್ ಎಚ್ಚರಿಕೆ ನೀಡಿದೆ. ರಾಜ್ಯ ಈಗಾಗಲೇ ತನ್ನ ಸಾಲ ಪಡೆಯುವ ಗರಿಷ್ಠ ಮಿತಿಯನ್ನು ತಲುಪಿದ್ದು, ಹೆಚ್ಚುವರಿ ಸಾಲ ಪಡೆಯಲು ಅವಕಾಶವೇ ಇಲ್ಲ ಎಂದು ಸ್ಪಷ್ಟಪಡಿಸಿದೆ.

​ಆರ್ಥಿಕ ಇಲಾಖೆ ನೀಡಿರುವ ವರದಿ ರಾಜ್ಯ ಸರ್ಕಾರದ ಆರ್ಥಿಕ ಮುಗ್ಗಟ್ಟನ್ನು ಬಿಚ್ಚಿಟ್ಟಿದೆ. ಪ್ರಸ್ತುತ ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಹಾಗೂ ಆರ್‌ಡಿಪಿಆರ್ ಇಲಾಖೆಗಳಲ್ಲಿ ಬರೋಬ್ಬರಿ 36,136 ಕೋಟಿ ರೂಪಾಯಿ ಬಾಕಿ ಬಿಲ್ ಪೆಂಡಿಂಗ್ ಇದೆ. ಒಟ್ಟಾರೆಯಾಗಿ 2 ಲಕ್ಷ ಕೋಟಿ ರೂ. ಮೌಲ್ಯದ ಕಾಮಗಾರಿಗಳು ನಡುನೀರಿನಲ್ಲಿವೆ. ಜೊತೆಗೆ ತೀವ್ರ ಬರಗಾಲದಿಂದಾಗಿ ಕೃಷಿ ಪಂಪ್‌ಸೆಟ್‌ಗಳ ಉಚಿತ ವಿದ್ಯುತ್‌ಗಾಗಿ 4,000 ದಿಂದ 5,000 ಕೋಟಿ ರೂ. ಹೆಚ್ಚುವರಿ ಸಬ್ಸಿಡಿ ನೀಡಬೇಕಿದೆ. ಇಷ್ಟೇ ಅಲ್ಲದೆ, ಕೆಎಸ್ಆರ್‌ಟಿಸಿ, ನೀರಾವರಿ ನಿಗಮ ಹಾಗೂ ಎಸ್ಕಾಂ ಸಿಬ್ಬಂದಿಗೆ ವೇತನ ನೀಡಲು ಮತ್ತು ಮಾಸಿಕ ಪಿಂಚಣಿ ಪಾವತಿಸಲು ಹಣದ ಅಭಾವ ಎದುರಾಗಿದೆ. ಹೊಸ ಯೋಜನೆಗಳಿಗೆ ಹಣ ಬೇಕಿದ್ದರೆ, ಇತರ ಇಲಾಖೆಗಳ ಬಜೆಟ್ ಕಡಿತಗೊಳಿಸಬೇಕಾಗುತ್ತದೆ, ಇದರಿಂದ ಹಾಲಿ ಕೆಲಸಗಳು ಸ್ಥಗಿತಗೊಳ್ಳಲಿವೆ ಎಂದು ಇಲಾಖೆ ಎಚ್ಚರಿಸಿದೆ.

ಹಣಕಾಸು ಇಲಾಖೆಯ ಈ ವರದಿಯನ್ನು ಬಿಡುಗಡೆ ಮಾಡಿದ ಬಿಜೆಪಿ ಶಾಸಕ ಭರತ್ ಶೆಟ್ಟಿ, ರಾಜ್ಯ ಸರ್ಕಾರದಲ್ಲಿ 27,000 ಕೋಟಿ ರೂಪಾಯಿ ಆರ್ಥಿಕ ಕೊರತೆ ಇದೆ. ಕಂಟ್ರಾಕ್ಟರ್‌ಗಳಿಗೆ ಹಣ ನೀಡುತ್ತಿಲ್ಲ, ನೌಕರರಿಗೆ ಸಂಬಳವಿಲ್ಲ. ಬಜೆಟ್‌ನಲ್ಲಿ ಹಂಚಿಕೆ ಮಾಡದೆ ಬಾಯಿಗೆ ಬಂದಂತೆ ಯೋಜನೆಗಳನ್ನು ಘೋಷಿಸಬೇಡಿ ಎಂದು ಇಲಾಖೆಯೇ ಮುಖಕ್ಕೆ ಹೊಡೆದಂತೆ ಹೇಳಿದೆ. ಸರ್ಕಾರ ತಕ್ಷಣವೇ ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತಪತ್ರ ಹೊರಡಿಸಲಿ‌ ಎಂದು ಆಗ್ರಹಿಸಿದ್ದಾರೆ. ಇದಕ್ಕೆ ಖಡಕ್ ಆಗಿ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಆರ್ಥಿಕ ಇಲಾಖೆ ಮುನ್ನೆಚ್ಚರಿಕೆಯ ಸಲಹೆ ನೀಡುವುದು ಅವರ ಕರ್ತವ್ಯ. ಆದರೆ, ಸರ್ಕಾರವನ್ನು ಹೇಗೆ ನಡೆಸಬೇಕು, ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ. ಕೇಂದ್ರ ಸರ್ಕಾರ ನಮಗೆ ಬರಬೇಕಾದ ತೆರಿಗೆ ಪಾಲು ಹಾಗೂ ರೈತರ ಪರಿಹಾರದ 5,200 ಕೋಟಿ ರೂಪಾಯಿಯನ್ನು ತಕ್ಷಣ ಬಿಡುಗಡೆ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.

ಆರ್ಥಿಕ ಇಲಾಖೆ ಈ ರೀತಿ ಎಚ್ವರಿಕೆ ನೀಡಿದ್ದು ಇದೇ ಮೊದಲೇನಲ್ಲ. ಬದ್ರ ಮೇಲ್ದಂಡೆ ಯೋಜನೆ ವಿಚಾರ ಕೈಗೆತ್ತಿಕೊಂಡಾಗಲೂ ಇದೇ ರೀತಿ ಹೇಳಿತ್ತು. ಎಚ್ಚರಿಕೆಯಿಂದ ಆಡಳಿತ‌ ನಡೆಸುವುದೊಂದೇ ಇದಕ್ಕೆ ಪರಿಹಾರ. ಸಾಲ ಮಾಡುವಂತಿಲ್ಲ, ಹೊಸ ಯೋಜನೆಗೆ ಹಣವಿಲ್ಲ. ಎಲ್ಲ ಇಲಾಖೆಯ ಅನುದಾನ ಪರಿಷ್ಕರಣೆ ಮಾಡಿದರೆ ಮಾತ್ರ ಒಂದಷ್ಟು ಹಣ ಉಳಿಸಬಹುದು ಎನ್ನುವುದು ಆರ್ಥಿಕ ಇಲಾಖೆ ಸಲಹೆ. ಒಟ್ಟಿನಲ್ಲಿ ಸದ್ಯಕ್ಕೆ ಸರ್ಕಾರ ಏನೇ ಯೋಜನೆ ಘೋಷಣೆ ಮಾಡಿದ್ರು, ಅದು ಘೋಷಣೆಗೆ ಸೀಮಿತ ಅನ್ನೋದನ್ನ ಆರ್ಥಿಕ‌ ಇಲಾಖೆ ಹೇಳಿಬಿಟ್ಟಿದೆ. 
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES