• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಬೆಂಗಳೂರಲ್ಲಿ ಮೊದಲ ಕಾಮನ್‌ವೆಲ್ತ್‌ ಮಹಿಳಾ ಸಂಸದೀಯರ ಸಮ್ಮೇಳನಕ್ಕೆ ಓಂ ಬಿರ್ಲಾ ಚಾಲನೆ

ಬೆಂಗಳೂರಲ್ಲಿ ಮೊದಲ ಕಾಮನ್‌ವೆಲ್ತ್‌ ಮಹಿಳಾ ಸಂಸದೀಯರ ಸಮ್ಮೇಳನಕ್ಕೆ ಓಂ ಬಿರ್ಲಾ ಚಾಲನೆ

Women Parliamentarians Conference: ಕಾಮನ್‌ ವೆಲ್ತ್‌ ಮಹಿಳಾ ಸಂಸದೀಯರ ಮೊದಲ ಸಮ್ಮೇಳನವು ಇಂದು(ನ. 17) ಮತ್ತು ನಾಳೆ (ನ. 18) ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಚಾಲನೆ ನೀಡಿದ್ದಾರೆ. ಇದು ಮಹಿಳಾ ಜನಪ್ರತಿನಿಧಿಗಳಿಗೆ ಡಿಜಟಲೀಕರಣದಿಂದ ಸುರಕ್ಷತೆ ನೀಡುವ ಉದ್ದೇಶ ಹೊಂದಿದೆ.

Written ByRamya. R. Gowda
Published: Nov 17, 2026, 12:48 IST|Updated: Nov 17, 2026, 13:01 IST
joinshare
ಬೆಂಗಳೂರಲ್ಲಿ ಮೊದಲ ಕಾಮನ್‌ವೆಲ್ತ್‌ ಮಹಿಳಾ ಸಂಸದೀಯರ ಸಮ್ಮೇಳನಕ್ಕೆ ಓಂ ಬಿರ್ಲಾ ಚಾಲನೆ

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಆಯೋಜಿಸಲಾಗಿರುವ ಕಾಮನ್‌ವೆಲ್ತ್‌ ಮಹಿಳಾ ಸಂಸದೀಯರ ಭಾರತ ಪ್ರಾದೇಶಿಕ ಘಟಕದ ವಿಶೇಷ ಸಮ್ಮೇಳನಕ್ಕೆ ಬೆಂಗಳೂರಿನಲ್ಲಿ ಇಂದು (ನ. 17) ಚಾಲನೆ ದೊರೆತಿದೆ.  ನಗರದ ವಿಧಾನಸೌಧದ ಬ್ಯಾಂಕೆಟ್‌ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಮಹತ್ವದ ಸಮ್ಮೇಳನವನ್ನು ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಉದ್ಘಾಟಿಸಲಿದ್ದಾರೆ. ಭಾರತ ಸಂಪತ್ತು ಮತ್ತು ಕರ್ನಾಟಕ ವಿಧಾನ ಮಂಡಲ ಜಂಟಿ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನವು ಮಹಿಳಾ ಜನಪ್ರತಿನಿಧಿಗಳ ಸಬಲೀಕರಣ, ಸುರಕ್ಷತೆ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅವರ ಪಾತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವ ಪಡೆದುಕೊಂಡಿದೆ.  

ಸಮ್ಮೇಳನಕ್ಕೆ ಸಿಎಂ ಡಿ ಕೆ ಶಿವಕುಮಾರ್‌ ಹಾಗೂ ಕಾಮನ್‌ವೆಲ್ತ್‌ ಮಹಿಳಾ ಸಂಸದೀಯರ ಭಾರತೀಯ ಪ್ರಾದೇಶಿಕ ಘಟಕದ ಅಧ್ಯಕ್ಷೆ ಡಾ. ಡಿ ಪುರದೇಶ್ವರಿ ಜಂಟಿಯಾಗಿ ಚಾಲನೆ ನೀಡಿದ್ದಾರೆ. ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮಹಿಳಾ ಜನ ಪ್ರತಿನಿಧಿಗಳು ಒಂದೇ ವೇದಿಕೆಯಲ್ಲಿ ಸೇರಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಹಾಗೂ ಪ್ರಸ್ತುತ ಸವಾಲುಗಳ ಕುರಿತು ಚರ್ಚಿಸಲು ಈ ಸಮ್ಮೇಳನ ಅವಕಾಶ ಕಲ್ಪಿಸಿದೆ.  ಈ ಕುರಿತು ಮಾಹಿತಿ ನೀಡಿರುವ ವಿಧಾನ ಪರಿಷತ್‌ ಸಭಾಪತಿ ಸಲೀಂ ಅಹ್ಮದ್‌, ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸುಮಾರು 150 ಮಹಿಳಾ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿ ರಾಜ್ಯದಿಂದ 4 ಮಂದಿಯಂತೆ ಮಹಿಳಾ ಸಂಸದರು, ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರು, ಸಭಾಧ್ಯಕ್ಷರು ಮತ್ತು ಉಪಸಭಾಧ್ಯಕ್ಷರು ಸೇರಿದಂತೆ ವಿವಿಧ ಹಂತಗಳ ಜನಪ್ರತಿನಿಧಿಗಳು ಪಾಲ್ಗೊಂಳ್ಳಲಿದ್ದಾರೆ.  

ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲರಾದ ಸುಧಾ ಯಾದವ್‌, ರಾಜ್ಯ ಸಭೆ ಉಪ ಸಭಾಪತಿ ಹರಿವಂಶ್‌ ನಾರಾಯಣ್‌ ಸಿಂಗ್‌, ಡಿಸಿಎಂ ಜಿ ಪರಮೇಶ್ವರ್‌, ವಿಧಾನಸಭಾಧ್ಯಕ್ಷ ಜಿ ಎಸ್‌ ಪಾಟೀಲ್‌ ಸೇರಿದಂತೆ ಹಲವು ಸಚಿವರು, ಪ್ರತಿಪಕ್ಷ ನಾಯಕರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಕೊನೆಯಲ್ಲಿ ವಿಧಾನ ಪರಿಷತ್‌ ಉಪ ಸಭಾಪತಿ ಉಮಾಶ್ರೀ ವಂದನಾ ನಿರ್ಣಯ ಮಂಡಿಸಿದ್ದಾರೆ.

ನೂತನ ಮಹಿಳಾ ಜನಪ್ರತಿನಿಧಿಗಳಿಗೆ ಸೈಬರ್‌ ಸುರಕ್ಷತೆ ಮತ್ತು ಮಾರ್ಗದರ್ಶನದ ಹಾದಿಗಳು  ಎಂಬ ಆಶಯದೊಂದಿಗೆ ಈ 2 ದಿನಗಳ ಸಮ್ಮೇಳನವನ್ನು ಆಯೋಜಿಸಲಾಗಿದೆ. ಇಂದಿನ ಡಿಜಿಟಲ್‌ ಯುಗದಲ್ಲಿ ಮಹಿಳಾ ಪ್ರತಿನಿಧಿಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸವಾಲುಗಳ ಕುರಿತು ಸಮ್ಮೇಳನದಲ್ಲಿ ಪ್ರಮುಖವಾಗಿ ಚರ್ಚೆ ನಡೆದಿದೆ.

ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳಾ ಜನ ಪ್ರತಿನಿಧಿಗಳ ವಿರುದ್ಧ ನಡೆಯುತ್ತಿರುವ ಆನ್‌ಲೈನ್‌ ಕಿರುಕುಳ, ಬೆದರಿಕೆ, ವೈಯಕ್ತಿಕ ನಿಂದನೆ ಹಾಹೂ ಡಿಜಿಟಲ್‌ ದುರುಪಯೋಗದ ವಿಚಾರಗಳು  ಚರ್ಚೆಯ ಪ್ರಮುಖ ಭಾಗವಾಗಿದೆ.

ಇನ್ನು ನಾಳೆ (ನ. 18)ಕ್ಕೆ ಮಹಿಳೆಯರ ಆರೋಗ್ಯ, ಯೋಗಕ್ಷೇಮ ಹಾಗೂ ಜೀವನದ ವಿವಿಧ ಹಂತಗಳಲ್ಲಿ ಅವರ ಘನತೆ ಮತ್ತು ಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇನ್ನು ಹೊಸದಾಗಿ ಆಯ್ಕೆಯಾಗಿರುವ  ಮಹಿಳಾ ಜನ ಪ್ರತಿನಿಧಿಗಳಿಗೆ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯವಾದ ಅರಿವು ಮೂಡಿಸುವ ಉದ್ದೇಶವೂ ಸಮ್ಮೇಳನಕ್ಕಿದೆ. ಈ ಮಹಿಳಾ ನಾಯಕತ್ವವನ್ನು ಪ್ರೋತ್ಸಾಹಿಸುವುದಕ್ಕೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆಯನ್ನು ಬಲಪಡಿಸುವುದು, ವಿಶೇಷವಾಗಿ ವಿಕ್ಷಿತ್‌ ಭಾರತ್‌ 2047 ದೃಷ್ಟಿಕೋನವನ್ನು ಸಾಧಿಸುವಲ್ಲಿ ಒತ್ತು ನೀಡಲಾಗುವುದು.  

ಒಟ್ಟಾರೆ, ಮಹಿಳಾ ಜನ ಪ್ರತಿನಿಧಿಗಳ ನಾಯಕತ್ವದ ಸಾಮಾರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಡಿಜಿಟಲ್‌ ಸುರಕ್ಷತೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಬಲಪಡಿಸುವ ಮಹತ್ವದ ವೇದಿಕೆಯಾಗಿ ಈ ಸಮ್ಮೇಳನ ಗುರುತಿಸಿಕೊಳ್ಳುವ ನಿರೀಕ್ಷೆ ಇದೆ. ಬೆಂಗಳೂರಲ್ಲಿ ನಡೆಯುತ್ತಿರುವ ಈ ಮೊದಲ ವಿಶೇಷ ಸಮ್ಮೇಳನವು ಮಹಿಳಾ ರಾಜಕೀಯ ನಾಯಕಿಯರ ನಡುವೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಸಹಕಾರ ಮತ್ತು ಅನುಭವ ವಿನಿಮಯಕ್ಕೆ ಹೊಸ ಅವಕಾಶ ಕಲ್ಪಿಸಿದೆ. 
 

Add Zee News as a Preferred Source
TAGS:
Kannada News