karnataka rain updates: ರಾಜ್ಯದಲ್ಲಿ ಗಣೇಶ ಹಬ್ಬದ ದಿನದಿಂದಲೇ ಮತ್ತೆ ಮಳೆ ಅಬ್ಬರ ಶುರುವಾಗಿದೆ. ದುರ್ಬಲವಾಗಿದ್ದ ನೈರುತ್ಯ ಮುಂಗಾರು ಮತ್ತೆ ಚುರುಕಾಗಿದ್ದು, ಇಂದು ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದರ ನಡುವೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾದ್ರೆ ಇಂದು ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ? ಹೇಗಿದೆ ಹವಾಮಾನ ಇಲಾಖೆ ಮುನ್ಸೂಚನೆ? ನೋಡೋಣ ಈ ವರದಿಯಲ್ಲಿ.
ರಾಜ್ಯದಲ್ಲಿ ಮತ್ತೆ ಮಳೆಗಾಲದ ವಾತಾವರಣ ನಿರ್ಮಾಣವಾಗಿದೆ. ಗಣೇಶ ಹಬ್ಬದ ದಿನದಿಂದಲೇ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದ್ದು, ನೈರುತ್ಯ ಮುಂಗಾರು ಮತ್ತೆ ಚುರುಕಾಗಿದೆ.
ಇಂದು ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಬಿರುಗಾಳಿ ಬೀಸುವ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.
17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು ನಗರ
ಬೆಂಗಳೂರು ಗ್ರಾಮಾಂತರ
ಮೈಸೂರು
ಮಂಡ್ಯ
ರಾಮನಗರ
ಚಾಮರಾಜನಗರ
ತುಮಕೂರು
ಕೊಡಗು
ಹಾಸನ
ಕೋಲಾರ
ಚಿಕ್ಕಬಳ್ಳಾಪುರ
ಚಿಕ್ಕಮಗಳೂರು
ರಾಯಚೂರು
ಹಾಗೂ ಇತರೆ ಜಿಲ್ಲೆಗಳು
ಇನ್ನು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ಲಘುವಿನಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಇಂದು ಎಲ್ಲೆಲ್ಲಿ ಮಳೆ?
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಮೈಸೂರು , ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು, ಕೊಡಗು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಯಚೂರು
ಈ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಹೀಗಾಗಿ ಮಳೆ ಹಾಗೂ ಗಾಳಿ ಇರುವ ಸಂದರ್ಭದಲ್ಲಿ ಸಾರ್ವಜನಿಕರು, ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.ಇದರ ನಡುವೆ ಹಿಂದೂ ಮಹಾಸಾಗರದ ಉತ್ತರ ಭಾಗದಲ್ಲಿ ಮೂರು ಪ್ರಬಲ ಚಂಡಮಾರುತಗಳು ರೂಪುಗೊಳ್ಳುವ ಸಾಧ್ಯತೆಯ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹವಾಮಾನದಲ್ಲೂ ಬದಲಾವಣೆ ಕಂಡುಬಂದಿದೆ.
ಇತ್ತ ಮಳೆ ಕೊರತೆ ಹಾಗೂ ಒಣ ಹವೆಯ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಏರಿಕೆಯಾಗಿದೆ. ವಾಡಿಕೆಗಿಂತ ಬರೋಬ್ಬರಿ 5.7 ಡಿಗ್ರಿ ಸೆಲ್ಶಿಯಸ್‌ನಷ್ಟು ತಾಪಮಾನ ಹೆಚ್ಚಾಗಿದ್ದು, ಮುಂದಿನ ಐದು ದಿನವೂ ಬೆಂಗಳೂರಿಗರಿಗೆ ಬಿಸಿಯ ಅನುಭವ ಮುಂದುವರಿಯುವ ಸಾಧ್ಯತೆಯಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಮಳೆ ಕೊರತೆ... ಒಣ ಹವೆ... ಪರಿಣಾಮ ಸಿಲಿಕಾನ್ ಸಿಟಿಯಲ್ಲಿ ತಾಪಮಾನ ಏರಿಕೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ತಂಪು ವಾತಾವರಣದ ಬದಲು, ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ.ಸೆಪ್ಟೆಂಬರ್ 13ರ ದಾಖಲೆ ಪ್ರಕಾರ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಠ 33.9 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಇದು ವಾಡಿಕೆಗಿಂತ ಬರೋಬ್ಬರಿ 5.7 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗಿದೆ.
ಇನ್ನು ಬೆಂಗಳೂರು ನಗರದಲ್ಲಿ 32.6 ಡಿಗ್ರಿ ಸೆಲ್ಶಿಯಸ್, ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 32.1 ಡಿಗ್ರಿ ಸೆಲ್ಶಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಮಳೆಯ ಪ್ರಮಾಣ ಕಡಿಮೆಯಾಗಿರುವುದು ಹಾಗೂ ಒಣ ಹವೆ ಮುಂದುವರಿದಿರುವುದೇ ತಾಪಮಾನ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ.ಮುಂದಿನ ಐದು ದಿನಗಳಲ್ಲೂ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 33 ಡಿಗ್ರಿ ಸೆಲ್ಶಿಯಸ್ ಇರುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಹಾಗೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಒಟ್ಟಿನಲ್ಲಿ, ಮಳೆ ಕೊರತೆಯಿಂದ ಬೆಂಗಳೂರಿನ ವಾತಾವರಣದಲ್ಲಿ ಬದಲಾವಣೆಯಾಗಿದ್ದು, ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಮುಂದಿನ ದಿನಗಳಲ್ಲೂ ಬಿಸಿಲಿನ ತೀವ್ರತೆ ಮುಂದುವರಿಯುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಮಳೆಗಾಗಿ ಎದುರು ನೋಡುತ್ತಿದ್ದ ಬೆಂಗಳೂರಿಗೆ ಸದ್ಯ ಬಿಸಿಲಿನ ಕಾಟ ಹೆಚ್ಚಾಗಿದೆ. ಮುಂದಿನ ಐದು ದಿನಗಳ ತಾಪಮಾನದಲ್ಲೂ ದೊಡ್ಡ ಬದಲಾವಣೆಯ ನಿರೀಕ್ಷೆ ಇಲ್ಲ ಎನ್ನಲಾಗಿದೆ.
ಮತ್ತೊಂದೆಡೆ ಕರ್ನಾಟಕದ ಹವಾಮಾನದಲ್ಲಿ ಮತ್ತೊಮ್ಮೆ ಮಹತ್ವದ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ..ಸದ್ಯ ರಾಜ್ಯದ ಹಲವೆಡೆ ಬಿಸಿಲು-ಮೋಡದ ವಾತಾವರಣ ಮುಂದುವರಿದಿದ್ದರೂ, ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ.ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮಧ್ಯಭಾಗದಿಂದ ಮಳೆ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ.
ಎಲ್ಲಿ ಎಷ್ಟು ಮಳೆ? ಯಾವ ಜಿಲ್ಲೆಗಳಿಗೆ ವರುಣನ ಎಂಟ್ರಿ? ಇಲ್ಲಿದೆ ಸಂಪೂರ್ಣ ವರದಿ..
ಕರ್ನಾಟಕದಲ್ಲಿ ಸದ್ಯ ಬಿಸಿಲು ಮತ್ತು ಮೋಡದ ವಾತಾವರಣದ ನಡುವೆ ಹವಾಮಾನದಲ್ಲಿ ಮತ್ತೊಂದು ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ.ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಸದ್ಯ ಹೆಚ್ಚಿನ ತಾಪಮಾನದೊಂದಿಗೆ ಬಿಸಿಲು ಮುಂದುವರಿಯಲಿದೆ. ಅಲ್ಲಲ್ಲಿ ಮೋಡ ಕವಿದ ವಾತಾವರಣವೂ ಕಾಣಿಸಿಕೊಳ್ಳಲಿದೆ.ಆದರೆ ಸೆಪ್ಟೆಂಬರ್ 17 ಮತ್ತು 18ರ ಬಳಿಕ ಈ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಯಾವ ಭಾಗದಲ್ಲಿ ಯಾವಾಗ ಮಳೆ?
ಸೆ.17–18ರ ಬಳಿಕ ಮಳೆ ಸಾಧ್ಯತೆ
ಕೆಲವೆಡೆ ಗುಡುಗು ಸಹಿತ ಮಳೆ
ಉತ್ತರ ಒಳನಾಡು
ಕಲಬುರಗಿ, ಯಾದಗಿರಿ, ಬೀದರ್‌ನಲ್ಲಿ ಅಲ್ಲಲ್ಲಿ ಮಳೆ
ಉಳಿದ ಜಿಲ್ಲೆಗಳಲ್ಲಿ ಬಿಸಿಲು-ಮೋಡ
ಸೆ.19ರ ಬಳಿಕ ಮಳೆ ವಿಸ್ತರಣೆ ಸಾಧ್ಯತೆ
ದಕ್ಷಿಣ ಒಳನಾಡು
ಮೈಸೂರು, ಮಂಡ್ಯದಲ್ಲಿ ಸಂಜೆ ಗುಡುಗು ಸಹಿತ ಮಳೆ
ಚಾಮರಾಜನಗರದಲ್ಲೂ ಮಳೆ ಸಾಧ್ಯತೆ
*ಶ್ರೀಲಂಕಾ ವಾಯುಭಾರ ಕುಸಿತದ ಎಫೆಕ್ಟ್
ರಾಜ್ಯದಲ್ಲಿ ಮಳೆ ಹೆಚ್ಚಾಗಲು ಪ್ರಮುಖ ಕಾರಣವಾಗಬಹುದಾದ ಹವಾಮಾನ ವ್ಯವಸ್ಥೆಯೊಂದು ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ರೂಪುಗೊಳ್ಳುವ ಸಾಧ್ಯತೆ ಇದೆ.ಸೆಪ್ಟೆಂಬರ್ 14ರ ವೇಳೆಗೆ ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಪ್ರಬಲ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳು ಕಂಡುಬಂದಿವೆ.ಈ ಹವಾಮಾನ ವ್ಯವಸ್ಥೆಯ ಪರಿಣಾಮ ಬಂಗಾಳಕೊಲ್ಲಿಯ ಗಾಳಿಯ ಚಲನೆಯಲ್ಲೂ ಬದಲಾವಣೆಯಾಗುವ ಸಾಧ್ಯತೆ ಇದೆ.
ಇದರ ಪರಿಣಾಮ ಸೆಪ್ಟೆಂಬರ್ 15 ಮತ್ತು 16ರಿಂದಲೇ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಈ ದಿನ ಮಳೆ ಆಗಲಿದೆ
ಸೆ.15–16
ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
ಸೆ.17–18
ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು
ಸೆ.19ರ ಬಳಿಕ
ಉತ್ತರ ಒಳನಾಡಿನಲ್ಲೂ ಮಳೆ ವಿಸ್ತರಣೆ ಸಾಧ್ಯತೆ
ಇನ್ನು ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಸದ್ಯ ಬಿಸಿಲಿನ ವಾತಾವರಣ ಮುಂದುವರಿಯಲಿದೆ.ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮೋಡಗಳು ಕಾಣಿಸಿಕೊಳ್ಳಬಹುದು.
ಸೆಪ್ಟೆಂಬರ್ 12ರಿಂದ ಮಲೆನಾಡಿನಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗುವ ಸಾಧ್ಯತೆ ಇದ್ದರೂ, ಸೆಪ್ಟೆಂಬರ್ 18 ಅಥವಾ 19ರ ವೇಳೆಗೆ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮತ್ತೆ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.