SOCIAL MEDIA

Newsletter

PARTNER SITES
Select Language Select State

ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋ*ಟ: 6 ಮಂದಿಗೆ ಗಂಭೀರ ಗಾಯ

ಬೆಂಗಳೂರು ಹೊರವಲಯದಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡ್‌ ಸ್ಫೋಟಗೊಂಡಿದ್ದು ಈ ದುರ್ಘಟನೆಯಲ್ಲಿ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Written By Yashaswini V
Published: Oct 19, 2026, 05:02 PM IST | Updated: Oct 19, 2026, 05:07 PM IST
Join

ರಾಜ್ಯ ರಾಜಧಾನಿ ಬೆಂಗಳೂರಿನ ಹೊರ ವಲಯ ಆನೇಕಲ್‌ನಲ್ಲಿ ಇಂದು (ಅ. 19) ಬೆಳ್ಳಂಬೆಳಗ್ಗೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡಿದ್ದು, ಈ ಘಟನೆಯಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿ ಆಗಿದೆ.

ಶ್ರೀಸಾಯಿ ಬಡಾವಣೆಯಲ್ಲಿ ನಡೆದಿರುವ ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ:
ಬೆಂಗಳೂರು ಹೊರವಲಯ ಆನೇಕಲ್‌ ಪಟ್ಟಣದ ಶ್ರೀಸಾಯಿ ಬಡಾವಣೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟದ ಘಟನೆ ನಡೆದಿದ್ದು, ಈ ದುರ್ಘಟನೆಯಲ್ಲಿ ಉತ್ತರ ಭಾರತ ಮೂಲದ ಆರು ಜನರು ಗಾಯಗೊಂಡಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳೆಲ್ಲಾ ಬಿಲ್ಡಿಂಗ್ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಬಾಡಿಗೆ ವಾಸವಿದ್ದ ಉತ್ತರ ಭಾರತದ ಮಂದಿ:

ಬಿಲ್ಡಿಂಗ್ ಸೆಂಟ್ರಿಂಗ್ ಕೆಲಸಕ್ಕೆಂದು ಬೆಂಗಳೂರಿನಲ್ಲಿ ನೆಲೆಸಿದ್ದ ಉತ್ತರ ಭಾರತ ಮೂಲದವರಾದ ಈ ಆರೂ ಜನರು ಮಂಜುನಾಥ್ ಎಂಬುವವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ರಾತ್ರಿ ಆಡುಗೆ ಮಾಡಿದ ಬಳಿಕ ಗ್ಯಾಸ್ ಸ್ಟೌವ್ ಸ್ವಿಚ್ ಆಫ್‌ ಮಾಡಿರಲಿಲ್ಲ. ಅಲ್ಲದೆ, ಕುಟುಂಬಸ್ಥರು ಮನೆಯಲ್ಲಿ ಕಿಟಕಿ ಬಾಗಿಲುಗಳನ್ನೂ ಬಂದ್‌ ಮಾಡಿ ನಿದ್ರೆಗೆ ಜಾರಿದ್ದರು. ಹೀಗಾಗಿ, ಮನೆಯ ತುಂಬೆಲ್ಲ ಅಡುಗೆ ಅನಿಲ ಸೋರಿಕೆ ಆಗಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಮನೆಯ ಸದಸ್ಯರೊಬ್ಬರು ಬೀಡಿ ಸೇದಲು ಬೆಂಕಿ ಕಡ್ಡಿ ಹಚ್ಚಿದ್ದಾರೆ. ಈ ವೇಳೆ ಮನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ. ಬೀಡಿ ಸೇದಲು ಬೆಂಕಿ ಕಡ್ಡಿ ಹಚ್ಚಿದ್ದೇ ಗ್ಯಾಸ್‌ ಸಿಲಿಂಡರ್‌ ಸ್ಫೋಟಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.

ಉತ್ತರ ಭಾರತದ ಆರು ಮಂದಿಗೆ ಗಂಭೀರ ಗಾಯ: 
ಆನೇಕಲ್ ಪಟ್ಟಣದ ಶ್ರೀಸಾಯಿ ಬಡಾವಣೆಯಲ್ಲಿ ಸಂಭವಿಸಿರುವ ಸಿಲಿಂಡರ್‌ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಪಶ್ಚಿಮ ಬಂಗಾಳ ಮೂಲದ ಸಂಜಯ್ ಮತ್ತು ಬೋರೋ, ಮದ್ಯಪ್ರದೇಶದ ದೀರು, ವಿಜಯ್, ಕೋಬಿನ್ ಎಂದು ಗುರುತಿಸಲಾಗಿದೆ.  

ಇಬ್ಬರ ಸ್ಥಿತಿ ಚಿಂತಾಜನಕ:
ಗಂಭೀರವಾಗಿ ಗಾಯಗೊಂಡಿರುವ ಆರು ಜನರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ.

ಸಿಲಿಂಡರ್‌ ಸ್ಫೋಟದ ತೀವ್ರತೆಗೆ ಸಿಮೆಂಟ್ ಶೀಟ್ ಗಳು ಛಿದ್ರ ಛಿದ್ರವಾಗಿದೆ. ಸ್ಫೋಟದಿಂದಾಗಿ ಮನೆಯಲ್ಲಿನ ಬಟ್ಟೆಗಳಿಗೂ ಬೆಂಕಿ ತಗುಲಿದ್ದು, ಬಟ್ಟೆಗಳು ಕೂಡ ಸುಟ್ಟಿರುವುದು ಕಂಡು ಬಂದಿದೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸಿದ್ದಾರೆ. ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES