SOCIAL MEDIA

Newsletter

PARTNER SITES
Select Language Select State

ಇ ಖಾತಾ ಮೇಳ ಅಭಿಯಾನ ಚುರುಕುಗೊಳಿಸಲು ಜಿಬಿಎ ನಿರ್ಧಾರ: ಇ-ಖಾತಾ ಸಂಬಂಧಿತ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ!

ಇ-ಖಾತಾ ಸಂಬಂಧಿತ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ನನ್ನ ಇ-ಖಾತಾ, ನನ್ನ ಹಕ್ಕು ಅಭಿಯಾನ ನಡೆಸಲಾಗುತ್ತಿದೆ.

Written By Yashaswini V
Published: Nov 07, 2026, 08:49 IST | Updated: Nov 07, 2026, 08:50 IST
Join

ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯಾದ ʼಭೂ ಗ್ಯಾರಂಟಿ ಯೋಜನೆʼ ಅಡಿಯಲ್ಲಿ "ನನ್ನ ಇ-ಖಾತಾ, ನನ್ನ ಹಕ್ಕು" ಅಭಿಯಾನ ಆರಂಭಿಸಿರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ- ಜಿಬಿಎ ಇ-ಖಾತಾ ಸಂಬಂಧಿತ ನಾಗರೀಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ನೆರವಾಗುವಂತೆ ಇಂದು (ನವೆಂಬರ್‌ 7) ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಇ ಖಾತಾ ಮೇಳ ನಡೆಸುತ್ತಿದೆ.

 

 ಬೆಂಗಳೂರಿನಲ್ಲಿ ಇ ಖಾತಾ ಮೇಳ ಅಭಿಯಾನ ಚುರುಕುಗೊಳಿಸಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ- ಜಿಬಿಎ ಕ್ರಮ ಕೈಗೊಂಡಿದ್ದು, ನವೆಂಬರ್ 7 ರಂದು ಎಲ್ಲಾ ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಮೇಳ ಆಯೋಜನೆ ಮಾಡಲು ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಸೂಚನೆ ನೀಡಿದ್ದು, ಬಾಕಿ ಇರುವ ಇ-ಖಾತಾ ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

 

ಬೆಂಗಳೂರು ನಗರದ ನಾಗರಿಕರಿಗೆ ಇ-ಖಾತಾ ಸೇವೆಯನ್ನು ಮತ್ತಷ್ಟು ಸುಲಭಗೊಳಿಸುವ ಉದ್ದೇಶದಿಂದ ಇಂದಿನಿಂದ ಖಾತಾ ಮೇಳ ಚುರುಕುಗೊಳ್ಳಲಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಎಲ್ಲಾ ಐದು ನಗರ ಪಾಲಿಕೆಗಳ ಪ್ರತಿಯೊಂದು ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್ ಆಯೋಜಿಸಲಾಗುತ್ತಿದೆ ಎಂದು ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮಾಹಿತಿ ನೀಡಿದ್ದಾರೆ.

ಇ-ಖಾತಾ ಮೇಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸುವ ಉದ್ದೇಶದಿಂದ ನಗರ ಪಾಲಿಕೆಗಳ ಆಯುಕ್ತರು, ಜಂಟಿ ಆಯುಕ್ತರು, ಉಪ ಆಯುಕ್ತರು ಹಾಗೂ ಕಂದಾಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ವಿವಿಧ ಎಆರ್‌ಒ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲು ಸೂಚಿಸಲಾಗಿದೆ.

ಈ ಕಾರ್ಯವನ್ನು ಅತ್ಯಂತ ಆದ್ಯತೆಯ ಹಾಗೂ ಪ್ರಮುಖ ಕರ್ತವ್ಯವೆಂದು ಪರಿಗಣಿಸಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಎಆರ್‌ಒಗಳು ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಅನಿರೀಕ್ಷಿತ ಭೇಟಿ:
ಇ-ಖಾತಾ ಮೇಳದಲ್ಲಿ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ ಎಂದು ಪರಿಶಿಲಿಸಲು ತಾನೇ ಸ್ವತಃ ವಿವಿಧ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡುತ್ತೇನೆ ಎಂದು ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.

ಜೊತೆಗೆ, ಕೇಂದ್ರ ತಂಡವು ನಿರಂತರವಾಗಿ ಸಮನ್ವಯ ಸಾಧಿಸಿ ಇ-ಖಾತಾ ಮೇಳ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದೆಂದು ಅವರು ಮಾಹಿತಿ ನೀಡಿದ್ದಾರೆ.

ಇ-ಖಾತಾ ಮೇಳ ಎಲ್ಲೆಲ್ಲಿ ನಡೆಯಲಿದೆ:
ಇಂದು ಇ-ಖಾತಾ ಮೇಳವು 5 ನಗರ ಪಾಲಿಕೆಳ ವ್ಯಾಪ್ತಿಯಲ್ಲಿ 62 ಸ್ಥಳಗಳಲ್ಲಿ ನಡೆಯಲಿದೆ. 
ನಾಗರಿಕರು https://gba.karnataka.gov.in/download/openhousevenues.pdf ಲಿಂಗ್ ಗೆ ಭೇಟಿ ನೀಡಿ, ಹತ್ತಿರವಿರುವ ಅಭಿಯಾನದ ಸ್ಥಳಗಳಿಗೆ ಭೇಟಿ ನೀಡಬಹುದು.

ಇ-ಖಾತಾ ಮಾಹಿತಿಗಾಗಿ ಪಾಲಿಕೆ ಕಂದಾಯ ವಿಭಾಗದ ಸಹಾಯವಾಣಿ ಸಂಖ್ಯೆ 9480683695 ಕರೆ ಮಾಡಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದು.
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ZEENEWS TRENDING STORIES