SOCIAL MEDIA

Newsletter

PARTNER SITES
Select Language Select State

ನಮ್ಮ ಮೆಟ್ರೋ ಯಲ್ಲೋ ಲೈನ್‌ ಪ್ರಯಾಣೀಕರಿಗೆ ಗುಡ್‌ ನ್ಯೂಸ್‌: ನ. 16ರಿಂದ ಹೊಸ ರೈಲು ಸೇರ್ಪಡೆ

ರಸ್ತೆಯಿಂದ ಬೊಮ್ಮಸಂದ್ರವನ್ನು ಸಂಪರ್ಕಿಸುವ ಯೆಲ್ಲೋ ಲೈನ್ ಮಾರ್ಗಕ್ಕೆ ನವೆಂಬರ್ 16ರ ಸೋಮವಾರದಿಂದ ಮತ್ತೊಂದು ಹೊಸ ರೈಲು ಅಂದರೆ 13ನೇ ರೈಲು ಸೇರ್ಪಡೆಯಾಗಲಿದೆ. ಈ ಕ್ರಮದಿಂದಾಗಿ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರ ಕಾಯುವ ಸಮಯ ಗಣನೀಯವಾಗಿ ಕಡಿಮೆಯಾಗಲಿದೆ.

Written By Chetana Devarmani
Published: Nov 15, 2026, 14:22 IST | Updated: Nov 15, 2026, 14:25 IST
Join

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡುತ್ತಿರುವ 'ನಮ್ಮ ಮೆಟ್ರೋ' ಇದೀಗ ಹಳದಿ ಮಾರ್ಗದ ಪ್ರಯಾಣಿಕರಿಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟಿದೆ. ಪಿಂಕ್ ಲೈನ್ ಅಭಿವೃದ್ಧಿಗೊಂಡ ಬೆನ್ನಲ್ಲೇ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)  ಹಳದಿ ಮಾರ್ಗದ ಸಾಮರ್ಥ್ಯವನ್ನು ಹೆಚ್ಚಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವನ್ನು ಸಂಪರ್ಕಿಸುವ ಯೆಲ್ಲೋ ಲೈನ್ ಮಾರ್ಗಕ್ಕೆ ನವೆಂಬರ್ 16ರ ಸೋಮವಾರದಿಂದ ಮತ್ತೊಂದು ಹೊಸ ರೈಲು ಅಂದರೆ 13ನೇ ರೈಲು ಸೇರ್ಪಡೆಯಾಗಲಿದೆ. ಈ ಕ್ರಮದಿಂದಾಗಿ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರ ಕಾಯುವ ಸಮಯ ಗಣನೀಯವಾಗಿ ಕಡಿಮೆಯಾಗಲಿದೆ.

ಪ್ರಸ್ತುತ ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ನಡುವಿನ ಯೆಲ್ಲೋ ಲೈನ್ ಮಾರ್ಗದಲ್ಲಿ 12 ರೈಲುಗಳು ಕಾರ್ಯಾಚರಣೆ ನಡೆಸುತ್ತಿವೆ. ಹೆಚ್ಚುವರಿ ರೈಲು ಹಳಿಗೆ ಇಳಿಯುತ್ತಿರುವುದರಿಂದ ರೈಲುಗಳ ಸಂಚಾರದ ಅಂತರದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಐಟಿ ಉದ್ಯೋಗಿಗಳು ಹಾಗೂ ದೈನಂದಿನ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಹೊಸ ವೇಳಾಪಟ್ಟಿಯ ಪ್ರಕಾರ, ಸೋಮವಾರದಿಂದ ಶುಕ್ರವಾರದವರೆಗಿನ ಕೆಲಸದ ದಿನಗಳಲ್ಲಿ ಜನದಟ್ಟಣೆ ಹೆಚ್ಚಿರುವ ಸಮಯದಲ್ಲಿ ಪ್ರಯಾಣಿಕರು ಹೆಚ್ಚು ಹೊತ್ತು ಕಾಯುವ ಅಗತ್ಯವಿರುವುದಿಲ್ಲ. ಈವರೆಗೆ ಪೀಕ್ ಅವರ್‌ನಲ್ಲಿ ಪ್ರತಿ 6 ನಿಮಿಷಕ್ಕೊಂದರಂತೆ ರೈಲುಗಳು ಸಂಚರಿಸುತ್ತಿದ್ದವು. ಆದರೆ, ನಾಳೆಯಿಂದ ಪೀಕ್ ಅವರ್‌ನಲ್ಲಿ ಪ್ರತಿ 5.30 ನಿಮಿಷಕ್ಕೊಂದರಂತೆ ಮೆಟ್ರೋ ರೈಲು ಸಂಚರಿಸಲಿದೆ. ಇನ್ನುಳಿದಂತೆ ಜನದಟ್ಟಣೆ ಕಡಿಮೆ ಇರುವ ಸಮಯದಲ್ಲಿ ಪ್ರತಿ 10 ನಿಮಿಷಕ್ಕೊಂದರಂತೆ ರೈಲು ಸೇವೆ ಮುಂದುವರಿಯಲಿದೆ. ವಾರಾಂತ್ಯದ ದಿನಗಳಾದ ಶನಿವಾರ ಮತ್ತು ಭಾನುವಾರಗಳಂದು ಎಂದಿನಂತೆ ದಿನವಿಡೀ ಪ್ರತಿ 10 ನಿಮಿಷಗಳಿಗೊಮ್ಮೆ ರೈಲುಗಳು ಸಂಚರಿಸಲಿವೆ.

ರೈಲುಗಳ ಆವರ್ತನದಲ್ಲಿ ಬದಲಾವಣೆ ಮಾಡಲಾಗಿದ್ದರೂ, ವಾರದ ಯಾವುದೇ ದಿನಗಳಲ್ಲಿ ಹಳದಿ ಮಾರ್ಗದ ಕೊನೆಯ ನಿಲ್ದಾಣಗಳಾದ ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ ಅಧಿಕೃತವಾಗಿ ಸ್ಪಷ್ಟಪಡಿಸಿದೆ.  ಪ್ರಯಾಣಿಕರು ನಿಗದಿತ ವೇಳಾಪಟ್ಟಿಯಂತೆಯೇ ತಮ್ಮ ಪ್ರಯಾಣವನ್ನು ಯೋಜಿಸಬಹುದು ಎನ್ನಲಾಗಿದೆ.

ಒಂದೆಡೆ ಯೆಲ್ಲೋ ಲೈನ್ ಸಾಮರ್ಥ್ಯ ಹೆಚ್ಚಳವಾಗುತ್ತಿದ್ದರೆ, ಮತ್ತೊಂದೆಡೆ ಬೆಂಗಳೂರು ಮೆಟ್ರೋ ವಿಸ್ತರಣೆಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಮ್ಮ ಮೆಟ್ರೋದ ಪಿಂಕ್ ಲೈನ್  ಮಾರ್ಗದಲ್ಲಿ ಕಾಳೇನ ಅಗ್ರಹಾರದಿಂದ ಸದ್ದುಗುಂಟೆ ಪಾಳ್ಯದವರೆಗೆ ಪ್ರಯಾಣಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದಿದ್ದರು. ಸಾಮಾನ್ಯ ಪ್ರಯಾಣಿಕರಂತೆ ಮೆಟ್ರೋದಲ್ಲಿ ಸಂಚರಿಸಿದ್ದ ಸಿಎಂ, ಸಹಪ್ರಯಾಣಿಕರೊಂದಿಗೆ ಆತ್ಮೀಯವಾಗಿ ಬೆರೆತು ಸೆಲ್ಫಿಗಳಿಗೆ ಪೋಸ್ ನೀಡುವ ಮೂಲಕ ಬೆಂಗಳೂರು ಮೆಟ್ರೋ ಸೇವೆಗೆ ಹೊಸ ಉತ್ಸಾಹ ತುಂಬಿದ್ದರು. ಒಟ್ಟಾರೆಯಾಗಿ, ಯಲ್ಲೋ ಲೈನ್‌ಗೆ 13ನೇ ರೈಲಿನ ಸೇರ್ಪಡೆಯು ಎಲೆಕ್ಟ್ರಾನಿಕ್ ಸಿಟಿ ಮತ್ತು ಬೊಮ್ಮಸಂದ್ರ ಭಾಗದ ಪ್ರಯಾಣಿಕರಿಗೆ ದೊಡ್ಡ ಮಟ್ಟದ ರಿಲೀಫ್ ನೀಡಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES