• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಬಿಎನ್‌ಎಸ್ ಕಾಯ್ದೆಯಡಿ ಎಫ್‌ಐಆರ್ ಹಾಕಿ ಕಿರುಕುಳ ನೀಡಿದರೆ ಸಹಿಸುವುದಿಲ್ಲ

ಬಿಎನ್‌ಎಸ್ ಕಾಯ್ದೆಯಡಿ ಎಫ್‌ಐಆರ್ ಹಾಕಿ ಕಿರುಕುಳ ನೀಡಿದರೆ ಸಹಿಸುವುದಿಲ್ಲ

​ಚುನಾವಣಾ ಆಯೋಗ ನೀಡಿರುವ ಹಕ್ಕಿನಂತೆಯೇ ಫಾರ್ಮ್-7 ಸಲ್ಲಿಕೆ ಮಾಡಲಾಗಿದ್ದು, ಇದನ್ನು ಅಪರಾಧವೆಂದು ಬಿಎನ್‌ಎಸ್ ಕಾಯ್ದೆಯಡಿ ಎಫ್‌ಐಆರ್ ಹಾಕಿ ಕಿರುಕುಳ ನೀಡಿದರೆ ಸಹಿಸುವುದಿಲ್ಲ, ಅಗತ್ಯಬಿದ್ದರೆ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ. ಇದರ ಜೊತೆಗೆ ಕೇಂದ್ರದ ಬರ ಅಧ್ಯಯನ ತಂಡದ ಭೇಟಿ ಹಿನ್ನೆಲೆಯಲ್ಲಿ ರೈತರಿಗೆ ಎಕರೆಗೆ 25,000 ರೂಪಾಯಿ ಪರಿಹಾರ ನೀಡಬೇಕೆಂಬ ಆಗ್ರಹವೂ ಕೇಳಿಬಂದಿದೆ.

Written ByChetana Devarmani
Published: Oct 03, 2026, 08:32 PM IST|Updated: Oct 03, 2026, 08:33 PM IST
joinshare
ಬಿಎನ್‌ಎಸ್ ಕಾಯ್ದೆಯಡಿ ಎಫ್‌ಐಆರ್ ಹಾಕಿ ಕಿರುಕುಳ ನೀಡಿದರೆ ಸಹಿಸುವುದಿಲ್ಲ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಬಿಎನ್‌ಎಸ್ ಕಾಯ್ದೆಯಡಿ ಎಫ್‌ಐಆರ್ ಹಾಕಿ ಕಿರುಕುಳ ನೀಡಿದರೆ ಸಹಿಸುವುದಿಲ್ಲ

ಬಿಎನ್‌ಎಸ್ ಕಾಯ್ದೆಯಡಿ ಎಫ್‌ಐಆರ್ ಹಾಕಿ ಕಿರುಕುಳ ನೀಡಿದರೆ ಸಹಿಸುವುದಿಲ್ಲ

2

ಷೇರುಪೇಟೆಯಲ್ಲಿ ಯಶಸ್ಸಿಗೆ ಭಾವನಾತ್ಮಕತೆಗಿಂತ ಭರವಸೆ ನಿರ್ಧಾರ ಅಗತ್ಯ: ಕೆ.ಜಿ. ಕೃಪಾಲ್

3

ಹಸಿ ಬಾಳೆಹಣ್ಣುಗಳು ಎಷ್ಟು ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? ನೀವು ತಿಳಿದುಕೊಳ್ಳಲೇಬೇಕಾದ ಅದ್ಭುತ ವಿಷಯಗಳು!

4

ಮೈಸೂರು ದಸರಾ ವೈಭವದಂತೆ ಸಿಲಿಕಾನ್‌ ಸಿಟಿಯಲ್ಲೂ ಬೆಂಗಳೂರು ಜಾತ್ರೆ.. 10 ದಿನ ಹಬ್ಬವೋ ಹಬ್ಬ

5

ಫಸ್ಟ್‌ ಇಯರ್ B.Com ವಿದ್ಯಾರ್ಥಿಗೆ ಚಾಕು ಇರಿದು ಕೊ*ಲೆ.. ಈ ಘಟನೆಗೆ ಹುಡುಗಿ ಕಾರಣನಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ರಾಜ್ಯ ರಾಜಕಾರಣದಲ್ಲಿ ಈಗ ವೋಟರ್ ಲಿಸ್ಟ್ ಫಾರ್ಮ್-7 ಮತ್ತು ಬಿಜೆಪಿ ಕಾರ್ಯಕರ್ತರ ಮೇಲಿನ ಎಫ್‌ಐಆರ್ ವಿವಾದದ ಬಿರುಗಾಳಿ ಎಬ್ಬಿಸಿದೆ. ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಬಿಜೆಪಿ ಕಾರ್ಯಕರ್ತರ ವಿರುದ್ಧ ಅನ್ಯಾಯವಾಗಿ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ B.Y. ವಿಜಯೇಂದ್ರ ನೇತೃತ್ವದ ಹಿರಿಯ ನಾಯಕರ ದಂಡು ಇಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ (DGP) ಕಚೇರಿಗೆ ದಿಢೀರ್ ಭೇಟಿ ನೀಡಿ ದೂರು ಸಲ್ಲಿಸಿದೆ. ​ಚುನಾವಣಾ ಆಯೋಗ ನೀಡಿರುವ ಹಕ್ಕಿನಂತೆಯೇ ಫಾರ್ಮ್-7 ಸಲ್ಲಿಕೆ ಮಾಡಲಾಗಿದ್ದು, ಇದನ್ನು ಅಪರಾಧವೆಂದು ಬಿಎನ್‌ಎಸ್ ಕಾಯ್ದೆಯಡಿ ಎಫ್‌ಐಆರ್ ಹಾಕಿ ಕಿರುಕುಳ ನೀಡಿದರೆ ಸಹಿಸುವುದಿಲ್ಲ, ಅಗತ್ಯಬಿದ್ದರೆ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ. ಇದರ ಜೊತೆಗೆ ಕೇಂದ್ರದ ಬರ ಅಧ್ಯಯನ ತಂಡದ ಭೇಟಿ ಹಿನ್ನೆಲೆಯಲ್ಲಿ ರೈತರಿಗೆ ಎಕರೆಗೆ 25,000 ರೂಪಾಯಿ ಪರಿಹಾರ ನೀಡಬೇಕೆಂಬ ಆಗ್ರಹವೂ ಕೇಳಿಬಂದಿದೆ.

ಚುನಾವಣಾ ಆಯೋಗದ SIR  ಪ್ರಕ್ರಿಯೆಯ ಭಾಗವಾಗಿ ಅನಧಿಕೃತ ಮತದಾರರನ್ನು ಪಟ್ಟಿಯಿಂದ ಕೈಬಿಡಲು ನೀಡಲಾಗುವ ಫಾರ್ಮ್-7 ಸಲ್ಲಿಕೆಯ ವಿಚಾರ ಈಗ ದೊಡ್ಡ ರಾಜಕೀಯ ಸಂಗ್ರಾಮಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ನಿಯಮಾನುಸಾರ ಫಾರ್ಮ್-7 ನೀಡಿದ್ದರೆ, ರಾಜ್ಯ ಸರ್ಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಕಾರ್ಯಕರ್ತರ ಮೇಲೆ ಬಿಎನ್‌ಎಸ್ ಆಕ್ಟ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸುತ್ತಿದೆ ಎಂಬುದು ಬಿಜೆಪಿಯ ಆರೋಪ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕರಾದ ಡಾ. ಅಶ್ವಥ್ ನಾರಾಯಣ್, ಕೃಷ್ಣಪ್ಪ, ವಿಶ್ವನಾಥ್, ಬೈರತಿ ಬಸವರಾಜ್, ಸಿ.ಕೆ. ರಾಮಮೂರ್ತಿ, ಎಸ್. ರಘು ಹಾಗೂ ಪ್ರೀತಮ್ ಗೌಡ ಸೇರಿದಂತೆ ಪ್ರಮುಖ ನಾಯಕರ ನಿಯೋಗ ಡಿಜಿಪಿ ಕಚೇರಿಗೆ ಆಗಮಿಸಿ ಅಧಿಕೃತ ದೂರು ಸಲ್ಲಿಸಿತು. ಫಾರ್ಮ್-7 ಅರ್ಜಿಯನ್ನು ಸ್ವೀಕರಿಸುವುದು ಅಥವಾ ತಿರಸ್ಕರಿಸುವುದು ಚುನಾವಣಾ ಆಯೋಗದ ಕೆಲಸವೇ ಹೊರತು ಪೊಲೀಸ್ ಠಾಣೆಯ ಕೆಲಸವಲ್ಲ. ಸರ್ಕಾರ ತಕ್ಷಣವೇ ಕಾರ್ಯಕರ್ತರ ಮೇಲಿನ ಎಫ್‌ಐಆರ್ ಹಿಂಪಡೆಯಲು ಪೊಲೀಸರಿಗೆ ಸೂಚಿಸಬೇಕು ಎಂದು ನಾಯಕರು ಆಗ್ರಹಿಸಿದರು.

ಡಿಜಿಪಿಗೆ ದೂರು ನೀಡಿದ ಬಳಿಕ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಕಾರ್ಯಕರ್ತರ ಮೇಲೆ ಎಫ್‌ಐಆರ್ ಹಾಕಿ ದಬ್ಬಾಳಿಕೆ ಮಾಡುವುದನ್ನು, ಕಿರುಕುಳ ನೀಡುವುದನ್ನು ಸಹಿಸಲು ಸಾಧ್ಯವಿಲ್ಲ. ಸಿಎಂ ಮಾತು ಕೇಳಿ ಕಾನೂನು ಸುವ್ಯವಸ್ಥೆ ಹಾಳು ಮಾಡಬೇಡಿ, ಇದುವೇ ಕೊನೆಯ ಎಚ್ಚರಿಕೆ ಎಂದು ಗುಡುಗಿದರು. ಇತ್ತ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಒತ್ತಡಕ್ಕೆ ಸಿಲುಕಿ ಪೊಲೀಸ್ ಠಾಣೆಗಳನ್ನು ಕಾಂಗ್ರೆಸ್ ಆಫೀಸ್‌ನಂತೆ ಮಾಡಲಾಗುತ್ತಿದೆ. ಬಾಂಗ್ಲಾದೇಶದ 25 ಲಕ್ಷ ಅಕ್ರಮ ವಲಸಿಗರನ್ನು ವೋಟರ್ ಲಿಸ್ಟ್‌ಗೆ ಸೇರಿಸಲು ಬಿಡುವುದಿಲ್ಲ. ಹೀಗೆಯೇ ಮುಂದುವರಿದರೆ ಠಾಣೆಗಳಿಗೆ ಮುತ್ತಿಗೆ ಹಾಕುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

​ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸರ್ಕಾರ ಎಸ್ಐಟಿ ಮಾಡಲು ಹೊರಟಿರುವುದು ಮತ್ತು ಸಿಎಂ ನಡೆದುಕೊಳ್ಳುತ್ತಿರುವ ರೀತಿ ಗೂಂಡಾಗಿರಿಯಂತೆ ಕಾಣುತ್ತಿದೆ. ಕೊತ್ವಾಲ್ ರಾಮಚಂದ್ರನ ಶಿಷ್ಯ ಅಂತ ತೋರಿಸಲು ಹೊರಟಿದ್ದೀರಾ? ಅಧಿಕಾರ ಯಾರಪ್ಪನ ಮನೆ ಆಸ್ತಿಯೂ ಅಲ್ಲ. ನಾವು ಬೀದಿಗಿಳಿದು ಉತ್ತರ ಕೊಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಇನ್ನು ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಮೆಚ್ಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಹೈಡ್ರಾಮಾ ಮಾಡುತ್ತಿದ್ದು, ಉಸ್ತುವಾರಿಗಳ ಸಮ್ಮುಖದಲ್ಲಿ ಯೂ-ಟರ್ನ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದರು.

ಇತ್ತ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, ಕೇಂದ್ರದ ಬರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿದೆ. ಈ ವಿಚಾರವಾಗಿ ಮಾತನಾಡಿದ ನಾಯಕರು, ರಾಜ್ಯ ಕಾಂಗ್ರೆಸ್ ಸರ್ಕಾರ ಕೇವಲ 177 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ, 2,500 ರೂಪಾಯಿ ಕೊಡುವುದಾಗಿ ಹೇಳಿ ರೈತರಿಗೆ ಬಿಡಿಗಾಸನ್ನೂ ನೀಡಿಲ್ಲ ಎಂದು ಕಿಡಿಕಾರಿದರು. ​ಹಿಂದೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ರೈತರಿಗೆ ಸೂಕ್ತ ಪರಿಹಾರ ನೀಡಿದ್ದನ್ನು ಸ್ಮರಿಸಿದ ಬಿಜೆಪಿ ನಾಯಕರು, ಈಗ ಬಂದಿರುವ ಕೇಂದ್ರ ತಂಡಕ್ಕೆ ರಾಜ್ಯ ಸರ್ಕಾರ ಮತ್ತು ರೈತರು ನಿಖರ ಹಾಗೂ ಸರಿಯಾದ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು. ತಕ್ಷಣವೇ ಸಂಕಷ್ಟದಲ್ಲಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ 25,000 ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದರು. ಫಾರ್ಮ್-7 ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಸಮರ ಈಗ ಪೊಲೀಸ್ ಮಹಾನಿರ್ದೇಶಕರ ಅಂಗಳ ತಲುಪಿದ್ದು, ಕಾರ್ಯಕರ್ತರ ಮೇಲಿನ ಎಫ್‌ಐಆರ್ ಹಿಂಪಡೆಯದಿದ್ದರೆ ಹೆದ್ದಾರಿ ಮತ್ತು ಪೊಲೀಸ್ ಠಾಣೆ ಮುತ್ತಿಗೆಯ ರೂಪ ಪಡೆಯುವ ಸಾಧ್ಯತೆ ಇದೆ. 
 

Add Zee News as a Preferred Source
TAGS:
Karnataka Politics