SOCIAL MEDIA

Newsletter

PARTNER SITES
Select Language Select State

ದೇವೇಗೌಡರ ಕುಟುಂಬ ಮುಗಿಸಲು 600 ಕೋಟಿ ಡೀಲ್: ಕೇಂದ್ರ ಸಚಿವ ಕುಮಾರಸ್ವಾಮಿ ಹೊಸ ಬಾಂಬ್‌

ಮಾಜಿ ಪ್ರಧಾನಿ ದೇವೇಗೌಡರ ಕುಟುಂಬವನ್ನು ಮುಗಿಸಲು 600 ಕೋಟಿ ರೂ ಡೀಲ್​ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಡೀಲ್​ ಆಗಿರುವುದರಲ್ಲಿ ಯಾವುದೇ ಸಂಶಯ ಇಲ್ಲ’ ಎಂದು ಕೇಂದ್ರ ಸಚಿವ ಹೆಚ್‌. ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Written By Chetana Devarmani
Published: Oct 25, 2026, 05:39 PM IST | Updated: Oct 25, 2026, 06:06 PM IST
Join

ಬೆಂಗಳೂರು: ಒಂದು ಕುಟುಂಬವನ್ನು ಮುಗಿಸಲು ₹600 ಕೋಟಿ ಡೀಲ್ ನಡೆದಿದೆ ಎಂಬ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಮತ್ತು ಇದರ ಹಿಂದಿರುವ ಸತ್ಯ ಜನರ ಮುಂದೆ ಬರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸ್ಟಿಂಗ್ ಆಪರೇಷನ್​ ವಿಚಾರ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಪ್ರಕರಣದ ಕುರಿತು ತನಿಖೆ ಕೂಡ ಚುರುಕು ಪಡೆದುಕೊಂಡಿದೆ. ಈ ಮಧ್ಯೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬವನ್ನು ಮುಗಿಸಲು 600 ಕೋಟಿ ರೂ ಡೀಲ್​ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಡೀಲ್​ ಆಗಿರುವುದರಲ್ಲಿ ಯಾವುದೇ ಸಂಶಯ ಇಲ್ಲ’ ಎಂದು ಕೇಂದ್ರ ಸಚಿವ ಹೆಚ್‌. ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಒಂದು ಕುಟುಂಬವನ್ನು ಮುಗಿಸಲು 600 ಕೋಟಿ ರೂಪಾಯಿ ಡೀಲ್​ ಆಗಿದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ. ಈ ವೈರಲ್‌ ವಿಡಿಯೋ ವಿಚಾರವಾಗಿ ಮಾಧ್ಯಮದರೊಂದಿಗೆ ಮಾತನಾಡಿದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್​.ಡಿ.ದೇವೇಗೌಡರ ಕುಟುಂಬ ಮುಗಿಸಿ ಅಂತಾ ಹೇಳಿರುವುದರಲ್ಲಿ ಯಾವ ರೀತಿಯ ಸಂಶಯವೂ ಇಲ್ಲ. ಆ ಹಿರಿಯ ನಾಯಕ ಬೇರೆ ಯಾರು ಅಲ್ಲ. ಈಗಿನ ಮಹಾನ್ ಸಿಎಂ. ಇದೆಲ್ಲದರ ವಿಚಾರವಾಗಿ ದೊಡ್ಡಮಟ್ಟದಲ್ಲಿ ತನಿಖೆ ಆಗಬೇಕು ಎಂದು ಕೇಂದ್ರ ಸಚಿವ ಹೆಚ್‌. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಅವರ ಪಾಪದ ಕೊಡ ತುಂಬಿದೆ. ಇನ್ನಾದರೂ ಸತ್ಯ ಹೊರಗೆ ಬರಲೇಬೇಕು. ನಾವಲ್ಲ... ಭಗವಂತ ಎಲ್ಲಾ ಹೊರಗಡೆ ತರುತ್ತಿದ್ದಾನೆ. ಪೊಲೀಸ್ ಅಧಿಕಾರಿಗಳ ಮೂಲಕ ಮುಚ್ಚಿಸೋಕೆ ಹೊರಟಿದ್ದರು. ಆದರೆ ಈಗ ಸತ್ಯ ಹೊರಗೆ ಬರಲಿ ಎಂದಿದ್ದಾರೆ.

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತಾಗಿ ಮಾತನಾಡಿದ ಕೇಂದ್ರ ಸಚಿವ ಹೆಚ್‌. ಡಿ. ಕುಮಾರಸ್ವಾಮಿ, ‘ ಈ ಪ್ರಕರಣದಲ್ಲಿ ನಮ್ಮವರನ್ನು ಗುರಿಯಾಗಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಐದು ದಿನ ಕಾಲಾವಕಾಶ ಕೊಡುವೆ. ನಾನೇ‌ ಹೇಳ್ತೇನೆ, ಯಾರೂ ಅಂಜಬೇಕಿಲ್ಲ, ಹೆದರಬೇಕಿಲ್ಲ. ಎಲ್ಲರೂ ಹೋಗಿ ವಿಚಾರಣೆಗೆ ಹಾಜರಾಗಿ ಎಂದು ಹೇಳಿದ್ದೇನೆ. ಸಾಮಾಜಿಕ ಜಾಲತಾಣದ ಚಂದನ್​ ವಿಚಾರಣೆಗೆ ಹೋಗುತ್ತಾನೆ’ ಎಂದು ಕೇಂದ್ರ ಸಚಿವ ಹೆಚ್‌. ಡಿ. ಕುಮಾರಸ್ವಾಮಿ ಹೇಳಿದರು.

ಸ್ಟಿಂಗ್‌ ಪ್ರಕರಣದ ತನಿಖೆ ಬಗ್ಗೆ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರಗೂ ಅನುಮಾನ ಇದೆ. ಮಾಜಿ ಸಿಎಂ ಅಧಿಕಾರದಲ್ಲಿದ್ದಾಗ ಯಾವ ರೀತಿ‌ ನಡೀತು. ಘಟನೆಯಿಂದ ಮಾಜಿ ಮುಖ್ಯಮಂತ್ರಿಗಳಿಗೆ ತುಂಬಾ ನೋವಾಗಿದೆ. ಇದು ಹಳೆಯ ಕೇಸ್​ ಎಂದು ಗೃಹ ಸಚಿವರು ಈಗ ಹೇಳಿಕೆ ಕೊಡುತ್ತಿದ್ದಾರೆ. ಅವರ ಕಚೇರಿಯಲ್ಲಿ ಲಿಫ್ಟ್ ಹೇಗೆ ಓಪನ್ ಆಯ್ತು? ಕೆಲ ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ತನಿಖೆ ಸರಿಯಾಗಿ‌ ಪ್ರಾರಂಭ ಆಗಬೇಕು. ಎಷ್ಟು ಕೊಲೆಯಾಗಿದೆ. ಕೋಲಾರದ‌ ಬಳಿ‌ ಅವನ ಚಾಲಕನ‌ ಕೊಲೆ ಹೇಗಾಯ್ತು, ನಿನ್ನೆ ಮತ್ತೆ 1 ವಿಡಿಯೋ ವೈರಲ್ ಆಗಿದೆ, ವಿಚಾರಣೆಗೆ ಕರೆಸಬೇಕಲ್ವಾ? ತನಿಖೆ ಮಾಡಲು ಸಾಕ್ಷಿ ಇದ್ರೆ ಕೊಡಿ ಎಂದು ಗೃಹ ಸಚಿವರು ಹೇಳುತ್ತಾರೆ. ಹಲವರು ಪೊಲೀಸರು, ನ್ಯಾಯಾಧೀಶರ ವಿಡಿಯೋ ಇಟ್ಟುಕೊಂಡಿದ್ದಾರೆ ಎಂಬ ಆರೋಪಿವಿದೆ. ನಮ್ಮ ಹುಡುಗರ ತಪ್ಪಿದ್ರೆ ಕ್ರಮ ತೆಗೆದುಕೊಳ್ಳಿ. ನಾನು ಹೆದರಿಸುವುದಕ್ಕೆ ಹೇಳ್ತಿಲ್ಲ, ಪ್ರಾಮಾಣಿಕವಾಗಿ ತನಿಖೆ ಮಾಡಿ ಎನ್ನುತ್ತಿದ್ದೇನೆ’ ಎಂದಿದ್ದಾರೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES