SOCIAL MEDIA

Newsletter

PARTNER SITES
Select Language Select State

ಇನ್ನು ಕೆಲವೇ ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Written By Chetana Devarmani
Published: Oct 02, 2026, 08:17 AM IST | Updated: Oct 02, 2026, 08:19 AM IST
Join

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಅಕ್ಟೋಬರ್ 2 ಮತ್ತು 3ರಂದು ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ ಮುನ್ಸೂಚನೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ನಡುವೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯೊಂದಿಗೆ ಗುಡುಗು ಮತ್ತು ಸಿಡಿಲಿನ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲವೆಡೆ ಗುಡುಗು-ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಅಕ್ಟೋಬರ್ 3ರಂದು ಕೂಡ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಕಂಡುಬರುವ ಸಾಧ್ಯತೆ ಕಡಿಮೆ. ಕರಾವಳಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.

ಗುರುವಾರ ಸಂಜೆ ವೇಳೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಆದರೆ ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿತ್ತು. ಈ ಅವಧಿಯಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಹಾಸನ ಜಿಲ್ಲೆಯ ಬೇಲೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ತಲಾ 4 ಸೆಂ.ಮೀ. ಮಳೆ ದಾಖಲಾಗಿದೆ.

ಮುಂದಿನ ಎರಡು ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಸ್ಥಳೀಯ ಹವಾಮಾನ ಮಾಹಿತಿಯನ್ನು ಗಮನಿಸುವುದು ಅಗತ್ಯವಾಗಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES