• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /Bangalore heavy rain | ಬೆಂಗಳೂರಲ್ಲಿ ಮಳೆಗೆ ಅವಾಂತರ – ರಸ್ತೆಗಳೆಲ್ಲಾ ಜಲಾವೃತ, ಟ್ರಾಫಿಕ್ ಜಾಮ್

Bangalore heavy rain | ಬೆಂಗಳೂರಲ್ಲಿ ಮಳೆಗೆ ಅವಾಂತರ – ರಸ್ತೆಗಳೆಲ್ಲಾ ಜಲಾವೃತ, ಟ್ರಾಫಿಕ್ ಜಾಮ್

Bangalore heavy rain : ರಾಜಧಾನಿ ಬೆಂಗಳೂರಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆ ಜನಜೀವನವನ್ನು ಅಸ್ತವ್ಯಸ್ತ ಮಾಡಿದೆ. ಹಳೆ ಚಂದಾಪುರ ಬಳಿ ಹೆದ್ದಾರಿ ಕೆಸರು ಗದ್ದೆಯಾಗಿ ಮಾರ್ಪಟ್ಟಿದ್ದು, ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಇತ್ತ ಪಣತ್ತೂರು ರೈಲ್ವೆ ಅಂಡರ್‌ಪಾಸ್ ಕೂಡ ಮತ್ತೊಮ್ಮೆ ಜಲಾವೃತವಾಗಿದೆ. ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡುವಂತಾಗಿದೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

Written ByRamya. R. Gowda
Published: Sep 20, 2026, 01:13 PM IST|Updated: Sep 20, 2026, 01:18 PM IST
joinshare
Bangalore heavy rain | ಬೆಂಗಳೂರಲ್ಲಿ ಮಳೆಗೆ ಅವಾಂತರ – ರಸ್ತೆಗಳೆಲ್ಲಾ ಜಲಾವೃತ, ಟ್ರಾಫಿಕ್ ಜಾಮ್

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

Trending

  • News
  • Photos
  • Videos
ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

2

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

3

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

4

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

5

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ರಾಜಧಾನಿ ಬೆಂಗಳೂರಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆ ಜನಜೀವನವನ್ನು ಅಸ್ತವ್ಯಸ್ತ ಮಾಡಿದೆ. ಹಳೆ ಚಂದಾಪುರ ಬಳಿ ಹೆದ್ದಾರಿ ಕೆಸರು ಗದ್ದೆಯಾಗಿ ಮಾರ್ಪಟ್ಟಿದ್ದು, ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಇತ್ತ ಪಣತ್ತೂರು ರೈಲ್ವೆ ಅಂಡರ್‌ಪಾಸ್ ಕೂಡ ಮತ್ತೊಮ್ಮೆ ಜಲಾವೃತವಾಗಿದೆ. ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡುವಂತಾಗಿದೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ಹಳೆ ಚಂದಾಪುರ
ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಂಗಳೂರು-ಹೊಸೂರು ಹೆದ್ದಾರಿಯ ಹಳೆ ಚಂದಾಪುರ ಬಳಿ ಅವಾಂತರ ಸೃಷ್ಟಿಯಾಗಿದೆ. ರೈಲ್ವೆ ಬ್ರಿಡ್ಜ್ ಬಳಿ ಭಾರಿ ಪ್ರಮಾಣದ ಮಳೆ ನೀರು ನಿಂತಿದ್ದು, ಹೆದ್ದಾರಿ ಕೆಸರು ಗದ್ದೆಯಂತಾಗಿದೆ.ಕಳೆದೊಂದು ವರ್ಷದಿಂದ ಇಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ಮಳೆ ನೀರು ನಿಂತು ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್
ರಸ್ತೆ ಕೆಸರುಮಯವಾಗಿದ್ದರಿಂದ ವಾಹನಗಳ ವೇಗ ಸಂಪೂರ್ಣ ಕುಂಠಿತವಾಗಿದೆ.
ಪರಿಣಾಮ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ.

ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕಿದ ವಾಹನ ಸವಾರರು ಹೈರಾಣಾಗಿದ್ದಾರೆ.ಟ್ರಾಫಿಕ್ ನಿಯಂತ್ರಣ ಮಾಡಲು ಸೂರ್ಯನಗರ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಟ್ರಾಫಿಕ್‌ನಲ್ಲಿ ಸಿಲುಕಿರುವ ವಾಹನಗಳು, ಕೆಸರು ರಸ್ತೆ, ನೀರು ನಿಂತಿರುವ ದೃಶ್ಯಗಳು, ಪೊಲೀಸರು ಸಂಚಾರ ನಿಯಂತ್ರಿಸುತ್ತಿರುವ ದೃಶ್ಯ ಕಂಡುಬಂತು.

ಹೆದ್ದಾರಿ ಕಾಮಗಾರಿ ವಿರುದ್ಧ ಆಕ್ರೋಶ
ವರ್ಷದಿಂದ ಆಮೆಗತಿಯಲ್ಲಿ ಸಾಗುತ್ತಿರುವ ಹೆದ್ದಾರಿ ಕಾಮಗಾರಿಯೇ ಸಮಸ್ಯೆಗೆ ಪ್ರಮುಖ ಕಾರಣ ಅಂತಾ ಸ್ಥಳೀಯರು ಆರೋಪಿಸಿದ್ದಾರೆ.ಇಷ್ಟೆಲ್ಲಾ ಸಮಸ್ಯೆ ಎದುರಾದರೂ ಹೆದ್ದಾರಿ ಪ್ರಾಧಿಕಾರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂಬ ಆಕ್ರೋಶ ಸಾರ್ವಜನಿಕರದ್ದು. ದಿನನಿತ್ಯ ಟ್ರಾಫಿಕ್ ಕಿರಿಕಿರಿಯಿಂದ ವಾಹನ ಸವಾರರು ಪರದಾಡುತ್ತಿದ್ದು, ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಚಂದಾಪುರ-ದೊಮ್ಮಸಂದ್ರ ರಸ್ತೆ
ಇತ್ತ ಚಂದಾಪುರ-ದೊಮ್ಮಸಂದ್ರ ರಸ್ತೆಯಲ್ಲೂ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ರೈಲ್ವೆ ಅಂಡರ್‌ಪಾಸ್‌ನಲ್ಲಿ ಭಾರಿ ಪ್ರಮಾಣದ ಮಳೆ ನೀರು ನಿಂತಿದ್ದು, ವಾಹನ ಸವಾರರ ಓಡಾಟಕ್ಕೆ ಅಡ್ಡಿಯಾಗಿದೆ.
ಅಂಡರ್‌ಪಾಸ್ ಜಲಾವೃತವಾದ ಹಿನ್ನೆಲೆ ವಾಹನ ಸವಾರರು ಸುಮಾರು 15 ಕಿಲೋಮೀಟರ್ ಸುತ್ತಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿಂತಿರುವ ನೀರನ್ನು ಹೊರಹಾಕಲು ರೈಲ್ವೆ ಸಿಬ್ಬಂದಿ ಮೋಟರ್ ಬಳಸಿ ನೀರು ಹೊರತೆಗೆಯುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಪಣತ್ತೂರು ರೈಲ್ವೆ ಅಂಡರ್‌ಪಾಸ್
ತ್ತ ಕೆ.ಆರ್.ಪುರ ವ್ಯಾಪ್ತಿಯ ಪಣತ್ತೂರು ರೈಲ್ವೆ ಅಂಡರ್‌ಪಾಸ್ ಕೂಡ ಒಂದೇ ಮಳೆಗೆ ಮತ್ತೆ ಜಲಾವೃತವಾಗಿದೆ. ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಪಣತ್ತೂರು ಸೇರಿದಂತೆ ಕೆಲವು ಪ್ರದೇಶಗಳನ್ನು ಪ್ರವಾಹ ಪೀಡಿತ ಸ್ಥಳಗಳೆಂದು ಗುರುತಿಸಲಾಗಿತ್ತು. ಮಳೆ ವೇಳೆ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು.


ಪ್ರವಾಹ ಪ್ರದೇಶಗಳಲ್ಲಿ ಪಂಪ್‌ಸೆಟ್, ಜೆಸಿಬಿ, ಕ್ರೇನ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆದರೆ ಪಣತ್ತೂರು ಅಂಡರ್‌ಪಾಸ್ ಬಳಿ ಆಯುಕ್ತರ ಸೂಚನೆಯಂತೆ ಯಾವುದೇ ಮುನ್ನೆಚ್ಚರಿಕಾ ಕ್ರಮ ಕಂಡುಬಂದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮಳೆಯಿಂದ ವಾಯು ಗುಣಮಟ್ಟ ಸುಧಾರಣೆ ಇನ್ನು ಮಳೆಯಿಂದಾಗಿ ಬೆಂಗಳೂರಿನ ವಾಯು ಗುಣಮಟ್ಟದಲ್ಲಿ ಕೊಂಚ ಸುಧಾರಣೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಇಂದು AQI ಸುಮಾರು 50ರಿಂದ 60ರ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮವಾಗಿರುವುದು ಕಂಡುಬಂದಿದೆ. ಮೆಜೆಸ್ಟಿಕ್ ಮತ್ತು ಸಿಟಿ ರೈಲ್ವೆ ನಿಲ್ದಾಣದಂತಹ ವಾಹನ ದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ AQI ಸುಮಾರು 63ರಷ್ಟಿದ್ದರೆ, ಜಯನಗರ ಮತ್ತು BWSSB ಸುತ್ತಮುತ್ತ 52–53ರಷ್ಟು ದಾಖಲಾಗಿದೆ.

ಮೈಸೂರು ಮತ್ತು ಮಂಗಳೂರಿನಲ್ಲಿ AQI ಸುಮಾರು 35ರಿಂದ 48ರ ವ್ಯಾಪ್ತಿಯಲ್ಲಿದೆ. ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿಯಲ್ಲಿ 55ರಿಂದ 65ರ ನಡುವೆ AQI ದಾಖಲಾಗಿದ್ದರೆ, ಕಲಬುರಗಿ ಮತ್ತು ಬಳ್ಳಾರಿಯಲ್ಲಿ ಧೂಳಿನ ಕಣಗಳ ಪ್ರಭಾವದಿಂದ AQI ತುಸು ಹೆಚ್ಚಾಗಿದೆ. ರಾಜ್ಯದಲ್ಲಿ ಮುಂದುವರಿಯುತ್ತಿರುವ ಮಳೆಯಿಂದಾಗಿ ಮುಂದಿನ ದಿನಗಳಲ್ಲೂ ವಾಯು ಮಾಲಿನ್ಯ ನಿಯಂತ್ರಣದಲ್ಲಿರುವ ನಿರೀಕ್ಷೆಯಿದೆ.

ಒಂದೆಡೆ ಮಳೆಯಿಂದ ವಾಯು ಗುಣಮಟ್ಟ ಸುಧಾರಿಸಿದ್ರೆ, ಮತ್ತೊಂದೆಡೆ ಜಲಾವೃತ ರಸ್ತೆ, ಕೆಸರುಮಯ ಹೆದ್ದಾರಿ ಹಾಗೂ ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ಪರದಾಡುವಂತಾಗಿದೆ.ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರೂ, ಸಮಸ್ಯೆ ಮರುಕಳಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕಾಲೇಜು ಶೈಕ್ಷಣಿಕ ಪ್ರವಾಸಗಳು ಐದು ದಿನಗಳಿಗೆ ಸೀಮಿತ; ರೀಲ್ಸ್, ಸೆಲ್ಪಿ ನಿಷೇಧ!

Add Zee News as a Preferred Source
TAGS:
Kannada News