• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಬೆಂಗಳೂರಿನ ಹಲವೆಡೆ ಅಬ್ಬರಿಸಿದ ವರುಣ; 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​

ಬೆಂಗಳೂರಿನ ಹಲವೆಡೆ ಅಬ್ಬರಿಸಿದ ವರುಣ; 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​

ನಗರದ್ಯಾಂತ ಭಾರೀ ಮಳೆಯಾಗಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಕಚೇರಿಯಿಂದ ಮನೆಗೆ ಹೋಗುವ ಸಂದರ್ಭದಲ್ಲಿಯೇ ಜೋರು ಮಳೆ ಸುರಿದಿದ್ದರಿಂದ ಸಮಸ್ಯೆ ಎದುರಾಯಿತು.

Written ByBhimappa
Published: Oct 01, 2026, 07:44 AM IST|Updated: Oct 01, 2026, 07:52 AM IST
joinshare
ಬೆಂಗಳೂರಿನ ಹಲವೆಡೆ ಅಬ್ಬರಿಸಿದ ವರುಣ; 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​
Image Credit: Bengaluru_Heavy_rains

About the Author

Bhimappa

Bhimappa

ಭೀಮಪ್ಪ (Bhimappa) ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Heavy rains lashed many parts of Bengaluru: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ತಡರಾತ್ರಿವರೆಗೆ ಸುರಿದ ಭಾರೀ ಮಳೆಯಿಂದ ನಗರದಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಮೇಲ್ಸೇತುವೆ, ಅಂಡರ್‌ಪಾಸ್‌ಗಳು ಮತ್ತು ತಗ್ಗು ಪ್ರದೇಶದಲ್ಲಿರುವ ಕೆಲ ರಸ್ತೆಗಳು ಜಲಾವೃತಗೊಂಡಿವೆ. ನಗರದ ಬಹುತೇಕ ಕಡೆಗಳಲ್ಲಿ ರಸ್ತೆಗಳಲ್ಲಿ ನೀರು ನಿಂತು ಸಂಚಾರ ದಟ್ಟಣೆ ಉಂಟಾಯಿಗಿತ್ತು. ನಗರದ್ಯಾಂತ ಭಾರೀ ಮಳೆಯಾಗಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಕಚೇರಿಯಿಂದ ಮನೆಗೆ ಹೋಗುವ ಸಂದರ್ಭದಲ್ಲಿಯೇ ಜೋರು ಮಳೆ ಸುರಿದಿದ್ದರಿಂದ ಸಮಸ್ಯೆ ಎದುರಾಯಿತು. ಈ ಎಲ್ಲದರ ನಡುವೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಒಳನಾಡಿನ ಹಲವೆಡೆಯೂ ಮಳೆ ಮುನ್ಸೂಚನೆ ನೀಡಲಾಗಿದ್ದು, ಉಳಿದಂತೆ ಬಹುದೇತ ಕಡೆ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಮಾರ್ಕೆಟ್‌, ಟೌನ್‌ಹಾಲ್‌, ಕಾರ್ಪೋರೇಷನ್‌, ಮೈಸೂರು ಬ್ಯಾಂಕ್‌, ಮೆಜೆಸ್ಟಿಕ್‌, ಆನಂದರಾವ್‌ ಸರ್ಕಲ್‌, ಶಿವಾನಂದ ಸರ್ಕಲ್‌, ಸಿಎಂ ಗೃಹ ಕಚೇರಿ, ಮೇಖ್ರಿ ಸರ್ಕಲ್‌, ಹೆಬ್ಬಾಳ, ಯಲಹಂಕ, ಕೊಡುಗೆಹಳ್ಳಿ, ರಿಚ್ಮಂಡ್​​ ಟೌನ್​​, ಶಾಂತಿನಗರ, ಎಂ.ಜಿ. ರೋಡ್​​, ಸರ್ಜಾಪುರ, ಕೆ.ಆರ್​​. ಮಾರುಕಟ್ಟೆ, ಕಾರ್ಪೊರೇಷನ್ ಸರ್ಕಲ್ ಸೇರಿದಂತೆ ಹಲವೆಡೆ ವರುಣಾರ್ಭಟ ಆಗಿದೆ.

ಕಳೆದೆರಡು ದಿನಗಳಿಂದಲೂ ಸಂಜೆಯ ಬಳಿಕ ಮತ್ತು ಬೆಳಗ್ಗಿನ ಜಾವದ ವೇಳೆ ಉತ್ತಮ ಮಳೆಯಾಗಿತ್ತು. ಆದರೆ ನಿನ್ನೆ ಸಂಜೆ ಸಮಯಕ್ಕೆ ವರುಣನ ಆಗಮನವಾಗಿರುವ ಕಾರಣ ವಾಹನ ಸವಾರರು ತೀವ್ರ ಪರದಾಟ ನಡೆಸಬೇಕಾಯಿತು. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಮತ್ತು ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬುಧವಾರ ಮುಂಜೆನೆ ಬಿಡುವು ಕೊಟ್ಟಿದ್ದ ಮಳೆ, ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆಗೆ ಪೂರ್ವ ಮತ್ತು ಉತ್ತರ ಭಾಗದಲ್ಲಿ ಮಳೆಯ ಆಗಮವಾಯಿತು. ಒಂದೇ ಸಮನೆ ಸುರಿದ ಮಳೆಯಿಂದ ರಸ್ತೆಗಳೆಲ್ಲಿ ನೀರು ತುಂಬಿಕೊಂಡಿತು. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಯಿತು. ಹಲವು ಪ್ರದೇಶಗಳಲ್ಲಿ ದ್ವಿಚಕ್ರ ವಾಹನ ಸವಾರರು ಚಲಿಸದಂತಹ ಪರಿಸ್ಥಿತಿ ಏರ್ಪಟ್ಟಿತ್ತು. ಮಳೆ ಯಾವಾಗ ನಿಲ್ಲುತ್ತದೆ ಎಂದು ಅಂದುಕೊಳ್ಳುತ್ತಿದ್ದರು. ಕೆಲವೆಡೆ ಮರಗಳು ಉರುಳಿ ಟ್ರಾಫಿಕ್‌ ಜಾಮ್‌ ಕೂಡ ಆಗಿತ್ತು.

ಭಾರೀ ಮಳೆ ಸುರಿದಿದ್ದರಿಂದ ಮೇಖ್ರಿ ಸರ್ಕಲ್‌ನಿಂದ ಹೆಬ್ಬಾಳ ಫ್ಲೈಓವರ್‌ವರೆಗೆ ಸುದೀರ್ಘವಾದ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಬಸ್‌, ಕಾರು, ಬೈಕ್‌, ಆಂಬುಲೆನ್ಸ್‌ ಎಲ್ಲ ಟ್ರಾಫಿಕ್‌ನಲ್ಲಿ ಸಿಕ್ಕಿಕೊಂಡು ಸಾಕಷ್ಟು ಸಮಸ್ಯೆ ಎದುರಿಸಿದವು. ಟ್ರಾಫಿಕ್‌ ಅಧಿಕವಾಗಿದ್ದರಿಂದ ನಮ್ಮ ನಿಲ್ದಾಣ ಯಾವಾಗ ಬರುತ್ತೆ ಎಂದು ಬಸ್‌ ಒಳಗಿದ್ದ ಪ್ರಯಾಣಿಕರು ಕಾಯುವಂತೆ ಆಗಿತ್ತು. ಭಾರೀ ಮಳೆಗೆ ಮೆಜೆಸ್ಟಿಕ್‌ ಮತ್ತು ಮಾರ್ಕೆಟ್‌ ಸುತ್ತಮುತ್ತಲು ಟ್ರಾಫಿಕ್‌ ಜಾಮ್‌ ಆಗಿದ್ದರಿಂದ ವ್ಯಾಪಾರಸ್ಥರು, ಕಚೇರಿ ಸಿಬ್ಬಂದಿ, ಕಾರ್ಮಿಕರು ಸೇರಿದಂತೆ ಸಾರ್ವಜನಿಕರು ತಮ್ಮ ತಮ್ಮ ಮನೆ ತಲುಪಲು ತೊಂದರೆಗೆ ಒಳಗಾದರು.

ಇನ್ನು ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಪಶ್ಚಿಮ, ಉತ್ತರ, ಪೂರ್ವ ಹಾಗೂ ಕೇಂದ್ರ ವಲಯದಲ್ಲಿ ಮುಂದಿನ ಎರಡು, ಮೂರು ದಿನಗಳಲ್ಲಿ ದೊಡ್ಡ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಮಳೆಯಿಂದ ಯಾವುದೇ ಅನಾಹುತಾ ಎದುರಾಗುವ ಮೊದಲು ಮೊದಲೇ ಜಾಗೃತರಾದರೆ ಉತ್ತಮ. ಆಗುವ ತೊಂದರೆಗಳನ್ನು ತಪ್ಪಿಸಬಹುದು. 
 

Add Zee News as a Preferred Source
TAGS:
Kannada News