• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಬೆಂಗಳೂರು ನೂತನ 2ನೇ ಕ್ರಿಕೆಟ್ ಸ್ಟೇಡಿಯಂಗೆ ಅನುಮತಿ ವಿಘ್ನ..!

ಬೆಂಗಳೂರು ನೂತನ 2ನೇ ಕ್ರಿಕೆಟ್ ಸ್ಟೇಡಿಯಂಗೆ ಅನುಮತಿ ವಿಘ್ನ..!

ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಬರಲಿದೆ ಅನ್ನೋ ನಿರೀಕ್ಷೆ ಇತ್ತು.. ಆದ್ರೆ, ಶಂಕುಸ್ಥಾಪನೆಯಾಗಿ ನಾಲ್ಕು ತಿಂಗಳು ಕಳೆದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ..!

Written ByRamya. R. Gowda
Published: Sep 23, 2026, 09:44 AM IST|Updated: Sep 23, 2026, 09:56 AM IST
joinshare
ಬೆಂಗಳೂರು ನೂತನ 2ನೇ ಕ್ರಿಕೆಟ್ ಸ್ಟೇಡಿಯಂಗೆ ಅನುಮತಿ ವಿಘ್ನ..!
Image Credit: Bengaluru new second cricket stadium

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

Trending

  • News
  • Photos
  • Videos
ಇಂದಿನ ದಿನ ಭವಿಷ್ಯ: ಈ ರಾಶಿಯವರಿಗೆ ಸುಖದ ಸುಪ್ಪತ್ತಿಗೆ, ದಿಢೀರ್‌ ಧನಯೋಗ! 12 ರಾಶಿಗಳ ಭವಿಷ್ಯ ಇಲ್ಲಿದೆ

ಇಂದಿನ ದಿನ ಭವಿಷ್ಯ: ಈ ರಾಶಿಯವರಿಗೆ ಸುಖದ ಸುಪ್ಪತ್ತಿಗೆ, ದಿಢೀರ್‌ ಧನಯೋಗ! 12 ರಾಶಿಗಳ ಭವಿಷ್ಯ ಇಲ್ಲಿದೆ

2

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

3

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

4

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

5

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Bengaluru's new second cricket stadium: ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಬರಲಿದೆ ಅನ್ನೋ ನಿರೀಕ್ಷೆ ಇತ್ತು.. ಆದ್ರೆ, ಶಂಕುಸ್ಥಾಪನೆಯಾಗಿ ನಾಲ್ಕು ತಿಂಗಳು ಕಳೆದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ..!

ಸೂರ್ಯನಗರದಲ್ಲಿ ನಿರ್ಮಾಣವಾಗಬೇಕಿದ್ದ 80 ಸಾವಿರ ಆಸನ ಸಾಮರ್ಥ್ಯದ ಬೃಹತ್ ಕ್ರಿಕೆಟ್ ಸ್ಟೇಡಿಯಂಗೆ ಇದೀಗ ವಿವಿಧ ಇಲಾಖೆಗಳ ಅನುಮತಿಯೇ ಅಡ್ಡಿಯಾಗಿದೆ. ಅರಣ್ಯ, ಪರಿಸರ, ವನ್ಯಜೀವಿ ಮಂಡಳಿ ಸೇರಿದಂತೆ ಹಲವು ಇಲಾಖೆಗಳ NOC ಸಿಗದ ಹಿನ್ನೆಲೆ ಯೋಜನೆ ಅತಂತ್ರ ಸ್ಥಿತಿಗೆ ತಲುಪಿದೆ.

ಕನಸಿನ ಯೋಜನೆಗೆ ವಿಘ್ನ
ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಸಿಗುವ ನಿರೀಕ್ಷೆ.. ಸೂರ್ಯನಗರದಲ್ಲಿ ಬರಬೇಕಿದ್ದ ಈ ಬೃಹತ್ ಕ್ರೀಡಾಂಗಣಕ್ಕೆ ಸರ್ಕಾರ ಕಳೆದ ಮೇ ತಿಂಗಳಲ್ಲಿ ಶಂಕುಸ್ಥಾಪನೆ ನೆರವೇರಿಸಿತ್ತು.

ಕರ್ನಾಟಕ ಗೃಹ ಮಂಡಳಿ ನೇತೃತ್ವದಲ್ಲಿ ಸುಮಾರು 943 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. 80 ಸಾವಿರ ಪ್ರೇಕ್ಷಕರು ಕುಳಿತು ಪಂದ್ಯ ವೀಕ್ಷಿಸುವ ಸಾಮರ್ಥ್ಯದ ಈ ಕ್ರೀಡಾಂಗಣ, ಬೆಂಗಳೂರಿನ ಪ್ರಮುಖ ಕ್ರಿಕೆಟ್ ತಾಣವಾಗಬೇಕಿತ್ತು.


ಆದರೆ,  ಶಂಕುಸ್ಥಾಪನೆ ನೆರವೇರಿಸಿ ನಾಲ್ಕು ತಿಂಗಳು ಕಳೆದರೂ ಸ್ಥಳದಲ್ಲಿ ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಸ್ಟೇಡಿಯಂ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ನಡೆದಿದ್ದರೂ, ಕಾಮಗಾರಿ ಆರಂಭಿಸಲು ಬೇಕಾದ ಹಲವು ಅನುಮತಿಗಳು ಇನ್ನೂ ಬಾಕಿ ಉಳಿದಿವೆ.ಹೀಗಾಗಿ ಪೂಜೆ ಮುಗಿದ್ರೂ.. ಸ್ಟೇಡಿಯಂ ನಿರ್ಮಾಣಕ್ಕೆ ಕಲ್ಲು ಕದಲದಂತಾಗಿದೆ.

NOCಗಾಗಿ ಕಾಯುತ್ತಿರುವ KHB
ಸೂರ್ಯನಗರದ ಈ ಬೃಹತ್ ಯೋಜನೆಗೆ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ಪ್ರಮುಖವಾಗಿದೆ. ಇದರ ಜೊತೆಗೆ ವನ್ಯಜೀವಿ ಮಂಡಳಿ, ಪೊಲೀಸ್ ಇಲಾಖೆ ಹಾಗೂ ಪರಿಸರ ಪ್ರಭಾವ ಮೌಲ್ಯಮಾಪನಕ್ಕೆ ಸಂಬಂಧಿಸಿದ NOC ಸೇರಿದಂತೆ ಹಲವು ಅನುಮತಿಗಳು ಇನ್ನೂ ಸಿಗಬೇಕಿದೆ. ಎಲ್ಲಾ ಇಲಾಖೆಗಳ ಅನುಮತಿ ಸಿಕ್ಕ ಬಳಿಕವಷ್ಟೇ ಕಾಮಗಾರಿಗೆ ವೇಗ ಸಿಗಲಿದೆ ಎಂದು ಹೇಳಲಾಗಿದೆ.

943 ಕೋಟಿ ಯೋಜನೆಗೆ ಕಂಟಕ?
ಸುಮಾರು 943 ಕೋಟಿ ರೂಪಾಯಿ ವೆಚ್ಚದ ಬೃಹತ್ ಯೋಜನೆ ಇದೀಗ ಅನುಮತಿಗಳ ಕಾರಣಕ್ಕೆ ವಿಳಂಬವಾಗುತ್ತಿದೆ. ಒಂದೆಡೆ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದ ಕನಸು..
ಮತ್ತೊಂದೆಡೆ ಗೃಹ ಮಂಡಳಿ ಅಧಿಕಾರಿಗಳು ವಿವಿಧ ಇಲಾಖೆಗಳ ಅನುಮತಿಗಾಗಿ ಕಾಯುತ್ತಿದ್ದಾರೆ. ಹೀಗಾಗಿ, ನಾಲ್ಕು ತಿಂಗಳಾದರೂ ಯೋಜನೆ ಆರಂಭಿಕ ಹಂತದಲ್ಲೇ ಉಳಿದಿದೆ.


ಬೆಂಗಳೂರಿಗೆ ಸಿಗುತ್ತಾ 2ನೇ ಅಂತಾರಾಷ್ಟ್ರೀಯ ಮೈದಾನ?
ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಕ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಾಣ ನಿರ್ಮಿಸುವ ಯೋಜನೆ ಇದಾಗಿದೆ.ಆದ್ರೆ, ಅನುಮತಿಗಳೇ ಯೋಜನೆಗೆ ತಡೆಯಾಗಿರುವುದರಿಂದ ಕ್ರಿಕೆಟ್ \.
ಶಂಕುಸ್ಥಾಪನೆ ನಡೆದು ನಾಲ್ಕು ತಿಂಗಳು ಕಳೆದರೂ ಸೂರ್ಯನಗರದ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಕಾಮಗಾರಿ ಆರಂಭವಾಗಿಲ್ಲ. ವಿವಿಧ ಇಲಾಖೆಗಳ NOC ಸಿಕ್ಕ ಬಳಿಕವಷ್ಟೇ ಯೋಜನೆಗೆ ವೇಗ ಸಿಗುವ ಸಾಧ್ಯತೆ ಇದೆ.

ಒಟ್ಟಾರೆಯಾಗಿ ಎಲ್ಲಾ NOCಗಳು ಯಾವಾಗ ಸಿಗುತ್ತವೆ? ಕಾಮಗಾರಿ ಯಾವಾಗ ಆರಂಭವಾಗುತ್ತೆ? 943 ಕೋಟಿ ರೂಪಾಯಿ ಯೋಜನೆ ಯಾವಾಗ ಪೂರ್ಣಗೊಳ್ಳುತ್ತೆ ಅನ್ನೋ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ

 

Add Zee News as a Preferred Source
TAGS:
Kannada News