SOCIAL MEDIA

Newsletter

PARTNER SITES
Select Language Select State

“ಡಿ.ಕೆ.ಶಿವಕುಮಾರ್‌ನನ್ನ ನಾನು ಸಿಎಂ ಎಂದು ಒಪ್ಪಲ್ಲ!”: ಎಚ್‌.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಬೆಂಗಳೂರಿನಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಅವರ ಕನಕಪುರದ ಇತಿಹಾಸ ಹಾಗೂ ಹಿನ್ನೆಲೆಗೆ ಸಂಬಂಧಿಸಿದ ಪುಸ್ತಕವೊಂದನ್ನ ಉಲ್ಲೇಖಿಸಿದ್ದಾರೆ. ಈ ಪುಸ್ತಕವನ್ನ ನಾನು ಬರೆದಿಲ್ಲವೆಂದು ಸ್ಪಷ್ಟಪಡಿಸಿರುವ ಅವರು, ಅದರಲ್ಲಿ ಉಲ್ಲೇಖಿಸಿರುವ ವಿಷಯಗಳನ್ನ ಪರಿಶೀಲಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Written By Puttaraj K Alur
Published: Oct 23, 2026, 03:02 PM IST | Updated: Oct 23, 2026, 03:04 PM IST
Image Credit: HD Kumaraswamy
Join

HD Kumaraswamy: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಚರ್ಚೆಗಳ ನಡುವೆಯೇ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಡಿ.ಕೆ.ಶಿವಕುಮಾರ್ ಅವರನ್ನ ನಾನು ಮುಖ್ಯಮಂತ್ರಿಯೆಂದು ಒಪ್ಪುವುದಿಲ್ಲ” ಎಂದು ಹೇಳಿರುವ ಕುಮಾರಸ್ವಾಮಿ, ತಮ್ಮ ಹೇಳಿಕೆಗೆ ಕಾರಣವನ್ನೂ ನೀಡಿದ್ದಾರೆ. ಕನಕಪುರದ ಇತಿಹಾಸ ಮತ್ತು ಡಿ.ಕೆ.ಶಿವಕುಮಾರ್ ಅವರ ಹಿನ್ನೆಲೆಯನ್ನ ಉಲ್ಲೇಖಿಸುವ ಪುಸ್ತಕವೊಂದನ್ನ ಪ್ರದರ್ಶಿಸಿರುವ ಅವರು, ಅದನ್ನ ಓದಿದ ಬಳಿಕ ಅವರ ಬಗ್ಗೆ ಜನರು ತಮ್ಮದೇ ಆದ ಅಭಿಪ್ರಾಯ ರೂಪಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಪುಸ್ತಕ ಪ್ರದರ್ಶಿಸಿ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರಿನಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಅವರ ಕನಕಪುರದ ಇತಿಹಾಸ ಹಾಗೂ ಹಿನ್ನೆಲೆಗೆ ಸಂಬಂಧಿಸಿದ ಪುಸ್ತಕವೊಂದನ್ನ ಉಲ್ಲೇಖಿಸಿದ್ದಾರೆ. ಈ ಪುಸ್ತಕವನ್ನ ನಾನು ಬರೆದಿಲ್ಲವೆಂದು ಸ್ಪಷ್ಟಪಡಿಸಿರುವ ಅವರು, ಅದರಲ್ಲಿ ಉಲ್ಲೇಖಿಸಿರುವ ವಿಷಯಗಳನ್ನ ಪರಿಶೀಲಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಈ ಪುಸ್ತಕವನ್ನ ಓದಿದರೆ ಯಾರೂ ಸಹ ಅವರನ್ನ ರಾಜ್ಯದ ಮುಖ್ಯಮಂತ್ರಿಯಾಗಿ ಒಪ್ಪಿಕೊಳ್ಳಲು ಸಾಧ್ಯವಾಗುವುದಿಲ್ಲ” ಎಂದು ಹೇಳಿಕೆ ನೀಡಿರುವ ಕುಮಾರಸ್ವಾಮಿ, ಪುಸ್ತಕವನ್ನ ಯಾರೋ ಸುಮ್ಮನೆ ಬರೆದಿಲ್ಲ ಎಂದೂ ಹೇಳಿದ್ದಾರೆ. ತಮ್ಮ ಬಳಿ ಈ ಪುಸ್ತಕಕ್ಕಿಂತಲೂ ಹೆಚ್ಚಿನ ವರದಿಗಳಿವೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.

ಡಿಕೆಶಿ ವಿರುದ್ಧ ಮತ್ತೆ ರಾಜಕೀಯ ವಾಗ್ದಾಳಿ

ಡಿ.ಕೆ.ಶಿವಕುಮಾರ್ ಮತ್ತು ಎಚ್.ಡಿ.ಕುಮಾರಸ್ವಾಮಿ ನಡುವಿನ ರಾಜಕೀಯ ಭಿನ್ನಾಭಿಪ್ರಾಯ ಹೊಸದಲ್ಲ. ರಾಜ್ಯ ರಾಜಕೀಯದಲ್ಲಿ ಪ್ರಮುಖ ಪ್ರಭಾವ ಹೊಂದಿರುವ ಈ ಇಬ್ಬರು ನಾಯಕರು ಹಲವು ಸಂದರ್ಭಗಳಲ್ಲಿ ಪರಸ್ಪರ ಟೀಕೆಗಳನ್ನ ಮಾಡಿದ್ದಾರೆ. ಇದೀಗ ಮುಖ್ಯಮಂತ್ರಿ ಸ್ಥಾನದ ವಿಚಾರದ ನಡುವೆ ಕುಮಾರಸ್ವಾಮಿ ನೀಡಿರುವ ಹೇಳಿಕೆ ರಾಜಕೀಯ ಚರ್ಚೆಗೆ ಮತ್ತಷ್ಟು ಕಾವು ನೀಡಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನಾಯಕತ್ವದ ಕುರಿತು ಆಗಾಗ್ಗೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಕುಮಾರಸ್ವಾಮಿ ಅವರ ಈ ಹೇಳಿಕೆ ಗಮನ ಸೆಳೆದಿದೆ. ಡಿ.ಕೆ.ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಲು ತಾವು ಸಿದ್ಧರಿಲ್ಲ ಎಂಬ ತಮ್ಮ ನಿಲುವನ್ನ ಅವರು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ.

“ಇನ್ನೂ ಹೆಚ್ಚಿನ ವರದಿಗಳಿವೆ” ಎಂದ ಕೇಂದ್ರ ಸಚಿವ

ತಮ್ಮ ಬಳಿ ಪುಸ್ತಕಕ್ಕಿಂತಲೂ ಹೆಚ್ಚಿನ ವರದಿಗಳಿವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಈಗ ಚರ್ಚೆಯ ವಿಷಯವಾಗಿದೆ. ಆ ವರದಿಗಳು ಯಾವುವು, ಅವುಗಳಲ್ಲಿ ಯಾವ ವಿಚಾರಗಳನ್ನ ಉಲ್ಲೇಖಿಸಲಾಗಿದೆ ಮತ್ತು ಅವುಗಳನ್ನ ಸಾರ್ವಜನಿಕವಾಗಿ ಬಿಡುಗಡೆ ಮಾಡುವ ಉದ್ದೇಶವಿದೆಯೇ ಎಂಬ ಪ್ರಶ್ನೆಗಳು ಮೂಡಿವೆ. ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಗೆ ಸಂಬಂಧಿಸಿದ ದಾಖಲೆಗಳನ್ನ ಬಹಿರಂಗಪಡಿಸಿದರೆ, ಅವುಗಳ ಸತ್ಯಾಸತ್ಯತೆ ಮತ್ತು ಸಂದರ್ಭವನ್ನ ಪರಿಶೀಲಿಸಲು ಅವಕಾಶ ಸಿಗಲಿದೆ. ಅದೇ ರೀತಿ ಡಿ.ಕೆ.ಶಿವಕುಮಾರ್ ಅವರ ಪ್ರತಿಕ್ರಿಯೆ ಮತ್ತು ಸಂಬಂಧಪಟ್ಟ ದಾಖಲೆಗಳ ಪರಿಶೀಲನೆಯೂ ಈ ವಿವಾದದ ಸಂಪೂರ್ಣ ಚಿತ್ರಣ ತಿಳಿಯಲು ಅಗತ್ಯವಾಗಿದೆ.

ಕರ್ನಾಟಕ ರಾಜಕೀಯದಲ್ಲಿ ಹೆಚ್ಚಿದ ಕುತೂಹಲ

ಒಟ್ನಲ್ಲಿ “ಡಿಕೆಶಿಯನ್ನ ಸಿಎಂ ಎಂದು ಒಪ್ಪಲ್ಲ” ಎಂಬ ಕುಮಾರಸ್ವಾಮಿ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕನಕಪುರದ ಇತಿಹಾಸದ ಪುಸ್ತಕವನ್ನ ಮುಂದಿಟ್ಟುಕೊಂಡು ಅವರು ಮಾಡಿರುವ ಟೀಕೆಗಳು ರಾಜಕೀಯವಾಗಿ ಯಾವ ಪರಿಣಾಮ ಬೀರುತ್ತವೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಬೇಕಿದೆ. ಈ ವಿಚಾರಕ್ಕೆ ಡಿ.ಕೆ.ಶಿವಕುಮಾರ್ ಅಥವಾ ಕಾಂಗ್ರೆಸ್ ನಾಯಕರು ನೀಡುವ ಪ್ರತಿಕ್ರಿಯೆ ಮುಂದಿನ ರಾಜಕೀಯ ಚರ್ಚೆಗೆ ಮಹತ್ವದ ತಿರುವು ನೀಡಬಹುದು.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES