• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಜೆಡಿಎಸ್ ಸೋಶಿಯಲ್ ಮೀಡಿಯಾ ಪೊಲೀಸ್ ವಶಕ್ಕೆ HDK ಕಿಡಿ

ಜೆಡಿಎಸ್ ಸೋಶಿಯಲ್ ಮೀಡಿಯಾ ಪೊಲೀಸ್ ವಶಕ್ಕೆ HDK ಕಿಡಿ

ಈಗ ನಮ್ಮ ಸೋಶಿಯಲ್ ಮೀಡಿಯಾ ತಂಡದ ಮೋಹನ್ ಎಂಬ ಇನ್ನೊಬ್ಬ ಹುಡುಗನ ಮನೆ ಮುಂದೆ ಹೋಗಿ ಪೊಲೀಸರು ಗಲಾಟೆ ಮಾಡುತ್ತಿದ್ದಾರೆ, ಅವರ ಕುಟುಂಬದವರಿಗೆ ಕಿರುಕುಳ ಕೊಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಬಂದಿದೆ. ಇದೆಲ್ಲವನ್ನೂ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Written ByChetana Devarmani
Published: Oct 14, 2026, 07:51 PM IST|Updated: Oct 14, 2026, 07:54 PM IST
joinshare
ಜೆಡಿಎಸ್ ಸೋಶಿಯಲ್ ಮೀಡಿಯಾ ಪೊಲೀಸ್ ವಶಕ್ಕೆ HDK ಕಿಡಿ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
Sting Operation: 'ನನ್ನನ್ನ ಟಚ್ ಮಾಡೋ ಧೈರ್ಯ ಇಲ್ವಾ?' ಸರ್ಕಾರಕ್ಕೆ ಎಚ್‌.ಡಿ.ಕುಮಾರಸ್ವಾಮಿ ನೇರ ಸವಾಲ್!

Sting Operation: 'ನನ್ನನ್ನ ಟಚ್ ಮಾಡೋ ಧೈರ್ಯ ಇಲ್ವಾ?' ಸರ್ಕಾರಕ್ಕೆ ಎಚ್‌.ಡಿ.ಕುಮಾರಸ್ವಾಮಿ ನೇರ ಸವಾಲ್!

2

ತ್ರಿವರ್ಣ ಧ್ವಜ ಬದಲಾವಣೆಗೆ ಆಗ್ರಹ! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣದ ಹಿಂದಿನ ಸತ್ಯವೇನು?

3

ಜೆಡಿಎಸ್ ಸೋಶಿಯಲ್ ಮೀಡಿಯಾ ಪೊಲೀಸ್ ವಶಕ್ಕೆ HDK ಕಿಡಿ

4

SRH ಜೊತೆ ಡೀಲ್‌ಗೆ ಮುಂದಾದ ಡೆಲ್ಲಿ ಕ್ಯಾಪಿಟಲ್ಸ್‌! ಟೀಮ್ ಇಂಡಿಯಾ ಆಟಗಾರನಿಗೆ ₹5 ಕೋಟಿ ನಷ್ಟ?

5

Mysuru Dasara 2026: ಅಭಿಮನ್ಯು ಬಳಿಕ ಪ್ರಶಾಂತನಿಗೆ ಪಟ್ಟ! ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊರುವ ಜವಾಬ್ದಾರಿ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಿದ ನೈಜ ಅಪರಾಧಿಯನ್ನು ಬಿಟ್ಟು ಜೆಡಿಎಸ್ ಸಾಮಾಜಿಕ ಜಾಲತಾಣ ತಂಡದ ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮಕ್ಕೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ನಮ್ಮವರಿಗೆ ಹೀಗೆ ಸುಖಾಸುಮ್ಮನೆ ಕಿರುಕುಳ ಕೊಟ್ಟರೆ ಕೈಕಟ್ಟಿ ಕೂರುವುದಿಲ್ಲ. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಎಂಟು ವರ್ಷಗಳಿಗೂ ಹೆಚ್ಚುಕಾಲ ರಾಜ್ಯವನ್ನು ಆಳಿದ ಮಾಜಿ ಮುಖ್ಯಮಂತ್ರಿ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನನ್ನನ್ನು ಹಾಗೂ ನನ್ನ ಜೊತೆಗಿರುವ ಹುಡುಗರನ್ನು ಟಾರ್ಗೆಟ್ ಮಾಡುತ್ತಿರುವುದು ಲಜ್ಜೆಗೆಡಿತನ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಯಾವುದೇ ಪ್ರಕರಣ ದಾಖಲಿಸದೇ ಇಂದು ಬೆಳಗ್ಗೆ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಶಂಕರ್ ಎಂಬ ಯುವಕನನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ನಂತರ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪಕ್ಷದ ಕಾನೂನು ವಿಭಾಗ ದೂರು ದಾಖಲಿಸಿದ ಮೇಲೆ ಆ ಯುವಕನಿಂದ ಆತನ ಪತ್ನಿಗೆ ಕರೆ ಮಾಡಿಸಿ, "ಸಿಸಿಬಿ ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿದ್ದಾರೆ" ಎಂದಷ್ಟೇ ಹೇಳಿಸಿ ಕರೆ ಕಟ್ ಮಾಡಿದ್ದೀರಿ. ಸಾಕು ಮಾಡಿ ನಿಮ್ಮ ಕಪಟ ನಾಟಕ. ಯಾವ ಆಧಾರದ ಮೇಲೆ ಆತನನ್ನು ಕರೆದುಕೊಂಡು ಹೋಗಿದ್ದೀರಿ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಮಾಡಿ, ದೃಶ್ಯಗಳನ್ನು ಚಿತ್ರೀಕರಿಸಿ ಅವರ ಚಾರಿತ್ರ್ಯಹರಣಕ್ಕೆ ಕಾರಣನಾದ ನೀಚನನ್ನು ಬಿಟ್ಟು, ಆ ನೀಚತನವನ್ನು ಪ್ರಶ್ನಿಸಿದ ನನ್ನನ್ನು ನೇರವಾಗಿ ಎದುರಿಸಲಾಗದೆ ನನ್ನ ಹುಡುಗರ ಬೆನ್ಹತ್ತಿದ್ದೀರಿ! ಎಲ್ಲವನ್ನೂ ರೆಕಾರ್ಡ್ ಮಾಡಿದ 'ಮಾಧ್ಯಮದ ಮುಸುಕು' ಹಾಕಿಕೊಂಡಿರುವ ಆ 'ಸಂಚುಕೋರ' ರಾಜಾರೋಷವಾಗಿ ತಿರುಗಾಡುತ್ತಿದ್ದರೆ, ಆ ನೈಜ ಅಪರಾಧಿಯನ್ನು ಬಿಟ್ಟು ನಮ್ಮ ಸೋಶಿಯಲ್ ಮೀಡಿಯಾ ಹುಡುಗರ ಮೇಲೆ ಬಿದ್ದಿದ್ದೀರಿ ಎಂದು ಸಚಿವ ಕುಮಾರಸ್ವಾಮಿ ಅವರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಶ್ನೆ ಮಾಡಿದ್ದು ನಾನು. ಸಿಬಿಐ ತನಿಖೆಗೆ ಒತ್ತಾಯಿಸಿದ್ದು ನಾನು. ಧೈರ್ಯವಿದ್ದರೆ ನನ್ನ ಬಳಿಗೇ ನಿಮ್ಮ ಪೊಲೀಸರನ್ನು ಕಳಿಸಬೇಕಿತ್ತು, ಅಮಾಯಕರ ಮೇಲೇನು ನಿಮ್ಮ ಪ್ರತಾಪ ಎಂದು ಪ್ರಶ್ನಿಸಿರುವ ಸಚಿವರು; ಅಷ್ಟೇ ಅಲ್ಲ, ಈಗ ನಮ್ಮ ಸೋಶಿಯಲ್ ಮೀಡಿಯಾ ತಂಡದ ಮೋಹನ್ ಎಂಬ ಇನ್ನೊಬ್ಬ ಹುಡುಗನ ಮನೆ ಮುಂದೆ ಹೋಗಿ ಪೊಲೀಸರು ಗಲಾಟೆ ಮಾಡುತ್ತಿದ್ದಾರೆ, ಅವರ ಕುಟುಂಬದವರಿಗೆ ಕಿರುಕುಳ ಕೊಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಬಂದಿದೆ. ಇದೆಲ್ಲವನ್ನೂ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Add Zee News as a Preferred Source
TAGS:
Karnataka Politics