SOCIAL MEDIA

Newsletter

PARTNER SITES
Select Language Select State

ಗೃಹಜ್ಯೋತಿ ಮಹತ್ವದ ಮಾಹಿತಿ: ಅಕ್ಟೋಬರ್ 31 ರೊಳಗೆ ಈ ಕೆಲಸ ಮಾಡದಿದ್ರೆ ಸಿಗೋದಿಲ್ಲ 200 ಯೂನಿಟ್‌ ಉಚಿತ ವಿದ್ಯುತ್‌

ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಪರಿಷ್ಕರಿಸುವ ಉದ್ದೇಶದಿಂದ ಕಳೆದ ಮೂರುವರೆ ತಿಂಗಳಿನಿಂದ ಬೆಸ್ಕಾಂ ಸಿಬ್ಬಂದಿ ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿದ್ದಾರೆ.

Written By Chetana Devarmani
Published: Oct 25, 2026, 10:57 AM IST | Updated: Oct 25, 2026, 11:05 AM IST
Join

Karnataka Free Electricity Scheme Latest News : ಕರ್ನಾಟಕ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಗೆ ಅಕ್ಟೋಬರ್ 31 ಕೊನೆಯ ದಿನವಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸಮೀಕ್ಷೆಯ ಗಡುವನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಇನ್ನೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಪರಿಷ್ಕರಿಸುವ ಉದ್ದೇಶದಿಂದ ಕಳೆದ ಮೂರುವರೆ ತಿಂಗಳಿನಿಂದ ಬೆಸ್ಕಾಂ ಸಿಬ್ಬಂದಿ ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿದ್ದಾರೆ. ಈ ಪ್ರಕ್ರಿಯೆಯಲ್ಲಿ ಈಗಾಗಲೇ ಶೇ. 98.49 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ಆದರೂ ಕೆಲವು ಮನೆಗಳಲ್ಲಿ ಗ್ರಾಹಕರು ಲಭ್ಯವಿಲ್ಲದ ಕಾರಣ ಅಥವಾ ಇತರ ಸಮಸ್ಯೆಗಳಿಂದ ಸಮೀಕ್ಷೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಅಂತಹ ಗ್ರಾಹಕರಿಗೆ ಅಗತ್ಯ ಮಾಹಿತಿ ನೀಡಿರುವ ಬೆಸ್ಕಾಂ, ದಾಖಲೆ ಸಲ್ಲಿಕೆಗೆ ಅಕ್ಟೋಬರ್ 31 ರವರೆಗೆ ಅಂತಿಮ ಅವಕಾಶ ಕಲ್ಪಿಸಿದೆ.

98.49 ರಷ್ಟು ಸಮೀಕ್ಷೆ ಪೂರ್ಣ

ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಒಟ್ಟು 74,29,773 ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಈ ಪೈಕಿ 73,17,687 ಗ್ರಾಹಕರ ಸಮೀಕ್ಷೆ ಪೂರ್ಣಗೊಂಡಿದೆ. ಇದರಿಂದ ಒಟ್ಟು ಸಮೀಕ್ಷೆಯಲ್ಲಿ ಶೇ. 98.49 ರಷ್ಟು ಪ್ರಗತಿ ಸಾಧಿಸಿದಂತಾಗಿದೆ.

ಉಳಿದ ಗ್ರಾಹಕರ ಮಾಹಿತಿಯನ್ನು ಸಂಗ್ರಹಿಸಲು ಬೆಸ್ಕಾಂ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ. ಆದರೆ ಸಮೀಕ್ಷೆಯ ಅಂತಿಮ ಗಡುವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಇನ್ನೂ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದವರು ಕೂಡಲೇ ಕ್ರಮ ಕೈಗೊಳ್ಳಬೇಕಾಗಿದೆ. ಕೊನೆಯ ಕ್ಷಣದವರೆಗೆ ಕಾಯದೆ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಸೂಕ್ತವಾಗಿದೆ.

ಸಮೀಕ್ಷೆಗೆ ಬಂದಾಗ ಮನೆಗೆ ಬೀಗ ಹಾಕಿದ್ದರೆ ಏನು ಮಾಡಬೇಕು?

ಕೆಲವು ಮನೆಗಳಿಗೆ ಭೇಟಿ ನೀಡಿದಾಗ ಬೀಗ ಹಾಕಿರುವುದು, ಮನೆ ಖಾಲಿ ಇರುವುದು ಅಥವಾ ಗ್ರಾಹಕರು ಬೇರೆ ಕಾರಣಗಳಿಂದ ಮನೆಯಲ್ಲಿ ಲಭ್ಯವಿಲ್ಲದಿರುವುದು ಕಂಡುಬಂದಿದೆ. ಇಂತಹ ಮನೆಗಳಿಗೆ ಬೆಸ್ಕಾಂ ಸಿಬ್ಬಂದಿ ಈಗಾಗಲೇ ಮೂರು ಬಾರಿ ಭೇಟಿ ನೀಡಿದ್ದಾರೆ ಎಂದು ತಿಳಿಸಲಾಗಿದೆ.

ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರ ಮೊಬೈಲ್ ಸಂಖ್ಯೆಗಳಿಗೂ ಸಮೀಕ್ಷೆ ಪೂರ್ಣಗೊಳಿಸುವಂತೆ ಸಂದೇಶ ಗಳನ್ನು ಕಳುಹಿಸಲಾಗಿದೆ. ಆದರೂ ಸಮೀಕ್ಷೆ ಬಾಕಿ ಉಳಿದಿದ್ದರೆ, ಅಂತಹ ಗ್ರಾಹಕರು ತಮ್ಮ ವ್ಯಾಪ್ತಿಯ ಬೆಸ್ಕಾಂ ಉಪವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅಕ್ಟೋಬರ್ 31 ರೊಳಗೆ ದಾಖಲೆ ಸಲ್ಲಿಸಿ

ಗೃಹ ಜ್ಯೋತಿ ಯೋಜನೆಯ ಪರಿಷ್ಕರಣಾ ಸಮೀಕ್ಷೆಯಲ್ಲಿ ಇನ್ನೂ ಪಾಲ್ಗೊಳ್ಳದವರು ಅಕ್ಟೋಬರ್ 31ರೊಳಗೆ ಸಂಬಂಧಪಟ್ಟ ಬೆಸ್ಕಾಂ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಮನೆಗೆ ಸಿಬ್ಬಂದಿ ಬಂದಾಗ ಲಭ್ಯವಿರದವರು ಅಥವಾ ಸಮೀಕ್ಷೆಗೆ ಸಂಬಂಧಿಸಿದ ಸಂದೇಶ ಪಡೆದವರು ಈ ಸೂಚನೆಯನ್ನು ನಿರ್ಲಕ್ಷಿಸಬಾರದು.

ಸಮೀಕ್ಷೆಯ ಗಡುವು ವಿಸ್ತರಿಸುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿರುವುದರಿಂದ, ಫಲಾನುಭವಿಗಳು ಕೊನೆಯ ದಿನಾಂಕದೊಳಗೆ ದಾಖಲೆ ಸಲ್ಲಿಸಲು ಆದ್ಯತೆ ನೀಡಬೇಕು. ಸಮೀಕ್ಷೆಗೆ ಸಂಬಂಧಿಸಿದ ಗೊಂದಲಗಳಿದ್ದರೆ ತಮ್ಮ ವ್ಯಾಪ್ತಿಯ ಉಪವಿಭಾಗ ಕಚೇರಿಯಲ್ಲಿ ಮಾಹಿತಿ ಪಡೆದುಕೊಳ್ಳಬಹುದು.

ಗಮನಿಸಿ: ಗೃಹ ಜ್ಯೋತಿ ಫಲಾನುಭವಿಗಳು ಅಕ್ಟೋಬರ್ 31 ರ ಗಡುವನ್ನು ಗಮನದಲ್ಲಿಟ್ಟುಕೊಂಡು, ಸಮೀಕ್ಷೆ ಬಾಕಿ ಇದ್ದರೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES