• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಕೆಪಿಎಸ್‌ಸಿಯನ್ನೇ ಮುಚ್ಚುವ ಚಿಂತನೆ! ನೇಮಕಾತಿ ಅಕ್ರಮಕ್ಕೆ ಬ್ರೇಕ್ ಹಾಕಲು ಸರ್ಕಾರದ ಪ್ಲ್ಯಾನ್?

ಕೆಪಿಎಸ್‌ಸಿಯನ್ನೇ ಮುಚ್ಚುವ ಚಿಂತನೆ! ನೇಮಕಾತಿ ಅಕ್ರಮಕ್ಕೆ ಬ್ರೇಕ್ ಹಾಕಲು ಸರ್ಕಾರದ ಪ್ಲ್ಯಾನ್?

ಕೆಪಿಎಸ್‌ಸಿಯನ್ನೇ ಮುಚ್ಚುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಆದರೆ ಕೆಪಿಎಸ್‌ಸಿಯನ್ನ ಮುಚ್ಚುವುದು ಅಥವಾ ಅದರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವುದು ಸಂವಿಧಾನಾತ್ಮಕ ಮತ್ತು ಕಾನೂನುಬದ್ಧ ವಿಚಾರವಾಗಿರುವುದರಿಂದ, ಈ ಬಗ್ಗೆ ಆಳವಾಗಿ ಕಾನೂನು ಪರಿಶೀಲನೆ ನಡೆಸಲಾಗುತ್ತಿದೆ ಎಂದಿದ್ದಾರೆ.

Reported ByPuttaraj K AlurEdited ByPuttaraj K Alur
Published: Sep 22, 2026, 05:39 PM IST|Updated: Sep 22, 2026, 06:02 PM IST
joinshare
ಕೆಪಿಎಸ್‌ಸಿಯನ್ನೇ ಮುಚ್ಚುವ ಚಿಂತನೆ! ನೇಮಕಾತಿ ಅಕ್ರಮಕ್ಕೆ ಬ್ರೇಕ್ ಹಾಕಲು ಸರ್ಕಾರದ ಪ್ಲ್ಯಾನ್?
Image Credit: DK Shivakumar

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

2

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

3

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

4

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

5

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

KPSC Recruitment Scam: ಕರ್ನಾಟಕ ಲೋಕಸೇವಾ ಆಯೋಗ (KPSC)ಯಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಅಕ್ರಮಗಳ ವಿಚಾರ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೇ, ಕೆಪಿಎಸ್‌ಸಿ ವ್ಯವಸ್ಥೆಯನ್ನೇ ಬದಲಿಸುವ ಅಥವಾ ಆಯೋಗವನ್ನ ಮುಚ್ಚುವ ಸಾಧ್ಯತೆಯ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಕೆಪಿಎಸ್‌ಸಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸರ್ಕಾರ ಗಂಭೀರವಾಗಿ ಗಮನಹರಿಸಿದೆ ಎಂದು ತಿಳಿಸಿದ್ದಾರೆ. ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಈಗಾಗಲೇ ನಡೆಯುತ್ತಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಹಲವರನ್ನ ಗುರುತಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳ (SIT) ರಚಿಸುವುದಕ್ಕೂ ತಮ್ಮ ಆಕ್ಷೇಪವಿಲ್ಲವೆಂದು ತಿಳಿಸಿದ್ದಾರೆ.  

ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಕುರಿತು ಎಸ್‌ಐಟಿ ತನಿಖೆ ನಡೆಸುವುದಕ್ಕೆ ತಮ್ಮ ಯಾವುದೇ ಆಕ್ಷೇಪವಿಲ್ಲ. ಆದರೆ ತನಿಖೆಯಲ್ಲಿ ಅಧಿಕಾರಿಗಳ ಹಸ್ತಕ್ಷೇಪ ಮತ್ತು ಸರ್ಕಾರದ ಅಧಿಕಾರದ ಕುರಿತು ಕಾನೂನುಬದ್ಧವಾಗಿ ಪರಿಶೀಲನೆ ನಡೆಸಲಾಗುವುದು. ಕೆಪಿಎಸ್‌ಸಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸರ್ಕಾರ ಗಂಭೀರವಾಗಿದೆ. ಈಗಾಗಲೇ ಪೊಲೀಸರು ಹಲವು ದಾಖಲೆಗಳನ್ನ ವಶಪಡಿಸಿಕೊಂಡಿದ್ದು, ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ, ನೇಮಕಾತಿ ಹೇಗೆ ನಡೆದಿದೆ ಎಂಬ ಮಾಹಿತಿ ತನಿಖೆಯಿಂದ ಹೊರಬರಲಿದೆ ಎಂದು ಅವರು ಹೇಳಿದ್ದಾರೆ.

ಮಕ್ಕಳ ಭವಿಷ್ಯ ನಮಗೆ ಮುಖ್ಯ. ನಾವು ಎಷ್ಟೇ ಪಾರದರ್ಶಕವಾಗಿ ನೇಮಕಾತಿ ನಡೆಸಿದರೂ, ಆಯೋಗದಲ್ಲಿ ನೇಮಕ ಮಾಡುವ ವ್ಯಕ್ತಿಗಳಿಂದಲೇ ಅಕ್ರಮ ನಡೆದರೆ ಸರ್ಕಾರಕ್ಕೆ ಸಮಸ್ಯೆಯಾಗುತ್ತಿದೆ. ಸಿದ್ದರಾಮಯ್ಯರ ಆಡಳಿತಾವಧಿಯಲ್ಲಿ ಕೆಪಿಎಸ್‌ಸಿ ಸದಸ್ಯರ ಸಂಖ್ಯೆ ಕಡಿಮೆ ಮಾಡಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ. ತಮ್ಮ ಸರ್ಕಾರ ಈಗಾಗಲೇ ಸದಸ್ಯರ ಸಂಖ್ಯೆಯನ್ನ ಕಡಿಮೆ ಮಾಡಿದೆ ಎಂದು ತಿಳಿಸಿದ ಅವರು, ವ್ಯವಸ್ಥೆಯಲ್ಲಿ ಯಾರನ್ನ ನೇಮಕ ಮಾಡಬೇಕು ಎಂಬುದು ಸರ್ಕಾರದ ವ್ಯಾಪ್ತಿಯಲ್ಲಿರುವ ವಿಚಾರ. ತಾವು ಹಿಂದೆ ಇಂಧನ ಸಚಿವರಾಗಿದ್ದಾಗಲೂ ನೇಮಕಾತಿಯಲ್ಲಿ ಪಾರದರ್ಶಕತೆಗೆ ಹೆಚ್ಚಿನ ಆದ್ಯತೆ ನೀಡಿದ್ದಾಗಿ ಶಿವಕುಮಾರ್‌ ಹೇಳಿದ್ದಾರೆ. ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡದೆ ನೇಮಕಾತಿ ನಡೆಸಿದ್ದಾಗಿ ತಿಳಿಸಿದ ಅವರು, ಕೆಪಿಎಸ್‌ಸಿ ವಿಚಾರದಲ್ಲೂ ಪಾರದರ್ಶಕ ವ್ಯವಸ್ಥೆ ರೂಪಿಸುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕೆಪಿಎಸ್‌ಸಿಯನ್ನೇ ಮುಚ್ಚುವ ಮಾತೇಕೆ?

ನೇಮಕಾತಿ ಪ್ರಕ್ರಿಯೆಯಲ್ಲಿ ಪದೇಪದೇ ಅಕ್ರಮಗಳ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕೆಪಿಎಸ್‌ಸಿಯ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳು ಎದುರಾಗಿವೆ. ಇದೇ ಹಿನ್ನೆಲೆಯಲ್ಲಿ ಆಯೋಗವನ್ನೇ ಮುಚ್ಚಿ ಬೇರೊಂದು ವ್ಯವಸ್ಥೆ ರೂಪಿಸುವುದೇ ಅಥವಾ ಕೆಪಿಎಸ್‌ಸಿಯನ್ನ ಕಾನೂನಾತ್ಮಕವಾಗಿ ಸಂಪೂರ್ಣವಾಗಿ ಸುಧಾರಿಸುವುದೇ ಎಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದಕ್ಕೂ ಮುನ್ನ ಸೆಪ್ಟೆಂಬರ್ 14ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ಕೆಪಿಎಸ್‌ಸಿಯನ್ನ ಯುಪಿಎಸ್‌ಸಿ ಮಾದರಿಯಲ್ಲಿ ಪುನರ್‌ರಚಿಸಬೇಕು ಅಥವಾ ಸರ್ಕಾರಿ ನೇಮಕಾತಿಗಳನ್ನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ನಡೆಸುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದ್ದರು. 

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣ

ಕೆಪಿಎಸ್‌ಸಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂಬ ಆರೋಪಗಳು ಈ ವಿವಾದದ ಪ್ರಮುಖ ಕಾರಣವಾಗಿದೆ. ಸುಮಾರು 400 ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಪ್ರಕರಣದ ತನಿಖೆ ಈಗಾಗಲೇ ಹಲವು ಹಂತಗಳಲ್ಲಿ ಮುಂದುವರಿದಿದೆ. ಸಿಐಡಿ ತನಿಖೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಹಲವು ಅಂಶಗಳ ಕುರಿತು ಪರಿಶೀಲನೆ ನಡೆಸಲಾಗಿದೆ. ತನಿಖೆಯ ವೇಳೆ ಪ್ರಶ್ನೆಪತ್ರಿಕೆ ಮುಂಚಿತವಾಗಿ ಲಭ್ಯವಾಗಿತ್ತು ಹಾಗೂ ಕೆಲ ಅಭ್ಯರ್ಥಿಗಳ OMR ಉತ್ತರ ಪತ್ರಿಕೆಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂಬ ಆರೋಪಗಳನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆಂದು ವರದಿಯಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಬಗ್ಗೆಯೂ ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸುತ್ತಿದೆ. ಅಭ್ಯರ್ಥಿಗಳು, ಮಧ್ಯವರ್ತಿಗಳು ಹಾಗೂ ನೇಮಕಾತಿ ವ್ಯವಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದವರ ನಡುವಿನ ಹಣದ ವಹಿವಾಟಿನ ಬಗ್ಗೆ ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ ಎಂದು ವರದಿಗಳು ತಿಳಿಸಿವೆ.

ಹೈಕೋರ್ಟ್‌ ಆದೇಶದಿಂದ ಎಸ್‌ಐಟಿ ತನಿಖೆ

ಈ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿ ಕರ್ನಾಟಕ ಹೈಕೋರ್ಟ್‌ ಸೆಪ್ಟೆಂಬರ್ 21ರಂದು ವಿಶೇಷ ತನಿಖಾ ದಳ (SIT) ರಚಿಸಲು ಆದೇಶಿಸಿದೆ. ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸಲಿದ್ದು, ಸಿಐಡಿ ಮತ್ತು ಸ್ಥಳೀಯ ಪೊಲೀಸರು ಈಗಾಗಲೇ ಸಂಗ್ರಹಿಸಿರುವ ಸಾಕ್ಷ್ಯಗಳನ್ನ ಹೊಸ ತನಿಖಾ ತಂಡಕ್ಕೆ ಹಸ್ತಾಂತರಿಸುವಂತೆ ನ್ಯಾಯಾಲಯ ಸೂಚಿಸಿದೆ. ತನಿಖೆ ಆರಂಭವಾದ ನಂತರ 100 ದಿನಗಳೊಳಗೆ ವರದಿ ಸಲ್ಲಿಸಬೇಕು ಹಾಗೂ ಪ್ರತಿ 30 ದಿನಗಳಿಗೊಮ್ಮೆ ಪ್ರಗತಿ ವರದಿ ನೀಡಬೇಕು ಎಂದು ಹೈಕೋರ್ಟ್‌ ಸೂಚಿಸಿದೆ.  

ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಆತಂಕ

ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪಗಳು ಉದ್ಯೋಗಾಕಾಂಕ್ಷಿಗಳಲ್ಲೂ ಆತಂಕ ಮೂಡಿಸಿವೆ. ಪರೀಕ್ಷೆಗಳಿಗೆ ತಿಂಗಳುಗಟ್ಟಲೆ ಸಿದ್ಧತೆ ನಡೆಸುವ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆಯ ಪಾರದರ್ಶಕತೆ ಅತ್ಯಂತ ಮಹತ್ವದ್ದಾಗಿದೆ. ಅಕ್ರಮಗಳಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು. ಹಣ ಅಥವಾ ಪ್ರಭಾವದ ಆಧಾರದ ಮೇಲೆ ನೇಮಕಾತಿ ನಡೆಯುತ್ತದೆ ಎಂಬ ಅನುಮಾನವೇ ಮೂಡದಂತೆ ವ್ಯವಸ್ಥೆ ಇರಬೇಕೆಂಬ ಬೇಡಿಕೆಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮುಂದಿರುವ ಪ್ರಮುಖ ಸವಾಲು ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವುದು ಮಾತ್ರವಲ್ಲದೆ, ಭವಿಷ್ಯದ ನೇಮಕಾತಿ ಪ್ರಕ್ರಿಯೆಗಳಲ್ಲಿ ಇಂತಹ ಆರೋಪಗಳಿಗೆ ಅವಕಾಶವಿಲ್ಲದಂತೆ ವ್ಯವಸ್ಥೆಯನ್ನ ಬಲಪಡಿಸುವುದಾಗಿದೆ.

ಮುಂದೇನು?

ಕೆಪಿಎಸ್‌ಸಿಯನ್ನ ಮುಚ್ಚುವ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಇದೀಗ ರಾಜ್ಯ ರಾಜಕೀಯ ಹಾಗೂ ಉದ್ಯೋಗಾಕಾಂಕ್ಷಿಗಳ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಆದರೆ ಆಯೋಗವನ್ನ ಮುಚ್ಚುವ ಬಗ್ಗೆ ಸರ್ಕಾರ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಪ್ರಸ್ತುತ ಹೈಕೋರ್ಟ್‌ ನಿರ್ದೇಶನದಂತೆ ಎಸ್‌ಐಟಿ ತನಿಖೆ ಮುಂದುವರಿಯಲಿದೆ. ತನಿಖೆಯಿಂದ ಅಕ್ರಮಗಳ ಸ್ವರೂಪ, ಯಾರು ಭಾಗಿಯಾಗಿದ್ದಾರೆ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಯಾವ ಹಂತದಲ್ಲಿ ಲೋಪವಾಗಿದೆ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ.

ತನಿಖೆಯ ಫಲಿತಾಂಶದ ಆಧಾರದ ಮೇಲೆ ಕೆಪಿಎಸ್‌ಸಿ ವ್ಯವಸ್ಥೆಯಲ್ಲಿ ಸುಧಾರಣೆ ಮಾಡಬೇಕೇ, ಪುನರ್‌ರಚನೆ ಮಾಡಬೇಕೇ ಅಥವಾ ಬೇರೆ ನೇಮಕಾತಿ ವ್ಯವಸ್ಥೆ ರೂಪಿಸಬೇಕೇ ಎಂಬುದರ ಕುರಿತು ಸರ್ಕಾರ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಸಿಎಂ ಹೇಳಿಕೆಯಂತೆ, ಅಭ್ಯರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಪಾರದರ್ಶಕ ನೇಮಕಾತಿ ವ್ಯವಸ್ಥೆ ರೂಪಿಸುವುದು ಈ ಬೆಳವಣಿಗೆಯ ಪ್ರಮುಖ ಕೇಂದ್ರಬಿಂದುವಾಗಿದೆ.

Add Zee News as a Preferred Source
TAGS:
Karnataka Politics
Kannada News