• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /₹15 ಸಾವಿರ ಗೌರವಧನಕ್ಕೆ ನೋ ಎಂದ ಆರೋಗ್ಯ ಸಚಿವ ಯುಟಿ ಖಾದರ್! ಆಶಾ ಕಾರ್ಯಕರ್ತೆಯರಿಗೆ ಖಡಕ್ ಸೂಚನೆ

₹15 ಸಾವಿರ ಗೌರವಧನಕ್ಕೆ ನೋ ಎಂದ ಆರೋಗ್ಯ ಸಚಿವ ಯುಟಿ ಖಾದರ್! ಆಶಾ ಕಾರ್ಯಕರ್ತೆಯರಿಗೆ ಖಡಕ್ ಸೂಚನೆ

₹15 ಸಾವಿರ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ವಿರುದ್ಧ ಆರೋಗ್ಯ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 48 ಸಾವಿರ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಆರ್ಥಿಕ ಪರಿಣಾಮ ಪರಿಶೀಲಿಸಬೇಕಿದ್ದು, ಸಿಎಂ ಹಾಗೂ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಸಚಿವರು ಮನವಿ ಮಾಡಿದ್ದಾರೆ.

Written ByPuttaraj K Alur
Published: Nov 26, 2026, 13:07 IST|Updated: Nov 26, 2026, 13:24 IST
joinshare
₹15 ಸಾವಿರ ಗೌರವಧನಕ್ಕೆ ನೋ ಎಂದ ಆರೋಗ್ಯ ಸಚಿವ ಯುಟಿ ಖಾದರ್! ಆಶಾ ಕಾರ್ಯಕರ್ತೆಯರಿಗೆ ಖಡಕ್ ಸೂಚನೆ
Image Credit: ASHA Workers Protest

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಶಿಕ್ಷಕರ ನೇಮಕಾತಿ ನಿಗದಿತ ವೇಳೆಗೆ ಪೂರ್ಣಗೊಳಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ಶಿಕ್ಷಕರ ನೇಮಕಾತಿ ನಿಗದಿತ ವೇಳೆಗೆ ಪೂರ್ಣಗೊಳಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

2

ರಸ್ತೆ ಬದಿಯ ಬ್ಯಾರಿಕೇಡ್‌ಗೆ ಗೂಡ್ಸ್ ವಾಹನ ಡಿ*ಕ್ಕಿ! ಸ್ಕೂಟರ್‌ನಲ್ಲಿದ್ದ ಇಬ್ಬರು ಮಹಿಳೆಯರು ರಸ್ತೆಗೆ ಪಲ್ಟಿ; CCTV ದೃಶ್ಯ ವೈರಲ್!

3

₹15 ಸಾವಿರ ಗೌರವಧನಕ್ಕೆ ನೋ ಎಂದ ಆರೋಗ್ಯ ಸಚಿವ ಯುಟಿ ಖಾದರ್! ಆಶಾ ಕಾರ್ಯಕರ್ತೆಯರಿಗೆ ಖಡಕ್ ಸೂಚನೆ

4

ಫ್ರೀಡಂ ಪಾರ್ಕ್‌ನಲ್ಲಿ ಅರಳಿದ ʼಗುಲಾಬಿ ಯೋಧರುʼ: ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕಲಾವಿದೆ ಅಲಕಾ ರಾವ್‌ ವಿಶಿಷ್ಟ ಕಲಾ ನಮನ

5

ಕಿತ್ತಳೆಗಿಂತ 5 ಪಟ್ಟು ಹೆಚ್ಚು ವಿಟಮಿನ್ ಸಿ.. ರಕ್ತದಲ್ಲಿನ ಸಕ್ಕರೆ ನಿಯಂತ್ರಿಸುವ ಅದ್ಭುತ ಹಣ್ಣು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ASHA Workers Protest: ₹15 ಸಾವಿರ ಮಾಸಿಕ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ವಿರುದ್ಧ ಆರೋಗ್ಯ ಸಚಿವ ಯು.ಟಿ.ಖಾದರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ ಸೂಕ್ತ ಸಮಯ ನೀಡದೆ ಪ್ರತಿಭಟನೆ ಮುಂದುವರಿಸುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಸಚಿವರು, ಮೊದಲು ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಆಶಾ ಕಾರ್ಯಕರ್ತೆಯರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನ ತಕ್ಷಣವೇ ಒಪ್ಪಿಕೊಳ್ಳಲು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

₹7 ಸಾವಿರದಿಂದ ₹15 ಸಾವಿರಕ್ಕೆ ಏಕಾಏಕಿ ಹೆಚ್ಚಳ ಹೇಗೆ ಸಾಧ್ಯ?

ಆಶಾ ಕಾರ್ಯಕರ್ತೆಯರು ಪ್ರಸ್ತುತ ಪಡೆಯುತ್ತಿರುವ ಸುಮಾರು ₹7 ಸಾವಿರ ಗೌರವಧನವನ್ನ ₹15 ಸಾವಿರಕ್ಕೆ ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಆದರೆ ಈ ಬೇಡಿಕೆಯನ್ನ ಯಾವುದೇ ಚರ್ಚೆ ಇಲ್ಲದೆ ತಕ್ಷಣವೇ ಈಡೇರಿಸಲು ಸಾಧ್ಯವಿಲ್ಲವೆಂದು ಸಚಿವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 48 ಸಾವಿರ ಆಶಾ ಕಾರ್ಯಕರ್ತೆಯರಿದ್ದು, ಪ್ರತಿಯೊಬ್ಬರಿಗೂ ₹15 ಸಾವಿರದಂತೆ ಗೌರವಧನ ನೀಡಬೇಕಾದರೆ ಸರ್ಕಾರದ ಮೇಲೆ ಎಷ್ಟು ಆರ್ಥಿಕ ಹೊರೆ ಬೀಳಲಿದೆ ಎಂಬುದನ್ನ ಲೆಕ್ಕ ಹಾಕಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಅದರ ಆರ್ಥಿಕ ಪರಿಣಾಮಗಳನ್ನ ಪರಿಶೀಲಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆ, ಶಾಸಕರು ಹಾಗೂ ಸಚಿವ ಸಂಪುಟದೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕಿದೆ ಎಂದು ಸಚಿವರು ಹೇಳಿದ್ದಾರೆ.

ಸಿಎಂ ಈಗಾಗಲೇ ಚರ್ಚೆ ನಡೆಸಿದ್ದಾರೆ

ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ಚರ್ಚೆ ನಡೆಸಿದ್ದಾರೆ. ಈ ವಿಚಾರವನ್ನ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಆರ್ಥಿಕ ಇಲಾಖೆ ಸೇರಿದಂತೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ವಿಧಾನಸಭೆ ಅಧಿವೇಶನ ಮುಕ್ತಾಯಗೊಳ್ಳುವ ವೇಳೆಗೆ ಆಶಾ ಕಾರ್ಯಕರ್ತೆಯರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಲಾಗಿದೆ. ಸರ್ಕಾರಕ್ಕೆ ಸ್ವಲ್ಪ ಸಮಯಾವಕಾಶ ನೀಡಬೇಕು. ಯಾವುದೇ ವಿಷಯದ ಬಗ್ಗೆ ಚರ್ಚಿಸದೆ ತಕ್ಷಣವೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲವೆಂದು ಸಚಿವರು ತಮ್ಮ ನಿಲುವನ್ನ ಸ್ಪಷ್ಟಪಡಿಸಿದ್ದಾರೆ.

10ರಿಂದ 15 ದಿನ ಪ್ರತಿಭಟನೆ ನಡೆಸಿದ್ದಕ್ಕೆ ಅಸಮಾಧಾನ

ಸರ್ಕಾರ ಸಮಯ ಕೇಳಿದ್ದರೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರಿಸಿರುವುದಕ್ಕೆ ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ. ಸುಮಾರು 10ರಿಂದ 15 ದಿನಗಳ ಕಾಲ ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸುತ್ತಿರುವುದನ್ನ ಅವರು ಪ್ರಶ್ನಿಸಿದ್ದಾರೆ. ಸರ್ಕಾರಕ್ಕೆ ಸಮಯ ನೀಡದೆ ಏಕಾಏಕಿ ಗೌರವಧನ ಹೆಚ್ಚಳಕ್ಕೆ ಒತ್ತಾಯಿಸುವುದು ಹೇಗೆ ಸಾಧ್ಯವೆಂದು ಸಚಿವರು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ 15 ದಿನಗಳ ಕಾಲಾವಕಾಶ ಕೇಳಿದ್ದರೂ ಅದನ್ನ ನೀಡದೆ ಪ್ರತಿಭಟನೆ ಮುಂದುವರಿಸಿರುವುದು ಸರಿಯಲ್ಲ. ಮೊದಲು ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ ಸರ್ಕಾರಕ್ಕೆ ಸಹಕಾರ ನೀಡಬೇಕು. ಸರ್ಕಾರದ ಮೇಲೆ ವಿಶ್ವಾಸವಿಟ್ಟು ಬೇಡಿಕೆಗಳ ಕುರಿತು ಚರ್ಚಿಸಲು ಅವಕಾಶ ನೀಡಬೇಕೆಂದು ಆಶಾ ಕಾರ್ಯಕರ್ತೆಯರಿಗೆ ತಿಳಿಸಿದ್ದಾರೆ.

'ನಮ್ಮ ಮೇಲೆ ವಿಶ್ವಾಸವಿಲ್ಲದಿದ್ದರೆ ನಿಮ್ಮ ಬಗ್ಗೆ ನಾವೇಕೆ ಕಾಳಜಿ ವಹಿಸಬೇಕು?'

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಮಾತನಾಡುವ ವೇಳೆ ಸಚಿವರು ಕೆಲವು ಕಠಿಣ ಮಾತುಗಳನ್ನ ಹೇಳಿದ್ದಾರೆ. ಸರ್ಕಾರದ ಮೇಲೆ ವಿಶ್ವಾಸವಿಲ್ಲದೆ ಪ್ರತಿಭಟನೆ ಮುಂದುವರಿಸಿದರೆ ನಿಮ್ಮ ಬೇಡಿಕೆಗಳ ಬಗ್ಗೆ ನಾವೇಕೆ ಅಷ್ಟೊಂದು ಕಾಳಜಿ ವಹಿಸಬೇಕೆಂದು ಪ್ರಶ್ನಿಸಿದ್ದಾರೆ. 'ಮೊದಲು ನೀವು ಸಹಕಾರ ನೀಡಿ, ನಂತರ ನಿಮ್ಮ ಬೇಡಿಕೆಗಳ ಬಗ್ಗೆ ನಾವು ಚಿಂತನೆ ನಡೆಸುತ್ತೇವೆ' ಎಂಬ ಸಂದೇಶ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರ ಬಗ್ಗೆ ನಾನೂ ಅಷ್ಟೊಂದು ಆಸಕ್ತಿ ವಹಿಸುವುದಿಲ್ಲವೆಂಬ ಎಚ್ಚರಿಕೆಯ ಮಾತನ್ನೂ ಆಡಿದ್ದಾರೆ. ಇದೇ ವೇಳೆ ರಾಜ್ಯದ ಆರೋಗ್ಯ ಸೇವೆ ಸಂಪೂರ್ಣವಾಗಿ ಆಶಾ ಕಾರ್ಯಕರ್ತೆಯರನ್ನೇ ಅವಲಂಬಿಸಿಲ್ಲ. ANM, CHO, ವೈದ್ಯರು ಸೇರಿದಂತೆ ಪರ್ಯಾಯ ಆರೋಗ್ಯ ಸಿಬ್ಬಂದಿಯೂ ಇದ್ದಾರೆಂದು ಸಚಿವರು ಹೇಳಿದ್ದಾರೆ.

20ಕ್ಕೂ ಹೆಚ್ಚು ಕಾರ್ಯಕರ್ತೆಯರು ಅಸ್ವಸ್ಥ: ಸಚಿವರ ಪ್ರತಿಕ್ರಿಯೆ

ಪ್ರತಿಭಟನೆ ಸಂದರ್ಭದಲ್ಲಿ 20ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಅಸ್ವಸ್ಥರಾಗಿರುವ ವಿಚಾರದ ಬಗ್ಗೆಯೂ ಸಚಿವರು ಪ್ರತಿಕ್ರಿಯಿಸಿದ್ದಾರೆ. ಪ್ರತಿಭಟನೆಯಿಂದ ಕಾರ್ಯಕರ್ತೆಯರಿಗೆ ಏನಾದರೂ ತೊಂದರೆಯಾದರೆ ಅದಕ್ಕೆ ಅವರ ಸಂಘಟನೆಯ ನಾಯಕರು ಕಾರಣರಾಗುತ್ತಾರೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾವು ಹೇಗೆ ಇದಕ್ಕೆ ಕಾರಣರಾಗುತ್ತೇವೆ ಎಂದು ಪ್ರಶ್ನಿಸಿದ್ದಾರೆ. ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸುವುದಾಗಿ ಸಚಿವರು ತಿಳಿಸಿದ್ದಾರೆ. ಸರ್ಕಾರ ಈಗಾಗಲೇ ಸಮಯಾವಕಾಶ ಕೇಳಿದ್ದು, ಸೂಕ್ತ ಚರ್ಚೆಯ ನಂತರ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಒಟ್ನಲ್ಲಿ ₹15 ಸಾವಿರ ಗೌರವಧನ ಹೆಚ್ಚಳದ ಬೇಡಿಕೆಗೆ ಸರ್ಕಾರದಿಂದ ತಕ್ಷಣದ ಒಪ್ಪಿಗೆ ಸಿಕ್ಕಿಲ್ಲ. ಆರ್ಥಿಕ ಇಲಾಖೆ ಮತ್ತು ಸಚಿವ ಸಂಪುಟದ ಚರ್ಚೆಯ ಬಳಿಕ ನಿರ್ಧಾರ ಕೈಗೊಳ್ಳುವ ಭರವಸೆ ನೀಡಲಾಗಿದೆ. ಇದೇ ವೇಳೆ ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಆರೋಗ್ಯ ಸಚಿವರು ಆಶಾ ಕಾರ್ಯಕರ್ತೆಯರಿಗೆ ಮನವಿ ಮಾಡಿದ್ದಾರೆ.

Add Zee News as a Preferred Source
TAGS:
Karnataka Politics
Kannada News