• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಹಾಲಿನ ದರ ಏರಿಕೆ ಸದ್ಯದಲ್ಲೇ ಫಿಕ್ಸ್? ₹12 ಹೆಚ್ಚಳಕ್ಕೆ ಬೇಡಿಕೆ; ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

ಹಾಲಿನ ದರ ಏರಿಕೆ ಸದ್ಯದಲ್ಲೇ ಫಿಕ್ಸ್? ₹12 ಹೆಚ್ಚಳಕ್ಕೆ ಬೇಡಿಕೆ; ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

ರಾಜ್ಯದ ವಿವಿಧ ಹಾಲು ಒಕ್ಕೂಟಗಳ ಅಧ್ಯಕ್ಷರು ಮುಖ್ಯಮಂತ್ರಿ ಅವರನ್ನ ಭೇಟಿ ಮಾಡಿ ಹಾಲಿನ ದರ ಹೆಚ್ಚಳದ ಕುರಿತು ತಮ್ಮ ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಪ್ರತಿ ಲೀಟರ್ ಹಾಲಿಗೆ ₹12 ಹೆಚ್ಚಳ ಮಾಡುವಂತೆ ಒಕ್ಕೂಟಗಳು ಮನವಿ ಮಾಡಿವೆ. ಈ ಹೆಚ್ಚಳದಲ್ಲಿ ₹2 ಅನ್ನ ಒಕ್ಕೂಟಗಳಿಗೆ ನೀಡುವಂತೆ ಬೇಡಿಕೆ ಸಲ್ಲಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

Written ByPuttaraj K Alur
Published: Sep 27, 2026, 06:12 AM IST|Updated: Sep 27, 2026, 09:05 AM IST
joinshare
ಹಾಲಿನ ದರ ಏರಿಕೆ ಸದ್ಯದಲ್ಲೇ ಫಿಕ್ಸ್? ₹12 ಹೆಚ್ಚಳಕ್ಕೆ ಬೇಡಿಕೆ; ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?
Image Credit: Karnataka Milk Price

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Karnataka Milk Price Hike: ರಾಜ್ಯದಲ್ಲಿ ಹಾಲಿನ ದರ ಏರಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಹಾಲಿನ ದರವನ್ನ ಹೆಚ್ಚಿಸುವಂತೆ ವಿವಿಧ ಹಾಲು ಒಕ್ಕೂಟಗಳು ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ಪ್ರತಿ ಲೀಟರ್ ಹಾಲಿಗೆ ₹12 ಹೆಚ್ಚಳ ಮಾಡಿ, ಅದರಲ್ಲಿ ₹2 ಅನ್ನ ಒಕ್ಕೂಟಗಳಿಗೆ ನೀಡುವಂತೆ ಬೇಡಿಕೆ ಇಟ್ಟಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಾಲಿನ ದರ ಏರಿಕೆ ವಿಚಾರವನ್ನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಾಲು ಒಕ್ಕೂಟಗಳ ಬೇಡಿಕೆ, ರೈತರ ಸಮಸ್ಯೆಗಳು ಹಾಗೂ ಇತರ ರಾಜ್ಯಗಳಲ್ಲಿನ ಹಾಲಿನ ದರಗಳ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಹಾಲಿನ ದರ ಏರಿಕೆಯಾಗುತ್ತದೆಯೇ ಎಂಬ ಕುತೂಹಲ ಗ್ರಾಹಕರು ಮತ್ತು ಹಾಲು ಉತ್ಪಾದಕರಲ್ಲಿ ಮೂಡಿದೆ.

ಹಾಲಿನ ದರ ₹12 ಹೆಚ್ಚಿಸಲು ಒಕ್ಕೂಟಗಳ ಬೇಡಿಕೆ

ರಾಜ್ಯದ ವಿವಿಧ ಹಾಲು ಒಕ್ಕೂಟಗಳ ಅಧ್ಯಕ್ಷರು ಮುಖ್ಯಮಂತ್ರಿ ಅವರನ್ನ ಭೇಟಿ ಮಾಡಿ ಹಾಲಿನ ದರ ಹೆಚ್ಚಳದ ಕುರಿತು ತಮ್ಮ ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಪ್ರತಿ ಲೀಟರ್ ಹಾಲಿಗೆ ₹12 ಹೆಚ್ಚಳ ಮಾಡುವಂತೆ ಒಕ್ಕೂಟಗಳು ಮನವಿ ಮಾಡಿವೆ. ಈ ಹೆಚ್ಚಳದಲ್ಲಿ ₹2 ಅನ್ನ ಒಕ್ಕೂಟಗಳಿಗೆ ನೀಡುವಂತೆ ಬೇಡಿಕೆ ಸಲ್ಲಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಹಾಲು ಉತ್ಪಾದನೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ವೆಚ್ಚಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಕ್ಕೂಟಗಳು ದರ ಪರಿಷ್ಕರಣೆಗೆ ಒತ್ತಾಯಿಸುತ್ತಿವೆ. ಹಾಲು ಉತ್ಪಾದಕರಿಗೆ ಸೂಕ್ತ ಬೆಲೆ ದೊರೆಯಬೇಕು ಹಾಗೂ ಒಕ್ಕೂಟಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಆದರೆ ಒಕ್ಕೂಟಗಳ ಬೇಡಿಕೆಗೆ ಸರ್ಕಾರ ಇನ್ನೂ ಅಂತಿಮ ಒಪ್ಪಿಗೆ ನೀಡಿಲ್ಲ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕವೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಇತರ ರಾಜ್ಯಗಳ ಹಾಲಿನ ದರಗಳ ಬಗ್ಗೆ ವರದಿ

ಹಾಲಿನ ದರ ಹೆಚ್ಚಳದ ಕುರಿತು ನಿರ್ಧಾರ ಕೈಗೊಳ್ಳುವ ಮೊದಲು ನೆರೆಯ ರಾಜ್ಯಗಳಲ್ಲಿನ ದರಗಳನ್ನ ಪರಿಶೀಲಿಸಲು ಸರ್ಕಾರ ಮುಂದಾಗಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಪ್ರಸ್ತುತ ಹಾಲು ಯಾವ ದರದಲ್ಲಿ ಮಾರಾಟವಾಗುತ್ತಿದೆ ಎಂಬುದರ ಕುರಿತು ಸಮಗ್ರ ವರದಿ ತರಿಸಿಕೊಳ್ಳಲಾಗುತ್ತಿದೆ.

ಇತರ ರಾಜ್ಯಗಳ ಹಾಲಿನ ದರಗಳು, ಹಾಲು ಉತ್ಪಾದಕರಿಗೆ ನೀಡಲಾಗುತ್ತಿರುವ ಬೆಲೆ ಹಾಗೂ ಒಕ್ಕೂಟಗಳ ಆರ್ಥಿಕ ಪರಿಸ್ಥಿತಿಯನ್ನ ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ದರ ಪರಿಷ್ಕರಣೆ ಕುರಿತು ಚರ್ಚೆ ನಡೆಯಲಿದೆ. ಈ ವರದಿಯ ಆಧಾರದ ಮೇಲೆ ರಾಜ್ಯದ ಹಾಲು ಉತ್ಪಾದಕರು, ಹಾಲು ಒಕ್ಕೂಟಗಳು ಮತ್ತು ಗ್ರಾಹಕರ ಹಿತಾಸಕ್ತಿಯನ್ನ ಗಮನದಲ್ಲಿಟ್ಟುಕೊಂಡು ಸರ್ಕಾರ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

50 ಸಾವಿರ ಜನರಿಂದ ಸಮಸ್ಯೆ ಪ್ರಸ್ತಾಪ

ಹಾಲು ಒಕ್ಕೂಟಗಳು ಮತ್ತು ಹಾಲು ಉತ್ಪಾದಕರ ಸಮಸ್ಯೆಗಳ ಕುರಿತು ಮಾತನಾಡಿದ ಸಿಎಂ, ಸುಮಾರು 50 ಸಾವಿರ ಜನರು ಒಟ್ಟಾಗಿ ತಮ್ಮ ಸಮಸ್ಯೆಗಳನ್ನ ಸರ್ಕಾರದ ಗಮನಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಪ್ರತಿ ಸಂಸ್ಥೆ ಹಾಗೂ ಹಾಲು ಸಂಘಗಳು ನಷ್ಟ ಅನುಭವಿಸುತ್ತಿವೆ ಎಂಬ ವಿಚಾರವೂ ಸರ್ಕಾರದ ಗಮನದಲ್ಲಿದೆ. ಹಾಲು ಉತ್ಪಾದಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನ ನಿರ್ಲಕ್ಷಿಸಲು ಸಾಧ್ಯವಿಲ್ಲ. ರೈತರಲ್ಲಿ ತೀವ್ರ ಆಕ್ರೋಶ ಮತ್ತು ನೋವು ವ್ಯಕ್ತವಾಗುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ಹಾಲು ಉತ್ಪಾದಕರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಮಾಡುವುದು ಹಾಗೂ ಹಾಲು ಒಕ್ಕೂಟಗಳ ಆರ್ಥಿಕ ಸ್ಥಿತಿಯನ್ನ ಸುಧಾರಿಸುವುದು ಸರ್ಕಾರದ ಮುಂದಿರುವ ಪ್ರಮುಖ ವಿಚಾರಗಳಾಗಿವೆ. ಈ ಹಿನ್ನೆಲೆಯಲ್ಲಿ ಹಾಲಿನ ದರ ಏರಿಕೆ ಕುರಿತು ಸಮಗ್ರವಾಗಿ ಚರ್ಚಿಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಗ್ರಾಹಕರಿಗೆ ಹಾಲು ದುಬಾರಿಯಾಗುತ್ತದೆಯೇ?

ಹಾಲಿನ ದರ ಹೆಚ್ಚಳದ ಬೇಡಿಕೆ ಮುಂದಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಹಕರಲ್ಲಿ ಆತಂಕವೂ ಎದುರಾಗಿದೆ. ಈಗಾಗಲೇ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿರುವ ಜನರಿಗೆ ಹಾಲಿನ ದರ ಹೆಚ್ಚಳವಾದರೆ ಮತ್ತಷ್ಟು ಹೊರೆ ಬೀಳುವ ಸಾಧ್ಯತೆಯಿದೆ. ಒಂದೆಡೆ ಹಾಲು ಉತ್ಪಾದಕರಿಗೆ ಉತ್ತಮ ಬೆಲೆ ನೀಡಬೇಕೆಂಬ ಬೇಡಿಕೆಯಿದ್ದರೆ, ಮತ್ತೊಂದೆಡೆ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಹಾಲು ದೊರೆಯಬೇಕೆಂಬ ನಿರೀಕ್ಷೆಯಿದೆ. ಈ ಎರಡೂ ಅಂಶಗಳನ್ನ ಪರಿಗಣಿಸಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ.

ಒಟ್ನಲ್ಲಿ ಹಾಲಿನ ದರವನ್ನ ₹12 ಹೆಚ್ಚಿಸುವಂತೆ ಒಕ್ಕೂಟಗಳು ಬೇಡಿಕೆ ಸಲ್ಲಿಸಿದ್ದರೂ, ಸರ್ಕಾರದಿಂದ ಅಂತಿಮ ನಿರ್ಧಾರ ಪ್ರಕಟವಾಗಿಲ್ಲ. ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿದ ಬಳಿಕವಷ್ಟೇ ಹಾಲಿನ ದರ ಏರಿಕೆ ಕುರಿತು ಸ್ಪಷ್ಟ ಚಿತ್ರಣ ಸಿಗಲಿದೆ. ಅಲ್ಲಿಯವರೆಗೆ ಗ್ರಾಹಕರು ಮತ್ತು ಹಾಲು ಉತ್ಪಾದಕರು ಸರ್ಕಾರದ ನಿರ್ಧಾರಕ್ಕಾಗಿ ಕಾಯಬೇಕಿದೆ.

Add Zee News as a Preferred Source
TAGS:
Karnataka Politics
Kannada News