SOCIAL MEDIA

Newsletter

PARTNER SITES
Select Language Select State

Rain Alert: ರಾಜ್ಯ ಮಳೆಯ ಮುನ್ಸೂಚನೆ.. ಮುಂದಿನ 10ದಿನಗಳ ಕಾಲ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ

Rain Alert ರಾಜ್ಯದಲ್ಲಿ ಮುಂಗಾರು ಮಳೆ ನಿಧಾನವಾಗಿ ಹಿಂದೆ ಸರಿಯುತ್ತಿದ್ದರೂ, ಮಳೆಯ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅರಬ್ಬಿ ಸಮುದ್ರದಿಂದ ರಾಜ್ಯದತ್ತ ತೇವಾಂಶಭರಿತ ಗಾಳಿ ಬೀಸುತ್ತಿರುವ ಪರಿಣಾಮ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಹಾಗಾದ್ರೆ ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ? ಮುಂಗಾರು ಯಾವಾಗ ಸಂಪೂರ್ಣವಾಗಿ ನಿರ್ಗಮಿಸಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

Written By Ramya. R. Gowda
Published: Sep 29, 2026, 07:31 AM IST | Updated: Sep 29, 2026, 07:36 AM IST
Join

Rain Alert:  ರಾಜ್ಯದಲ್ಲಿ ಮುಂಗಾರು ಮಳೆ ನಿಧಾನವಾಗಿ ಹಿಂದೆ ಸರಿಯುತ್ತಿದ್ದರೂ, ಮಳೆಯ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅರಬ್ಬಿ ಸಮುದ್ರದಿಂದ ರಾಜ್ಯದತ್ತ ತೇವಾಂಶಭರಿತ ಗಾಳಿ ಬೀಸುತ್ತಿರುವ ಪರಿಣಾಮ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಹಾಗಾದ್ರೆ ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ? ಮುಂಗಾರು ಯಾವಾಗ ಸಂಪೂರ್ಣವಾಗಿ ನಿರ್ಗಮಿಸಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.


ರಾಜ್ಯದಲ್ಲಿ ಮುಂಗಾರು ನಿರ್ಗಮನದ ಪ್ರಕ್ರಿಯೆ ಆರಂಭವಾಗಿದೆ. ಬಂಗಾಳಕೊಲ್ಲಿಯ ಥೈಲ್ಯಾಂಡ್ ಹಾಗೂ ಮ್ಯಾನ್ಮಾರ್ ಕರಾವಳಿ ಭಾಗದಲ್ಲಿ ನಿರ್ಮಾಣವಾಗಿದ್ದ ವಾಯುಭಾರ ಕುಸಿತ ಇದೀಗ ಶಿಥಿಲಗೊಂಡಿದೆ. ಆದರೆ ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯದತ್ತ ತೇವಾಂಶಭರಿತ ಗಾಳಿ ಆಗಮಿಸುತ್ತಿದೆ. ಹೀಗಾಗಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದೆ.

ಕರಾವಳಿ ಕರ್ನಾಟಕ:
ದಕ್ಷಿಣ ಕನ್ನಡ
ಉಡುಪಿ
ಉತ್ತರ ಕನ್ನಡ


ಕರಾವಳಿ ಜಿಲ್ಲೆಗಳಲ್ಲಿ ಹಗಲಿನ ವೇಳೆ ಬಿಸಿಲು ಹಾಗೂ ಭಾರಿ ಸೆಕೆ ಇರಲಿದೆ. ಆದರೆ ಸಂಜೆ ವೇಳೆಗೆ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪೂರ್ವದ ಗಾಳಿಯ ಪ್ರಭಾವ ಹೆಚ್ಚಾದರೆ ಅಲ್ಲಲ್ಲಿ ತುಂತುರು ಮಳೆಯೂ ಬೀಳಬಹುದು.

ಕರಾವಳಿ ಭಾಗದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಇನ್ನು ಮಲೆನಾಡಿನ ಕೊಡಗು, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಸಂಜೆ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.


ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ವ್ಯಾಪ್ತಿ ಸೀಮಿತವಾಗಿರಲಿದೆ. ಹಾವೇರಿ, ಧಾರವಾಡ ಹಾಗೂ ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 29ರಂದು ಉತ್ತರ ಕನ್ನಡ ಹಾಗೂ ಶಿವಮೊಗ್ಗಕ್ಕೆ ಹೊಂದಿಕೊಂಡಿರುವ ಗಡಿ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡು:
ತುಮಕೂರು
ಪಾವಗಡ
ಸುತ್ತಮುತ್ತಲಿನ ಜಿಲ್ಲೆಗಳು


ಇನ್ನು ದಕ್ಷಿಣ ಒಳನಾಡಿನ ತುಮಕೂರು, ಪಾವಗಡ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದೆ. ಮಧ್ಯಾಹ್ನ ಹಾಗೂ ಸಂಜೆ ವೇಳೆಗೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ ಅಕ್ಟೋಬರ್ 6ರವರೆಗೆ ಮಳೆಯ ವಾತಾವರಣ ಮುಂದುವರಿಯುವ ಅಂದಾಜಿದೆ.

ಮುಂಗಾರು ನಿರ್ಗಮನ:
ಮುಂಗಾರು ನಿರ್ಗಮನಕ್ಕೆ ಕ್ಷಣಗಣನೆ
ಅಕ್ಟೋಬರ್ 15ರ ಸುಮಾರಿಗೆ ಸಂಪೂರ್ಣ ನಿರ್ಗಮನದ ಸಾಧ್ಯತೆ


ರಾಜ್ಯದಲ್ಲಿ ಮುಂಗಾರು ಮಳೆ ಅಕ್ಟೋಬರ್ 15ರ ಸುಮಾರಿಗೆ ಸಂಪೂರ್ಣವಾಗಿ ಹಿಂದೆ ಸರಿಯುವ ಸಾಧ್ಯತೆಯಿದೆ. ಹಿಂಗಾರು ಮಾರುತಗಳು ಇನ್ನಷ್ಟೇ ಪ್ರವೇಶಿಸಬೇಕಿದ್ದು, ಅಲ್ಲಿಯವರೆಗೆ ಮಳೆಯ ಏರಿಳಿತ ಮುಂದುವರಿಯುವ ಸಾಧ್ಯತೆಯಿದೆ.


ಒಟ್ಟಿನಲ್ಲಿ ಮುಂಗಾರು ಹಿಂದೆ ಸರಿಯುತ್ತಿದ್ದರೂ, ಅರಬ್ಬಿ ಸಮುದ್ರದ ತೇವಾಂಶಭರಿತ ಗಾಳಿಯ ಪ್ರಭಾವದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ವಿಶೇಷವಾಗಿ ಸಂಜೆ ವೇಳೆ ಗುಡುಗು-ಮಿಂಚಿನ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.
 

Add Zee News as a Preferred Source
TAGS:

About the Author

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.

ZEENEWS TRENDING STORIES