SOCIAL MEDIA

Newsletter

PARTNER SITES
Select Language Select State

ಎಂಎಲ್‌ಸಿ ಚುನಾವಣೆ ಸೋಲಿಗೆ ನಮ್ಮವರೇ ಸರಿಯಾಗಿ ಕೆಲಸ ಮಾಡಿಲ್ಲ: ಕೆಎನ್ ರಾಜಣ್ಣ

ಈ ಚುನಾವಣೆಯ ವ್ಯಾಪ್ತಿಯಲ್ಲಿ 35 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಈ ಪೈಕಿ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಸೋಲು ಅನುಭವಿಸಿರುವುದು ನಿಜಕ್ಕೂ ವಿಪರ್ಯಾಸ ಎಂದು ರಾಜಣ್ಣ ಹೇಳಿದರು.

Written By Chetana Devarmani
Published: Oct 28, 2026, 01:35 PM IST | Updated: Oct 28, 2026, 01:43 PM IST
Join

ತುಮಕೂರು: ಎಂಎಲ್‌ಸಿ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ಗೆ ನಿರಾಸೆ ಮೂಡಿಸಿದೆ. ಪಕ್ಷದ ಶಾಸಕರು ಹಾಗೂ ಸ್ಥಳೀಯ ನಾಯಕರು ಸರಿಯಾಗಿ ಕೆಲಸ ಮಾಡದಿರುವುದೇ ಸೋಲಿಗೆ ಪ್ರಮುಖ ಕಾರಣ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಚುನಾವಣೆಯ ಸೋಲಿಗೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಹಂಚಿಕೊಂಡರು. ನಾಲ್ಕು ಚುನಾವಣಾ ಫಲಿತಾಂಶಗಳು ನಮ್ಮಲ್ಲಿ ನಿರಾಸೆ ಮೂಡಿಸಿವೆ. ಈ ಚುನಾವಣೆಯ ವ್ಯಾಪ್ತಿಯಲ್ಲಿ 35 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಈ ಪೈಕಿ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಸೋಲು ಅನುಭವಿಸಿರುವುದು ನಿಜಕ್ಕೂ ವಿಪರ್ಯಾಸ ಎಂದು ರಾಜಣ್ಣ ಹೇಳಿದರು.

ಪ್ರತಿ ಕ್ಷೇತ್ರದಲ್ಲಿನ ಸೋಲಿಗೆ ಪ್ರಮುಖ ಕಾರಣವೆಂದರೆ ಶಾಸಕರು, ತಾಲೂಕು ಮತ್ತು ಹೋಬಳಿ ಮಟ್ಟದ ನಾಯಕರು ಸರಿಯಾಗಿ ಕೆಲಸ ಮಾಡದಿರುವುದು. ಈ ಬಾರಿ ಮತದಾರರ ಪಟ್ಟಿಯಲ್ಲಿ ಮತದಾರರ ದೂರವಾಣಿ ಸಂಖ್ಯೆಗಳೂ ಲಭ್ಯವಿದ್ದವು. ಇಷ್ಟೆಲ್ಲಾ ಅನುಕೂಲಗಳಿದ್ದರೂ ಪಕ್ಷದ ನಾಯಕರು ಸಮರ್ಪಕವಾಗಿ ಕೆಲಸ ಮಾಡಿಲ್ಲ ಎಂದು ನನಗೆ ಅನಿಸುತ್ತದೆ ಎಂದು ಅವರು ತಿಳಿಸಿದರು.

ಬ್ಯಾಲೆಟ್ ಪೇಪರ್ ಕುರಿತು ಹೇಳಿದ್ದೇನು?

ಎಂಎಲ್‌ಸಿ ಚುನಾವಣೆ ಬ್ಯಾಲೆಟ್ ಪೇಪರ್ ಮೂಲಕ ನಡೆಯುವುದರ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜಣ್ಣ, ಈ ಚುನಾವಣೆ ಯಾವಾಗಲೂ ಬ್ಯಾಲೆಟ್ ಪೇಪರ್‌ನಲ್ಲೇ ನಡೆಯುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರನ್ನು ಸೈಡ್‌ಲೈನ್ ಮಾಡಿದ್ದರಿಂದ ಸೋಲಾಯಿತೇ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಷದಲ್ಲಿ ಸೈಡ್‌ಲೈನ್ ಮಾಡಿರುವುದರಿಂದ ಕಾಂಗ್ರೆಸ್‌ಗೆ ಸೋಲಾಗಿದೆ ಎಂಬ ವಿಚಾರದ ಬಗ್ಗೆಯೂ ರಾಜಣ್ಣ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನ ಆಸ್ತಿ. ಅವರ ಅನುಪಸ್ಥಿತಿಯಿಂದ ಏನಾಗುತ್ತದೆ ಎಂಬುದನ್ನು ಕಾದು ನೋಡೋಣ. ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಇದರ ಪರಿಣಾಮದ ಬಗ್ಗೆ ತಿಳಿಯಲಿದೆ ಎಂದರು. ಸಿದ್ದರಾಮಯ್ಯ ಅವರನ್ನು ಸೈಡ್‌ಲೈನ್ ಮಾಡಿದ್ದರಿಂದಲೇ ಸೋಲಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಅದರಿಂದ ಪರಿಣಾಮ ಬೀರಿದೆ ಎಂದೂ ಹೇಳಲಾಗುವುದಿಲ್ಲ, ಪರಿಣಾಮ ಬೀರಿಲ್ಲ ಎಂದೂ ಹೇಳಲಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇಂದಿನ ರಾಜಕೀಯದಲ್ಲಿ ಜನರ ಮನೋಭಾವ ಬದಲಾಗಿದೆ. ಹಿಂದೆ ಜನರಿಗೆ ಮಾಹಿತಿ ಸಿಗಲು ಹೆಚ್ಚು ಸಮಯ ಬೇಕಾಗುತ್ತಿತ್ತು. ಪತ್ರಿಕೆಗಳನ್ನು ಓದಿ ಮಾಹಿತಿ ಪಡೆದು ನಿರ್ಧಾರ ಕೈಗೊಳ್ಳುತ್ತಿದ್ದರು. ಆದರೆ ಈಗ ಏನು ನಡೆಯುತ್ತಿದೆ ಎಂಬ ಮಾಹಿತಿ ಕ್ಷಣಾರ್ಧದಲ್ಲಿ ಜನರಿಗೆ ತಲುಪುತ್ತದೆ. ಪ್ರತಿ ಹೊಸ ಮಾಹಿತಿ ಮತ್ತು ಬೆಳವಣಿಗೆಯ ಆಧಾರದಲ್ಲಿ ಜನರು ತಮ್ಮ ಅಭಿಪ್ರಾಯಗಳನ್ನು ಬದಲಾಯಿಸಿಕೊಳ್ಳುತ್ತಾರೆ. ಇಂದಿನ ರಾಜಕೀಯ ಬಹಳ ವೇಗವಾಗಿ ಸಾಗುತ್ತಿದೆ ಎಂದು ರಾಜಣ್ಣ ಹೇಳಿದರು.

ಡಿಸಿಎಂ ಪರಮೇಶ್ವರ್ ಆರೋಗ್ಯದ ಬಗ್ಗೆ ರಾಜಣ್ಣ ಹೇಳಿದ್ದೇನು?

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಅನಾರೋಗ್ಯದ ಕುರಿತು ಮಾತನಾಡಿದ ಕೆ.ಎನ್. ರಾಜಣ್ಣ, ಅವರ ಆರೋಗ್ಯ ವಿಚಾರಿಸಲು ಇಂದು ಭೇಟಿ ನೀಡುವುದಾಗಿ ತಿಳಿಸಿದರು. ಈಗಾಗಲೇ ಪರಮೇಶ್ವರ್ ಅವರ ಬೆಂಬಲಿಗರಿಗೆ ದೂರವಾಣಿ ಕರೆ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದೇನೆ. ಅವರು ಚೆನ್ನಾಗಿದ್ದಾರೆ ಎಂದು ತಿಳಿಸಿದ್ದಾರೆ. ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದಿದ್ದರು. ಆದರೆ, ಮತ್ತೆ ವಿಚಾರಿಸಿದಾಗ ಇನ್ನೊಂದು ಪರೀಕ್ಷೆ ಬಾಕಿ ಇರುವುದಾಗಿ ತಿಳಿದುಬಂದಿದೆ. ಆ ಪರೀಕ್ಷೆಯ ಬಳಿಕ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಹೀಗಾಗಿ, ಈಗ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸುತ್ತೇನೆ ಎಂದು ರಾಜಣ್ಣ ಹೇಳಿದರು.

 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES