• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /KPSC ನೇಮಕಾತಿ ಅಕ್ರಮ ಪ್ರಕರಣ: SIT ರಚನೆಗೆ ಸುಪ್ರೀಂಕೋರ್ಟ್‌ ತಡೆ!

KPSC ನೇಮಕಾತಿ ಅಕ್ರಮ ಪ್ರಕರಣ: SIT ರಚನೆಗೆ ಸುಪ್ರೀಂಕೋರ್ಟ್‌ ತಡೆ!

KPSC ನೇಮಕಾತಿ ಅಕ್ರಮದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದ್ದ ಅಲೋಕ್‌ ಕುಮಾರ್‌ ನೇತೃತ್ವದ SIT ರಚನೆಗೆ ಸುಪ್ರೀಂಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಅಧಿಕಾರಿಯ ನೇಮಕದ ಬಗ್ಗೆ ಆಕ್ಷೇಪಗಳಿದ್ದರೆ ದಾಖಲೆಗಳನ್ನ ಸಲ್ಲಿಸುವಂತೆ ಸೂಚಿಸಿರುವ ನ್ಯಾಯಪೀಠ, ಪರ್ಯಾಯ ಸಮರ್ಥ ಅಧಿಕಾರಿಗಳ ಪಟ್ಟಿಯನ್ನ ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ಕಲ್ಪಿಸಿದೆ. ಮುಂದಿನ ವಿಚಾರಣೆಯನ್ನ ಅಕ್ಟೋಬರ್‌ 12ಕ್ಕೆ ಮುಂದೂಡಲಾಗಿದೆ.

Written ByPuttaraj K Alur
Published: Oct 01, 2026, 06:07 PM IST|Updated: Oct 01, 2026, 06:17 PM IST
joinshare
KPSC ನೇಮಕಾತಿ ಅಕ್ರಮ ಪ್ರಕರಣ: SIT ರಚನೆಗೆ ಸುಪ್ರೀಂಕೋರ್ಟ್‌ ತಡೆ!
Image Credit: KPSC Recruitment Scam

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

KPSC Recruitment Scam: ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ KPSC ನೇಮಕಾತಿ ಅಕ್ರಮದ ತನಿಖೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ತನಿಖೆಗಾಗಿ ಕರ್ನಾಟಕ ಹೈಕೋರ್ಟ್‌ ಆದೇಶಿಸಿದ್ದ ವಿಶೇಷ ತನಿಖಾ ತಂಡ (SIT) ರಚನೆಗೆ ಸುಪ್ರೀಂಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಸದ್ಯಕ್ಕೆ ಹೈಕೋರ್ಟ್‌ ಸೂಚಿಸಿದ್ದ SIT ತನಿಖೆ ಮುಂದುವರಿಯುವುದಕ್ಕೆ ಬ್ರೇಕ್‌ ಬಿದ್ದಿದೆ.

KPSC ನೇಮಕಾತಿಯಲ್ಲಿ ಅಕ್ರಮಗಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈಗಾಗಲೇ CID ತನಿಖೆ ನಡೆಸುತ್ತಿತ್ತು. ಆದರೆ ಪ್ರಕರಣದ ತನಿಖೆಯ ವ್ಯಾಪ್ತಿ ಮತ್ತು ಪ್ರಗತಿ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಗಳನ್ನ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌, ಸೆಪ್ಟೆಂಬರ್‌ 21ರಂದು ಹಿರಿಯ IPS ಅಧಿಕಾರಿ ಅಲೋಕ್‌ ಕುಮಾರ್‌ ನೇತೃತ್ವದಲ್ಲಿ ಐವರು ಸದಸ್ಯರ SIT ರಚಿಸುವಂತೆ ಆದೇಶಿಸಿತ್ತು.  

ಹೈಕೋರ್ಟ್‌ ಆದೇಶಕ್ಕೆ ಸರ್ಕಾರದ ಆಕ್ಷೇಪ

ಹೈಕೋರ್ಟ್‌ನ ಈ ಆದೇಶವನ್ನ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ರಾಜ್ಯ ಸರ್ಕಾರದ ವಾದದ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ FIR ದಾಖಲಾದ ದಿನದಿಂದಲೂ CID ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ತನಿಖೆಯನ್ನ ಹೊಸ ತಂಡಕ್ಕೆ ವರ್ಗಾಯಿಸುವ ಅಗತ್ಯವಿಲ್ಲವೆಂಬ ನಿಲುವು ವ್ಯಕ್ತಪಡಿಸಲಾಗಿದೆ. ಇದಲ್ಲದೆ SITಗೆ ನಿರ್ದಿಷ್ಟ ಅಧಿಕಾರಿಯೊಬ್ಬರನ್ನ ಮುಖ್ಯಸ್ಥರನ್ನಾಗಿ ನೇಮಿಸಿರುವುದಕ್ಕೂ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ಆದೇಶವನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.  

ಅಲೋಕ್‌ ಕುಮಾರ್ ನೇಮಕಕ್ಕೆ ಆಕ್ಷೇಪ

ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡಿಸಿ, SIT ಮುಖ್ಯಸ್ಥರಾಗಿ ಸೂಚಿಸಲಾಗಿರುವ ಅಲೋಕ್‌ ಕುಮಾರ್‌ ಅವರ ಹಿಂದಿನ ವಿಚಾರಣೆಗೆ ಸಂಬಂಧಿಸಿದ ದಾಖಲೆಗಳನ್ನ ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ. ಅಧಿಕಾರಿಯ ವಿರುದ್ಧ ಇರುವ ಆರೋಪಗಳನ್ನ ಪರಿಗಣಿಸಬೇಕೆಂದು ಸರ್ಕಾರ ಮನವಿ ಮಾಡಿದೆ. ಇದಕ್ಕೆ ಪ್ರತಿಯಾಗಿ ಅಭ್ಯರ್ಥಿಗಳ ಪರ ವಕೀಲರು, ಹೈಕೋರ್ಟ್‌ ಪ್ರಕರಣದ ಗಂಭೀರತೆಯನ್ನ ಪರಿಗಣಿಸಿ ತನಿಖೆಗೆ ಸೂಕ್ತವಾದ ಅಧಿಕಾರಿಗಳನ್ನ ಆಯ್ಕೆ ಮಾಡಿ SIT ರಚಿಸಿದೆ ಎಂದು ವಾದಿಸಿದ್ದಾರೆ. ತನಿಖಾ ತಂಡದ ರಚನೆಗೆ ಸರ್ಕಾರ ಆಕ್ಷೇಪಿಸುವ ಅಗತ್ಯವೇನು ಎಂಬ ಪ್ರಶ್ನೆಯನ್ನೂ ಅವರು ನ್ಯಾಯಾಲಯದ ಮುಂದಿಟ್ಟಿದ್ದಾರೆ.

‘ಆಡಳಿತಾತ್ಮಕ ಆಯ್ಕೆಗಳಲ್ಲಿ ಸುಲಭವಾಗಿ ಮಧ್ಯಪ್ರವೇಶಿಸಲ್ಲ’

ಉಭಯ ಕಡೆಯ ವಾದ ಆಲಿಸಿದ ಸುಪ್ರೀಂಕೋರ್ಟ್‌ ವಿಭಾಗೀಯ ಪೀಠ, ನಿರ್ದಿಷ್ಟ ಅಧಿಕಾರಿಯ ನೇಮಕದ ಬಗ್ಗೆ ಆಕ್ಷೇಪವಿದ್ದರೆ ಸಂಬಂಧಿಸಿದ ಪಕ್ಷಗಳು ಹೈಕೋರ್ಟ್‌ ಮೊರೆ ಹೋಗಬಹುದಿತ್ತು ಎಂದು ಅಭಿಪ್ರಾಯಪಟ್ಟಿದೆ. ಇಂತಹ ಆಡಳಿತಾತ್ಮಕ ಆಯ್ಕೆಗಳಲ್ಲಿ ನ್ಯಾಯಾಲಯಗಳು ಸುಲಭವಾಗಿ ಮಧ್ಯಪ್ರವೇಶಿಸುವುದಿಲ್ಲವೆಂಬ ಸಂದೇಶವನ್ನೂ ಪೀಠ ನೀಡಿದೆ. ಆದರೆ ರಾಜ್ಯ ಸರ್ಕಾರದ ಆಕ್ಷೇಪಗಳನ್ನ ಸಂಪೂರ್ಣವಾಗಿ ಕಡೆಗಣಿಸದೆ, ಅಲೋಕ್‌ ಕುಮಾರ್‌ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನ ಮುಂದಿನ ವಿಚಾರಣೆಯಲ್ಲಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಪರ್ಯಾಯ ಅಧಿಕಾರಿಗಳ ಪಟ್ಟಿ ನೀಡಲು ಅವಕಾಶ

SIT ರಚನೆಯ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೊಂದು ಅವಕಾಶವನ್ನೂ ಸುಪ್ರೀಂಕೋರ್ಟ್‌ ನೀಡಿದೆ. ತನಿಖೆ ನಡೆಸಲು ಸರ್ಕಾರಕ್ಕೆ ಒಪ್ಪಿಗೆಯಿರುವ ಸಮರ್ಥ ಅಧಿಕಾರಿಗಳ ಪಟ್ಟಿಯನ್ನ ಸಲ್ಲಿಸಲು ರಾಜ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಮುಂದಿನ ವಿಚಾರಣೆಯಲ್ಲಿ ಸರ್ಕಾರ ಯಾವ ಅಧಿಕಾರಿಗಳ ಹೆಸರುಗಳನ್ನ ಸೂಚಿಸಲಿದೆ ಎಂಬುದು ಮಹತ್ವ ಪಡೆದುಕೊಂಡಿದೆ. SITಗೆ ಯಾರು ನೇತೃತ್ವ ವಹಿಸಲಿದ್ದಾರೆ ಎಂಬ ವಿಚಾರವೂ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಸ್ಪಷ್ಟವಾಗುವ ಸಾಧ್ಯತೆಯಿದೆ.

KPSC ನೇಮಕಾತಿ ಪ್ರಕರಣದ ಹಿನ್ನೆಲೆ

KPSCಯ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ CID ತನಿಖೆ ನಡೆಯುತ್ತಿತ್ತು. ವಿಶೇಷವಾಗಿ ಸುಮಾರು 400 ಪಶುವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಹಣದ ವ್ಯವಹಾರದ ಆರೋಪಗಳು ತನಿಖೆಯ ವ್ಯಾಪ್ತಿಯಲ್ಲಿವೆ. ಈ ಪ್ರಕರಣದಲ್ಲಿ ಕೆಲ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ವಿರುದ್ಧವೂ ತನಿಖೆ ನಡೆದಿದೆ. ಕರ್ನಾಟಕ ಹೈಕೋರ್ಟ್‌ ತನ್ನ ಸೆಪ್ಟೆಂಬರ್‌ 21ರ ಆದೇಶದಲ್ಲಿ CIDಯಿಂದ ತನಿಖೆಯನ್ನ ಹಿಂಪಡೆದು SITಗೆ ವಹಿಸಿತ್ತು. ಹೊಸ SITಗೆ 100 ದಿನಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಹಾಗೂ ಪ್ರತಿ 30 ದಿನಗಳಿಗೊಮ್ಮೆ ಪ್ರಗತಿ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು.  

ಮುಂದೇನು?

ಸುಪ್ರೀಂಕೋರ್ಟ್‌ ಮಧ್ಯಂತರ ತಡೆ ನೀಡಿರುವ ಹಿನ್ನೆಲೆಯಲ್ಲಿ, ಸದ್ಯ ಹೈಕೋರ್ಟ್‌ ಆದೇಶದಂತೆ ಅಲೋಕ್‌ ಕುಮಾರ್‌ ನೇತೃತ್ವದ SIT ತನಿಖೆ ಮುಂದುವರಿಯುವ ಸ್ಥಿತಿ ಬದಲಾಗಿದೆ. ಮುಂದಿನ ವಿಚಾರಣೆಯಲ್ಲಿ ಸರ್ಕಾರ ಸಲ್ಲಿಸುವ ಪರ್ಯಾಯ ಅಧಿಕಾರಿಗಳ ಪಟ್ಟಿ ಮತ್ತು ಅಲೋಕ್‌ ಕುಮಾರ್‌ ಕುರಿತ ದಾಖಲೆಗಳನ್ನ ನ್ಯಾಯಪೀಠ ಪರಿಶೀಲಿಸಲಿದೆ. ಹೀಗಾಗಿ KPSC ನೇಮಕಾತಿ ಪ್ರಕರಣದ ತನಿಖೆ ಮುಂದಿನ ದಿನಗಳಲ್ಲಿ CID ಮೂಲಕವೇ ಮುಂದುವರಿಯಲಿದೆಯೇ, ಅಥವಾ ಹೊಸ ಅಧಿಕಾರಿಗಳನ್ನೊಳಗೊಂಡ SIT ರಚನೆಯಾಗಲಿದೆಯೇ ಎಂಬುದು ಕುತೂಹಲ ಮೂಡಿಸಿದೆ. ಪ್ರಕರಣದ ಆರೋಪಗಳ ಕುರಿತು ಅಂತಿಮ ಸತ್ಯಾಸತ್ಯತೆ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯ ನಂತರವೇ ಸ್ಪಷ್ಟವಾಗಬೇಕಿದೆ.

Add Zee News as a Preferred Source
TAGS:
Karnataka Politics
Kannada News