• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ಎದುರು ಕಣ್ಣೀರಿಟ್ಟ ಕೃಪಾ ಆಳ್ವಾ ಹೇಳಿದ್ದು ಇದೊಂದೇ ಮಾತು

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ಎದುರು ಕಣ್ಣೀರಿಟ್ಟ ಕೃಪಾ ಆಳ್ವಾ ಹೇಳಿದ್ದು ಇದೊಂದೇ ಮಾತು

Siddaramaiah Sting Operation case: ಕೇರಳದ ಮಹಿಳೆಯೊಂದಿಗಿನ ಸಂಪರ್ಕ, ಸ್ಟಿಂಗ್ ಆಪರೇಷನ್ ವಿಡಿಯೋ, ಪತ್ರಕರ್ತರೊಂದಿಗಿನ ಸಂಪರ್ಕ ಹಾಗೂ ವಿಡಿಯೋ ವೈರಲ್ ಆಗಿರುವ ವಿಚಾರಗಳ ಕುರಿತು ಸಿಸಿಬಿ ಅಧಿಕಾರಿಗಳು ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.

Written ByChetana Devarmani
Published: Nov 12, 2026, 08:05 IST|Updated: Nov 12, 2026, 08:07 IST
joinshare
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ಎದುರು ಕಣ್ಣೀರಿಟ್ಟ ಕೃಪಾ ಆಳ್ವಾ ಹೇಳಿದ್ದು ಇದೊಂದೇ ಮಾತು

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೃಪಾ ಆಳ್ವಾ ಅವರನ್ನು ಪೊಲೀಸರು ಎರಡನೇ ಬಾರಿಗೆ ವಿಚಾರಣೆ ನಡೆಸಿದ್ದಾರೆ.

ನವೆಂಬರ್ 9 ರಂದು ತನಿಖಾಧಿಕಾರಿ ಎಸಿಪಿ ರವಿ ಅವರ ಮುಂದೆ ಹಾಜರಾಗಿದ್ದ ಕೃಪಾ ಆಳ್ವಾ ಅವರನ್ನು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಇದೀಗ ಮತ್ತೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅದರಂತೆ ಆಗಮಿಸಿದ ಅವರನ್ನು ಸುಮಾರು ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.

ಸಿಸಿಬಿ ವಿಚಾರಣೆ ವೇಳೆ ಕೃಪಾ ಆಳ್ವಾ ಹೇಳಿದ್ದೇನು?

ಎರಡೂ ದಿನಗಳ ವಿಚಾರಣೆ ವೇಳೆ ಕೃಪಾ ಆಳ್ವಾ ಅವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂಬ ನಿಲುವನ್ನೇ ಪುನರುಚ್ಚರಿಸಿದ್ದಾರೆ ಎನ್ನಲಾಗಿದೆ. ವಿಚಾರಣೆ ವೇಳೆ ಹಿರಿಯ ಅಧಿಕಾರಿಗಳ ಮುಂದೆ ಈಗಾಗಲೇ ತಮ್ಮ ಹೇಳಿಕೆಯನ್ನು ನೀಡಿದ್ದೇನೆ. ಮತ್ತೆ ಮತ್ತೆ ಏನು ಹೇಳಲಿ ಎಂದು ಎಸಿಪಿ ರವಿ ಅವರ ಮುಂದೆ ಕಣ್ಣೀರಿಟ್ಟಿದ್ದಾರೆ ಎಂದು ವರದಿಯಾಗಿದೆ.

ಕೇರಳದ ಮಹಿಳೆಯೊಂದಿಗಿನ ಸಂಪರ್ಕ, ಸ್ಟಿಂಗ್ ಆಪರೇಷನ್ ವಿಡಿಯೋ, ಪತ್ರಕರ್ತರೊಂದಿಗಿನ ಸಂಪರ್ಕ ಹಾಗೂ ವಿಡಿಯೋ ವೈರಲ್ ಆಗಿರುವ ವಿಚಾರಗಳ ಕುರಿತು ಸಿಸಿಬಿ ಅಧಿಕಾರಿಗಳು ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.

ಈ ವೇಳೆ ಕೃಪಾ ಆಳ್ವಾ ಅವರು, ತಾವು ಹೋಟೆಲ್‌ನಲ್ಲಿ ಕೇವಲ ಅರ್ಧ ಗಂಟೆ ಇದ್ದು ಅಲ್ಲಿಂದ ತೆರಳಿದ್ದಾಗಿ ತಿಳಿಸಿದ್ದಾರೆ. ಅಲ್ಲಿ ವಿಡಿಯೋ ಚಿತ್ರೀಕರಣ ನಡೆಯುತ್ತಿರುವ ಬಗ್ಗೆ ತನಗೆ ಯಾವುದೇ ಮಾಹಿತಿ ಇರಲಿಲ್ಲ. ವಿಡಿಯೋ ರೆಕಾರ್ಡ್ ಮಾಡಿರುವುದು ಅಥವಾ ಅದು ವೈರಲ್ ಆಗಿರುವುದರ ಬಗ್ಗೆಯೂ ತಿಳಿದಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ.

ಅಲ್ಲದೆ, ಈ ಘಟನೆ ನಡೆದು ಹಲವು ವರ್ಷಗಳಾಗಿರುವುದರಿಂದ ಎಲ್ಲ ವಿಚಾರಗಳು ನೆನಪಿಲ್ಲ. ಅಂದು ಕೇರಳದ ಮಹಿಳೆಯೊಬ್ಬರು ದೂರು ನೀಡಿದಾಗ ಹೈಕಮಾಂಡ್‌ನ ನಾಯಕರೊಬ್ಬರಿಗೆ ಮಾಹಿತಿ ನೀಡಿದ್ದೆ. ನಂತರ ಏನಾಯಿತು ಎಂಬುದು ತನಗೆ ತಿಳಿದಿಲ್ಲ ಎಂದು ವಿಚಾರಣೆ ವೇಳೆ ಹೇಳಿದ್ದಾರೆ ಎನ್ನಲಾಗಿದೆ.

ವಿಚಾರಣೆ ವೇಳೆ ಕೆಲವು ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ಅಗತ್ಯವಿದ್ದರೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾ ಅವರಿಗೆ ಸಿಸಿಬಿ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗಿದೆ. ಸ್ಟಿಂಗ್ ಆಪರೇಷನ್ ವಿಡಿಯೋ ಚಿತ್ರೀಕರಣ, ಅದರ ಪ್ರಸಾರ ಹಾಗೂ ಸಂಬಂಧಪಟ್ಟ ವ್ಯಕ್ತಿಗಳ ಸಂಪರ್ಕದ ಕುರಿತು ತನಿಖೆ ಮುಂದುವರಿದಿದೆ.
 

Add Zee News as a Preferred Source
TAGS:
Karnataka Politics