• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /KSRTC, BMTC ಸೇರಿ ಎಲ್ಲ ಬಸ್‌ಗಳ ಟಿಕೆಟ್‌ ದರ ಹೆಚ್ಚಳ.. 8,000 ಕೋಟಿ ನಷ್ಟ, ಸಾರಿಗೆ ಸಚಿವ ಹೇಳಿದ್ದೇನು?

KSRTC, BMTC ಸೇರಿ ಎಲ್ಲ ಬಸ್‌ಗಳ ಟಿಕೆಟ್‌ ದರ ಹೆಚ್ಚಳ.. 8,000 ಕೋಟಿ ನಷ್ಟ, ಸಾರಿಗೆ ಸಚಿವ ಹೇಳಿದ್ದೇನು?

ಡೀಸೆಲ್ ಹಾಗೂ ಇತರೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಗೆ ಅನುಗುಣವಾಗಿ ಬಸ್ ದರ ಹೆಚ್ಚಳ ಮಾಡಿಲ್ಲ. ಆದರೆ ನಿಗಮಗಳ ನಷ್ಟದ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ.

Written ByBhimappa
Published: Sep 25, 2026, 09:53 AM IST|Updated: Sep 25, 2026, 09:59 AM IST
joinshare
KSRTC, BMTC ಸೇರಿ ಎಲ್ಲ ಬಸ್‌ಗಳ ಟಿಕೆಟ್‌ ದರ ಹೆಚ್ಚಳ.. 8,000 ಕೋಟಿ ನಷ್ಟ, ಸಾರಿಗೆ ಸಚಿವ ಹೇಳಿದ್ದೇನು?
Image Credit: KSRTC

About the Author

Bhimappa

Bhimappa

ಭೀಮಪ್ಪ (Bhimappa) ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

buses Ticket prices likely to increase: KSRTC, BMTC, KKRTC ಮತ್ತು NWKRTC ಆರ್ಥಿಕ ನಷ್ಟದಲ್ಲಿದ್ದು ಇದನ್ನು ಸರಿದೂಗಿಸಲು ಬಸ್ ಪ್ರಯಾಣ ದರ ಹೆಚ್ಚಳದ ಪ್ರಸ್ತಾವನೆಗೆ ಪರಿಶೀಲನೆ ನಡೆಸಲಾಗುತ್ತಿದೆ. ಇಂಧನ ದರ ಏರಿಕೆ ಸೇರಿದಂತೆ ನಿರ್ವಹಣಾ ವೆಚ್ಚ ಹೆಚ್ಚಳದಿಂದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟದಲ್ಲಿವೆ. ರಾಜ್ಯದಲ್ಲಿ ಬಸ್ ಪ್ರಯಾಣ ದರ ಪರಿಷ್ಕರಣೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಸದನದಲ್ಲಿ ಮಾತನಾಡಿದ್ದಾರೆ.

ಸಾರಿಗೆ ನಿಗಮಗಳ ಭಾರೀ ನಷ್ಟ ಸರಿದೂಗಿಸಲು ಬಸ್ ದರ ಹೆಚ್ಚಳದ ಪ್ರಸ್ತಾವನೆ ಪರಿಶೀಲನೆ ಮಾಡಲಾಗುತ್ತಿದೆ. ಇಂಧನ ದರ ಏರಿಕೆ ಸೇರಿದಂತೆ ನಿರ್ವಹಣಾ ವೆಚ್ಚದ ಹೆಚ್ಚಳದಿಂದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟದಲ್ಲಿವೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ವಾರ್ಷಿಕ ಸುಮಾರು 8,000 ಕೋಟಿ ನಷ್ಟವಾಗುತ್ತಿದೆ. ಇದು ದೊಡ್ಡ ಮೊತ್ತದ ನಷ್ಟವಾಗಿದೆ. ದಿನದಿಂದ ದಿನಕ್ಕೆ ಇದು ಭಾರೀ ಏರಿಕೆಯಾಗುತ್ತಿದ್ದು ಆರ್ಥಿಕ ಸಮಸ್ಯೆ ಅಧಿಕವಾಗುತ್ತಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಅವರು ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ. 

ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲುಕೆಆರ್‌ಟಿಸಿ ರಾಜ್ಯದ ಈ ನಾಲ್ಕು ಸಾರಿಗೆ ನಿಗಮಗಳು ಆರ್ಥಿಕ ನಷ್ಟ ಎದುರಿಸುತ್ತಿರುವೆ. ಡೀಸೆಲ್ ಹಾಗೂ ಇತರೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಗೆ ಅನುಗುಣವಾಗಿ ಬಸ್ ದರ ಹೆಚ್ಚಳ ಮಾಡಿಲ್ಲ. ಆದರೆ ನಿಗಮಗಳ ನಷ್ಟದ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ದರ ಏರಿಕೆಗೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮನವೊಲಿಸಲು ಪ್ರಯತ್ನಿಸುತ್ತಿದೆ ಎಂದು ಸಾರಿಗೆ ಸಚಿವರು ಹೇಳಿದ್ದಾರೆ.

ನಾಲ್ಕು ಸಾರಿಗೆ ನಿಗಮಗಳ ಉಳಿವು ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ದರ ಪರಿಷ್ಕರಣೆಗೆ ಚಿಂತನೆ ಮಾಡಲಾಗುತ್ತಿದೆ. ಆದರೆ ಬಸ್‌ ಟಿಕೆಟ್‌ಗಳ ದರ ಏರಿಕೆ ಮಾಡಿದರೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಈಗಾಗಲೇ ನಾಲ್ಕು ಸಾರಿಗೆ ನಿಗಮಗಳು ಬಸ್ ದರ ಪರಿಷ್ಕರಣೆಗೆ ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಿವೆ. ದರ ಪರಿಷ್ಕರಣೆಗೆ ಇಂಧನ ಬೆಲೆ, ಸಿಬ್ಬಂದಿ ವೇತನ ಹಾಗೂ ನಿರ್ವಹಣಾ ವೆಚ್ಚ ಹೆಚ್ಚಳವನ್ನು ಪ್ರಮುಖ ಕಾರಣಗಳಾಗಿ ಸಾರಿಗೆ ನಿಗಮಗಳು ಉಲ್ಲೇಖಿಸಿವೆ ಎಂದು ವಿಧಾನ ಪರಿಷತ್‌ನಲ್ಲಿ ಭೈರತಿ ಸುರೇಶ್‌ ಅವರು ಹೇಳಿದ್ದಾರೆ.

ನಾಲ್ಕು ನಿಗಮಗಳ ಒಟ್ಟು ಬಾಕಿ ಹೊಣೆಗಾರಿಕೆ 8,095.5 ಕೋಟಿ ರೂಪಾಯಿಗಳು ಎಂದು ಸೆಪ್ಟೆಂಬರ್ 2026ರ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವೆಚ್ಚಕ್ಕೆ ರಾಜ್ಯ ಸರ್ಕಾರದಿಂದ ಸಾರಿಗೆ ನಿಗಮಗಳಿಗೆ 5,650.95 ಕೋಟಿ ಬಾಕಿ ಇದೆ. ಶಕ್ತಿ ಯೋಜನೆಯಿಂದ ನಿಗಮಗಳಿಗೆ ದೊಡ್ಡ ಮೊತ್ತದ ಹಣ ನೀಡಬೇಕಿದೆ. ಆದರೆ ಈವರೆಗೆ ಸರ್ಕಾರ ಹಣ ಬಿಡುಗಡೆ ಮಾಡುವ ಕುರಿತು ಮಾತನಾಡಿಲ್ಲ. ಜನವರಿ 2025 ರಲ್ಲಿ ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಳ ಮಾಡಲಾಗಿತ್ತು. ಸದ್ಯದ ಚರ್ಚೆ ದರ ಏರಿಕೆ ಕುರಿತು ಮಾತ್ರ, ಅಂತಿಮ ದರ ಅಥವಾ ಏರಿಕೆಯ ಪ್ರಮಾಣ ಇನ್ನೂ ಪ್ರಕಟವಾಗಿಲ್ಲ ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಏರಿಕೆ ಮಾಡಿದರೆ ಉಳಿದೆಲ್ಲ ದರಗಳು ಹೆಚ್ಚಳವಾಗಲಿವೆ. ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕಾರಣ ಈಗ ಇದನ್ನು ಸರಿದೂಗಿಸಲೇಬೇಕಾಗಿದೆ. ನಾಲ್ಕು ನಿಗಮಗಳ ಸಿಬ್ಬಂದಿ, ಅಧಿಕಾರಿಗಳು, ಬಸ್‌ಗಳು ಟೆಕ್ನಿಕಲ್‌ ಸಮಸ್ಯೆ ಆದಾಗ ಅವುಗಳ ಖರ್ಚು ಎಲ್ಲ ನೋಡಿದರೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಬೆಲೆ ಹೆಚ್ಚಳ ನಿರ್ಧಾರ ಮಾಡಲಾಗುತ್ತಿದೆ. ಆದರೆ ಈ ಬಗ್ಗೆ ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಲಿದೆ. ಅಲ್ಲಿವರೆಗೆ ಇಂದಿನ ದರವೇ ಮುಂದುವರೆಯಲಿದೆ.  

ಸಾರಿಗೆ ಸಚಿವ ಬೈರತಿ ಸುರೇಶ್‌ ಅವರು ವಿಧಾನ ಪರಿಷತ್‌ನಲ್ಲಿ ಮಾತನಾಡಿ, ಬಸ್‌ ಪ್ರಯಾಣದ ಟಿಕೆಟ್‌ ದರ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಬರ ಪರಿಸ್ಥಿತಿ ಕುರಿತು ಚರ್ಚೆ ಮಾಡುವಾಗ ಬಸ್‌ ಟಿಕೆಟ್‌ ದರ ಹೆಚ್ಚಳ ಮಾಡುವ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 8,000 ಕೋಟಿ ರೂಪಾಯಿಗಳ ನಷ್ಟದಲ್ಲಿ ಸಾರಿಗೆ ನಿಗಮಗಳು ಇದ್ದು ಸಿಬ್ಬಂದಿಗೆ ಸಂಬಳ ನೀಡುವುದಕ್ಕೆ ಆಗುತ್ತಿಲ್ಲ. ಈ ಆರ್ಥಿಕ ನಷ್ಟದಿಂದ ಹೊಸ ನೇಮಕಾತಿ ಪ್ರಕ್ರಿಯೆಗಳಿಗೂ ತೊಡಕಾಗಿದೆ ಎಂದು ಹೇಳಿದ್ದಾರೆ. 
 

Add Zee News as a Preferred Source
TAGS:
Kannada News