• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಭೀಕರ ರಸ್ತೆ ಅಪಘಾತ; ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಭೀಕರ ರಸ್ತೆ ಅಪಘಾತ; ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

KSRTC bus accident : ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Written ByChetana Devarmani
Published: Nov 25, 2026, 06:45 IST|Updated: Nov 25, 2026, 06:47 IST
joinshare
ಭೀಕರ ರಸ್ತೆ ಅಪಘಾತ; ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್‌ ನೋಟಿಸ್ ಬಂದರೆ ಏನು ಮಾಡಬೇಕು? ಚಿನ್ನ ಹರಾಜಾಗುವುದನ್ನು ತಪ್ಪಿಸಲು ಇದೊಂದೇ ದಾರಿ

ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್‌ ನೋಟಿಸ್ ಬಂದರೆ ಏನು ಮಾಡಬೇಕು? ಚಿನ್ನ ಹರಾಜಾಗುವುದನ್ನು ತಪ್ಪಿಸಲು ಇದೊಂದೇ ದಾರಿ

2

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಅಪರಿಚಿತರಿಂದಲೇ ಸಹಾಯ, ಕೆಲವರಿಗೆ ಅನಿರೀಕ್ಷಿತ ಬೇಸರ!

3

ಭೀಕರ ರಸ್ತೆ ಅಪಘಾತ; ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

4

ಸರಿಯಾದ ಸಂಗಾತಿಯ ಹುಡುಕಾಟದಲ್ಲಿದ್ದೇನೆ’ : ನಟಿ ನಿತ್ಯಾ ಮೆನನ್‌

5

Gold Price Crash: 88 ಸಾವಿರಕ್ಕೆ ಚಿನ್ನದ ಬೆಲೆ ಕುಸಿತ ಖಚಿತ!? ಮಾರುಕಟ್ಟೆ ತಜ್ಞರು ನುಡಿದ ಭವಿಷ್ಯವೇನು?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ಓಕಳಿಪುರಂ ಫ್ಲೈಓವರ್ ಬಳಿ ರಾತ್ರಿ ಸುಮಾರು 10.30ರ ವೇಳೆಗೆ ಈ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತ ವ್ಯಕ್ತಿ ಚಾಮರಾಜಪೇಟೆ ನಿವಾಸಿಯಾಗಿದ್ದು, ಅವರಿಗೆ ಸುಮಾರು 40 ವರ್ಷ ವಯಸ್ಸಾಗಿತ್ತು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದರೆ, ಮೃತರ ನಿಖರ ಹೆಸರು ಹಾಗೂ ಇತರ ವೈಯಕ್ತಿಕ ವಿವರಗಳು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

ಲಭ್ಯವಾದ ಮಾಹಿತಿಯ ಪ್ರಕಾರ, ಬೈಕ್ ಸವಾರ ಓಕಳಿಪುರಂ ಫ್ಲೈಓವರ್ ಮೇಲಿನಿಂದ ಮೆಜೆಸ್ಟಿಕ್ ಕಡೆಗೆ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ ಕೆಳಭಾಗದ ರಸ್ತೆಯಿಂದ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿತ್ತು. ಈ ವೇಳೆ ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಬಿದ್ದಿದ್ದು, ತೀವ್ರ ಗಾಯಗಳ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ನಡೆದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಶೇಷಾದ್ರಿಪುರಂ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವೇನು? ಬೈಕ್ ಸವಾರನ ನಿಯಂತ್ರಣ ತಪ್ಪಿತೇ ಅಥವಾ ಬಸ್ ಚಾಲಕನ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿತೇ ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಪಘಾತಕ್ಕೆ ಸಂಬಂಧಿಸಿದಂತೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಅದರ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕನ ವಿಚಾರಣೆ ನಡೆಸಿ ಘಟನೆಯ ಸಂಪೂರ್ಣ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ. ಅಪಘಾತ ನಡೆದ ಸ್ಥಳದ ಪರಿಸ್ಥಿತಿ ಹಾಗೂ ಲಭ್ಯವಿರುವ ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ತನಿಖೆ ನಡೆಯಲಿದೆ.

ಇನ್ನು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕುಟುಂಬದವರಿಗೆ ಮಾಹಿತಿ ನೀಡುವ ಪ್ರಕ್ರಿಯೆಯೂ ನಡೆಯುತ್ತಿದೆ. ರಾತ್ರಿ ವೇಳೆ ನಡೆದ ಈ ಅಪಘಾತದಿಂದಾಗಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಂಚಾರ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ತನಿಖೆಯ ಬಳಿಕ ಅಪಘಾತದ ನಿಖರ ಕಾರಣ ತಿಳಿದುಬರಬೇಕಿದೆ.
 

Add Zee News as a Preferred Source
TAGS:
Kannada News