• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಕರ್ನಾಟಕ ಸಾರಿಗೆ ಬಸ್ ಟಿಕೆಟ್ ದರ ಏರಿಕೆ? ಜನಸಾಮಾನ್ಯರ ಜೇಬಿಗೆ ಕತ್ತರಿ

ಕರ್ನಾಟಕ ಸಾರಿಗೆ ಬಸ್ ಟಿಕೆಟ್ ದರ ಏರಿಕೆ? ಜನಸಾಮಾನ್ಯರ ಜೇಬಿಗೆ ಕತ್ತರಿ

ಕರ್ನಾಟಕದಲ್ಲಿ ಬಸ್ ಪ್ರಯಾಣ ದರ ಏರಿಕೆ ಕುರಿತು ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಪ್ರಕಾರ, ಬಸ್ ದರ ಪರಿಷ್ಕರಣೆ ಕುರಿತು ಅಧ್ಯಯನ ನಡೆಸಿರುವ ಸಮಿತಿಯ ವರದಿ ಒಂದೆರಡು ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ.

Written ByChetana Devarmani
Published: Sep 30, 2026, 11:53 PM IST|Updated: Sep 30, 2026, 11:56 PM IST
joinshare
ಕರ್ನಾಟಕ ಸಾರಿಗೆ ಬಸ್ ಟಿಕೆಟ್ ದರ ಏರಿಕೆ? ಜನಸಾಮಾನ್ಯರ ಜೇಬಿಗೆ ಕತ್ತರಿ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಕರ್ನಾಟಕದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಟಿಕೆಟ್ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಿದ್ಧಪಡಿಸಿರುವ ವರದಿ ಒಂದೆರಡು ದಿನಗಳಲ್ಲಿ ಸರ್ಕಾರದ ಕೈ ಸೇರಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಇಂದು ಅಥವಾ ನಾಳೆ ಸಮಿತಿ ತನ್ನ ವರದಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ವರದಿ ಬಂದ ಬಳಿಕ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ಹಾಗೂ ಇತರ ಅಂಶಗಳನ್ನು ಪರಿಶೀಲಿಸಿ ಎಷ್ಟು ಪ್ರಮಾಣದಲ್ಲಿ ಪ್ರಯಾಣ ದರ ಹೆಚ್ಚಳ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗುವುದು. ನಂತರ ಸಚಿವ ಸಂಪುಟದ ಅನುಮೋದನೆ ಪಡೆದು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಾರಿಗೆ ನಿಗಮಗಳು ಸದ್ಯ ಆರ್ಥಿಕವಾಗಿ ಸಂಕಷ್ಟದಲ್ಲಿವೆ. ಇಂಧನ ಸೇರಿದಂತೆ ನಿರ್ವಹಣಾ ವೆಚ್ಚಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಅತುಲ್ ತಿವಾರಿ ನೇತೃತ್ವದ ಸಮಿತಿ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿಯನ್ನು ಅಧ್ಯಯನ ಮಾಡಿದೆ. ವರದಿ ಸಲ್ಲಿಕೆಯಾದ ಬಳಿಕ ಅದರ ಆಧಾರದ ಮೇಲೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ.

ಇದೇ ವೇಳೆ, ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಸಂಬಂಧಿಸಿದ ಶಕ್ತಿ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸರ್ಕಾರ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ರಾಜ್ಯದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡುವ ಮೂಲಕ ಉಚಿತ ಪ್ರಯಾಣದ ಸೌಲಭ್ಯವನ್ನು ಹೆಚ್ಚು ವ್ಯವಸ್ಥಿತಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಅನ್ಯ ರಾಜ್ಯಗಳ ಮಹಿಳೆಯರೂ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಮಾಡುತ್ತಿರುವ ಬಗ್ಗೆ ವರದಿಗಳು ಬಂದಿರುವ ಹಿನ್ನೆಲೆಯಲ್ಲಿ, ಸೌಲಭ್ಯವನ್ನು ರಾಜ್ಯದ ಮಹಿಳೆಯರಿಗೆ ಮಾತ್ರ ಸೀಮಿತಗೊಳಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಮೊದಲ ಹಂತದಲ್ಲಿ ಸುಮಾರು ಒಂದು ಕೋಟಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಉದ್ದೇಶ ಹೊಂದಲಾಗಿದೆ. ಈ ಸಂಬಂಧ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸುಮಾರು ಎರಡು ತಿಂಗಳಲ್ಲಿ ಸ್ಮಾರ್ಟ್ ಕಾರ್ಡ್‌ಗಳು ಸಿದ್ಧವಾಗಿ ಮಹಿಳೆಯರಿಗೆ ವಿತರಣೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಹೀಗಾಗಿ, ಒಂದೆಡೆ ಸಾರಿಗೆ ಬಸ್‌ಗಳ ಟಿಕೆಟ್ ದರ ಹೆಚ್ಚಳದ ಕುರಿತು ಸರ್ಕಾರದ ನಿರ್ಧಾರ ಕುತೂಹಲ ಮೂಡಿಸಿದ್ದರೆ, ಮತ್ತೊಂದೆಡೆ ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ಜಾರಿಯಾಗುವ ಕುರಿತು ಚರ್ಚೆ ನಡೆಯುತ್ತಿದೆ. ಸಮಿತಿಯ ವರದಿ ಸಲ್ಲಿಕೆಯಾದ ಬಳಿಕ ಟಿಕೆಟ್ ದರ ಎಷ್ಟು ಹೆಚ್ಚಾಗಲಿದೆ ಎಂಬುದು ಸ್ಪಷ್ಟವಾಗಲಿದೆ.
 

Add Zee News as a Preferred Source
TAGS:
Kannada News