SOCIAL MEDIA

Newsletter

PARTNER SITES
Select Language Select State

ಊರಿಗೆ ಹೋಗುವವರಿಗೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್; ಬೆಂಗಳೂರಿನಿಂದ ವಿಶೇಷ ಬಸ್‌ಗಳ ವ್ಯವಸ್ಥೆ

ಪ್ರತಿ ಬಾರಿಯೂ ಹಬ್ಬ, ಹರಿದಿನಗಳು ಮತ್ತು ಸರಣಿ ರಜೆಗಳು ಇರುವಾಗ ಸಾರಿಗೆ ಇಲಾಖೆಯೂ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್‌ಗಳ ಮಾಡುತ್ತಿರುತ್ತದೆ.

Written By Bhimappa
Published: Sep 25, 2026, 10:33 AM IST | Updated: Sep 25, 2026, 10:39 AM IST
Image Credit: ksrtc_special_buses
Join

KSRTC Special buses: ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಸೇರಿದಂತೆ ಮೊದಲ ವಾರ 3 ದಿನ ಸರಣಿ ರಜೆ ಇರುವುದರಿಂದ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕೆ ಕೆಎಸ್‌ಆರ್‌ಟಿಸಿ 850 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಗಾಂಧಿ ಜಯಂತಿ ಮತ್ತು ವಾರಾಂತ್ಯದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯು ಬೆಂಗಳೂರಿನಿಂದ ರಾಜ್ಯ ಮತ್ತು ಹೊರ ರಾಜ್ಯಗಳಿಗೆ ಅಕ್ಟೋಬರ್ 1 ಮತ್ತು 2 ರಂದು 850 ಹೆಚ್ಚುವರಿ ವಿಶೇಷ ಬಸ್‌ಗಳನ್ನು ರಸ್ತೆ ಇಳಿಸುತ್ತಿದೆ. ನಗರದಿಂದ ಹೊರ ಹೋಗುವ ಬಸ್‌ಗಳು ಅಕ್ಟೋಬರ್ 4 ರಂದು ಮರಳಿ ಬೆಂಗಳೂರಿಗೆ ಬಸ್‌ಗಳು ಸಂಚರಿಸಲಿವೆ.

ಈಗಾಗಲೇ ನಿಮ್ಮ ಊರುಗಳಿಗೆ ತೆರಳು ಪ್ಲಾನ್‌ ಮಾಡಿದ್ದರೇ ಪ್ರಯಾಣಿಕರು ಮುಂಗಡ ಬುಕಿಂಗ್‌ ಮಾಡಿಕೊಳ್ಳುವ ಅವಕಾಶವಿದ್ದು, ಒಟ್ಟಿಗೆ ಹೋಗಿ- ಬರುವ ಟಿಕೆಟ್ ಕಾಯ್ದಿರಿಸುವ ಪ್ರಯಾಣಿಕರಿಗೆ ಟಿಕೆಟ್‌ ದರದಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಅಕ್ಟೋಬರ್ 2 ರಂದು ಶುಕ್ರವಾರ ಮಹಾತ್ಮ ಗಾಂಧಿ ಜಯಂತಿ ರಜೆ, ಅಕ್ಟೋಬರ್ 3 ಮತ್ತು 4 ರಂದು ಶನಿವಾರ, ಭಾನುವಾರ ವಾರಾಂತ್ಯದ ರಜೆ ಇದೆ. ಈ ಸಾಲು ಸಾಲು ರಜೆಗಳ ಪ್ರಯುಕ್ತ ಅಕ್ಟೋಬರ್ 1 ಗುರುವಾರ ಹಾಗೂ ಅಕ್ಟೋಬರ್ 2 ಶುಕ್ರವಾರ ರಂದು ಬೆಂಗಳೂರಿನಿಂದ ವಿವಿಧ ಊರುಗಳಿಗೆ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.

ರಜೆ ಮುಗಿಸಿ ಮರಳಿ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗಾಗಿ ಅಕ್ಟೋಬರ್ 4 ಭಾನುವಾರದಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ಗಳ ಕಾರ್ಯಾಚರಣೆ ಇರಲಿದೆ. ಪ್ರತಿ ಬಾರಿಯೂ ಹಬ್ಬ, ಹರಿದಿನಗಳು ಮತ್ತು ಸರಣಿ ರಜೆಗಳು ಇರುವಾಗ ಸಾರಿಗೆ ಇಲಾಖೆಯೂ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್‌ಗಳ ಮಾಡುತ್ತಿರುತ್ತದೆ. ಅದರಂತೆ ಈ ಬಾರಿಯೂ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಊರಿಗೆ ಹೋಗುವವರಿಗೆ ಅನುಕೂಲವಾಗಲಿ ಎಂದು ಇಲಾಖೆಯು ವಿಶೇಷ ಬಸ್‌ ವ್ಯವಸ್ಥೆ ಮಾಡಿದೆ.  

ಯಾವ ನಿಲ್ದಾಣದಿಂದ ಯಾವ ಊರುಗಳಿಗೆ ಬಸ್ ವ್ಯವಸ್ಥೆ?

ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್): ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, 
ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ,
ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ಅಂತರರಾಜ್ಯ ಸ್ಥಳಗಳಾದ ತಿರುಪತಿ,
ವಿಜಯವಾಡ, ಹೈದರಾಬಾದ್ ಮುಂತಾದ ಕಡೆಗಳಿಗೆ ಬಸ್‌ಗಳು ತೆರಳಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣ: ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ
ಮಾರ್ಗದ ಕಡೆಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ: ತಮಿಳುನಾಡು ಮತ್ತು ಕೇರಳ ಕಡೆಗೆ ತೆರಳುವ ಪ್ರತಿಷ್ಠಿತ ವಿಶೇಷ ಬಸ್‌ಗಳು ಇಲ್ಲಿಂದ ಹೊರಡಲಿವೆ. ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿರಾಪಳ್ಳಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಯಿಕ್ಕೋಡ್ ಮುಂತಾದ ಸ್ಥಳಗಳಿಗೆ ಇಲ್ಲಿಂದ ವ್ಯವಸ್ಥೆ ಮಾಡಲಾಗಿದೆ.

ಟಿಕೆಟ್ ಬುಕಿಂಗ್ ಮತ್ತು ವಿಶೇಷ ರಿಯಾಯಿತಿಗಳು

ಆನ್‌ಲೈನ್‌ ಬುಕಿಂಗ್: ಪ್ರಯಾಣಿಕರು ನಿಗಮದ ಅಧಿಕೃತ ವೆಬ್‌ಸೈಟ್ http://www.ksrtc.karnataka.gov.in ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಳ್ಳಬಹುದು.

ಗುಂಪು ರಿಯಾಯಿತಿ: ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಒಂದೇ ಟಿಕೆಟ್‌ನಲ್ಲಿ ಮುಂಗಡ ಕಾಯ್ದಿರಿಸಿದರೆ ಶೇಕಡಾ 5 ರಷ್ಟು ರಿಯಾಯಿತಿ ದೊರೆಯಲಿದೆ.

ಮರಳಿ ಬರುವ ಪ್ರಯಾಣ ದರದಲ್ಲಿ ರಿಯಾಯಿತಿ: ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ, ವಾಪಸ್ ಬರುವ ಪ್ರಯಾಣ ದರದಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ಸಿಗಲಿದೆ.

ನೆರೆ ರಾಜ್ಯಗಳಲ್ಲೂ ಬುಕಿಂಗ್ ಕೌಂಟರ್‌ಗಳು: ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯ ಪ್ರಮುಖ ನಗರಗಳಲ್ಲಿರುವ ಕೌಂಟರ್‌ಗಳ ಮೂಲಕವೂ ಟಿಕೆಟ್ ಬುಕ್ ಮಾಡಬಹುದಾಗಿದೆ.
 

Add Zee News as a Preferred Source
TAGS:

About the Author

ಭೀಮಪ್ಪ (Bhimappa) ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 

ZEENEWS TRENDING STORIES