• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಬೆಂಗಳೂರಿನ 24ಲಕ್ಷ ಆಸ್ತಿ ಮಾಲೀಕರಿಗೆ ಭರ್ಜರಿ ಗುಡ್‌ನ್ಯೂಸ್: ಇನ್ಮುಂದೆ ನಿಮ್ಮ ವಾಟ್ಸಾಪ್‌ಗೆ ಬರಲಿದೆ ಇ-ಖಾತಾ

ಬೆಂಗಳೂರಿನ 24ಲಕ್ಷ ಆಸ್ತಿ ಮಾಲೀಕರಿಗೆ ಭರ್ಜರಿ ಗುಡ್‌ನ್ಯೂಸ್: ಇನ್ಮುಂದೆ ನಿಮ್ಮ ವಾಟ್ಸಾಪ್‌ಗೆ ಬರಲಿದೆ ಇ-ಖಾತಾ

ಬೆಂಗಳೂರಿನ 24ಲಕ್ಷ ಆಸ್ತಿ ಮಾಲೀಕರಿಗೆ ಗುಡ್‌ನ್ಯೂಸ್ ನೀಡಿರುವ ಜಿಬಿಎ ಇನ್ಮುಂದೆ, ಭೂ ಗ್ಯಾರಂಟಿ ಯೋಜನೆ ಅಭಿಯಾನದಡಿ ಇ ಖಾತಾ ಸೇವೆಯನ್ನು ನೇರವಾಗಿ ವಾಟ್ಸಾಪ್‌ಗೆ ಕಳುಹಿಸಲು ಸಿದ್ಧತೆ ನಡೆಸಿದೆ. ಇದರೊಂದಿಗೆ ಆನ್‌ಲೈನ್ ಮೂಲಕ ಇ-ಖಾತಾದಲ್ಲಿ ತಿದ್ದುಪಡಿ ಅಥವಾ ಮಾಲೀಕತ್ವ ಬದಲಾವಣೆ ಪ್ರಕ್ರಿಯೆಗಾಗಿ ಅರ್ಜಿ ಸಲ್ಲಿಸಲು ಸಹ ಜಿಬಿಎ ಅವಕಾಶ ನೀಡಿದೆ.

Written ByYashaswini V
Published: Nov 21, 2026, 10:26 IST|Updated: Nov 21, 2026, 10:28 IST
joinshare
ಬೆಂಗಳೂರಿನ 24ಲಕ್ಷ ಆಸ್ತಿ ಮಾಲೀಕರಿಗೆ ಭರ್ಜರಿ ಗುಡ್‌ನ್ಯೂಸ್: ಇನ್ಮುಂದೆ ನಿಮ್ಮ ವಾಟ್ಸಾಪ್‌ಗೆ ಬರಲಿದೆ ಇ-ಖಾತಾ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

2

₹1,000 ಇದ್ದರೆ ಸಾಕು! ಈ ವಾರ ಲಾಂಚ್ ಆಗಲಿವೆ 4 ಹೊಸ ಮ್ಯೂಚುವಲ್ ಫಂಡ್‌ಗಳು; ಹೂಡಿಕೆಗೆ ಸಿದ್ಧರಾಗಿ!

3

ʻಐಶಿರ್ʼ ಜೋಡಿಯ ನಿಶ್ಚಿತಾರ್ಥ ಸಂಭ್ರಮ: ಉಂಗುರ ಬದಲಾಯಿಸಿಕೊಂಡ ಶಿಶಿರ್ ಶಾಸ್ತ್ರಿ - ಐಶ್ವರ್ಯಾ

4

ಘೋರ ದುರಂತ: ಪ್ರೀತಿಸಿ ಮದುವೆಯಾದ ಕೇವಲ 45 ದಿನದಲ್ಲೇ ನವದಂಪತಿ ದುರ್ಮರಣ!

5

ಟೊಮೆಟೊ ಜ್ಯೂಸ್ vs ಕಿತ್ತಳೆ ಜ್ಯೂಸ್.. ಸಕ್ಕರೆ ನಿಯಂತ್ರಿಸಲು ಬೆಳಿಗ್ಗೆ ಯಾವುದು ಕುಡಿಯುವುದು ಉತ್ತಮ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ವಂತ ಮನೆ ಅಥವಾ ನಿವೇಶನ ಹೊಂದಿರುವ ಲಕ್ಷಾಂತರ ಆಸ್ತಿ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇ-ಖಾತಾ  ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಮತ್ತು ಮಧ್ಯವರ್ತಿಗಳ ಕಾಟಕ್ಕೆ ಒಳಗಾಗುವ ದಿನಗಳಿಗೆ ಇನ್ಮುಂದೆ ಪೂರ್ಣವಿರಾಮ ಬೀಳಲಿದೆ. ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ಸಂಪೂರ್ಣ ಉಚಿತವಾಗಿ, ನೇರವಾಗಿ ಅವರ ವಾಟ್ಸಾಪ್‌ ಸಂಖ್ಯೆಗೇ ಇ-ಖಾತಾ ಪ್ರಮಾಣಪತ್ರವನ್ನು ತಲುಪಿಸುವ ವಿನೂತನ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ.

‘ಭೂ-ಗ್ಯಾರಂಟಿ’ ಅಭಿಯಾನದಡಿ ಮಹತ್ವದ ಹೆಜ್ಜೆ:
ಈ ಕುರಿತು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರದ 6ನೇ ಗ್ಯಾರಂಟಿಯಾದ 'ಭೂ-ಗ್ಯಾರಂಟಿ - ನನ್ನ ಖಾತಾ, ನನ್ನ ಹಕ್ಕು' ಅಭಿಯಾನದಡಿ ಈ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರಿಗೆ ಖಾತಾ ವಿತರಣೆ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸುವುದು ಮತ್ತು ಪಾರದರ್ಶಕಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ವಾಟ್ಸಾಪ್‌ನಲ್ಲಿ ಇ-ಖಾತಾ ಹೇಗೆ ಸಿಗುತ್ತೆ?
ಈ ಹೊಸ ವ್ಯವಸ್ಥೆಯಡಿ ಆಸ್ತಿ ಮಾಲೀಕರು ತಮ್ಮ ಮೊಬೈಲ್‌ನಲ್ಲೇ ಕುಳಿತು ಅತ್ಯಂತ ಸುಲಭವಾಗಿ ದಾಖಲೆ ಪಡೆಯಬಹುದು.
* ಆಸ್ತಿ ಮಾಲೀಕರ ನೋಂದಾಯಿತ ವಾಟ್ಸಾಪ್ ಸಂಖ್ಯೆಗೆ ನೇರವಾಗಿ ಇ-ಖಾತಾ ಪ್ರಮಾಣಪತ್ರವು ಪಿಡಿಎಫ್ ರೂಪದಲ್ಲಿ ಬರಲಿದೆ.
* ಪ್ರತಿಯೊಂದು ಇ-ಖಾತಾ ಪ್ರಮಾಣಪತ್ರವು ವಿಶಿಷ್ಟವಾದ ePID  ಸಂಖ್ಯೆಯನ್ನು ಹೊಂದಿರಲಿದ್ದು, ಇದು ಆಸ್ತಿಯ ಅಧಿಕೃತ ಡಿಜಿಟಲ್ ಗುರುತಾಗಿರಲಿದೆ.
* ಇದಕ್ಕಾಗಿ ಸಾರ್ವಜನಿಕರು ಒಂದು ರೂಪಾಯಿಯನ್ನೂ ಖರ್ಚು ಮಾಡಬೇಕಿಲ್ಲ. ಯಾವುದೇ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡದೆ ಅಥವಾ ಮಧ್ಯವರ್ತಿಗಳನ್ನು ಸಂಪರ್ಕಿಸದೆ, ತಮ್ಮ ಮೊಬೈಲ್‌ನಲ್ಲೇ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿ ಸುರಕ್ಷಿತವಾಗಿ ಇಟ್ಟುಕೊಳ್ಳಬಹುದು.

ಕೇವಲ ಇ-ಖಾತಾ ವಿತರಣೆ ಮಾತ್ರವಲ್ಲದೆ, ದಾಖಲೆಗಳಲ್ಲಿ ಏನಾದರೂ ದೋಷಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲೂ ಜಿಬಿಎ ಸುಲಭ ದಾರಿ ಮಾಡಿಕೊಟ್ಟಿದೆ.

ವಾಟ್ಸಾಪ್‌ಗೆ ಬರುವ ಸಂದೇಶದ ಜೊತೆಗೆ ಜಿಬಿಎಯ ಅಧಿಕೃತ ಇ-ಖಾತಾ ವೆಬ್ ಲಿಂಕ್ ಅನ್ನು ಸಹ ನೀಡಲಾಗುತ್ತದೆ. ಆಸ್ತಿ ಮಾಲೀಕರು ತಮ್ಮ ePID ಸಂಖ್ಯೆಯನ್ನು ಬಳಸಿಕೊಂಡು ಈ ಲಿಂಕ್ ಮೂಲಕ ಆನ್‌ಲೈನ್‌ನಲ್ಲೇ ಇ-ಖಾತಾದಲ್ಲಿನ ಹೆಸರು, ವಿಸ್ತೀರ್ಣ ಸೇರಿದಂತೆ ಇತರ ತಿದ್ದುಪಡಿಗಳಿಗೆ ಅಥವಾ ಆಸ್ತಿ ಮಾಲೀಕತ್ವ ಬದಲಾವಣ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈಗಾಗಲೇ ಆನ್‌ಲೈನ್ ಪೋರ್ಟಲ್ ಮೂಲಕ ಇ-ಖಾತಾ ವಿತರಣೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯುತ್ತಿದ್ದು, ಇದೀಗ ಜನಸಾಮಾನ್ಯರಿಗೆ ಇನ್ನಷ್ಟು ಹತ್ತಿರವಾಗುವ ನಿಟ್ಟಿನಲ್ಲಿ ವಾಟ್ಸಾಪ್ ಮೂಲಕವೇ ದಾಖಲೆ ತಲುಪಿಸುತ್ತಿರುವುದು ಬೆಂಗಳೂರಿನ ಆಸ್ತಿ ಮಾಲೀಕರಿಗೆ ದೊಡ್ಡ ಮಟ್ಟದ ನಿರಾಳತೆ ತಂದಿದೆ.
 

Add Zee News as a Preferred Source
TAGS:
Govt Schemes
Kannada News
Krishna Byre Gowda