• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಶಾಲಾ - ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿ : ಕರವೇ ಆಗ್ರಹ

ಶಾಲಾ - ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿ : ಕರವೇ ಆಗ್ರಹ

ಕನ್ನಡ ಭಾಷೆ, ಕನ್ನಡಿಗರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಅವಮಾನ ಮಾಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿದೆ.

Written ByChetana Devarmani
Published: Oct 29, 2026, 10:17 PM IST|Updated: Oct 29, 2026, 10:18 PM IST
joinshare
ಶಾಲಾ - ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿ : ಕರವೇ ಆಗ್ರಹ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಸಹಕಾರಿ ಸಂಸ್ಥೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿ: ಸಿಎಂ ಡಿ ಕೆ ಶಿವಕುಮಾರ್

ಸಹಕಾರಿ ಸಂಸ್ಥೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿ: ಸಿಎಂ ಡಿ ಕೆ ಶಿವಕುಮಾರ್

2

ಹಣ ಉಳಿತಾಯ ಹಾಗೂ ನಿವೃತ್ತಿ ಯೋಜನೆಯ ಹೊಸ ದಾರಿ: ಕೇವಲ ರೂ. 1,000ಕ್ಕೆ ಭವಿಷ್ಯ ರೂಪಿಸಿ

3

ಶಾಲಾ - ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿ : ಕರವೇ ಆಗ್ರಹ

4

ಅಂದು ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದ ಈತ ಇಂದು ಬಿಗ್ ಬಾಸ್ ಕನ್ನಡ ಸೀಸನ್ 13 ರ ಸ್ಪರ್ಧಿ!

5

'ಬೆಳ್ಳಗಿರುವವರಿಗೆ ಮಾತ್ರ ಅವಕಾಶಗಳು ಸಿಗುತ್ತವೆ': ಸೌತ್‌ ಸಿನಿ ಇಂಡಸ್ಟ್ರಿ ಬಗ್ಗೆ ನಟಿ ರಾಧಿಕಾ ಆಪ್ಟೆ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಕಡ್ಡಾಯಗೊಳಿಸಬೇಕು ಹಾಗೂ ಕನ್ನಡ ಭಾಷಾ ಬೋಧನೆಗೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಆಗ್ರಹಿಸಿದೆ. ಕನ್ನಡ ಭಾಷೆ, ಕನ್ನಡಿಗರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಅವಮಾನ ಮಾಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ರಾಜ್ಯದಲ್ಲಿರುವ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಆಚರಿಸುವಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಕನ್ನಡ ಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಕನ್ನಡ ಭಾಷಾ ಬೋಧನೆಯನ್ನು ಕಡ್ಡಾಯಗೊಳಿಸಲು ಕಾನೂನು ಜಾರಿಗೆ ತರಬೇಕು ಎಂದು ಕರವೇ ಒತ್ತಾಯಿಸಿದೆ.

ಕನ್ನಡ ಮಾತನಾಡಿದರೆ ದಂಡ ವಿಧಿಸುವುದಕ್ಕೆ ವಿರೋಧ

ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಮಾತನಾಡಿದರೆ ದಂಡ ವಿಧಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಕರವೇ ಆಕ್ಷೇಪ ವ್ಯಕ್ತಪಡಿಸಿದೆ. ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ದಂಡ ವಿಧಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಕನ್ನಡ ನಾಡಿನಲ್ಲಿ ಕನ್ನಡ ಭಾಷೆಯನ್ನು ಮಾತನಾಡುವುದಕ್ಕೆ ನಿರ್ಬಂಧ ವಿಧಿಸುವುದು ಸರಿಯಲ್ಲ. ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸುವ ಬದಲು, ಭಾಷೆ ಮಾತನಾಡುವುದಕ್ಕೆ ದಂಡ ವಿಧಿಸುವ ಕ್ರಮಗಳು ಕಂಡುಬಂದರೆ ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬುದು ಸಂಘಟನೆಯ ನಿಲುವಾಗಿದೆ.

ಬಳೆ ಧರಿಸಿ, ಹೂ ಮುಡಿದರೆ ದಂಡವೇ?

ಶಾಲಾ-ಕಾಲೇಜುಗಳಲ್ಲಿ ಬಳೆ ಧರಿಸಿ, ಹೂ ಮುಡಿದು ಬರುವ ವಿದ್ಯಾರ್ಥಿನಿಯರಿಗೆ ದಂಡ ವಿಧಿಸುವುದಕ್ಕೂ ಕರವೇ ವಿರೋಧ ವ್ಯಕ್ತಪಡಿಸಿದೆ. ಕನ್ನಡಿಗರ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರತಿಬಿಂಬಿಸುವ ಆಚರಣೆಗಳಿಗೆ ಅವಮಾನವಾಗುವ ರೀತಿಯಲ್ಲಿ ಶಿಕ್ಷಣ ಸಂಸ್ಥೆಗಳು ನಡೆದುಕೊಳ್ಳಬಾರದು ಎಂದು ಸಂಘಟನೆ ಆಗ್ರಹಿಸಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಶಿಸ್ತನ್ನು ಕಾಪಾಡುವ ಜೊತೆಗೆ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೂ ಗೌರವ ನೀಡಬೇಕು. ಕನ್ನಡಿಗರ ಭಾಷೆ ಹಾಗೂ ಸಂಸ್ಕೃತಿಗೆ ಅವಮಾನ ಮಾಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕರವೇ ಒತ್ತಾಯಿಸಿದೆ.

‘ಕನ್ನಡ ಇಲ್ಲದೆ ಕರ್ನಾಟಕ ಇಲ್ಲ’

ಕನ್ನಡ ಭಾಷೆಯ ರಕ್ಷಣೆ ಮತ್ತು ಬೆಳವಣಿಗೆಗೆ ಸರ್ಕಾರ ಆದ್ಯತೆ ನೀಡಬೇಕು. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಕನ್ನಡ ಭಾಷಾ ಬೋಧನೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಕನ್ನಡ ರಾಜ್ಯೋತ್ಸವ ಆಚರಣೆಯನ್ನೂ ಕಡ್ಡಾಯಗೊಳಿಸಬೇಕು ಎಂದು ಕರವೇ ಆಗ್ರಹಿಸಿದೆ.

ಈ ಕುರಿತು ಮಾತನಾಡಿದ ಕರವೇ ಮುಖಂಡ ಪ್ರವೀಣ್ ಶೆಟ್ಟಿ, ಕನ್ನಡ ಭಾಷೆ ಮತ್ತು ಕನ್ನಡಿಗರ ಸಂಸ್ಕೃತಿಗೆ ಗೌರವ ನೀಡುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ.

‘ಕನ್ನಡ ಇಲ್ಲದೆ ಕರ್ನಾಟಕ ಇಲ್ಲ, ಕನ್ನಡ ಕಡ್ಡಾಯವಾಗಲಿ’ ಎಂಬ ಆಗ್ರಹದೊಂದಿಗೆ ಕನ್ನಡ ಭಾಷೆಯ ಬಳಕೆ, ಬೋಧನೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
 

Add Zee News as a Preferred Source
TAGS:
Kannada News