• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಅಂಗಡಿ ಮುಂದೆ ನಿಂತಿದ್ದವನ ಮೇಲೆ ಲಾಂಗು-ಮಚ್ಚು ಬೀಸಿ ಹಲ್ಲೆ..!

ಅಂಗಡಿ ಮುಂದೆ ನಿಂತಿದ್ದವನ ಮೇಲೆ ಲಾಂಗು-ಮಚ್ಚು ಬೀಸಿ ಹಲ್ಲೆ..!

ಜಯನಗರದಲ್ಲಿ ಲಾಂಗು-ಮಚ್ಚು ಬೀಸಿ ಅಟ್ಟಹಾಸ ಮೆರೆದಿದ್ದರು. ಸುಬ್ರಹ್ಮಣ್ಯಪುರದಲ್ಲೂ ಮಾರಕಾಸ್ತ್ರ ಜಳಪಿಸಿದ್ದಾರೆ. ಇದು ಪೊಲೀಸರಿಗೆ ಓಪನ್ ಚಾಲೆಂಜ್ ಮಾಡಿದಂತಿದೆ.

Reported ByChetana DevarmaniEdited ByChetana Devarmani
Published: Sep 21, 2026, 09:32 PM IST|Updated: Sep 21, 2026, 09:34 PM IST
joinshare
ಅಂಗಡಿ ಮುಂದೆ ನಿಂತಿದ್ದವನ ಮೇಲೆ ಲಾಂಗು-ಮಚ್ಚು ಬೀಸಿ ಹಲ್ಲೆ..!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಸಿಲಿಕಾನ್ ಸಿಟಿಯಲ್ಲಿ  ಮಾರಕಾಸ್ತ್ರಗಳಿಂದ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡೋದು ಕಾಮನ್ ಆಗಿಬಿಟ್ಟಿದೆ. ಇದರಿಂದ ಜನ ಆತಂಕದಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೊನ್ನೆ ಜಯನಗರದಲ್ಲಿ ಲಾಂಗು-ಮಚ್ಚು ಬೀಸಿ ಅಟ್ಟಹಾಸ ಮೆರೆದಿದ್ದರು.  ಸುಬ್ರಹ್ಮಣ್ಯಪುರದಲ್ಲೂ ಮಾರಕಾಸ್ತ್ರ ಜಳಪಿಸಿದ್ದಾರೆ. ಇದು ಪೊಲೀಸರಿಗೆ ಓಪನ್ ಚಾಲೆಂಜ್ ಮಾಡಿದಂತಿದೆ.

ಕೈಯಲ್ಲಿ ರಕ್ತಸ್ರಾವವಾಗುತ್ತಿದ್ದು, ಬಟ್ಟೆ ಸುತ್ತಿಕೊಂಡು ನರಳಾಡುತ್ತಿರುವ ಯುವಕ. ಆಸ್ಪತ್ರೆ ಮುಂದೆ ಜಮಾಯಿಸಿರುವ ಜನ. ಇದಕ್ಕೆ ಕಾರಣ ಏಕಾಏಕಿ ಬಂದ ಪುಂಡರ ಗ್ಯಾಂಗ್ ಸಿಕ್ಕ ಸಿಕ್ಕವರ ಮೇಲೆ ಲಾಂಗು-ಮಚ್ಚು ಬೀಸಿ ಅಟ್ಟಹಾಸ ಮೆರೆದಿದ್ದು. ಹೌದು, ಕೆಂಗೇರಿ ಮುಖ್ಯ ರಸ್ತೆಯ ಅರೆಹಳ್ಳಿ ಗೇಟ್ ಬಳಿ ಕಳೆದ ಒಂದು ವರ್ಷದಿಂದ ಬಾಲಸುಬ್ರಹ್ಮಣ್ಯಂ ಎಂಬುವವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ನಿನ್ನೆ ರಾತ್ರಿ ಸುಮಾರು ಎಂಟು ಗಂಟೆ ವೇಳೆಗೆ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರ ಗುಂಪು ಏಕಾಏಕಿ ಬೈಕ್‌ಗಳನ್ನು ನಿಲ್ಲಿಸಿ ಅಲ್ಲಿದ್ದವರ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆಸಿದೆ.ಇದನ್ನು ಕಂಡ ಜನ ದಿಕ್ಕಾಪಾಲಾಗಿ ಓಡಿಹೋಗಿದ್ದಾರೆ. ಘಟನೆಯಲ್ಲಿ ಅಂಗಡಿ ಮಾಲೀಕ ಬಾಲಸುಬ್ರಹ್ಮಣ್ಯಂ,ರವಿ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಇಲ್ಲಿ ಹಲ್ಲೆ ನಡೆಸುವುದಕ್ಕೂ ಮುನ್ನ ಸರ್ಕಲ್ ಮಾರಮ್ಮ ದೇವಾಲಯದ ಮುಂದೆ ನಿಂತಿದ್ದ ಕಿರಣ್ ಎಂಬ ಯುವಕನ ಮೇಲೂ ಇದೇ ಗುಂಪು ಹಲ್ಲೆ ಮಾಡಿದೆ ಎನ್ನಲಾಗಿದೆ. ಇಡೀ ಘಟನೆಯನ್ನು ಕಣ್ಣಾರೆ ಕಂಡ ಜನ ಹೆದರಿಕೊಂಡು ಸ್ಥಳದಿಂದ ಓಡಿಹೋಗಿದ್ದಾರೆ. ಸದ್ಯ ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಈಗಾಗಲೇ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಸುಬ್ರಹ್ಮಣ್ಯಪುರ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಇಂತಹ ಪುಂಡ ಪೋಕರಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕದಿದ್ದರೆ ಜನ ನೆಮ್ಮದಿಯಾಗಿ ಓಡಾಡುವುದಕ್ಕೂ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗೋದು ಸತ್ಯ.ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಬೇಕು ಅನ್ನೋದು ಸ್ಥಳೀಯರ ಆಗ್ರಹವಾಗಿದೆ.

Add Zee News as a Preferred Source
TAGS:
Crime