• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಮೇಕೆದಾಟು ಯೋಜನೆಗೆ ಕೇಂದ್ರದ ಮಧ್ಯಸ್ಥಿಕೆ ಕೋರಿದ ಡಿಕೆಶಿ! ತಮಿಳುನಾಡಿಗೆ ನಿಯೋಗ ಕಳುಹಿಸಲು ಮನವಿ

ಮೇಕೆದಾಟು ಯೋಜನೆಗೆ ಕೇಂದ್ರದ ಮಧ್ಯಸ್ಥಿಕೆ ಕೋರಿದ ಡಿಕೆಶಿ! ತಮಿಳುನಾಡಿಗೆ ನಿಯೋಗ ಕಳುಹಿಸಲು ಮನವಿ

ಮೇಕೆದಾಟು ಯೋಜನೆಗೆ ತ್ವರಿತ ಅನುಮೋದನೆ ನೀಡುವಂತೆ ಕೇಂದ್ರದ ಮಧ್ಯಸ್ಥಿಕೆ ಕೋರಿರುವ ಸಿಎಂ ಡಿ.ಕೆ.ಶಿವಕುಮಾರ್, ಯೋಜನಾ ಸ್ಥಳ ಪರಿಶೀಲನೆಗೆ ತಮಿಳುನಾಡು ನಿಯೋಗ ಕಳುಹಿಸಲು ಮನವಿ ಮಾಡಿದ್ದಾರೆ. ತಮಿಳುನಾಡು ಸಿಎಂ ಜೊತೆ ನೇರ ಚರ್ಚೆಗೂ ಆಹ್ವಾನ ನೀಡುವುದಾಗಿ ತಿಳಿಸಿದ್ದಾರೆ.

Written ByPuttaraj K Alur
Published: Sep 29, 2026, 10:38 AM IST|Updated: Sep 29, 2026, 11:00 AM IST
joinshare
ಮೇಕೆದಾಟು ಯೋಜನೆಗೆ ಕೇಂದ್ರದ ಮಧ್ಯಸ್ಥಿಕೆ ಕೋರಿದ ಡಿಕೆಶಿ! ತಮಿಳುನಾಡಿಗೆ ನಿಯೋಗ ಕಳುಹಿಸಲು ಮನವಿ
Image Credit: Mekedatu Project

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Mekedatu Project: ಕರ್ನಾಟಕದ ಮಹತ್ವದ ಜಲ ಯೋಜನೆಗಳ ಅನುಮೋದನೆ ಹಾಗೂ ಕೇಂದ್ರದ ನೆರವಿಗಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ಮಧ್ಯಸ್ಥಿಕೆ ಕೋರಿದ್ದಾರೆ. ಮೇಕೆದಾಟು ಯೋಜನೆಗೆ ತ್ವರಿತ ಅನುಮೋದನೆ ನೀಡಬೇಕು ಮತ್ತು ಯೋಜನಾ ಸ್ಥಳವನ್ನ ಪರಿಶೀಲಿಸಲು ತಮಿಳುನಾಡು ಸರ್ಕಾರ ನಿಯೋಗ ಕಳುಹಿಸಬೇಕೆಂದು ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಸೋಮವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನ ಭೇಟಿಯಾದ ಬಳಿಕ ಮಾತನಾಡಿದ ಅವರು, ಮೇಕೆದಾಟು ಯೋಜನೆಯ ನೀರನ್ನ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲಾಗುತ್ತದೆ ಎಂಬ ಕರ್ನಾಟಕದ ನಿಲುವನ್ನ ಕೇಂದ್ರ ಸರ್ಕಾರ ಅರ್ಥ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.

ಮೇಕೆದಾಟು ಸ್ಥಳ ಪರಿಶೀಲನೆಗೆ ತಮಿಳುನಾಡಿಗೆ ಆಹ್ವಾನ

ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸರ್ಕಾರ ನಿಯೋಗ ಕಳುಹಿಸಿ ಯೋಜನಾ ಸ್ಥಳವನ್ನ ಪರಿಶೀಲಿಸಲಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಿಯೋಗಕ್ಕೆ ಕರ್ನಾಟಕ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರೊಂದಿಗೆ ಮುಖಾಮುಖಿ ಚರ್ಚೆ ನಡೆಸಲು ಆಹ್ವಾನ ನೀಡುವುದಾಗಿಯೂ ತಿಳಿಸಿದ್ದಾರೆ. ₹16,745 ಕೋಟಿ ವೆಚ್ಚದ ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಗೆ ಕರ್ನಾಟಕ ಸರ್ಕಾರ ಹೊಸ ವಿವರವಾದ ಯೋಜನಾ ವರದಿ (DPR) ಸಲ್ಲಿಸಿದೆ.

ಈ ವರದಿಯ ಪರಿಶೀಲನೆ ಹಾಗೂ ಅಗತ್ಯ ಅನುಮೋದನೆಗಳನ್ನ ತ್ವರಿತಗೊಳಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಆಗಸ್ಟ್ 13ರಂದು ಸಲ್ಲಿಸಿರುವ ಅನುಸರಣೆ ವರದಿಯೊಂದಿಗೆ ಮೇಕೆದಾಟು ಡಿಪಿಆರ್ ಪರಿಶೀಲನೆಗೆ ಆದ್ಯತೆ ನೀಡುವಂತೆ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸಿ.ಆರ್.ಪಾಟೀಲ್ ಅವರಿಗೆ ಸಲ್ಲಿಸಿದ ಪತ್ರದಲ್ಲಿ ಡಿ.ಕೆ.ಶಿವಕುಮಾರ್ ಕೋರಿದ್ದಾರೆ.

ಕೃಷ್ಣಾ ಜಲ ವಿವಾದದಲ್ಲೂ ಕೇಂದ್ರದ ನೆರವಿಗೆ ಮನವಿ

 

Called on Hon’ble Union Minister for Jal Shakti Shri @CRPaatil avaru in New Delhi today, along with Shri T.B. Jayachandra, Special Representative, Government of Karnataka, at New Delhi, and senior officials, and discussed key water resource matters that are vital to Karnataka’s… pic.twitter.com/WIGT0gfqTf

— DK Shivakumar (@DKShivakumar) September 28, 2026

 ಕೃಷ್ಣಾ ಜಲ ವಿವಾದಗಳ ನ್ಯಾಯಮಂಡಳಿ-2ಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವ ವಿಚಾರದಲ್ಲಿಯೂ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಕರ್ನಾಟಕ ಮನವಿ ಮಾಡಿದೆ. ಮೇಲ್ದಂಡೆ ಕೃಷ್ಣಾ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನ ಬಗೆಹರಿಸಲು ನೆರೆಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸುವಂತೆಯೂ ಡಿ.ಕೆ.ಶಿವಕುಮಾರ್ ಕೋರಿದ್ದಾರೆ. ಜಲ ವಿವಾದಗಳ ಪರಿಹಾರ ಮತ್ತು ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಾದ ಸಮನ್ವಯಕ್ಕೆ ಕೇಂದ್ರದ ನೆರವು ಪಡೆಯಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ.

 

ಭದ್ರಾ ಮೇಲ್ದಂಡೆ ಯೋಜನೆಗೆ ₹21,167 ಕೋಟಿ ನೆರವಿನ ಬೇಡಿಕೆ

ಭದ್ರಾ ಮೇಲ್ದಂಡೆ ಯೋಜನೆಗೂ ಕೇಂದ್ರ ಸರ್ಕಾರದ ನೆರವು ನೀಡುವಂತೆ ಮನವಿ ಮಾಡಲಾಗಿದೆ. ₹21,167.93 ಕೋಟಿ ವೆಚ್ಚದ ಈ ಯೋಜನೆಯನ್ನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ ಸೇರಿಸಬೇಕೆಂದು ರಾಜ್ಯ ಸರ್ಕಾರ ಕೋರಿದೆ. 2023-24ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿದ್ದ ನೆರವನ್ನ ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಬೇಕೆಂಬ ಬೇಡಿಕೆಯನ್ನೂ ಮುಂದಿಡಲಾಗಿದೆ. ಇದರಿಂದ ಯೋಜನೆಯ ಅನುಷ್ಠಾನಕ್ಕೆ ಅಗತ್ಯವಾದ ಹಣಕಾಸಿನ ನೆರವು ದೊರೆಯಲಿದೆ ಎಂಬ ನಿರೀಕ್ಷೆಯಿದೆ. ಇದೇ ವೇಳೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಪ್ರವಾಹ ನಿರ್ವಹಣೆ ಹಾಗೂ ಗಡಿ ಪ್ರದೇಶಗಳ ಕಾರ್ಯಕ್ರಮ (FMBAP) ಅಡಿಯಲ್ಲಿ ಕರ್ನಾಟಕ ಸಲ್ಲಿಸಿರುವ ಪ್ರಸ್ತಾವನೆಗಳನ್ನ ತ್ವರಿತವಾಗಿ ಪರಿಶೀಲಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ.

ಮಹಾದಾಯಿ, ನದಿ ಜೋಡಣೆ ಯೋಜನೆಗಳ ಪ್ರಸ್ತಾಪ

ಮಹಾದಾಯಿ ಜಲ ವಿವಾದದ ಕುರಿತು ಕರ್ನಾಟಕ ಮತ್ತು ಗೋವಾ ಮುಖ್ಯಮಂತ್ರಿಗಳ ಜಂಟಿ ಸಭೆ ನಡೆಸುವುದಾಗಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಭರವಸೆ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಗೋದಾವರಿ-ಕಾವೇರಿ ಮತ್ತು ಬೆಡ್ತಿ-ವರದಾ (ಹಿರೇವದತ್ತಿ) ನದಿ ಜೋಡಣೆ ಯೋಜನೆಗಳಲ್ಲಿ ಕರ್ನಾಟಕಕ್ಕೆ ನ್ಯಾಯಸಮ್ಮತ ನೀರಿನ ಹಂಚಿಕೆ ಖಚಿತಪಡಿಸಬೇಕೆಂದು ಕೇಂದ್ರವನ್ನ ಕೋರಲಾಗಿದೆ. ರಾಜ್ಯದ ವಿವಿಧ ಜಲ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನ ಪರಿಹರಿಸಲು ಕೇಂದ್ರದ ಸಹಕಾರ ಅಗತ್ಯವಿದೆ ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.

ಸರ್ವಪಕ್ಷ ನಿಯೋಗ ದೆಹಲಿಗೆ

ಕಸ್ತೂರಿರಂಗನ್ ವರದಿ, ಬರ ಮತ್ತು ಜಲ ಸಮಸ್ಯೆಗಳ ಕುರಿತು ಚರ್ಚಿಸಲು ಸರ್ವಪಕ್ಷ ನಿಯೋಗವನ್ನ ದೆಹಲಿಗೆ ಕರೆದೊಯ್ಯುವುದಾಗಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ನಿಯೋಗದಲ್ಲಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಕೂಡ ಭಾಗವಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ರಾಜ್ಯದ ಪ್ರಮುಖ ಜಲ ಸಮಸ್ಯೆಗಳು ಮತ್ತು ಯೋಜನೆಗಳ ವಿಚಾರದಲ್ಲಿ ಎಲ್ಲಾ ಪಕ್ಷಗಳು ಒಟ್ಟಾಗಿ ಕೇಂದ್ರದ ಗಮನ ಸೆಳೆಯಬೇಕು ಎಂಬುದು ಅವರ ನಿಲುವಾಗಿದೆ. ಒಟ್ನಲ್ಲಿ ಮೇಕೆದಾಟು ಯೋಜನೆಯ ತ್ವರಿತ ಅನುಮೋದನೆಯಿಂದ ಹಿಡಿದು ಭದ್ರಾ ಮೇಲ್ದಂಡೆ, ಮಹಾದಾಯಿ ಮತ್ತು ನದಿ ಜೋಡಣೆ ಯೋಜನೆಗಳವರೆಗೆ ಕರ್ನಾಟಕದ ವಿವಿಧ ಜಲ ಯೋಜನೆಗಳಿಗೆ ಕೇಂದ್ರದ ನೆರವು ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ.

Add Zee News as a Preferred Source
TAGS:
Karnataka Politics
Kannada News