• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ವಂದೇ ಭಾರತ್ ರೈಲಿನ ಊಟದಲ್ಲಿ ಕಬ್ಬಿಣದ ಬೋಲ್ಟ್ ಪತ್ತೆ! ಪ್ರಯಾಣಿಕನಿಗೆ ಶಾಕ್‌!

ವಂದೇ ಭಾರತ್ ರೈಲಿನ ಊಟದಲ್ಲಿ ಕಬ್ಬಿಣದ ಬೋಲ್ಟ್ ಪತ್ತೆ! ಪ್ರಯಾಣಿಕನಿಗೆ ಶಾಕ್‌!

ಬೆಂಗಳೂರು–ಬೆಳಗಾವಿ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ ವಡೆಯೊಳಗೆ ಕಬ್ಬಿಣದ ಬೋಲ್ಟ್ ಪತ್ತೆಯಾಗಿದೆ. ಈ ಘಟನೆಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಗೆ ವಿಷಾದ ವ್ಯಕ್ತಪಡಿಸಿರುವ IRCTC, ಸಂಬಂಧಪಟ್ಟ ಆಹಾರ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಅಡುಗೆಮನೆ ಹಾಗೂ ಉಪಕರಣಗಳ ಪರಿಶೀಲನೆಗೆ ಸೂಚಿಸಿದೆ.

Written ByPuttaraj K Alur
Published: Nov 29, 2026, 08:53 IST|Updated: Nov 29, 2026, 08:55 IST
joinshare
ವಂದೇ ಭಾರತ್ ರೈಲಿನ ಊಟದಲ್ಲಿ ಕಬ್ಬಿಣದ ಬೋಲ್ಟ್ ಪತ್ತೆ! ಪ್ರಯಾಣಿಕನಿಗೆ ಶಾಕ್‌!
Image Credit: Vande Bharat

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ!  ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ! ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

2

ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬಹುದು? ಪ್ಲಾಟ್‌ಫಾರಂ ಡೋರ್ ಹೊರತುಪಡಿಸಿ ಇರುವ ಪರ್ಯಾಯಗಳೇನು?

3

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ತೇಜಸ್ವಿ ಸೂರ್ಯ ಆಗ್ರಹ!

4

ವಿಜಯ್ ಸೇತುಪತಿ ಕಾಲರ್ ಹಿಡಿದ ರಾಜ್ ಬಿ ಶೆಟ್ಟಿ

5

ಇಂದಿನಿಂದ ನಂದಿನಿ ಮೊಸರು ದರ ಇಳಿಕೆ; ಹೊಸ ಬೆಲೆ ಎಷ್ಟು ಗೊತ್ತಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Vande Bharat Express: ದೇಶದ ಪ್ರೀಮಿಯಂ ರೈಲು ಸೇವೆಗಳಲ್ಲಿ ಒಂದಾಗಿರುವ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕರಿಗೆ ನೀಡಿದ ಆಹಾರದಲ್ಲಿ ಕಬ್ಬಿಣದ ಬೋಲ್ಟ್ ಪತ್ತೆಯಾಗಿರುವ ಘಟನೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು-ಬೆಳಗಾವಿ ನಡುವೆ ಸಂಚರಿಸುವ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ನೀಡಿದ ವಡೆಯೊಳಗೆ ದೊಡ್ಡ ಗಾತ್ರದ ಲೋಹದ ಬೋಲ್ಟ್ ಸಿಕ್ಕಿದೆ. ಈ ಘಟನೆ ರೈಲ್ವೆ ಪ್ರಯಾಣಿಕರಿಗೆ ನೀಡಲಾಗುವ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯ ಬಗ್ಗೆ ಹಲವು ಪ್ರಶ್ನೆಗಳನ್ನ ಹುಟ್ಟುಹಾಕಿದೆ. ಘಟನೆಗೆ ಸಂಬಂಧಿಸಿದಂತೆ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಕೂಡ ಪ್ರತಿಕ್ರಿಯಿಸಿದ್ದು, ಸಂಬಂಧಪಟ್ಟ ಆಹಾರ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.

ವಡೆಯೊಳಗೆ ಸಿಕ್ಕಿತು ಕಬ್ಬಿಣದ ಬೋಲ್ಟ್!

ಬೆಂಗಳೂರು-ಬೆಳಗಾವಿ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ನವೆಂಬರ್ 27ರಂದು ಈ ಘಟನೆ ನಡೆದಿದೆ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಮರ್ಥ್ ಕೊಡ್ಯಾಲ್ (Samarth Kodial) ಎಂಬ ಪ್ರಯಾಣಿಕರಿಗೆ ಕಾಫಿಯೊಂದಿಗೆ ವಡೆಯನ್ನ ನೀಡಲಾಗಿತ್ತು. ಆಹಾರ ಸೇವಿಸುವ ಸಂದರ್ಭದಲ್ಲಿ ವಡೆಯೊಳಗೆ ದೊಡ್ಡ ಗಾತ್ರದ ಲೋಹದ ಬೋಲ್ಟ್ ಇರುವುದು ಅವರ ಗಮನಕ್ಕೆ ಬಂದಿದೆ.

ಇದರಿಂದ ಅಚ್ಚರಿಗೊಂಡ ಪ್ರಯಾಣಿಕರು ತಕ್ಷಣವೇ ಆಹಾರದ ಫೋಟೋ ಹಾಗೂ ವಿಡಿಯೋವನ್ನ ಸೆರೆಹಿಡಿದಿದ್ದಾರೆ. ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (X) ಈ ಚಿತ್ರಗಳನ್ನ ಹಂಚಿಕೊಂಡು ರೈಲ್ವೆ ಇಲಾಖೆಯ ಗಮನ ಸೆಳೆದಿದ್ದಾರೆ. ವಂದೇ ಭಾರತ್‌ನಂತಹ ಪ್ರಮುಖ ರೈಲು ಸೇವೆಯಲ್ಲಿ ಪ್ರಯಾಣಿಕರಿಗೆ ನೀಡುವ ಆಹಾರದಲ್ಲಿ ಇಂತಹ ವಸ್ತು ಪತ್ತೆಯಾಗಿರುವುದು ಆಹಾರದ ಗುಣಮಟ್ಟದ ಮೇಲಿನ ಗಂಭೀರ ಲೋಪ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಭಾರತೀಯ ರೈಲ್ವೆ ಇಲಾಖೆ, ರೈಲ್ವೆ ಸಚಿವಾಲಯ ಹಾಗೂ ಐಆರ್‌ಸಿಟಿಸಿ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಫೋಟೋ

ಪ್ರಯಾಣಿಕರು ಹಂಚಿಕೊಂಡ ಬೋಲ್ಟ್ ಇರುವ ವಡೆಯ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರೆ, ಇನ್ನು ಕೆಲವರು ರೈಲ್ವೆ ಆಹಾರ ಪೂರೈಕೆಯ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನ ಎತ್ತಿದ್ದಾರೆ. ಆಹಾರದಲ್ಲಿ ಇಂತಹ ಲೋಹದ ವಸ್ತು ಪತ್ತೆಯಾಗಿರುವುದು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದಲೂ ಆತಂಕಕಾರಿ ವಿಚಾರವಾಗಿದೆ. ಅಚಾತುರ್ಯದಿಂದ ಯಾರಾದರೂ ಅದನ್ನ ಸೇವಿಸಿದ್ದರೆ ಉಸಿರುಗಟ್ಟುವಿಕೆ ಅಥವಾ ಗಾಯಗಳಂತಹ ಅಪಾಯ ಎದುರಾಗಬಹುದಿತ್ತು ಎಂಬ ಆತಂಕವನ್ನೂ ಸಾಮಾಜಿಕ ಜಾಲತಾಣದ ಬಳಕೆದಾರರು ವ್ಯಕ್ತಪಡಿಸಿದ್ದಾರೆ.

IRCTCಯಿಂದ ತಕ್ಷಣ ಪ್ರತಿಕ್ರಿಯೆ, ಪೂರೈಕೆದಾರರ ವಿರುದ್ಧ ಕ್ರಮ

 

A large bolt found in Vada in the Vande Bharath meal while travelling from Bengaluru to Belagavi today. This is a huge lapse in food quality. Please look into this matter @RailMinIndia @RailwaySeva @RailMadad @IRCTCofficial @railcomplaint #IndianRailways #VandeBharat https://t.co/VQxoUhtXIv

— samarth kodial (@SamKodial) November 27, 2026

 ಈ ಘಟನೆಗೆ ಸಂಬಂಧಿಸಿದಂತೆ ಪ್ರಯಾಣಿಕರ ದೂರಿಗೆ ಐಆರ್‌ಸಿಟಿಸಿ ಪ್ರತಿಕ್ರಿಯೆ ನೀಡಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ಸಂಸ್ಥೆ, ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದೆ. ಅಲ್ಲದೆ, ಆಹಾರ ಪೂರೈಕೆಯ ಜವಾಬ್ದಾರಿ ಹೊಂದಿದ್ದ ಸಂಬಂಧಪಟ್ಟ ಸೇವಾ ಸಂಸ್ಥೆಯ ವಿರುದ್ಧ ಕಠಿಣ ದಂಡನಾತ್ಮಕ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಪ್ರಯಾಣಿಕರ ದೂರಿಗೆ ಸಂಸ್ಥೆ ಸ್ಪಂದಿಸಿದ್ದು, ಆಹಾರ ಪೂರೈಕೆಯಲ್ಲಿನ ಲೋಪವನ್ನ ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದೆ.

 

ಅಡುಗೆ ಘಟಕದ ಪರಿಶೀಲನೆಗೆ ಸೂಚನೆ

ಇಂತಹ ಘಟನೆಗಳು ಮರುಕಳಿಸದಂತೆ ಐಆರ್‌ಸಿಟಿಸಿ ಕೆಲವು ಪ್ರಮುಖ ಸೂಚನೆಗಳನ್ನ ನೀಡಿದೆ. ಸಂಬಂಧಪಟ್ಟ ಅಡುಗೆ ಘಟಕದ ಸಿಬ್ಬಂದಿಗೆ ನಿಗದಿತ ಕಾರ್ಯಾಚರಣಾ ನಿಯಮಾವಳಿಗಳನ್ನ (Standard Operating Procedures – SOPs) ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳು ಅಡುಗೆ ಘಟಕವನ್ನ ಸಂಪೂರ್ಣವಾಗಿ ಪರಿಶೀಲಿಸಬೇಕೆಂದು ನಿರ್ದೇಶನ ನೀಡಲಾಗಿದೆ. ಆಹಾರ ತಯಾರಿಸುವ ಮೊದಲು ಅಡುಗೆಗೆ ಬಳಸುವ ಎಲ್ಲ ಉಪಕರಣಗಳು ಸರಿಯಾಗಿವೆಯೇ ಎಂಬುದನ್ನ ಖಚಿತಪಡಿಸಿಕೊಳ್ಳಬೇಕು. ಆಹಾರ ತಯಾರಿಕೆಯ ಸಂದರ್ಭದಲ್ಲಿ ಯಾವುದೇ ಅನಗತ್ಯ ವಸ್ತುಗಳು ಆಹಾರದಲ್ಲಿ ಸೇರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಸೂಚಿಸಲಾಗಿದೆ. ಈ ಪರಿಶೀಲನೆಗಳ ಮೂಲಕ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲು ಐಆರ್‌ಸಿಟಿಸಿ ಮುಂದಾಗಿದೆ.

ರೈಲ್ವೆ ಆಹಾರದ ಗುಣಮಟ್ಟದ ಬಗ್ಗೆ ಮತ್ತೆ ಚರ್ಚೆ

ವಂದೇ ಭಾರತ್ ರೈಲು ತನ್ನ ವೇಗ ಹಾಗೂ ಪ್ರಯಾಣಿಕರಿಗೆ ಒದಗಿಸುವ ಸೌಲಭ್ಯಗಳಿಂದ ಗಮನ ಸೆಳೆದಿದೆ. ಇಂತಹ ರೈಲುಗಳಲ್ಲಿ ಪ್ರಯಾಣದ ವೇಳೆ ನೀಡುವ ಆಹಾರದ ಗುಣಮಟ್ಟವೂ ಪ್ರಯಾಣಿಕರಿಗೆ ಮುಖ್ಯವಾಗಿರುತ್ತದೆ. ಆದರೆ ವಡೆಯೊಳಗೆ ಲೋಹದ ಬೋಲ್ಟ್ ಪತ್ತೆಯಾಗಿರುವ ಘಟನೆ ಆಹಾರ ಪೂರೈಕೆ ವ್ಯವಸ್ಥೆಯ ಪರಿಶೀಲನೆ ಮತ್ತು ಗುಣಮಟ್ಟ ನಿಯಂತ್ರಣದ ಬಗ್ಗೆ ಚರ್ಚೆಗೆ ಕಾರಣವಾಗಿದೆ. 

ಒಟ್ನಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿನಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಐಆರ್‌ಸಿಟಿಸಿ ಈಗಾಗಲೇ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ. ಅಡುಗೆ ಘಟಕದ ಪರಿಶೀಲನೆ, ಉಪಕರಣಗಳ ತಪಾಸಣೆ ಹಾಗೂ ಆಹಾರ ತಯಾರಿಕೆಯ ನಿಯಮಗಳ ಪಾಲನೆಗೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಆಹಾರ ಪೂರೈಕೆ ವ್ಯವಸ್ಥೆಯಲ್ಲಿ ಯಾವ ರೀತಿಯ ಕ್ರಮಗಳನ್ನ ಅನುಸರಿಸಲಾಗುತ್ತದೆ ಎಂಬುದು ಗಮನಾರ್ಹವಾಗಿದೆ.

Add Zee News as a Preferred Source
TAGS:
Kannada News