• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ರಾತ್ರೋರಾತ್ರಿ ಸಿಟಿ ರೌಂಡ್ಸ್: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್‌ ಕ್ಲಾಸ್

ರಾತ್ರೋರಾತ್ರಿ ಸಿಟಿ ರೌಂಡ್ಸ್: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್‌ ಕ್ಲಾಸ್

Krishna Byre Gowda City Rounds: ಬೆಂಗಳೂರು ನಗರದಲ್ಲಿ ರಾತ್ರೋರಾತ್ರಿ ಸಿಟಿ ರೌಂಡ್ಸ್ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು ನಗರದ ಪರಿಸ್ಥಿತಿ ಹಾಗೂ ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು.

Reported ByChetana DevarmaniEdited ByChetana Devarmani
Published: Sep 19, 2026, 07:10 AM IST|Updated: Sep 19, 2026, 07:13 AM IST
joinshare
ರಾತ್ರೋರಾತ್ರಿ ಸಿಟಿ ರೌಂಡ್ಸ್: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್‌ ಕ್ಲಾಸ್

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

2

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

3

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

4

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

5

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಬೆಂಗಳೂರಿನ ರಸ್ತೆ, ಫುಟ್‌ಪಾತ್, ವಿದ್ಯುತ್ ದೀಪ ಹಾಗೂ ಚರಂಡಿ ವ್ಯವಸ್ಥೆಗಳ ಸಮಸ್ಯೆಗಳಿಗೆ ಅಧಿಕಾರಿಗಳಿಗೆ ಹಲವು ಬಾರಿ ಸೂಚನೆ ನೀಡಿದ್ದರೂ ಬದಲಾವಣೆ ಕಂಡುಬಾರದ ಹಿನ್ನೆಲೆಯಲ್ಲಿ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ತಡರಾತ್ರಿ ದಿಢೀರ್ ನೈಟ್ ರೌಂಡ್ಸ್ ನಡೆಸಿದರು. ರಾತ್ರಿ ಆರಂಭವಾದ ಪರಿಶೀಲನೆ ಸುಮಾರು 3 ಗಂಟೆಯವರೆಗೂ ಮುಂದುವರಿಯಿತು.

ಅಧಿಕಾರಿಗಳ ತಂಡದೊಂದಿಗೆ ಸಾರಕ್ಕಿ ಸಿಗ್ನಲ್, ಬನ್ನೇರುಘಟ್ಟ ಮುಖ್ಯ ರಸ್ತೆ ಹಾಗೂ ಮಲ್ಲೇಶ್ವರಂ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿದ ಸಚಿವರು, ರಸ್ತೆ, ಪಾದಚಾರಿ ಮಾರ್ಗ, ವಿದ್ಯುತ್ ದೀಪ ಮತ್ತು ಚರಂಡಿ ವ್ಯವಸ್ಥೆಯನ್ನು ಪರಿಶೀಲಿಸಿದರು. ರಸ್ತೆ ಗುಂಡಿಗಳು, ಕಾರ್ಯನಿರ್ವಹಿಸದ ವಿದ್ಯುತ್ ದೀಪಗಳು ಹಾಗೂ ಅವ್ಯವಸ್ಥೆಯಲ್ಲಿರುವ ಫುಟ್‌ಪಾತ್‌ಗಳನ್ನು ಕಂಡು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳಿಗೆ ಹಲವು ಬಾರಿ ಸೂಚನೆ ನೀಡಿದ್ದರೂ ಸಮಸ್ಯೆಗಳು ಬದಲಾಗಿಲ್ಲ ಎಂದು ಕೃಷ್ಣ ಬೈರೇಗೌಡ ಹೇಳಿದರು. “ಅಧಿಕಾರಿಗಳಿಗೆ ಹಲವು ಬಾರಿ ಹೇಳಿದ್ದೇನೆ. ಆದರೂ ಸಮಸ್ಯೆಗಳು ಬದಲಾಗಿಲ್ಲ. ಅದಕ್ಕಾಗಿ ಇಂದು ಅಧಿಕಾರಿಗಳನ್ನು ಜೊತೆಯಲ್ಲಿ ಕರೆದುಕೊಂಡು ಬಂದು ಸಮಸ್ಯೆಗಳನ್ನು ತೋರಿಸುತ್ತಿದ್ದೇನೆ. ಈಗಲಾದರೂ ಸಮಸ್ಯೆಗಳಿಗೆ ಮುಕ್ತಿ ಕೊಡಿ ಎಂದು ಹೇಳುತ್ತಿದ್ದೇನೆ” ಎಂದರು. ಬೆಂಗಳೂರು ನಗರಕ್ಕೆ ಅತ್ಯಾಧುನಿಕ ಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗದಿದ್ದರೂ, ಕನಿಷ್ಠ ಮೂಲಭೂತ ಸೌಲಭ್ಯಗಳನ್ನಾದರೂ ಸಮರ್ಪಕವಾಗಿ ನೀಡಬೇಕು ಎಂದು ಸಚಿವರು ಹೇಳಿದರು.

“ನಾವು ಜನರಿಗೆ ಅತ್ಯಾಧುನಿಕ ಸೌಕರ್ಯ ಕೊಡಲು ಆಗದಿದ್ದರೂ, ಕನಿಷ್ಠಪಕ್ಷ ಒಳ್ಳೆಯ ರಸ್ತೆ, ಫುಟ್‌ಪಾತ್, ರಸ್ತೆ ಬದಿ ವಿದ್ಯುತ್ ದೀಪದ ವ್ಯವಸ್ಥೆ ಹಾಗೂ ಚರಂಡಿ ವ್ಯವಸ್ಥೆಯನ್ನಾದರೂ ಕೊಡಬೇಕು” ಎಂದು ತಿಳಿಸಿದರು. ತಮ್ಮ ಸೂಚನೆಗಳನ್ನು ಕೆಲವು ಅಧಿಕಾರಿಗಳು ಪಾಲಿಸುತ್ತಿಲ್ಲ ಎಂಬ ಅಸಮಾಧಾನವನ್ನೂ ಸಚಿವರು ವ್ಯಕ್ತಪಡಿಸಿದರು. “ನಾನು ಹೇಳುತ್ತಿರುವುದನ್ನು ಕೆಲ ಅಧಿಕಾರಿಗಳು ಮಾಡುತ್ತಿಲ್ಲ. ಕೆಲವರಿಗೆ ಕಠಿಣ ಮಾತುಗಳಲ್ಲಿ ಹೇಳಿದ್ದೇನೆ. ಮತ್ತೆ ಕೆಲವರನ್ನು ಅಮಾನತು ಮಾಡಿದ್ದೇನೆ” ಎಂದು ಹೇಳಿದರು.

ಜನರ ಕಣ್ಣಿಗೆ ಕಾಣುವ ಸಮಸ್ಯೆಗಳನ್ನು ಕೂಡ ಅಧಿಕಾರಿಗಳು ಪರಿಹರಿಸದಿರುವುದಕ್ಕೆ ಪ್ರಶ್ನಿಸಿದ ಅವರು, ಆಯಾ ಪ್ರದೇಶಗಳ ಸಹಾಯಕ ಎಂಜಿನಿಯರ್‌ಗಳು ತಮ್ಮ ವ್ಯಾಪ್ತಿಯ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಸೂಚಿಸಿದರು. ನೈಟ್ ರೌಂಡ್ಸ್ ವೇಳೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಸಮಸ್ಯೆಗಳನ್ನು ನೇರವಾಗಿ ತೋರಿಸಿದ ಸಚಿವರು, ಕಚೇರಿಯಲ್ಲಿ ಚರ್ಚಿಸುವುದಕ್ಕಿಂತ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದರು.

ತಡರಾತ್ರಿಯವರೆಗೂ ನಡೆದ ಪರಿಶೀಲನೆಯಲ್ಲಿ ವಿವಿಧ ಮೂಲಸೌಕರ್ಯ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು, ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ಕೃಷ್ಣ ಬೈರೇಗೌಡ ಅವರ ಈ ದಿಢೀರ್ ನೈಟ್ ರೌಂಡ್ಸ್ ಇದೀಗ ಬೆಂಗಳೂರಿನ ಆಡಳಿತ ವಲಯದಲ್ಲಿ ಗಮನ ಸೆಳೆದಿದೆ.

Add Zee News as a Preferred Source
TAGS:
Kannada News
Karnataka Politics