• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ದಸರಾ ಉದ್ಘಾಟನೆಗೆ ಸರ್ಕಾರ ಆಹ್ವಾನ ತಿರಸ್ಕಾರಿಸಿದ್ರಾ ಗವಿಸಿದ್ದೇಶ್ವರ ಸ್ವಾಮೀಜಿಗಳು.. ಸಚಿವರು ಕೊಟ್ಟ ಸ್ಪಷ್ಟನೆ

ದಸರಾ ಉದ್ಘಾಟನೆಗೆ ಸರ್ಕಾರ ಆಹ್ವಾನ ತಿರಸ್ಕಾರಿಸಿದ್ರಾ ಗವಿಸಿದ್ದೇಶ್ವರ ಸ್ವಾಮೀಜಿಗಳು.. ಸಚಿವರು ಕೊಟ್ಟ ಸ್ಪಷ್ಟನೆ

ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳು ಮೈಸೂರು ದಸರಾ ಉದ್ಘಾಟನೆಗೆ ಒಪ್ಪಿಗೆ ಸೂಚಿಲ್ಲ ಎಂದು ಎಲ್ಲೆಡೆ ವಂದತಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ.

Written ByBhimappa
Published: Sep 27, 2026, 12:28 PM IST|Updated: Sep 27, 2026, 12:37 PM IST
joinshare
ದಸರಾ ಉದ್ಘಾಟನೆಗೆ ಸರ್ಕಾರ ಆಹ್ವಾನ ತಿರಸ್ಕಾರಿಸಿದ್ರಾ ಗವಿಸಿದ್ದೇಶ್ವರ ಸ್ವಾಮೀಜಿಗಳು.. ಸಚಿವರು ಕೊಟ್ಟ ಸ್ಪಷ್ಟನೆ
Image Credit: gavisiddeshwara_swamiji

About the Author

Bhimappa

Bhimappa

ಭೀಮಪ್ಪ (Bhimappa) ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Mysore Dasara, Abhinava Gavisiddeshwara Swamiji: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳು ಉದ್ಘಾಟಿಸುವುದು ನಿಶ್ಚಿತ. ಇದರಲ್ಲಿ ಯಾವುದೇ ಅನುಮಾನ ಅಥವಾ ಗೊಂದಲಕ್ಕೆ ಅವಕಾಶವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು ಸ್ಪಷ್ಟನೆ ನೀಡಿದ್ದಾರೆ. ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳು ದಸರಾ ಉದ್ಘಾಟನೆಗೆ ಒಪ್ಪಿಲ್ಲ ಎನ್ನುವುದು ಸುಳ್ಳು. ಯಾರೋ ವದಂತಿ ಹಬ್ಬಿಸಿದ್ದಾರೆ. ಸರ್ಕಾರದ ಆಹ್ವಾನವನ್ನು ತಿರಸ್ಕಾರ ಮಾಡಿದ್ದಾರೆ ಎಂಬುದು ಸುಳ್ಳು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂಪೂರ್ಣ ಸುಳ್ಳು ಮತ್ತು ಆಧಾರ ರಹಿತ ಮಾಹಿತಿ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅಧಿಕೃತ ಘೋಷಣೆಯ ನಂತರವೂ ಶ್ರೀಗಳು ಆಹ್ವಾನ ತಿರಸ್ಕರಿಸಿದ್ದಾರೆ ಎಂಬುದು ವದಂತ ಅಷ್ಟೇ. ಇದು ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ. ಸರ್ಕಾರವು ಈಗಾಗಲೇ ಗವಿಮಠದೊಂದಿಗೆ ಸಂಪರ್ಕ ಸಾಧಿಸಿದೆ. ಸೆಪ್ಟೆಂಬರ್‌ 28 ರಂದು ಖುದ್ದು ಗವಿಮಠಕ್ಕೆ ಭೇಟಿ ನೀಡುತ್ತೇನೆ‌ ಎಂದು ಸಚಿವ ಶಿವರಾಜ್‌ ತಂಗಡಗಿ ಅವರು ಹೇಳಿದ್ದಾರೆ. ಶ್ರೀಗಳನ್ನು ಅಧಿಕೃತವಾಗಿ ಆಹ್ವಾನಿಸಲು ದಿನಾಂಕ ನಿಗದಿಯಾಗಿದೆ. ಹೀಗಾಗಿ, ಶ್ರೀಗಳ ಒಪ್ಪಿಗೆ ಇಲ್ಲ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾಡಹಬ್ಬ ಮೈಸೂರು ದಸರಾ ಕುರಿತು ಸುಳ್ಳು ಹಾಗೂ ಆಧಾರ ರಹಿತ ಮಾಹಿತಿ ಹರಡಿ ಜನರಲ್ಲಿ ಗೊಂದಲ ಸೃಷ್ಟಿಸುವವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು ಸ್ಪಷ್ಟನೆ ನೀಡಿದ್ದಾರೆ.

ಅಭಿನವ ಗವಿಸಿದ್ದೇಶ್ವರ ಶ್ರೀಗಳಿಂದ ಮೈಸೂರು ದಸರಾ ಉದ್ಘಾಟನೆ ಮಾಡಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು ಬರುತ್ತಾರೆ. ಸೆಪ್ಟೆಂಬರ್ 28 ರಂದು ಆಹ್ವಾನ ಮಾಡಲಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಮತ್ತು ಕೊಪ್ಪಳ ಜಿಲ್ಲಾಡಳಿತದವರು ಅಕ್ಟೋಬರ್ 3 ರಂದು ವೈಯಕ್ತಿಕವಾಗಿ ಆಹ್ವಾನಿಸಲಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅಭಿನವ ಗವಿಸಿದ್ದೇಶ್ವರ ಶ್ರೀಗಳ ಜೊತೆ ಕುಳಿತು ಮಾತುಕತೆ ನಡೆಸಿದ ನಂತರವೇ ಈ ಬಾರಿಯ ಮೈಸೂರು ದಸರಾವನ್ನು ಶ್ರೀಗಳು ಉದ್ಘಾಟನೆ ಮಾಡಲಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಸೆಪ್ಟೆಂಬರ್‌ 24 ರಂದು ಮುಖ್ಯಮಂತ್ರಿಗಳೇ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಮೈಸೂರು ದಸರಾ ಉದ್ಘಾಟನೆ ಕುರಿತು ಇಷ್ಟೊಂದು ಬೆಳವಣಿಗೆಗಳು ನಡೆದರೂ ಶ್ರೀಗಳು ಆಹ್ವಾನ ತಿರಸ್ಕಾರ ಮಾಡಿದ್ದಾರೆ ಎಂದು ವದಂತಿ ಹರಿಬಿಡಲಾಗುತ್ತಿದೆ.

ಉದ್ದೇಶ ಪೂರ್ವಕವಾಗಿ ಹರಡುತ್ತಿರುವುದು ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆ ಆಗುವುದಿಲ್ಲ. ಇದು ಸಾರ್ವಜನಿಕರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಆಗಿದೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ಗವಿಮಠದೊಂದಿಗೆ ಈಗಾಗಲೇ ಸರ್ಕಾರವು ಸಂಪರ್ಕ ಸಾಧಿಸಿದ್ದು ಸೆಪ್ಟೆಂಬರ್‌ 28 ರಂದು ಶ್ರೀಗಳನ್ನು ಅಧಿಕೃತವಾಗಿ ಆಹ್ವಾನ ಮಾಡುವ ಕಾರ್ಯಕ್ರಮ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ಸುಗಮವಾಗಿ ನಡೆಯಲಿದೆ. ಇದರಲ್ಲಿ ಗವಿಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳ ಒಪ್ಪಿಗೆ ನೀಡಿಲ್ಲ ಎನ್ನುವುದು ಮಾತೇ ಬರುವುದಿಲ್ಲ. ಶ್ರೀಗಳ ಮನಸು ಇದ್ದಾಗೆ ದಸರಾ ವಿಜೃಂಭಣೆಯಿಂದ ನಡೆಯುತ್ತದೆ.  

ಇನ್ನು ಇದೇ ವೇಳೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು ನಾಡಹಬ್ಬ ಮೈಸೂರು ದಸರಾ ಕುರಿತು ಸುಳ್ಳು ಹಾಗೂ ಆಧಾರ ರಹಿತವಾದ ಮಾಹಿತಿ ಹರಡುವುದು, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವವವರ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ವಾರ್ನಿಂಗ್‌ ನೀಡಿದ್ದಾರೆ. ಯಾವುದೇ ಅಧಿಕೃತ ಮಾಹಿತಿಗಾಗಿ ಸರ್ಕಾರದ ಅಧಿಕೃತವಾದ ಪ್ರಕಟಣೆಗಳನ್ನು ಪರಿಗಣಿಸಿದರೆ ಸಾಕು ಎಂದು ಮನವಿ ಮಾಡಲಾಗಿದೆ. 

Add Zee News as a Preferred Source
TAGS:
Kannada News