• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ; ಮನ್ಮುಲ್ ಪ್ರಭಾವಿ ಆರೋಪಿ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಬಂಧನ.!

ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ; ಮನ್ಮುಲ್ ಪ್ರಭಾವಿ ಆರೋಪಿ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಬಂಧನ.!

ಒಂದೆಡೆ 100 ಕೋಟಿ ಅವ್ಯವಹಾರದ ಆರೋಪ ಕೇಳಿ ಬರ್ತಿದ್ರೆ, ಮತ್ತೊಂದೆಡೆ ನೂರು ಕೋಟಿಯಲ್ಲ 3 ಕೋಟಿ ಅನ್ನೋ ಎಂದು ಮನ್ಮುಲ್ ಆಡಳಿತ ಮಂಡಳಿ ಹೇಳ್ತಿದ್ರೆ ಇತ್ತ ಪ್ರಕರಣವನ್ನು ಸಿಬಿಐ ಅಥವಾ ಇಡಿ ತನಿಖೆಗೆ ವಹಿಸುವಂತೆ ದೋಸ್ತಿ ನಾಯಕರು ಆಗ್ರಹಿಸ್ತಿದ್ದಾರೆ. ಆದ್ರೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ.

Written ByChetana Devarmani
Published: Oct 05, 2026, 03:27 PM IST|Updated: Oct 05, 2026, 03:29 PM IST
joinshare
ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ; ಮನ್ಮುಲ್ ಪ್ರಭಾವಿ ಆರೋಪಿ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಬಂಧನ.!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ರಾಜ್ಯದಲ್ಲಿ ಹೆಚ್ಚಿದ ಬಿಯರ್ ಬೇಡಿಕೆ : ಸರ್ಕಾರಕ್ಕೆ ಹರಿದುಬಂತು ₹1,463 ಕೋಟಿ ಆದಾಯ!

ರಾಜ್ಯದಲ್ಲಿ ಹೆಚ್ಚಿದ ಬಿಯರ್ ಬೇಡಿಕೆ : ಸರ್ಕಾರಕ್ಕೆ ಹರಿದುಬಂತು ₹1,463 ಕೋಟಿ ಆದಾಯ!

2

ಪೈಲಟ್‌ಗಳಿಗೆ ಎಷ್ಟು ಸಂಬಳ ಸಿಗುತ್ತದೆ??

3

KSET 2026 : ಹಾಲ್ ಟಿಕೆಟ್‌ ಡೌನ್‌ಲೋಡ್, ಪರೀಕ್ಷೆಯ ದಿನಾಂಕ, ಸಮಯ, ದಾಖಲೆಗಳ ಪಟ್ಟಿ ಇಲ್ಲಿದೆ

4

ನನ್ನ ಬಳಿ ಯಾವುದೇ ಬೇನಾಮಿ ಆಸ್ತಿ ಇಲ್ಲ.. ದಯವಿಟ್ಟು ಸುಳ್ಳು ಹೇಳುವುದನ್ನು ನಿಲ್ಲಿಸಿ ಎಂದ ಸ್ಟಾರ್‌ ನಟಿ

5

ಸರ್ಕಾರ ಯಾವುದೇ ಜನಪರ ಯೋಜನೆಗಳನ್ನು ನಿಲ್ಲಿಸದೆ ಜನರ ಪರವಾಗಿ ಕಾರ್ಯನಿರ್ವಹಿಸುತ್ತಿದೆ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮಂಡ್ಯ ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಷ್ಟು ದಿನ ಪ್ರಭಾವಿ ಆರೋಪಿ ಮನ್ಮಲ್ ನ ಮಾಜಿ ಅಧ್ಯಕ್ಷನ ವಿಚಾರಣೆ ನಡೆಸುತ್ತಿದ್ದ ಪೊಲೀಸರು ಆರೋಪ ಸಾಭಿತಾದ ಹಿನ್ನೆಲೆ ಇದೀಗ ಬಂಧಿಸಿದ್ದಾರೆ. ಮಂಡ್ಯದಲ್ಲಿ ಸದ್ದು ಮಾಡ್ತಿರೋ ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ತಿದೆ. ಒಂದೆಡೆ 100 ಕೋಟಿ ಅವ್ಯವಹಾರದ ಆರೋಪ ಕೇಳಿ ಬರ್ತಿದ್ರೆ, ಮತ್ತೊಂದೆಡೆ ನೂರು ಕೋಟಿಯಲ್ಲ 3 ಕೋಟಿ ಅನ್ನೋ ಎಂದು ಮನ್ಮುಲ್ ಆಡಳಿತ ಮಂಡಳಿ ಹೇಳ್ತಿದ್ರೆ ಇತ್ತ ಪ್ರಕರಣವನ್ನು ಸಿಬಿಐ ಅಥವಾ ಇಡಿ ತನಿಖೆಗೆ ವಹಿಸುವಂತೆ ದೋಸ್ತಿ  ನಾಯಕರು ಆಗ್ರಹಿಸ್ತಿದ್ದಾರೆ. ಆದ್ರೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ.

ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರ ಬಂಧನವಾಗಿದೆ. ಇಷ್ಟು ದಿನ ಮಾಜಿ ಅಧ್ಯಕ್ಷ ಯು.ಸಿ. ಶಿವಕುಮಾರ್ @ ಉಮ್ಮಡಹಳ್ಳಿ ಶಿವಪ್ಪ ಅವರ ವಿಚಾರಣೆಯೂ ನಡೆಯುತ್ತಿತ್ತು. ಬಂಧಿತ ಅಧಿಕಾರಿಗಳ ಹೇಳಿಕೆ ಆಧರಿಸಿ ಮದ್ದೂರು ಪೊಲೀಸರು ವಿಚಾರಣೆ ನಡೆಸುತ್ತಿದ್ರು. ಪ್ರಕರಣದ ವಿಚಾರಣೆ ವೇಳೆ ಶಿವಕುಮಾರ್ ಪಾತ್ರ ಸಾಬೀತಾಗಿದೆ. ಇದೀಗ ಪ್ರಬಲ ಆರೋಪಿ ಶಿವಪ್ಪನನ್ನು ಮದ್ದೂರು ಪೊಲೀಸರು ಬಂಧಿಸಿದ್ದಾರೆ.

ಇನ್ನು ಆರೋಪಿ ಪ್ರಭಾವಿ ಆಗಿದ್ದ  ಕಾರಣಕ್ಕೆ ಬಂಧಿಸದೆ ನೋಟೀಸ್ ನೀಡಿ ವಿಚಾರಣೆ ಮಾಡ್ತಿದ್ದಾರೆ‌‌. ಅನ್ನೋ ರಾಜಕೀಯ ವಲಯದಲ್ಲೂ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ನೆನ್ನೆ ಮದ್ದೂರು ಠಾಣೆಯಲ್ಲಿ ಪ್ರಮುಖ ಆರೋಪಿ ಜಾಧವ್ ಎದುರು ಶಿವಕುಮಾರ್ ಮುಖಾಮುಖಿ ಕೂರಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಠಾಣೆಯಲ್ಲೇ ಮಾತಿನ ಚಕಮಕಿ ನಡೆದಿದೆ. ಪ್ರಕರಣದಲ್ಲಿ ವಿಚಾರಣೆ ವೇಳೆ  ಶಿವಕುಮಾರ್ ಪಾತ್ರ ಸಾಬೀತಾಗಿ ಬಂಧನ ಮಾಡಿದ್ದಾರೆ. ಮಾಜಿ ಅಧ್ಯಕ್ಷ ಶಿವಕುಮಾರ್ ನನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.

ಇನ್ನು ಇತ್ತೀಚೆಗೆ ಮನ್ಮುಲ್ ನಿರ್ದೇಶಕರಿಬ್ಬರ ಜೊತೆ ಪ್ರಮುಖ ಆರೋಪಿ ಜಾಧವ್ ಮಾತನಾಡಿರೋ ಆಡಿಯೋ ವೈರಲ್ ಆಗಿತ್ತು. ಈ ವೈರಲ್ ಆಡಿಯೋದಲ್ಲಿ ಮಾಜಿ ಅಧ್ಯಕ್ಷನ ಕೈವಾಡ ಉಲ್ಲೇಖವಾಗಿತ್ತು. ಈ ಆಡಿಯೋದಿಂದ ಇದೀಗ ಪೊಲೀಸರಿಂದ ಮಾಜಿ ಅಧ್ಯಕ್ಷ  ಶಿವಪ್ಪ ಬಂಧನವಾಗಿದೆ. ಮನ್ಮುಲ್ ನಲ್ಲಿ ಒಂದಲ್ಲ ಒಂದು ಪ್ರಕರಣ ಬಯಲಿಗೆ ಬರುತ್ತಾ ಇದೆ.ಮಾಜಿ ಅಧ್ಯಕ್ಷನ ಬಂಧನ ಎಲ್ಲರ ಅಚ್ಚರಿ ಮೂಡಿಸಿದ್ದು, ಮನ್ಮುಲ್ ಪ್ರಕರಣದ ಸಂಪೂರ್ಣ ಸತ್ಯ ಏನು ? ಯಾರು ತಪ್ಪಿತಸ್ಥರು? ಇನ್ನೂ ಯಾರ ಕೈವಾಡ ಇದೆ  ಎಂಬುದಕ್ಕೆ ಪೊಲೀಸರ ತನಿಖೆಯೇ ಉತ್ತರ ನೀಡಬೇಕಿದೆ.
 

Add Zee News as a Preferred Source
TAGS:
Kannada News