• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಬೆಂಗಳೂರಿನ 100ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಇಂದು ವಿದ್ಯುತ್‌ ವ್ಯತ್ಯಯ : ಬೆಳಗ್ಗೆಯಿಂದ ಸಂಜೆವರೆಗೂ ಇರಲ್ಲ ಕರೆಂಟ್‌

ಬೆಂಗಳೂರಿನ 100ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಇಂದು ವಿದ್ಯುತ್‌ ವ್ಯತ್ಯಯ : ಬೆಳಗ್ಗೆಯಿಂದ ಸಂಜೆವರೆಗೂ ಇರಲ್ಲ ಕರೆಂಟ್‌

ಕೆಪಿಟಿಸಿಎಲ್ (KPTCL) ಹಾಗೂ ಬೆಸ್ಕಾಂ (BESCOM) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು (ನ.26) ಬೆಂಗಳೂರಿನ 100ಕ್ಕೂ ಹೆಚ್ಚು ಪ್ರಮುಖ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

Written ByYashaswini V
Published: Nov 26, 2026, 10:46 IST|Updated: Nov 26, 2026, 10:50 IST
joinshare
ಬೆಂಗಳೂರಿನ 100ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಇಂದು ವಿದ್ಯುತ್‌ ವ್ಯತ್ಯಯ : ಬೆಳಗ್ಗೆಯಿಂದ ಸಂಜೆವರೆಗೂ ಇರಲ್ಲ ಕರೆಂಟ್‌

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಬೆಂಗಳೂರಿನ 100ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಇಂದು ವಿದ್ಯುತ್‌ ವ್ಯತ್ಯಯ : ಬೆಳಗ್ಗೆಯಿಂದ ಸಂಜೆವರೆಗೂ ಇರಲ್ಲ ಕರೆಂಟ್‌

ಬೆಂಗಳೂರಿನ 100ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಇಂದು ವಿದ್ಯುತ್‌ ವ್ಯತ್ಯಯ : ಬೆಳಗ್ಗೆಯಿಂದ ಸಂಜೆವರೆಗೂ ಇರಲ್ಲ ಕರೆಂಟ್‌

2

ನವೆಂಬರ್ 27ರಿಂದ ಸತತ 3 ದಿನ ಬ್ಯಾಂಕ್ ಬಂದ್‌.. ಹಣಕಾಸಿನ ಕೆಲಸವಿದ್ರೆ ಇಂದೇ ಮುಗಿಸಿಕೊಳ್ಳಿ!

3

ದಿನ ಭವಿಷ್ಯ 26-11-2026: ಗುರುವಾರದಂದು ಮೃಗಶಿರಾ ನಕ್ಷತ್ರದಲ್ಲಿ ಸಿದ್ಧ ಯೋಗ.. ಈ ರಾಶಿಯವರಿಗೆ ಕಂಕಣ ಭಾಗ್ಯ

4

ಬೆಂಗಳೂರು, ಕರಾವಳಿ ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಮುನ್ಸೂಚನೆ

5

ಆಂಧ್ರದಲ್ಲಿ ಪಂಚಾಯತ್ ಚುನಾವಣೆ ಕಾವು.. ಬೆಳಗ್ಗೆಯಿಂದಲೇ ಮತದಾನ ಬಿರುಸು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆರಡು ಗಂಟೆ ವಿದ್ಯುತ್ ಇಲ್ಲ ಅಂದರೆ ಜನಜೀವನ ಅಸ್ತವ್ಯಸ್ತವಾಗುತ್ತದೆ. ಅದರಲ್ಲೂ ವರ್ಕ್ ಫ್ರಮ್ ಹೋಮ್ ಮಾಡುವವರಿಗೆ ಮತ್ತು ವ್ಯಾಪಾರಸ್ಥರಿಗೆ ಕರೆಂಟ್ ಇಲ್ಲದೆ ಕೆಲಸ ಮಾಡುವುದು ಕಷ್ಟಸಾಧ್ಯ. ಆದರೆ, ಇಂದು (ನವೆಂಬರ್ 26, ಗುರುವಾರ) ಬೆಂಗಳೂರಿನ 100ಕ್ಕೂ ಹೆಚ್ಚು ಪ್ರಮುಖ ಏರಿಯಾಗಳಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಹಾಗೂ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ವತಿಯಿಂದ ನಗರದ ವಿವಿಧ ವಿದ್ಯುತ್ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ (Maintenance Work) ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಪವರ್ ಕಟ್ ಮಾಡಲಾಗುತ್ತಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಯಾವ ಸಮಯದಲ್ಲಿ, ಯಾವೆಲ್ಲಾ ಏರಿಯಾಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂಬ ಸಂಪೂರ್ಣ ವಿವರ ಇಲ್ಲಿದೆ ನೋಡಿ:
1. ರಾಜಾಜಿನಗರ - ವಿಜಯನಗರ - ಮಲ್ಲೇಶ್ವರಂ ವಿಭಾಗ (ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ):
ಈ ಭಾಗದ ಪ್ರಮುಖ ಬಡಾವಣೆಗಳಲ್ಲಿ ಇಡೀ ದಿನ ವಿದ್ಯುತ್ ವ್ಯತ್ಯಯವಾಗಲಿದೆ. ರಾಜಾಜಿನಗರದ 1 ರಿಂದ 6ನೇ ಬ್ಲಾಕ್, ಮಂಜುನಾಥನಗರ, ಶಿವನಗರ, ಅಗ್ರಹಾರ ದಾಸರಹಳ್ಳಿ, ಪ್ರಕಾಶನಗರ, ಗಾಯತ್ರಿನಗರ, ಸುಬ್ರಮಣ್ಯನಗರ, ಎಲ್.ಎನ್. ಪುರ, ಡಾ. ರಾಜ್‌ಕುಮಾರ್ ರಸ್ತೆ, ಪ್ಯಾಲೇಸ್ ಗುಟ್ಟಹಳ್ಳಿ, ಮಲ್ಲೇಶ್ವರ, ವೆಸ್ಟ್ ಆಫ್ ಕಾರ್ಡ್ ರಸ್ತೆ, ವಿಜಯನಗರ, ಹಂಪಿನಗರ, ಹೊಸಹಳ್ಳಿ, ಬಿನ್ನಿಪೇಟೆ, ಗೋಪಾಲಪುರ, ಗೋರಿಪಾಳ್ಯ, ಭುವನೇಶ್ವರಿ ನಗರ, ಆರ್. ಬ್ಲಾಕ್, ನಿರ್ಮಾಣ್ ಭವನ್, ಕೆಆರ್‌ಡಿಸಿಎಲ್, ಜೆಟ್‌ಲಾಗ್, ನಾರಾಯಣ ನೇತ್ರಾಲಯ, ಇಸ್ಕಾನ್ ದೇವಸ್ಥಾನ, ದೇವಯ್ಯ ಪಾರ್ಕ್ ಹಾಗೂ ಕೆಎಚ್‌ಬಿ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ.

2. ಮತ್ತಿಕೆರೆ - ಯಶವಂತಪುರ ವಿಭಾಗ (ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ):
ಉತ್ತರ ಬೆಂಗಳೂರಿನ ಪ್ರಮುಖ ವಾಣಿಜ್ಯ ಮತ್ತು ವಸತಿ ಪ್ರದೇಶಗಳಾದ ಮತ್ತಿಕೆರೆ, ಲೊಟ್ಟೆಗೊಲ್ಲಹಳ್ಳಿ, ಮುನಿಹನುಮಯ್ಯ ಕಾಲೋನಿ, ಎಚ್‌ಎಂಟಿ ಲೇಔಟ್, ಗೋಕುಲ 1ನೇ ಹಂತ, ಜೆಪಿ ಪಾರ್ಕ್, ಬೃಂದಾವನ ನಗರ, ಎಸ್‌ಬಿಎಂ ಕಾಲೋನಿ, ಟ್ಯಾಂಕ್‌ಬಂಡ್ ರಸ್ತೆ ಹಾಗೂ ಯಶವಂತಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

3. ಸಹಕಾರನಗರ - ಜಕ್ಕೂರು ವಿಭಾಗ (ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ):
ಸಹಕಾರನಗರ, ಅಮೃತಹಳ್ಳಿ, ತಲಕಾವೇರಿ ಲೇಔಟ್, ಬಳ್ಳಾರಿ ಮುಖ್ಯರಸ್ತೆ, ಜಕ್ಕೂರು, ಜಕ್ಕೂರು ಲೇಔಟ್, ಜಿಕೆವಿಕೆ ಲೇಔಟ್, ಸಂಪಿಗೆಹಳ್ಳಿ, ಅಗ್ರಹಾರ, ಕೋಗಿಲು ಲೇಔಟ್ ಹಾಗೂ ಅರ್ಕಾವತಿ ಲೇಔಟ್ ಸೇರಿದಂತೆ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

4. ಜಯನಗರ - ಬನ್ನೇರುಘಟ್ಟ ರಸ್ತೆ ವಿಭಾಗ (ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ):
ದಕ್ಷಿಣ ಬೆಂಗಳೂರಿನ ಹಲವು ಪ್ರತಿಷ್ಠಿತ ಬಡಾವಣೆಗಳು ಮತ್ತು ಪ್ರಮುಖ ಆಸ್ಪತ್ರೆಗಳ ಸುತ್ತಮುತ್ತ ಇಂದು ಪವರ್ ಕಟ್ ಇರಲಿದೆ. ನಿಮ್ಹಾನ್ಸ್, ಕಿದ್ವಾಯಿ, ಜಯದೇವ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶಗಳು, ಜಯನಗರದ ವಿವಿಧ ಬ್ಲಾಕ್‌ಗಳು, ವಿಲ್ಸನ್ ಗಾರ್ಡನ್, ಆರ್.ವಿ. ರಸ್ತೆ, ಬಿಳೇಕಹಳ್ಳಿ, ಬನ್ನೇರುಘಟ್ಟ ಮುಖ್ಯ ರಸ್ತೆ, ಬಿಟಿಎಂ ಲೇಔಟ್, ಗುರಪ್ಪನಪಾಳ್ಯ, ತಿಲಕ್‌ನಗರ, ಬಿಸ್ಮಿಲ್ಲಾ ನಗರ, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರಿಗೆ ಸೂಚನೆ:
ತುರ್ತು ನಿರ್ವಹಣಾ ಕಾಮಗಾರಿಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪೂರ್ಣಗೊಂಡಲ್ಲಿ ವಿದ್ಯುತ್ ಪೂರೈಕೆಯನ್ನು ಬೇಗನೆ ಪುನರಾರಂಭಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ. ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಾಗಿ ತಮ್ಮ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಇನ್ವರ್ಟರ್‌ಗಳನ್ನು ಮುಂಚಿತವಾಗಿಯೇ ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ. ವಿದ್ಯುತ್ ಸಂಬಂಧಿತ ಯಾವುದೇ ದೂರುಗಳಿದ್ದರೆ ಬೆಸ್ಕಾಂ ಸಹಾಯವಾಣಿ 1912 ಗೆ ಕರೆ ಮಾಡಬಹುದಾಗಿದೆ.
 

Add Zee News as a Preferred Source
TAGS:
Civic Issues
Kannada News