• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌.. ನ.13ಕ್ಕೆ ಪಿಂಕ್‌ ಲೈನ್‌ ಮಾರ್ಗ ಉದ್ಘಾಟನೆ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌.. ನ.13ಕ್ಕೆ ಪಿಂಕ್‌ ಲೈನ್‌ ಮಾರ್ಗ ಉದ್ಘಾಟನೆ

Pink Line metro inaugurated on November 13: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ ನ.13ಕ್ಕೆ ಪಿಂಕ್‌ ಲೈನ್‌ ಮಾರ್ಗ ಉದ್ಘಾಟನೆ ಆಗಲಿದೆ.

Written ByRamya. R. Gowda
Published: Nov 02, 2026, 06:44 PM IST|Updated: Nov 02, 2026, 06:48 PM IST
joinshare
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌..  ನ.13ಕ್ಕೆ ಪಿಂಕ್‌ ಲೈನ್‌ ಮಾರ್ಗ ಉದ್ಘಾಟನೆ

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

Trending

  • News
  • Photos
  • Videos
ವಿಭಿನ್ನ ವಿನ್ಯಾಸ, ಸ್ಟೈಲಿಶ್ ಲುಕ್‌! ಕೇವಲ ₹14,999ಕ್ಕೆ CMF Phone 1 ಸ್ಮಾರ್ಟ್‌ಫೋನ್

ವಿಭಿನ್ನ ವಿನ್ಯಾಸ, ಸ್ಟೈಲಿಶ್ ಲುಕ್‌! ಕೇವಲ ₹14,999ಕ್ಕೆ CMF Phone 1 ಸ್ಮಾರ್ಟ್‌ಫೋನ್

2

₹5 ಲಕ್ಷದಿಂದಲೇ CNG ಕಾರು ಖರೀದಿಸಿ! 34 KMವರೆಗೆ ಮೈಲೇಜ್ ನೀಡುವ ಟಾಪ್ ಕಾರುಗಳಿವು

3

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌.. ನ.13ಕ್ಕೆ ಪಿಂಕ್‌ ಲೈನ್‌ ಮಾರ್ಗ ಉದ್ಘಾಟನೆ

4

Arecanut Prices Today: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ದರ ಎಷ್ಟಿದೆ?

5

ಸೆನ್ಸಾರ್​ ಮಂಡಳಿಯಿಂದ ಹೊಸ ರೂಲ್ಸ್‌ : ಫಿಲ್ಮ್ ರಿಲೀಸ್‌ ಡೇಟ್‌ ನೆಪಕ್ಕೆ ಇನ್ಮುಂದೆ ವಿನಾಯಿತಿ ಇಲ್ಲ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್‌ ಲೈನ್‌ನ ಮೊದಲ ಹಂತ ನವೆಂಬರ್‌ 13ರ ರಂದು ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 7.5 ಕಿ.ಮೀ. ಎಲಿವೇಟೆಡ್ ಮಾರ್ಗಕ್ಕೆ ಸುರಕ್ಷತಾ ಅನುಮತಿ ದೊರೆತಿದೆ. ಈ ಮಾರ್ಗದಲ್ಲಿ ಆರು ನಿಲ್ದಾಣಗಳಿದ್ದು,  ಸಂಪೂರ್ಣ 21.26 ಕಿ.ಮೀ. ಪಿಂಕ್ ಲೈನ್ ಮಾರ್ಗವನ್ನು 2027ರ ಮಾರ್ಚ್ ವೇಳೆಗೆ ಕಾರ್ಯಾರಂಭಗೊಳಿಸುವ ಗುರಿ ಹೊಂದಲಾಗಿದೆ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಹುದಿನಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗದ ಮೊದಲ ಹಂತದ ಸಂಚಾರ ಆರಂಭಕ್ಕೆ ದಿನಾಂಕ ನಿಗದಿಯಾಗುವ ಸುಳಿವು ದೊರೆತಿದೆ. ನವೆಂಬರ್ 13ರಂದು ಪಿಂಕ್ ಲೈನ್‌ನ ಮೊದಲ ಹಂತ ಪ್ರಯಾಣಿಕರ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಯಿದೆ. ಈ ಕುರಿತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಇದರಿಂದ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆಯಿಂದ ಬಳಲುತ್ತಿರುವ ಪ್ರಯಾಣಿಕರಿಗೆ ಕೊಂಚ ನೆಮ್ಮದಿ ಸಿಗುವ ನಿರೀಕ್ಷೆಯಿದೆ.

ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ ಪಿಂಕ್ ಲೈನ್ ಒಟ್ಟು 21.26 ಕಿ.ಮೀ. ಉದ್ದವನ್ನು ಹೊಂದಿದೆ. ಈ ಮಾರ್ಗದಲ್ಲಿ 7.5 ಕಿ.ಮೀ. ಎಲಿವೇಟೆಡ್ ಮಾರ್ಗವಾಗಿದ್ದರೆ, 13.76 ಕಿಲೋಮೀಟರ್ ಭೂಗತ ಸುರಂಗ ಮಾರ್ಗವಾಗಿದೆ. ಸಂಪೂರ್ಣ ಯೋಜನೆಯಲ್ಲಿ ಒಟ್ಟು 18 ಮೆಟ್ರೋ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ. ನಗರದ ದಕ್ಷಿಣ ಭಾಗವನ್ನು ಉತ್ತರ ಭಾಗದೊಂದಿಗೆ ಸಂಪರ್ಕಿಸುವ ಮಹತ್ವದ ಯೋಜನೆ ಇದಾಗಿದೆ.

ಸದ್ಯ ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆ ಕೆರೆವರೆಗಿನ 7.5 ಕಿಲೋ ಮೀಟರ್ ಎಲಿವೇಟೆಡ್ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಈ ವಿಭಾಗದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಇತ್ತೀಚೆಗೆ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರಿಂದ ಸುರಕ್ಷತಾ ಪ್ರಮಾಣ ಪತ್ರ ಕೂಡ ದೊರೆತಿದೆ. ಹೀಗಾಗಿ ಈ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭಿಸಲು ಅಗತ್ಯವಿರುವ ಪ್ರಮುಖ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡಿವೆ.

ಉದ್ಘಾಟನೆಗೆ ಸಿದ್ಧವಾಗಿರುವ ಮೊದಲ ಹಂತದಲ್ಲಿ ಒಟ್ಟು ಆರು ನಿಲ್ದಾಣಗಳಿವೆ. ಕಾಳೇನ ಅಗ್ರಹಾರ, ಹುಳಿಮಾವು, ಐಐಎಂಬಿ, ಜೆ.ಪಿ. ನಗರ 4ನೇ ಹಂತ, ಜಯದೇವ ಆಸ್ಪತ್ರೆ ಮತ್ತು ತಾವರೆಕೆರೆ ನಿಲ್ದಾಣಗಳು ಈ ಮಾರ್ಗದಲ್ಲಿ ಬರಲಿವೆ. ಈ ನಿಲ್ದಾಣಗಳ ಮೂಲಕ ಪ್ರತಿದಿನ ಸಾವಿರಾರು ಪ್ರಯಾಣಿಕರಿಗೆ ಸುಲಭವಾಗಿ ಸಂಚರಿಸಲು ಅನುಕೂಲವಾಗಲಿದೆ.

ವಿಶೇಷವಾಗಿ ಬನ್ನೇರುಘಟ್ಟ ರಸ್ತೆ, ಹುಳಿಮಾವು, ಐಐಎಂಬಿ, ಜೆಪಿ ನಗರ ಹಾಗೂ ಜಯದೇವ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ. ಕಚೇರಿ ಸಮಯದಲ್ಲಿ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕುವ ಪರಿಸ್ಥಿತಿ ಎದುರಾಗುತ್ತದೆ. ಇದೀಗ ಪಿಂಕ್ ಲೈನ್‌ನ ಮೊದಲ ಹಂತ ಕಾರ್ಯಾರಂಭ ಮಾಡಿದರೆ ಈ ಭಾಗದ ಪ್ರಯಾಣಿಕರು ಖಾಸಗಿ ವಾಹನಗಳ ಬದಲಿಗೆ ಮೆಟ್ರೋ ಬಳಸಲು ಅನುಕೂಲವಾಗಲಿದೆ. ಇದರಿಂದ ರಸ್ತೆ ಮೇಲಿನ ವಾಹನಗಳ ದಟ್ಟಣೆಯೂ ಕಡಿಮೆಯಾಗುವ ಸಾಧ್ಯತೆ ಇದೆ.

ಇನ್ನು ಸಂಪೂರ್ಣ ಪಿಂಕ್ ಲೈನ್ ಯೋಜನೆಯ ಕಾಮಗಾರಿ ಹಂತ ಹಂತವಾಗಿ ಪೂರ್ಣಗೊಳ್ಳುತ್ತಿದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ 21.25 ಕಿಲೋ ಮೀಟರ್ ಮಾರ್ಗದಲ್ಲಿ 7.5 ಕಿಲೋಮೀಟರ್ ಎಲಿವೇಟೆಡ್ ಹಾಗೂ 13.76 ಕಿಲೋಮೀಟರ್ ಭೂಗತ ಮಾರ್ಗ ಇರಲಿದೆ. ಒಟ್ಟು 18 ನಿಲ್ದಾಣಗಳು ಈ ಮಾರ್ಗದ ಭಾಗವಾಗಿವೆ.

ಆದರೆ ಭೂಗತ ಮಾರ್ಗದ ಕಾಮಗಾರಿ ಹಾಗೂ ತಾಂತ್ರಿಕ ವ್ಯವಸ್ಥೆಗಳ ಅಂತಿಮ ಹಂತದ ಕೆಲಸಗಳು ಇನ್ನೂ ಮುಂದುವರಿದಿವೆ. ಸುರಂಗ ಮಾರ್ಗದ ಕಾಮಗಾರಿ, ಸಿಗ್ನಲಿಂಗ್ ವ್ಯವಸ್ಥೆ, ಸುರಕ್ಷತಾ ಪರಿಶೀಲನೆ ಸೇರಿದಂತೆ ಹಲವು ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿದೆ. ಈ ಎಲ್ಲಾ ಕೆಲಸಗಳನ್ನು ಮುಗಿಸಿ 2027ರ ಮಾರ್ಚ್ ವೇಳೆಗೆ ಸಂಪೂರ್ಣ ಪಿಂಕ್ ಲೈನ್‌ನಲ್ಲಿ ಮೆಟ್ರೋ ರೈಲು ಸಂಚಾರ ಆರಂಭಿಸುವ ಗುರಿಯನ್ನು ಹೊಂದಲಾಗಿದೆ.

ಸದ್ಯ ಮೊದಲ ಹಂತದ ಉದ್ಘಾಟನೆಗೆ ಸಂಬಂಧಿಸಿದಂತೆ ಬಿಎಂಆರ್‌ಸಿಎಲ್ ಮತ್ತು ರಾಜ್ಯ ಸರ್ಕಾರದಿಂದ ಅಧಿಕೃತ ವೇಳಾಪಟ್ಟಿ ಹಾಗೂ ಕಾರ್ಯಕ್ರಮದ ವಿವರಗಳು ಪ್ರಕಟವಾಗಬೇಕಿದೆ. ನವೆಂಬರ್ 13ರ ಸಂಚಾರ ಆರಂಭದ ಕುರಿತು ಪ್ರಯಾಣಿಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಒಟ್ಟಿನಲ್ಲಿ ಪಿಂಕ್ ಲೈನ್ ಕಾರ್ಯಾರಂಭಗೊಂಡರೆ ಬೆಂಗಳೂರಿನ ಮೆಟ್ರೋ ಸಂಪರ್ಕ ವ್ಯವಸ್ಥೆಗೆ ಮತ್ತಷ್ಟು ಬಲ ಸಿಗಲಿದ್ದು, ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

Add Zee News as a Preferred Source
TAGS:
Kannada News