• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /‘ರಾಹುಲ್ ಗಾಂಧಿ ಒರಿಜಿನಲ್ ಬ್ರೀಡ್ ಅಲ್ಲ’; ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ತೀವ್ರ ವಾಗ್ದಾಳಿ

‘ರಾಹುಲ್ ಗಾಂಧಿ ಒರಿಜಿನಲ್ ಬ್ರೀಡ್ ಅಲ್ಲ’; ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ತೀವ್ರ ವಾಗ್ದಾಳಿ

ಯಲಹಂಕದ ದೊಡ್ಡಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ವಿರುದ್ಧ ಕಟುವಾದ ಹೇಳಿಕೆಗಳನ್ನು ನೀಡಿದ್ದಾರೆ.

Written ByChetana Devarmani
Published: Oct 18, 2026, 06:11 PM IST|Updated: Oct 18, 2026, 06:15 PM IST
joinshare
‘ರಾಹುಲ್ ಗಾಂಧಿ ಒರಿಜಿನಲ್ ಬ್ರೀಡ್ ಅಲ್ಲ’; ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ತೀವ್ರ ವಾಗ್ದಾಳಿ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಜಗ್ಗ ಮಮ್ಮಿಗೆ ಕಿಚ್ಚ ಸುದೀಪ್ ವಾರ್ನಿಂಗ್‌ : ಸೂಟ್​ಕೇಸ್ ಪ್ಯಾಕ್ ಆಗಿದೆ, ಎಲಿಮಿನೇಟ್‌ ಪಕ್ಕನಾ..?

ಜಗ್ಗ ಮಮ್ಮಿಗೆ ಕಿಚ್ಚ ಸುದೀಪ್ ವಾರ್ನಿಂಗ್‌ : ಸೂಟ್​ಕೇಸ್ ಪ್ಯಾಕ್ ಆಗಿದೆ, ಎಲಿಮಿನೇಟ್‌ ಪಕ್ಕನಾ..?

2

ಉಗ್ರರ ತಾಣ ಆಗ್ತಾ ಇದಿಯಾ ಕಲಬುರಗಿ? ಮತ್ತೊಬ್ಬ ಶಂಕಿತ ಉಗ್ರ ಸೆರೆ

3

ಮೈಸೂರು ದಸರಾ ಏರ್ ಶೋ: ನಾಳೆ ಆಕಾಶದಲ್ಲಿ ಸೂರ್ಯಕಿರಣ್ ತಂಡದ ಅದ್ಭುತ ವೈಮಾನಿಕ ಕಸರತ್ತು

4

‘ರಾಹುಲ್ ಗಾಂಧಿ ಒರಿಜಿನಲ್ ಬ್ರೀಡ್ ಅಲ್ಲ’; ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ತೀವ್ರ ವಾಗ್ದಾಳಿ

5

ಕರ್ನಾಟಕ ಬಂದ್‌..! ವಾರದೊಳಗೆ ರೈತರ ಬೇಡಿಕೆ ಈಡೇರದಿದ್ದರೆ ವಾಟಾಳ್‌ ಉಗ್ರ ಹೋರಾಟದ ಎಚ್ಚರಿಕೆ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಯಲಹಂಕ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಯಲಹಂಕದ ದೊಡ್ಡಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ವಿರುದ್ಧ ಕಟುವಾದ ಹೇಳಿಕೆಗಳನ್ನು ನೀಡಿದ್ದಾರೆ.

“ರಾಹುಲ್ ಗಾಂಧಿಯವರಿಗೆ ಇಟಲಿ ರಕ್ತ ಹರಿಯುತ್ತಿದೆ. ರಾಹುಲ್ ಗಾಂಧಿ ಒರಿಜಿನಲ್ ಬ್ರೀಡ್ ಅಲ್ಲ” ಎಂದು ಎಸ್.ಆರ್. ವಿಶ್ವನಾಥ್ ಟೀಕಿಸಿದ್ದಾರೆ.

ಇತ್ತೀಚೆಗೆ ವಿಮಾನದಲ್ಲಿ ನಡೆದ ಸಹಪೈಲಟ್ ಕೃತ್ಯದ ವಿರುದ್ಧ ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಿಸಿದ ಸ್ಮಿತ್ ಮಚ್ಚರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಜೊತೆಗೆ ಇಸ್ರೇಲ್ ಪ್ರಧಾನಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಆದರೆ, ದೇಶದ ಪ್ರಧಾನಿಯಾಗುವ ಆಸೆ ಹೊಂದಿರುವ ರಾಹುಲ್ ಗಾಂಧಿ ಮಾತ್ರ ಇದುವರೆಗೂ ಸಣ್ಣ ಕೃತಜ್ಞತೆಯನ್ನೂ ತೋರಿಸಿಲ್ಲ ಎಂದು ವಿಶ್ವನಾಥ್ ಆರೋಪಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ನಮ್ಮ ದೇಶದ ಬಗ್ಗೆ ಹೇಗೆ ತಿಳಿದಿರುತ್ತದೆ ಎಂದು ಪ್ರಶ್ನಿಸಿದ್ದಾರೆ.

“ಆ ಅಂದರೆ ಹೂ ಅನ್ನಲ್ಲ, ಹೂ ಅಂದರೆ ಹಾ ಅನ್ನಲ್ಲ” ಎಂದು ರಾಹುಲ್ ಗಾಂಧಿ ಅವರ ವರ್ತನೆಯನ್ನು ಟೀಕಿಸಿದ ಅವರು, ರಾಹುಲ್ ಗಾಂಧಿ ಅವರ ನಡವಳಿಕೆ ವಿಚಿತ್ರವಾಗಿದೆ. ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಯಲಹಂಕದ ದೊಡ್ಡಬೆಟ್ಟಹಳ್ಳಿ ಗ್ರಾಮದಲ್ಲಿ ಯುವಕರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಕಾರ್ಯಕ್ರಮದ ವೇಳೆ ಶಾಸಕ ಎಸ್.ಆರ್. ವಿಶ್ವನಾಥ್ ಈ ಹೇಳಿಕೆಗಳನ್ನು ನೀಡಿದ್ದಾರೆ.

‘ನಮ್ಮ ನಿವೇಶನ ನಮ್ಮ ಹಕ್ಕು’; ಶಿವರಾಮಕಾರಂತ ಬಡಾವಣೆ ವಿಚಾರವಾಗಿ ಬಿಡಿಎ ವಿರುದ್ಧ ಬೃಹತ್ ಪ್ರತಿಭಟನೆ

ಶಿವರಾಮಕಾರಂತ ಬಡಾವಣೆ ಹಾಗೂ ಬಿಡಿಎ ನಡುವಿನ ಜಟಾಪಟಿ ಮುಂದುವರಿದಿದ್ದು, ಬಡಾವಣೆಯ ನಿವೇಶನದಾರರು ಸರ್ಕಾರದ ನಡೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ‘ನಮ್ಮ ನಿವೇಶನ ನಮ್ಮ ಹಕ್ಕು’ ಎಂಬ ಶೀರ್ಷಿಕೆಯಡಿ ನಡೆದ ಹೋರಾಟದಲ್ಲಿ ರೈತರು ಹಾಗೂ ನಿವೇಶನದಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನೂರಾರು ಪೊಲೀಸರು ಬೀಡುಬಿಟ್ಟಿದ್ದಾರೆ.

ಹೆಸರುಘಟ್ಟ ಹೋಬಳಿ ಹಾಗೂ ಯಲಹಂಕ ಹೋಬಳಿಯ 17 ಹಳ್ಳಿಗಳ ನಿವೇಶನದಾರರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ತಮ್ಮ ಭೂಮಿಯನ್ನು ನೀಡಿದ ಬಳಿಕವೂ ನಿವೇಶನಕ್ಕಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ನಡೆ ಖಂಡಿಸಿದ ಅವರು, ತಮ್ಮ ಭೂಮಿಯನ್ನು ನೀಡಲು ಸಿದ್ಧರಿದ್ದರೂ ಅದಕ್ಕೆ ಪ್ರತಿಯಾಗಿ ತಮಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರು ಹಾಗೂ ನಿವೇಶನದಾರರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಸರ್ಕಾರ ತಮಗೆ ಇಷ್ಟ ಬಂದಂತೆ ತೆರಿಗೆ ವಿಧಿಸಿದೆ. ಆದರೂ ನಾವು ಭೂಮಿ ಕೊಟ್ಟು ತೆರಿಗೆ ಕಟ್ಟಲು ಸಿದ್ಧರಿದ್ದೇವೆ. ಆದರೆ, ನಮ್ಮ ಭೂಮಿಯನ್ನು ಕೊಟ್ಟು ನಾವೇ ಭಿಕ್ಷೆ ಬೇಡಬೇಕಾ ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ನಡೆ ಸಾಮಾನ್ಯ ಜನರನ್ನು ಕೀಳುಮಟ್ಟದಲ್ಲಿ ನೋಡುವಂತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ತಮ್ಮ ಭೂಮಿಯನ್ನು ನೀಡಿದ ಬಳಿಕವೂ ನಿವೇಶನಕ್ಕಾಗಿ ಹೋರಾಡಬೇಕಾದ ಸ್ಥಿತಿ ನಿರ್ಮಾಣವಾಗಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾವು ಭೂಮಿ ನೀಡಿರುವ ಸ್ಥಳದಲ್ಲಿಯೇ ನಿವೇಶನಗಳನ್ನು ನೀಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ. ನಾವು ಎಲ್ಲಿ ಭೂಮಿ ಕೊಟ್ಟಿದ್ದೇವೆಯೋ ಅಲ್ಲಿಯೇ ನಮಗೆ ನಿವೇಶನದ ಜಾಗ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬಡವರ ಭೂಮಿಯನ್ನು ಕಿತ್ತು ಉಳ್ಳವರಿಗೆ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿರುವ ರೈತರು ಹಾಗೂ ನಿವೇಶನದಾರರು, ತಮ್ಮ ಹಕ್ಕುಗಳನ್ನು ನೀಡುವಂತೆ ಆಗ್ರಹಿಸಿದ್ದಾರೆ. ನೂರಾರು ನಿವೇಶನದಾರರು ಒಕ್ಕೊರಲಿನಿಂದ ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಯಲಹಂಕದ ರಾಮಗೊಂಡನಹಳ್ಳಿ ಗ್ರಾಮದಿಂದ ಪ್ರತಿಭಟನಾಕಾರರು ತಮ್ಮ ನಡಿಗೆಯನ್ನು ಆರಂಭಿಸಿದ್ದಾರೆ. ‘ನಮ್ಮ ನಿವೇಶನ ನಮ್ಮ ಹಕ್ಕು’ ಎಂಬ ಶೀರ್ಷಿಕೆಯಡಿ ನಡೆಯುತ್ತಿರುವ ಈ ಹೋರಾಟದಲ್ಲಿ ಹೆಸರುಘಟ್ಟ ಹಾಗೂ ಯಲಹಂಕ ಹೋಬಳಿಗಳ 17 ಹಳ್ಳಿಗಳ ನಿವೇಶನದಾರರು ಪಾಲ್ಗೊಂಡಿದ್ದಾರೆ.

ರಾಮಗೊಂಡನಹಳ್ಳಿಯಿಂದ ಆರಂಭವಾದ ಪ್ರತಿಭಟನಾ ನಡಿಗೆ ಅಂತಿಮವಾಗಿ ಸೋಮಶೆಟ್ಟಹಳ್ಳಿವರೆಗೆ ಸಾಗಲಿದೆ. ಈ ವೇಳೆ ಸರ್ಕಾರದ ನಡೆಯನ್ನು ಖಂಡಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನೂರಾರು ಪೊಲೀಸರು ಬೀಡುಬಿಟ್ಟಿದ್ದಾರೆ.

ಶಿವರಾಮಕಾರಂತ ಬಡಾವಣೆ ಹಾಗೂ ಬಿಡಿಎ ನಡುವಿನ ಜಟಾಪಟಿಯ ನಡುವೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ನಿವೇಶನದಾರರು ಬೃಹತ್ ಹೋರಾಟ ನಡೆಸಿದ್ದು, ತಾವು ಭೂಮಿ ನೀಡಿರುವ ಸ್ಥಳದಲ್ಲಿಯೇ ನಿವೇಶನಗಳನ್ನು ನೀಡಬೇಕು ಎಂಬ ಆಗ್ರಹವನ್ನು ಪುನರುಚ್ಚರಿಸಿದ್ದಾರೆ.

Add Zee News as a Preferred Source
TAGS:
Karnataka Politics