• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ನಕಲಿ ಔಷಧಿ ಜಾಲದ ಜೊತೆ ಸಂಪರ್ಕದಲ್ಲಿದ್ದ ಮೂರು ಕಂಪನಿಗಳ ಮೇಲೆ ದಾಳಿ

ನಕಲಿ ಔಷಧಿ ಜಾಲದ ಜೊತೆ ಸಂಪರ್ಕದಲ್ಲಿದ್ದ ಮೂರು ಕಂಪನಿಗಳ ಮೇಲೆ ದಾಳಿ

ಆರೋಪಿಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನಕಲಿ ಔಷಧಿಗಳನ್ನು ಖರೀದಿಸಿ ಮಾರಾಟ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ನಗರದ ಮೂರು ಫಾರ್ಮಾಗಳ ಮೇಲೆ ದಾಳಿ ನಡೆಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ..

Written ByChetana Devarmani
Published: Oct 07, 2026, 05:26 PM IST|Updated: Oct 07, 2026, 05:27 PM IST
joinshare
ನಕಲಿ ಔಷಧಿ ಜಾಲದ ಜೊತೆ ಸಂಪರ್ಕದಲ್ಲಿದ್ದ ಮೂರು ಕಂಪನಿಗಳ ಮೇಲೆ ದಾಳಿ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ಝೀರೋ: ಸ್ಟಿಂಗ್ ಆಪರೇಷನ್‌ ಹಿಂದೆ ಯಾರಿದ್ದಾರೆ? ಹೆಚ್‌ಡಿಕೆ ಪ್ರಶ್ನೆ

ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ಝೀರೋ: ಸ್ಟಿಂಗ್ ಆಪರೇಷನ್‌ ಹಿಂದೆ ಯಾರಿದ್ದಾರೆ? ಹೆಚ್‌ಡಿಕೆ ಪ್ರಶ್ನೆ

2

ನಕಲಿ ಔಷಧಿ ಜಾಲದ ಜೊತೆ ಸಂಪರ್ಕದಲ್ಲಿದ್ದ ಮೂರು ಕಂಪನಿಗಳ ಮೇಲೆ ದಾಳಿ

3

ಈ ರಾಜ್ಯದ ಸರ್ಕಾರಿ ನೌಕರರಿಗೆ ದಸರಾ ಬಂಪರ್ ಗಿಫ್ಟ್;‌ ಶೇ 3ರಷ್ಟು DA ಶೇ 2ರಷ್ಟು HRA ಹೆಚ್ಚಳ! ಎಷ್ಟಾಗಲಿದೆ ಒಟ್ಟು ಸಂಬಳ?

4

ಐಐಎಸ್‌ಸಿ ಪ್ರೊ. ಮಹೇಶ್ ಕಾಕ್ಡೆಗೆ ರಾಮಾನುಜನ್ ಪ್ರಶಸ್ತಿ! ಗಣಿತ ಕ್ಷೇತ್ರದ ಸಾಧನೆಗೆ ಜಾಗತಿಕ ಮನ್ನಣೆ

5

ಸಿದ್ದರಾಮಯ್ಯ ವಿರುದ್ಧ ಡಿ.ಕೆ. ಶಿವಕುಮಾರ್ ಸ್ಟಿಂಗ್ ಆಪರೇಶನ್! ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಕರ್ನಾಟಕದ ನಕಲಿ ಆ್ಯಂಟಿಬಯೋಟಿಕ್ ಮತ್ತು ಐಸಿಯು ಔಷಧ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ದಾಳಿ ಮುಂದುವರೆದಿದೆ..ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಆರೋಪಿಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನಕಲಿ ಔಷಧಿಗಳನ್ನು ಖರೀದಿಸಿ ಮಾರಾಟ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ನಗರದ ಮೂರು ಫಾರ್ಮಾಗಳ ಮೇಲೆ ದಾಳಿ ನಡೆಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ..

ರಾಜ್ಯದಲ್ಲಿ ನಕಲಿ ಔಷಧದ ಅಡ್ಡ ಇನ್ನಷ್ಟು ವಿಸ್ತಾರಗೊಳ್ಳುತ್ತಿದೆ. ಮಾರಾಟ ಜಾಲದ ತನಿಖೆಯನ್ನು ವಿಶೇಷ ತನಿಖಾ ತಂಡವು ನಡೆಸುತ್ತಿದೆ. ಈ ಪ್ರಕರಣದಲ್ಲಿ ಇನ್ನೂ ಮೂರು ಫಾರ್ಮಾ ಕಂಪನಿಗಳ ಪಾತ್ರ ಬಯಲಾಗಿದೆ. ಬೆಂಗಳೂರಿನ ಚಾಮರಾಜಪೇಟೆ ಮೆಡಿ 365, ಗುಬ್ಬಲಾಳದ ಪಟೇಲ್‌ ಮೆಡಿಟ್ರೇಡ್‌, ರಾಜರಾಜೇಶ್ವರಿನಗರದ ಆರ್‌.ಆರ್‌. ಫಾರ್ಮಾಗಳ ಮೇಲೆ ಎಸ್‌ಐಟಿ ತಂಡವು ದಾಳಿ ನಡೆಸಿದೆ.

ಮೂರು ಔಷಧ ಸರಬರಾಜು ಕಂಪನಿಗಳ ಮೇಲೆ ದಾಳಿ ನಡೆಸಿರುವ ಪ್ರತ್ಯೇಕ ತಂಡಗಳು, ನಕಲಿ ಔಷಧ ಪೂರೈಕೆಗೆ ಸಂಬಂಧಿಸಿದ ಮಹತ್ವದ ದಾಖಲೆ ಜಪ್ತಿ ಮಾಡಿದೆ. ಮೂರೂ ಕಂಪನಿಗಳು ನಕಲಿ ಔಷಧ ಜಾಲದ ಆಧಾರ ಕಂಪನಿ ಡಿಎಂ ಫಾರ್ಮಾದಿಂದ ಔಷಧ ಖರೀದಿ ಕುರಿತ ಲೆಕ್ಕಪತ್ರಗಳು ಸಿಕ್ಕಿವೆ ಎಂದು ತನಿಖಾ ಮೂಲಗಳು ತಿಳಿಸಿವೆ.ಅಕ್ರಮದಲ್ಲಿ ಭಾಗಿಯಾಗಿರುವ ಮೂರು ಕಂಪನಿಗಳ ಮಾಲೀಕರು ಹಾಗೂ ಪ್ರತಿನಿಧಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.. ವಿಚಾರಣೆಗೆ ಸಹಕರಿಸದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತನಿಖಾ ಮೂಲಗಳು ಹೇಳಿವೆ.

ಹಾಗೆ ಪ್ರಕರಣದ ಕಿಂಗ್‌ಪಿನ್‌ ಪ್ರಶಾಂತ್‌ ಹಾಗೂ ಪಾಲುದಾರ ಬಾಲಸುಬ್ರಮಣಿ ಕಸ್ಟಡಿ ವಿಚಾರಣೆ ವೇಳೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ನಕಲಿ ಔಷಧಿಯು ರೋಗಿಯ ಪ್ರಾಣಕ್ಕೆ ಕುತ್ತು ತರಲಿದೆ ಎಂದು ಗೊತ್ತಿದ್ದರೂ ಹಣದಾಸೆಗೆ ಕೃತ್ಯ ಎಸಗಿದ್ದಾರೆ ಎಂಬುದು ತಿಳಿದು ಬಂದಿದೆ..ಆರೋಪಿಗಳಿಂದ ಮತ್ತಷ್ಟು ವಿಚಾರ ಬಾಯ್ಬಿಡಿಸಬೇಕಿದೆ. ಹೀಗಾಗಿ, ನ್ಯಾಯಾಲಯಕ್ಕೆ ಹಾಜರುಪಡಿಸಿ ಪುನಃ ವಶಕ್ಕೆ ಪಡೆಯಲು ತೀರ್ಮಾನಿಸಲಾಗಿದೆ

ಇನ್ನು ಫಾರ್ಮಾಗಳು ಯಾವಾಗಿನಿಂದ ನಕಲಿ ಮಾತ್ರೆಗಳನ್ನು ಖರೀದಿಸಿ ಮಾರಾಟ ಮಾಡಲಾಗುತ್ತಿತ್ತು, ಹಾಗೂ ಯಾವೆಲ್ಲಾ ಆಸ್ಪತ್ರೆಗಳಿಗೆ ಫಾರ್ಮಾಗಳ ಮೂಲಕ ನಕಲಿ ಮಾತ್ರೆಗಳನ್ನು ಸರಬರಾಜು ಮಾಡಲಾಗಿದೆ ಎಂಬ ಮಾಹಿತಿಯನ್ನು ಎಸ್‌ಐಟಿ ಅಧಿಕಾರಿಗಳು ಫಾರ್ಮಾ ಮಾಲೀಕರಿಂದ‌ ಮಾಹಿತಿಯನ್ನ  ಪಡೆದುಕೊಳ್ತಿದ್ದಾರೆ.. ಅದೇನೆ ಇರಲಿ ಸದ್ಯ ಯಾವುದು ಅಸಲಿ, ನಕಲಿ ಅನ್ನೊ ಡೌಟಲ್ಲಿ ಜನರು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ

 

Add Zee News as a Preferred Source