SOCIAL MEDIA

Newsletter

PARTNER SITES
Select Language Select State

ನಮ್ಮ ಮೆಟ್ರೋದಲ್ಲಿ ರಹಸ್ಯವಾಗಿ ಯುವತಿ ವಿಡಿಯೋ ಚಿತ್ರೀಕರಣ: ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲು

ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರ ವಿಡಿಯೋ ಚಿತ್ರೀಕರಣ ಮಾಡಲಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕೇಸ್‌ ದಾಖಲಿಸಲಾಗಿದೆ.

Written By Yashaswini V
Published: Oct 28, 2026, 12:08 PM IST | Updated: Oct 28, 2026, 01:34 PM IST
Join

ಬೆಂಗಳೂರು ನಾಗರೀಕರ ಟ್ರಾಫಿಕ್‌ ಸಮಸ್ಯೆಯನ್ನು ಸಾಕಷ್ಟು ಮಟ್ಟಿಗೆ ನಿವಾರಿಸುವಲ್ಲಿ ಸಹಕಾರಿ ಆಗಿರುವ ʼನಮ್ಮ ಮೆಟ್ರೋʼ ಸದಾ ಒಂದಿಲ್ಲೊಂದು ವಿಚಾರಗಳಿಂದ ಸುದ್ದಿಯಲ್ಲಿರುತ್ತದೆ. ಇತ್ತೀಚೆಗೆ ಯುವತಿಯೊಬ್ಬಳು ʼಪುಶ್‌ ಅಪ್ಸ್‌ʼ ಮಾಡಿದ್ದ ವಿಡಿಯೋ ವೈರಲ್‌ ಆಗಿತ್ತು. ಇದೀಗ, ಸಹ ಪ್ರಯಾಣಿಕನೊಬ್ಬ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ರಹಸ್ಯವಾಗಿ ವಿಡಿಯೋ ಚಿತ್ರೀಕರಿಸಿರುವ ಬಗ್ಗೆ ಎಫ್‌ಐಆರ್‌ ದಾಖಲಿಸಲಾಗಿದೆ.

ಹೌದು, ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರನ್ನು ಸಹ ಪ್ರಯಾಣಿಕನೊಬ್ಬ ರಹಸ್ಯವಾಗಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಸೌಪಿಕಾ ಎಂಬ ಹೆಸರಿನಲ್ಲಿ ಇನ್‌ಸ್ಟಾಗ್ರಾಂನಲ್ಲಿ ಗುರುತಿಸಿಕೊಂಡಿರುವ ಯುವತಿ, ಈ ಘಟನೆ ಮಂಗಳವಾರ ಸಂಜೆ ಸುಮಾರು 4.30ರ ವೇಳೆಗೆ ವೈಟ್‌ಫೀಲ್ಡ್‌ನ ಮೆಟ್ರೋ ರೈಲಿನಲ್ಲಿ ನಡೆದಿದೆ ಎಂದು ಆರೋಪಿಸಿದ್ದಾರೆ. ಘಟನೆ ಬಳಿಕ ತಾವು ಎದುರಿಸಿದ ಅನುಭವವನ್ನು ವಿವರಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ರಹಸ್ಯವಾಗಿ ಯುವತಿಯ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದ ಯುವಕ, ರೈಲು ನಿಂತಾಗ ಆತ ಅಲ್ಲಿಂದ ಓಡಿ ಹೋಗಲು ಯತ್ನಿಸಿದ್ದಾನೆ. ಆತನ ಫೋನ್‌ ಅನ್ನು ಭದ್ರತಾ ಸಿಬ್ಬಂದಿಗೆ ನೀಡಿದ್ದರೂ, ಆತ ಮತ್ತೆ ಫೋನ್‌ ಪಡೆದು ಓಡಿ ಹೋದ ಎಂದು ಯುವತಿ ಆರೋಪಿಸಿದ್ದಾರೆ. ತಾವು ಧರಿಸಿದ್ದ ಬಟ್ಟೆಯನ್ನೂ ವಿಡಿಯೋದಲ್ಲಿ ತೋರಿಸಿರುವ ಅವರು, ದೇಹ ಕಾಣಿಸುವಂತೆ ಬಟ್ಟೆ ಧರಿಸಿರಲಿಲ್ಲವೆಂದು ತಿಳಿಸಿದ್ದಾರೆ. ಆ ಯುವಕ ವಿಡಿಯೋ ಚಿತ್ರೀಕರಣ ಮಾಡಲು ತಮ್ಮ ಉಡುಪು ಕಾರಣವಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ಮೆಟ್ರೋದಲ್ಲಿ ವಿಡಿಯೋ ಚಿತ್ರೀಕರಿಸಿರುವ ಬಗ್ಗೆ ಯುವಕನ್ನು ಪ್ರಶ್ನಿಸಿರುವ ಯುವತಿ:
ಮೆಟ್ರೋ ಲಿಫ್ಟ್‌ನಲ್ಲಿ ಯುವತಿ ಆ ವ್ಯಕ್ತಿಯನ್ನು ಹಿಡಿದು ಈ ಬಗ್ಗೆ ಪ್ರಶ್ನಿಸಿದ್ದು, ‘‘ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇನೆ’’ ಎಂದಾಗ ಆತ ಕ್ಷಮೆ ಕೇಳಿದ್ದಾನೆ ಎಂದು ಉಲ್ಲೇಖಿಸಿದ್ದಾರೆ. ‘‘ಕ್ಷಮೆ ಕೇಳುತ್ತೀಯಾ, ಹಾಗಾದರೆ ವಿಡಿಯೋ ಮಾಡಿದ್ದನ್ನು ಒಪ್ಪಿಕೊಳ್ಳುತ್ತೀಯಾ?’’ ಎಂದು ಪ್ರಶ್ನಿಸಿದಾಗ, ಆ ವ್ಯಕ್ತಿ ತಾನು ವಿಡಿಯೋ ಮಾಡಿರುವುದನ್ನು ಯುವಕ ನಿರಾಕರಿಸಿದ್ದಾನೆ ಎನ್ನಲಾಗಿದೆ. ನಂತರ ಯುವತಿ ಆತನ ಮೊಬೈಲ್ ಅನ್‌ಲಾಕ್ ಮಾಡಿ ಪಾಸ್‌ವರ್ಡ್ ನೀಡುವಂತೆ ಕೇಳಿದಾಗ, ಆತ ಫೋನ್‌ ಅನ್ನು ಮರಳಿ ಪಡೆದು ಅಲ್ಲಿಂದ ಓಡಿ ಹೋಗಿದ್ದಾನೆ ಎನ್ನಲಾಗಿದೆ. 

ದೂರಿನ ಬಗ್ಗೆ ವಿಡಿಯೋ ಮೂಲಕ ಅಪ್‌ಡೇಟ್:
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಯುವತಿ, ಅಲ್ಲಿಂದ ಹೊರ ಬರುತ್ತಿದ್ದಂತೆ ವಿಡಿಯೋ ಒಂದನ್ನು ಮಾಡಿದ್ದಾರೆ. ಈ ವಿಡಿಯೋದಲ್ಲಿ ನಮ್ಮ ಮೆಟ್ರೋ ಘಟನೆಗೆ ಸಂಬಂಧಿಸಿದಂತೆ ಕಾಡುಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಪೊಲೀಸರು ನಿಜಕ್ಕೂ ತುಂಬಾ ಚೆನ್ನಾಗಿ ಸಹಕರಿಸಿದ್ದು ಎಫ್‌ಐಆರ್‌ ದಾಖಲಿಸಿದ್ದಾರೆ ಎನ್ನುತ್ತಾ ತನ್ನ ಕೈಯಲ್ಲಿರುವ ಕಾಗದಗಳನ್ನು ತೋರಿಸಿ ಇದು ಎಫ್‌ಐಆರ್‌ ಕಾಪಿ ಎಂದಿದ್ದಾರೆ. ಮುಂದುವರೆದು, ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಸಾಧ್ಯವಾದಷ್ಟು ಬೇಗ ಆರೋಪಿಯನ್ನು ಬಂಧಿಸುವುದಾಗಿ ವಿಶ್ವಾಸ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದೂರು ನೀಡಲು ಪೊಲೀಸ್‌ ಠಾಣೆಗೆ ಹೋದ ಸಂದರ್ಭದಲ್ಲಿ ಪೊಲೀಸರು ಸಹಕರಿಸಿದ ರೀತಿಯನ್ನು ವಿವರಿಸಿದ ಯುವತಿ, ಅವರು ವೇಗವಾಗಿ ದೂರು ಪಡೆದು ಎಫ್‌ಐಆರ್‌ ದಾಖಲಿಸಿದ್ದಾರೆ. ಜೊತೆಗೆ ಮೆಟ್ರೋದಲ್ಲಿ ವಿಡಿಯೋ ಚಿತ್ರೀಕರಿಸುತ್ತಿದ್ದ ಯುವಕನನ್ನು ಪತ್ತೆ ಹಚ್ಚಲು ಕೈಗೊಂಡ ಕ್ರಮಗಳ ಬಗ್ಗೆಯೂ ವಿವರಿಸಿದ್ದಾರೆ.  

ನೀವೇನಾದರೂ ಅಂತಹ ಹುಡುಗನನ್ನು ಕಂಡರೆ ಈ ಬಗ್ಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾಳೆ. ಅಲ್ಲದೆ, ಈ ವಿಡಿಯೋವನ್ನು ಸಾಕಷ್ಟು ವೈರಲ್‌ ಮಾಡುವಂತೆಯೂ ಆಕೆ ಮನವಿ ಮಾಡಿದ್ದಾಳೆ. ಈ ವಿಡಿಯೋ ಮಾಡುವುದರ ಹಿಂದಿನ ಉದ್ದೇಶದ ಬಗ್ಗೆಯೂ ಮಾತನಾಡಿರುವ ಯುವತಿ, ಹೆಣ್ಣು ಮಕ್ಕಳು ಯಾವುದೇ ಸಂದರ್ಭದಲ್ಲೂ ಹೆದರಬಾರದು. ಸಾರ್ವಜನಿಕ ಜಾಗಗಳಲ್ಲಿ ಯಾವುದೇ ತೊಂದರೆ ಆದಾಗ ಪೊಲೀಸರನ್ನು ಸಂಪರ್ಕಿಸುವ ಧೈರ್ಯ ಮಾಡಿ. ಅವರು ಖಂಡಿತವಾಗಿಯೂ ನಿಮಗೆ ಸಹಾಯ ಮಾಡುತ್ತಾರೆ ಎಂದು ಹೇಳಿದ್ದಾರೆ. 
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES