• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಬೆಂಗಳೂರಿನಲ್ಲಿ ಡಿಆರ್‌ಡಿಒ ಹಿರಿಯ ವಿಜ್ಞಾನಿ ಆತ್ಮಹ*ತ್ಯೆ: ಸೀಗೇಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ದುರಂತ!

ಬೆಂಗಳೂರಿನಲ್ಲಿ ಡಿಆರ್‌ಡಿಒ ಹಿರಿಯ ವಿಜ್ಞಾನಿ ಆತ್ಮಹ*ತ್ಯೆ: ಸೀಗೇಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ದುರಂತ!

ಬೆಂಗಳೂರಿನ ಸೀಗೇಹಳ್ಳಿಯಲ್ಲಿ ಎಡಿಎ ಸಂಸ್ಥೆಯ ಹಿರಿಯ ವಿಜ್ಞಾನಿ ಶರದ್ ಕಟಿಯಾರ್ (47) ಅವರು ಅಪಾರ್ಟ್‌ಮೆಂಟ್‌ನ ನಾಲ್ಕನೇ ಅಂತಸ್ತಿನಿಂದ ಬಿದ್ದು ಮೃತಪಟ್ಟಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು, ಘಟನೆ ನಡೆದ ದಿನವೂ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು ಎನ್ನಲಾಗಿದೆ. ತಂದೆಯ ಕಣ್ಣೆದುರೇ ಈ ದುರಂತ ಸಂಭವಿಸಿದ್ದು, ವೈಟ್‌ಫೀಲ್ಡ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಕೆ.ಆರ್.ಪುರಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Written ByPuttaraj K Alur
Published: Oct 28, 2026, 09:00 AM IST|Updated: Oct 28, 2026, 09:13 AM IST
joinshare
ಬೆಂಗಳೂರಿನಲ್ಲಿ ಡಿಆರ್‌ಡಿಒ ಹಿರಿಯ ವಿಜ್ಞಾನಿ ಆತ್ಮಹ*ತ್ಯೆ: ಸೀಗೇಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ದುರಂತ!
Image Credit: DRDO Scientist Death

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
SIR ಪರಿಷ್ಕರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ: 'ಪಾಕ್' ಪ್ರಜೆ ಸೇರಿ 716 ವಿದೇಶಿಗರು ಪತ್ತೆ

SIR ಪರಿಷ್ಕರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ: 'ಪಾಕ್' ಪ್ರಜೆ ಸೇರಿ 716 ವಿದೇಶಿಗರು ಪತ್ತೆ

2

ಬೆಂಗಳೂರಿನಲ್ಲಿ ಡಿಆರ್‌ಡಿಒ ಹಿರಿಯ ವಿಜ್ಞಾನಿ ಆತ್ಮಹ*ತ್ಯೆ: ಸೀಗೇಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ದುರಂತ!

3

ಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ ಗೆಲುವಿನ ಸಿಹಿ; ಕಾಂಗ್ರೆಸ್‌ಗೆ ಸೋಲಿನ ಕಹಿ!

4

ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಎಸ್.ವಿ.ಸಂಕನೂರ್‌ಗೆ ಭರ್ಜರಿ ಗೆಲುವು; ಕಾಂಗ್ರೆಸ್ ಅಭ್ಯರ್ಥಿಗಿಂತ 9,323 ಮತಗಳ ಮುನ್ನಡೆ!

5

Today Horoscope October 28th: ಈ ರಾಶಿಯವರಿಗೆ ದೇವರ ಅನುಗ್ರಹದಿಂದ ದೊಡ್ಡ ಯಶಸ್ಸು, ಸುಖ-ಸಮೃದ್ಧಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Senior DRDO Scientist Dies in Bengaluru: ಬೆಂಗಳೂರು ನಗರದ ಸೀಗೇಹಳ್ಳಿಯಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ಗೆ ಸಂಬಂಧಿಸಿದ ಹಿರಿಯ ವಿಜ್ಞಾನಿಯೊಬ್ಬರು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA)ಯ ಗ್ರೇಡ್‌ ಎಫ್ ವಿಜ್ಞಾನಿ ಶರದ್ ಕಟಿಯಾರ್ (47) ಮೃತಪಟ್ಟವರು. ಅಪಾರ್ಟ್‌ಮೆಂಟ್‌ನ ನಾಲ್ಕನೇ ಅಂತಸ್ತಿನಿಂದ ಬಿದ್ದು ಅವರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ಅಸಹಜ ಸಾ*ವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಾಹಿತಿಯ ಪ್ರಕಾರ, ಅಕ್ಟೋಬರ್ 21ರಂದು ಸಂಜೆ ಸುಮಾರು 7.30ರ ವೇಳೆಗೆ ಘಟನೆ ಸಂಭವಿಸಿದೆ. ಸೀಗೇಹಳ್ಳಿಯಲ್ಲಿರುವ ತಾವು ವಾಸಿಸುತ್ತಿದ್ದ ಅಪಾರ್ಟ್‌ಮೆಂಟ್‌ನ ಮೆಟ್ಟಿಲುಗಳ ಮೂಲಕ ನಾಲ್ಕನೇ ಅಂತಸ್ತಿಗೆ ತೆರಳಿದ್ದ ಶರದ್ ಕಟಿಯಾರ್, ಅಲ್ಲಿಂದ ಕೆಳಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರನ್ನ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬದವರು ಮುಂದಾಗಿದ್ದರು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ಎಡಿಎ ಪ್ರೋಗ್ರಾಮಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜ್ಞಾನಿ

ಶರದ್ ಕಟಿಯಾರ್ ಅವರು ಎಡಿಎಯ ಪ್ರೋಗ್ರಾಮಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಒಂದು ತಿಂಗಳಿನಿಂದ ಅವರು ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರು. ಮಾನಸಿಕ ಒತ್ತಡದ ಕಾರಣದಿಂದ ಮಾತ್ರೆಗಳನ್ನ ಸೇವಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.

ಶರದ್ ಅವರು ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಬಳಿಕ ನಿಮ್ಹಾನ್ಸ್‌ನಲ್ಲಿಯೂ ವೈದ್ಯಕೀಯ ನೆರವು ಪಡೆದಿದ್ದರು. ಘಟನೆ ನಡೆದ ದಿನವೂ ಅವರು ನಿಮ್ಹಾನ್ಸ್‌ಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು ಎಂದು ವರದಿಯಾಗಿದೆ.

ತಂದೆಯ ಕಣ್ಣೆದುರೇ ನಡೆದ ದುರಂತ

ಘಟನೆ ನಡೆದ ಸಂದರ್ಭದಲ್ಲಿ ಶರದ್ ಕಟಿಯಾರ್ ಅವರ ತಂದೆಯೂ ಅಪಾರ್ಟ್‌ಮೆಂಟ್‌ನಲ್ಲಿದ್ದರು. ಮಗನ ಚಲನವಲನವನ್ನ ಗಮನಿಸುತ್ತಿದ್ದ ತಂದೆ, ಶರದ್ ಅವರ ಹಿಂದೆಯೇ ಸಾಗುತ್ತಿದ್ದರು ಎನ್ನಲಾಗಿದೆ. ಈ ವೇಳೆ ಶರದ್ ಏಕಾಏಕಿ ಮೆಟ್ಟಿಲುಗಳನ್ನ ಹತ್ತಿ ಅಪಾರ್ಟ್‌ಮೆಂಟ್‌ನ ನಾಲ್ಕನೇ ಅಂತಸ್ತಿಗೆ ತೆರಳಿದ್ದಾರೆ.

ಮಗನ ವರ್ತನೆಯಿಂದ ಅನುಮಾನಗೊಂಡ ತಂದೆ, ಅವರನ್ನ ತಡೆಯುವ ಉದ್ದೇಶದಿಂದ ಹಿಂದೆಯೇ ಹೋಗಿದ್ದಾರೆ. ಆದರೆ ವಯಸ್ಸಾದ ಕಾರಣ ಮೆಟ್ಟಿಲುಗಳನ್ನ ಹತ್ತಲು ಅವರಿಗೆ ಆಯಾಸವಾಗಿತ್ತು ಎಂದು ತಿಳಿದುಬಂದಿದೆ. ತಂದೆ ಮೇಲಂತಸ್ತಿಗೆ ತಲುಪುವಷ್ಟರಲ್ಲಿ ಶರದ್ ಕಟ್ಟಡದಿಂದ ಕೆಳಗೆ ಬಿದ್ದಿದ್ದರು ಎನ್ನಲಾಗಿದೆ. ಅವರ ಕಣ್ಣೆದುರೇ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.

ವೈಟ್‌ಫೀಲ್ಡ್ ಠಾಣೆಯಲ್ಲಿ ಪ್ರಕರಣ ದಾಖಲು

ಘಟನೆಗೆ ಸಂಬಂಧಿಸಿದಂತೆ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾ*ವು ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯನ್ನ ಕೆ.ಆರ್.ಪುರಂ ಪೊಲೀಸರು ಕೈಗೊಂಡಿದ್ದಾರೆಂದು ನೀಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ. ಘಟನೆಗೆ ಸಂಬಂಧಿಸಿದ ಪರಿಸ್ಥಿತಿಗಳು ಹಾಗೂ ಇತರ ವಿವರಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಡಿಆರ್‌ಡಿಒಗೆ ಸಂಬಂಧಿಸಿದ ಸಂಸ್ಥೆಯಲ್ಲಿ ಹಿರಿಯ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 47 ವರ್ಷದ ವಿಜ್ಞಾನಿಯ ಸಾ*ವು ಸೀಗೇಹಳ್ಳಿ ಪ್ರದೇಶದಲ್ಲಿ ದುರಂತದ ಘಟನೆ ಎನಿಸಿದೆ. ಸದ್ಯ ಪೊಲೀಸರು ಪ್ರಕರಣದ ವಿವಿಧ ಆಯಾಮಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Add Zee News as a Preferred Source
TAGS:
Kannada News