ಸ್ಟಿಂಗ್ ಆಪರೇಷನ್ ತನಿಖೆ ವಿಳಂಬಕ್ಕೆ ಸಿದ್ದರಾಮಯ್ಯ ಗರಂ! ಸಿಸಿಬಿ ಅಧಿಕಾರಿಗಳಿಗೆ ಫುಲ್ ಕ್ಲಾಸ್!
ತನಿಖೆಯ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ. 'ಏನ್ ತನಿಖೆ ಮಾಡ್ತಿದ್ದೀರಾ ನೀವು? ಬೆಳಗ್ಗೆ ಯಾರನ್ನೋ ಬಂಧಿಸ್ತೀರಾ, ಸಂಜೆ ವೇಳೆಗೆ ಅವರಿಗೆ ಜಾಮೀನು ಸಿಗುತ್ತೆ. ಅದ್ಯಾವ ರೀತಿ ನೀವು ತನಿಖೆ ನಡೆಸ್ತಾ ಇದ್ದೀರಾ?' ಎಂದು ಸಿಸಿಬಿ ಅಧಿಕಾರಿಗಳನ್ನ ಪ್ರಶ್ನಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
Fake Sting Operation Case: ತಮ್ಮ ವಿರುದ್ಧ ನಡೆದಿದೆ ಎನ್ನಲಾದ ನಕಲಿ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಪ್ರಕರಣದ ತನಿಖೆ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲವೆಂಬ ಕಾರಣಕ್ಕೆ ಕೇಂದ್ರ ಅಪರಾಧ ವಿಭಾಗದ (CCB) ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿರುವ ಅವರು, ಪ್ರಮುಖ ಆರೋಪಿಗಳ ಬಂಧನವಾಗದಿರುವುದಕ್ಕೆ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. ತನಿಖೆಯನ್ನ ಮತ್ತಷ್ಟು ಚುರುಕುಗೊಳಿಸಿ, ಪ್ರಕರಣದ ಹಿಂದಿರುವ ಪ್ರಮುಖ ವ್ಯಕ್ತಿಗಳನ್ನ ಶೀಘ್ರ ಪತ್ತೆಹಚ್ಚುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಸಿಸಿಬಿ ತನಿಖೆಯ ವೇಗಕ್ಕೆ ಸಿದ್ದರಾಮಯ್ಯ ಅಸಮಾಧಾನ
ನಕಲಿ ಸ್ಟಿಂಗ್ ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾದ ದಿನದಿಂದಲೂ ಸಿದ್ದರಾಮಯ್ಯ ಅವರು ತನಿಖೆಯ ಬೆಳವಣಿಗೆಗಳ ಬಗ್ಗೆ ನಿರಂತರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಪ್ರತಿದಿನವೂ ಪ್ರಕರಣ ಯಾವ ಹಂತದಲ್ಲಿದೆ, ತನಿಖೆಯಲ್ಲಿ ಯಾವ ರೀತಿಯ ಪ್ರಗತಿಯಾಗಿದೆ ಎಂಬ ವಿವರಗಳನ್ನ ಅಧಿಕಾರಿಗಳಿಂದ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಇದೇ ರೀತಿ ನಿನ್ನೆ ಕೂಡ ತನಿಖೆಯ ಪ್ರಗತಿ ವರದಿ ನೀಡಲು ಸಿಸಿಬಿ ಅಧಿಕಾರಿಗಳ ತಂಡ ಸಿದ್ದರಾಮಯ್ಯರನ್ನ ಭೇಟಿ ಮಾಡಿತ್ತು. ಈ ವೇಳೆ ಅಧಿಕಾರಿಗಳು ನೀಡಿದ ಮಾಹಿತಿಯಿಂದ ಅಸಮಾಧಾನಗೊಂಡ ಅವರು, ತನಿಖೆಯ ಕಾರ್ಯವೈಖರಿ ಕುರಿತು ಪ್ರಶ್ನಿಸಿದ್ದಾರೆಂದು ಮೂಲಗಳು ತಿಳಿಸಿವೆ. ಪ್ರಕರಣ ದಾಖಲಾಗಿ ಹಲವು ದಿನಗಳು ಕಳೆದಿದ್ದರೂ ತನಿಖೆಯಲ್ಲಿ ನಿರೀಕ್ಷಿತ ಪ್ರಗತಿ ಕಾಣಿಸದಿರುವುದು ಸಿದ್ದರಾಮಯ್ಯರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದೆ ಎನ್ನಲಾಗಿದೆ.
'ಬೆಳಗ್ಗೆ ಅರೆಸ್ಟ್ ಮಾಡ್ತೀರಾ, ಸಂಜೆ ಬೇಲ್ ಸಿಗುತ್ತೆ'
ತನಿಖೆಯ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ. 'ಏನ್ ತನಿಖೆ ಮಾಡ್ತಿದ್ದೀರಾ ನೀವು? ಬೆಳಗ್ಗೆ ಯಾರನ್ನೋ ಬಂಧಿಸ್ತೀರಾ, ಸಂಜೆ ವೇಳೆಗೆ ಅವರಿಗೆ ಜಾಮೀನು ಸಿಗುತ್ತೆ. ಅದ್ಯಾವ ರೀತಿ ನೀವು ತನಿಖೆ ನಡೆಸ್ತಾ ಇದ್ದೀರಾ?' ಎಂದು ಸಿಸಿಬಿ ಅಧಿಕಾರಿಗಳನ್ನ ಪ್ರಶ್ನಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಆರೋಪಿಗಳನ್ನ ಬಂಧಿಸಿದ ಕೆಲವೇ ಸಮಯದಲ್ಲಿ ಜಾಮೀನು ದೊರೆಯುತ್ತಿರುವ ವಿಚಾರವನ್ನ ಪ್ರಸ್ತಾಪಿಸಿರುವ ಅವರು, ತನಿಖೆಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಬಂಧನ ಪ್ರಕ್ರಿಯೆ ನಡೆಯುತ್ತಿದ್ದರೂ ಪ್ರಕರಣದ ಹಿಂದಿರುವ ಪ್ರಮುಖ ಆರೋಪಿಗಳನ್ನ ಪತ್ತೆಹಚ್ಚುವಲ್ಲಿ ಪ್ರಗತಿ ಕಾಣಿಸದಿರುವುದನ್ನ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಮುಖ ಕಿಂಗ್‌ಪಿನ್‌ಗಳ ಬಂಧನವಾಗದಿರುವುದಕ್ಕೆ ಆಕ್ರೋಶ
ನಕಲಿ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪ್ರಮುಖ ವ್ಯಕ್ತಿಗಳನ್ನ ಇದುವರೆಗೂ ಬಂಧಿಸದಿರುವ ವಿಚಾರವೂ ಸಿದ್ದರಾಮಯ್ಯರ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರಕರಣ ನಡೆದು ಇಷ್ಟು ದಿನಗಳಾದರೂ ಇದರ ಹಿಂದಿರುವ ಪ್ರಮುಖ ಕಿಂಗ್‌ಪಿನ್‌ಗಳನ್ನ ಬಂಧಿಸಲು ಸಾಧ್ಯವಾಗದಿರುವುದೇಕೆ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
'ಪ್ರಕರಣ ನಡೆದು ಇಷ್ಟು ದಿನಗಳಾದರೂ ಇದರ ಹಿಂದಿರುವ ಪ್ರಮುಖ ಕಿಂಗ್‌ಪಿನ್‌ಗಳನ್ನ ಇದುವರೆಗೂ ಅರೆಸ್ಟ್ ಮಾಡಿಲ್ಲ. ಇನ್ನು ನೀವು ಏನು ತಾನೇ ಮಾಡ್ತೀರಾ?' ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಪ್ರಕರಣದ ಪ್ರಮುಖ ಆರೋಪಿಗಳು ಬಂಧನವಾಗದೆ ಉಳಿದಿರುವ ಹಿನ್ನೆಲೆಯಲ್ಲಿ ತನಿಖೆಯ ವೇಗವನ್ನ ಹೆಚ್ಚಿಸುವಂತೆ ಸೂಚಿಸಿದ್ದಾರೆಂದು ಹೇಳಲಾಗಿದೆ.
ತನಿಖೆಯಲ್ಲಿ ಯಾವುದೇ ಲೋಪವಾಗಬಾರದು ಎಂದು ಸೂಚನೆ
ಸಿಸಿಬಿ ಅಧಿಕಾರಿಗಳಿಂದ ಪ್ರಕರಣದ ಪ್ರಗತಿ ವರದಿ ಪಡೆದ ಸಿದ್ದರಾಮಯ್ಯ, ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ತನಿಖೆಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಕರಣದ ಹಿಂದಿರುವ ಪ್ರಮುಖ ಆರೋಪಿಗಳನ್ನ ಆದಷ್ಟು ಬೇಗ ಪತ್ತೆಹಚ್ಚಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ. ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆಯುವ ಸಂದರ್ಭದಲ್ಲಿಯೇ ಅಧಿಕಾರಿಗಳ ಕಾರ್ಯವೈಖರಿಯನ್ನ ಪ್ರಶ್ನಿಸಿರುವ ಅವರು, ಪ್ರಮುಖ ಆರೋಪಿಗಳ ಪತ್ತೆಗೆ ಆದ್ಯತೆ ನೀಡುವಂತೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.
ದಿನನಿತ್ಯ ತನಿಖೆಯ ಮಾಹಿತಿ ಪಡೆಯುತ್ತಿರುವ ಸಿದ್ದು
ನಕಲಿ ಸ್ಟಿಂಗ್ ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಆರಂಭದಿಂದಲೂ ತನಿಖೆಯ ಬೆಳವಣಿಗೆಗಳ ಮೇಲೆ ಗಮನ ಹರಿಸುತ್ತಿದ್ದಾರೆಂದು ತಿಳಿದುಬಂದಿದೆ. ಎಫ್‌ಐಆರ್ ದಾಖಲಾದ ಬಳಿಕ ಪ್ರತಿದಿನವೂ ತನಿಖೆಯ ಪ್ರಗತಿ ಕುರಿತು ಮಾಹಿತಿ ಪಡೆಯುತ್ತಿರುವ ಅವರು, ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ವಿವರಗಳನ್ನ ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ. ಮಂಗಳವಾರ ನಡೆದ ಭೇಟಿಯಲ್ಲಿಯೂ ಸಿಸಿಬಿ ಅಧಿಕಾರಿಗಳ ತಂಡ ತನಿಖೆಯ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದೆ. ಆದರೆ ಪ್ರಮುಖ ಆರೋಪಿಗಳ ಬಂಧನವಾಗದಿರುವುದು ಹಾಗೂ ತನಿಖೆಯ ಮಂದಗತಿಯ ಬಗ್ಗೆ ಸಿದ್ದರಾಮಯ್ಯನವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿಸಿಬಿ ಅಧಿಕಾರಿಗಳಿಗೆ ತನಿಖೆ ಚುರುಕುಗೊಳಿಸಲು ಖಡಕ್ ಸೂಚನೆ
ಪ್ರಕರಣದ ತನಿಖೆಯನ್ನ ವಿಳಂಬ ಮಾಡದೆ ಚುರುಕುಗೊಳಿಸಬೇಕು ಎಂಬುದು ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನೀಡಿರುವ ಪ್ರಮುಖ ಸೂಚನೆಯಾಗಿದೆ ಎನ್ನಲಾಗಿದೆ. ಪ್ರಮುಖ ಆರೋಪಿಗಳನ್ನ ಪತ್ತೆಹಚ್ಚುವ ಕಾರ್ಯಕ್ಕೆ ವೇಗ ನೀಡಬೇಕು. ತನಿಖೆ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಪ್ರಕರಣದ ಹಿಂದಿರುವ ಪ್ರಮುಖ ವ್ಯಕ್ತಿಗಳ ವಿರುದ್ಧ ಶೀಘ್ರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಲಾಗಿದೆ.
ಒಟ್ನಲ್ಲಿ ತಮ್ಮ ವಿರುದ್ಧ ನಡೆದಿದೆ ಎನ್ನಲಾದ ನಕಲಿ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಮೂಲಗಳು ತಿಳಿಸಿವೆ. ಪ್ರಮುಖ ಆರೋಪಿಗಳ ಬಂಧನ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿರುವ ಅವರು, ತನಿಖೆಯನ್ನ ಚುರುಕುಗೊಳಿಸಿ ಆದಷ್ಟು ಬೇಗ ಪ್ರಮುಖ ಆರೋಪಿಗಳನ್ನ ಪತ್ತೆಹಚ್ಚುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.