SOCIAL MEDIA

Newsletter

PARTNER SITES
Select Language Select State

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ರಾಕೇಶ್ ಶೆಟ್ಟಿ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

Siddaramaiah Sting Operation Case: ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಡಿಸೆಂಬರ್ 1ರಂದು ಅರ್ಜಿಗಳ ವಿಚಾರಣೆ ನಡೆಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

Written By Chetana Devarmani
Published: Nov 24, 2026, 15:58 IST | Updated: Nov 24, 2026, 15:59 IST
Join

Siddaramaiah Sting Operation Case: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಬಾಕಿ ಇರುವ ನಾಲ್ಕು ಅರ್ಜಿಗಳನ್ನು ವಿಚಾರಣೆ ನಡೆಸಿ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಕೇಶ್ ಶೆಟ್ಟಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಡಿಸೆಂಬರ್ 1ರಂದು ಅರ್ಜಿಗಳ ವಿಚಾರಣೆ ನಡೆಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

ರಾಕೇಶ್ ಶೆಟ್ಟಿ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದ ಮಂಡಿಸುವ ವೇಳೆ, ಅಕ್ಟೋಬರ್ 20ರಿಂದ 21ರ ಬೆಳಗಿನ ಜಾವದವರೆಗೆ ಪೊಲೀಸರು ತಮ್ಮ ಕಕ್ಷಿದಾರರನ್ನು ವಶಕ್ಕೆ ಪಡೆದಿದ್ದರು ಎಂದು ತಿಳಿಸಿದರು. ಈ ಅವಧಿಯಲ್ಲಿ ಅವರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಹಾಗೂ ಡಿಸಿಪಿ ಸೆಂಟ್ರಲ್ ಕಚೇರಿಯಲ್ಲಿ ಇರಿಸಲಾಗಿತ್ತು. ಹೀಗಾಗಿ ಪೊಲೀಸರು ವಶಕ್ಕೆ ಪಡೆದಿದ್ದ ಅವಧಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೋರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು ಎಂದು ವಿವರಿಸಿದರು. ಆದರೆ, ಈ ಅರ್ಜಿಗಳ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಡಿಸೆಂಬರ್ 1ಕ್ಕೆ ಮುಂದೂಡಿದೆ. ಸಿಸಿಟಿವಿ ದೃಶ್ಯಾವಳಿಗಳು ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ಸಾಕ್ಷ್ಯವಾಗುವ ಸಾಧ್ಯತೆ ಇರುವುದರಿಂದ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಬೇಕು ಎಂದು ರಾಕೇಶ್ ಶೆಟ್ಟಿ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಬಿ.ಎನ್. ಜಗದೀಶ್, ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸುವುದಾಗಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಈಗಾಗಲೇ ತಿಳಿಸಲಾಗಿದೆ ಎಂದು ಹೈಕೋರ್ಟ್‌ಗೆ ವಿವರಿಸಿದರು. ದೃಶ್ಯಾವಳಿಗಳನ್ನು ಸಂರಕ್ಷಿಸುವ ಕುರಿತು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರೂ, ಇದೇ ಮನವಿಯನ್ನು ಮುಂದಿಟ್ಟುಕೊಂಡು ರಾಕೇಶ್ ಶೆಟ್ಟಿ ಮತ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವಾದಿಸಿದರು.

ಅಲ್ಲದೆ, ರಾಕೇಶ್ ಶೆಟ್ಟಿ ಸಲ್ಲಿಸಿರುವ ಅರ್ಜಿಗಳಿಗೆ ಪ್ರಾಸಿಕ್ಯೂಷನ್ ವತಿಯಿಂದ ಆಕ್ಷೇಪಣೆ ಸಲ್ಲಿಸಲಾಗಿದೆ ಎಂಬ ಮಾಹಿತಿಯನ್ನೂ ನ್ಯಾಯಾಲಯದ ಗಮನಕ್ಕೆ ತಂದರು. ಉಭಯ ಪಕ್ಷಗಳ ವಾದಗಳನ್ನು ಆಲಿಸಿದ ಹೈಕೋರ್ಟ್, ಎಸ್‌ಪಿಪಿ ಬಿ.ಎನ್. ಜಗದೀಶ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಬಾಕಿ ಇರುವ ಅರ್ಜಿಗಳ ವಿಚಾರಣೆಯನ್ನು ಡಿಸೆಂಬರ್ 1ರಂದು ನಡೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠ ಸೂಚನೆ ನೀಡಿತು. ಈ ಮೂಲಕ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇತ್ಯರ್ಥಪಡಿಸಿತು.

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮಾನಹಾನಿ ದೂರಿನ ವಿಚಾರದಲ್ಲಿ ಸಿಸಿಟಿವಿ ದೃಶ್ಯಾವಳಿಗಳ ಸಂರಕ್ಷಣೆ ಮತ್ತು ಅವುಗಳ ಲಭ್ಯತೆ ಪ್ರಮುಖ ವಿಷಯವಾಗಿದೆ. ಇದೀಗ ಹೈಕೋರ್ಟ್ ನೀಡಿರುವ ಸೂಚನೆಯ ಹಿನ್ನೆಲೆಯಲ್ಲಿ ಡಿಸೆಂಬರ್ 1ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆಯತ್ತ ಗಮನ ನೆಟ್ಟಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES