• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಆಧಾರ್‌ ಕಾರ್ಡ್‌, ವೋಟರ್‌ ಐಡಿ ಅಲ್ಲ.. ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಈ ಕಾರ್ಡ್‌ ಇರಲೇಬೇಕು

ಆಧಾರ್‌ ಕಾರ್ಡ್‌, ವೋಟರ್‌ ಐಡಿ ಅಲ್ಲ.. ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಈ ಕಾರ್ಡ್‌ ಇರಲೇಬೇಕು

ಶಕ್ತಿ ಯೋಜನೆ ಕೂಡ ಸೇರಲಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆಯ ದುರ್ಬಳಕೆ ತಡೆಯಲು ಆಧಾರ್ ಕಾರ್ಡ್​ ಬದಲಿಗೆ ಸ್ಮಾರ್ಟ್​ ಕಾರ್ಡ್ ನೀಡಲು ಸರ್ಕಾರ ಮುಂದಾಗಿದೆ

Written ByBhimappa
Published: Sep 30, 2026, 01:47 PM IST|Updated: Sep 30, 2026, 01:54 PM IST
joinshare
ಆಧಾರ್‌ ಕಾರ್ಡ್‌, ವೋಟರ್‌ ಐಡಿ ಅಲ್ಲ.. ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಈ ಕಾರ್ಡ್‌ ಇರಲೇಬೇಕು
Image Credit: KSRTC

About the Author

Bhimappa

Bhimappa

ಭೀಮಪ್ಪ (Bhimappa) ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Karnataka free bus travel: ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಆಗುತ್ತಿದ್ದರಿಂದ ಅರ್ಹರಿಗೆ ಮಾತ್ರ ಸೌಲಭ್ಯ ಕಲ್ಪಿಸಲು ಮರುಪರಿಶೀಲನೆ ನಡೆಸಲಾಗುತ್ತಿದೆ. ಹೀಗಾಗಿ ಗೃಹಲಕ್ಷ್ಮೀ ಮತ್ತು ಗೃಹ ಜ್ಯೋತಿ ಯೋಜನೆಗಳನ್ನು ಈಗಾಗಲೇ ಪರಿಷ್ಕರಣೆ ಮಾಡಲಾಗುತ್ತಿದೆ. ಇದೀಗ ಇದರ ಸಾಲಿಗೆ ಶಕ್ತಿ ಯೋಜನೆ ಕೂಡ ಸೇರಲಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆಯ ದುರ್ಬಳಕೆ ತಡೆಯಲು ಆಧಾರ್ ಕಾರ್ಡ್​ ಬದಲಿಗೆ ಸ್ಮಾರ್ಟ್​ ಕಾರ್ಡ್ ನೀಡಲು ಸರ್ಕಾರ ಮುಂದಾಗಿದೆ. ಕರ್ನಾಟಕದ ಮಹಿಳೆಯರು ಮಾತ್ರ ಉಚಿತವಾಗಿ ಪ್ರಯಾನ ಮಾಡುತ್ತಿಲ್ಲ, ರಾಜ್ಯದಲ್ಲಿರುವ ಬೇರೆ ರಾಜ್ಯಗಳ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಈ ಸಂಬಂಧ ಸರ್ಕಾರ ಸ್ಮಾರ್ಟ್​ ಕಾರ್ಡ್ ನೀಡಲು ಮುಂದಾಗಿದೆ.  

ಬೇರೆ ರಾಜ್ಯದ ಮಹಿಳೆಯರು ನಕಲಿ ಆಧಾರ್ ಕಾರ್ಡ್‌ ಉಪಯೋಗಿಸಿಕೊಂಡು ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಸುಗಳಲ್ಲಿ ಸಂಚಾರ ಮಾಡುತ್ತಿದ್ದಾರೆ. ಇದರಿಂದ ನಾಲ್ಕು ಸಾರಿಗೆ ನಿಗಮಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗುತ್ತಿದೆ. ಇದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಇದೀಗ 250 ಕೋಟಿ ರುಪಾಯಿ ವೆಚ್ಚದಲ್ಲಿ ರಾಜ್ಯದ ಒಂದು ಕೋಟಿ ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್ ಕರೆದಿದೆ. ಈ ಸ್ಮಾರ್ಟ್‌ ಕೋರ್ಡ್‌ಗಳನ್ನು ಮೊದಲು ಬೆಂಗಳೂರಿನಲ್ಲಿ ಮಾತ್ರ ವಿತರಣೆ ಮಾಡಲಾಗುತ್ತದೆ. ಮೊದಲು ಬಿಎಂಟಿಸಿ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವುದು ಎಂದು ತಿಳಿಸಲಾಗಿದೆ.

ಬೆಂಗಳೂರು ಬಳಿಕ ಉಳಿದ ಮೂರು ಸಾರಿಗೆ ನಿಗಮಗಳ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ. ವೋಟರ್ ಐಡಿ, ಆಧಾರ್ ಕಾರ್ಡ್ ನೀಡಿದರೆ ಫಲಾನುಭವಿಗಳಾದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಅನ್ನು ನೀಡಲಾಗುತ್ತದೆ. ಸ್ಮಾರ್ಟ್ ಕಾರ್ಡ್‌ನಲ್ಲಿ ನಮ್ಮ‌ ಮೆಟ್ರೋ ಸಂಚಾರದ ಬಳಕೆಗೆ ಅವಕಾಶ ನೀಡಲಾಗಿದೆ. ಬಸ್‌ನಲ್ಲಿ ಸ್ಮಾರ್ಟ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದು. ಇದಕ್ಕೆ ಶಕ್ತಿಯ ಮಿಸ್ ಯೂಸ್ ತಡೆಯಲು ಶಕ್ತಿ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್ ಕರೆಯಲಾಗಿದೆ.

ವೋಟರ್ ಐಡಿ ಕಾರ್ಡ್ ಇದ್ದವರಿಗೆ ಮಾತ್ರ ಸ್ಮಾರ್ಟ್ ಕಾರ್ಡ್ ನೀಡಲು ತೀರ್ಮಾನ ಮಾಡಲಾಗಿದೆ. ಇದರಿಂದ ಬೇರೆ ರಾಜ್ಯದ ಮಹಿಳೆಯರು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡಲು ತಪ್ಪಿಸಬಹುದು ಅನ್ನೋ ಪ್ಲಾನ್ ಇದೆ.‌ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆ ಪ್ರಯೋಗಾತ್ಮಕವಾಗಿ ಬಿಎಂಟಿಸಿಯಲ್ಲಿ ಜಾರಿಯಾಗಲಿದೆ. ಈಗಾಗಲೇ ಬಿಎಂಟಿಸಿಯಲ್ಲಿ 11,000 ಇಟಿಎಂ ಯಂತ್ರಗಳು ಗುತ್ತಿಗೆ ಆಧಾರದಲ್ಲಿ ತೆಗೆದುಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಮಾತ್ರ ಈ ಸ್ಮಾರ್ಟ್‌ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುತ್ತದೆ. ಇದರ ಬಳಿಕ ಉಳಿದ ಮೂರು ಸಾರಿಗೆ ನಿಗಮಗಳಿಗೆ ಇದನ್ನು ವಿಸ್ತರಣೆ ಮಾಡಲಾಗುತ್ತದೆ. ಸ್ಮಾರ್ಟ್‌ ಕಾರ್ಡ್‌ ವಿತರಣೆಯಿಂದ ನಕಲಿ ಆಧಾರ್‌ ಕಾರ್ಡ್‌ನಲ್ಲಿ ಓಡಾಡುವವರಿಗೆ ಬಿಗ್‌ ಶಾಕ್‌ ಆಗಲಿದೆ. 

ಇನ್ನು ಹೊಸ ಸ್ಮಾರ್ಟ್‌ ಕಾರ್ಡ್‌ ಪಡೆಯುವುದು ಹೇಗೆ ಎಂದರೆ ನಗರದಲ್ಲಿ ನಿಮ್ಮ ಮನೆ ಸಮೀಪ ಇರುವ ಬೆಂಗಳೂರು ಒನ್‌, ಕರ್ನಾಟಕ ಒನ್‌, ಬಾಪೂಜಿ ಸೇವಾ ಕೇಂದ್ರ ಮತ್ತು ಸೈಬರ್‌ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಇದನ್ನು ಇನ್ನು ರೂಪಿಸಲಾಗುತ್ತಿದೆ. ಸರ್ಕಾರವೂ ಅಧಿಕೃತವಾಗಿ ಹೇಳಿದಾಗ ಎಲ್ಲಿ ಅರ್ಜಿ ಸಲ್ಲಿಕೆ ಮಾಡಿ ಮಹಿಳೆಯರು ಹೊಸ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು ಆಗಿದೆ. ಮುಂದಿನ ದಿನಗಳಲ್ಲಿ ಬಸ್‌ ನಿಲ್ದಾಣಗಳಲ್ಲೂ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.    

ಶಕ್ತಿ ಯೋಜನೆ ಕೇವಲ ಕರ್ನಾಟಕದ ಮಹಿಳೆಯರಿಗೆ ಮಾತ್ರ ಜಾರಿಗೆ ತರಲಾಗಿದೆ. ಆದರೆ ಇದೇ ಯೋಜನೆಯಲ್ಲಿ ಬೇರೆ ಬೇರೆ ರಾಜ್ಯದ ಮಹಿಳೆಯರು ಕೂಡ ಕರ್ನಾಟಕ ನಾಲ್ಕು ನಿಗಮದ ಬಸ್‌ಗಳಲ್ಲೂ ಪ್ರಯಾಣ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ದೇಶದ ಕೆಲವು ರಾಜ್ಯದ ಮಹಿಳೆಯರು ಇದ್ದಾರೆ. ಅವರು ಕೂಡ ಉಚಿತವಾಗಿ ಪ್ರಯಾಣ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿಂದೆ ಬೇರೆ ದೇಶದ ಮಹಿಳೆಯೂ ಉಚಿತವಾಗಿ ಪ್ರಯಾಣ ಮಾಡಿರುವ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಹೀಗಾಗಿ ಇದಕ್ಕೆ ಬ್ರೇಕ್‌ ಹಾಕಲು ಈ ಸ್ಮಾರ್ಟ್‌ ಕಾರ್ಡ್‌ ಅನ್ನು ಜಾರಿ ಮಾಡಲಾಗುತ್ತಿದೆ.  
 

Add Zee News as a Preferred Source
TAGS:
Kannada News