SOCIAL MEDIA

Newsletter

PARTNER SITES
Select Language Select State

ಸ್ಟಿಂಗ್ ಆಪರೇಷನ್ ರಾಜಕಾರಣಿಗಳಿಗೆ ಅಸಹ್ಯ ಹುಟ್ಟಿಸುತ್ತಿದೆ: ಸಚಿವ ಎಚ್.ಸಿ. ಬಾಲಕೃಷ್ಣ

ಕಾಂಗ್ರೆಸ್ ಪಕ್ಷ ಎಲ್ಲ ಜನಾಂಗದವರ ಪಕ್ಷವಾಗಿದೆ. ನಾವು ಘೋಷಣೆ ಮಾಡಿದ ಕೆಲಸಗಳನ್ನು ಮಾಡದಿದ್ದರೆ ಮತ್ತೆ ಮತ ಕೇಳಲು ಬರುವುದಿಲ್ಲ. ಓಡಿಹೋಗುವ ನಾಯಕರು ನಮ್ಮ ಪಕ್ಷದಲ್ಲಿಲ್ಲ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

Written By Chetana Devarmani
Published: Nov 03, 2026, 08:31 PM IST | Updated: Nov 03, 2026, 08:33 PM IST
Join

ಚಿತ್ರದುರ್ಗ: ಸ್ಟಿಂಗ್ ಆಪರೇಷನ್ ಎಂಬುದು ಅಸಹ್ಯ ಹುಟ್ಟಿಸುವಂತಾಗಿದೆ. ಬೆಳಗಾದರೆ ಸ್ಟಿಂಗ್ ಆಪರೇಷನ್ ಬಗ್ಗೆಯೇ ನೋಡುವಂತಾಗಿದೆ. ಜನರ ಅಭಿವೃದ್ಧಿಗಾಗಿ ಕೆಲಸ ಮಾಡುವುದನ್ನು ಬಿಟ್ಟು ಇಂತಹ ವಿಚಾರಗಳನ್ನೇ ಚರ್ಚಿಸುವುದು ಸರಿಯಲ್ಲ ಎಂದು ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಹೇಳಿದರು.

ಚಿತ್ರದುರ್ಗ ಜಿಲ್ಲೆಯ ಧರ್ಮಪುರ ಗ್ರಾಮದಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ವಿರೋಧ ಪಕ್ಷಗಳು ಸಾಕಷ್ಟು ಟೀಕೆ ಮಾಡಿದ್ದವು. ಗ್ಯಾರಂಟಿಗಳು ಬೋಗಸ್ ಚೆಕ್ ಎಂದು ಆರೋಪಿಸಿದ್ದರು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲೇ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ವಿರೋಧಿಗಳಿಗೆ ಉತ್ತರ ನೀಡಿದ್ದೇವೆ ಎಂದರು.

ಕಾಂಗ್ರೆಸ್ ಪಕ್ಷ ಎಲ್ಲ ಜನಾಂಗದವರ ಪಕ್ಷವಾಗಿದೆ. ನಾವು ಘೋಷಣೆ ಮಾಡಿದ ಕೆಲಸಗಳನ್ನು ಮಾಡದಿದ್ದರೆ ಮತ್ತೆ ಮತ ಕೇಳಲು ಬರುವುದಿಲ್ಲ. ಓಡಿಹೋಗುವ ನಾಯಕರು ನಮ್ಮ ಪಕ್ಷದಲ್ಲಿಲ್ಲ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕೇಂದ್ರದಲ್ಲಿ ಅಧಿಕಾರ ನೀಡಿರುವುದು ಜನರ ಪರವಾಗಿ ಕೆಲಸ ಮಾಡಲು. ಆದರೆ, ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನಹರಿಸುವ ಬದಲು ಸ್ಟಿಂಗ್ ಆಪರೇಷನ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

‘ಸ್ಟಿಂಗ್, ಸ್ಟಿಂಗ್ ಎಂದು ದಿನವಿಡೀ ನೋಡುವುದರಿಂದ ಅಸಹ್ಯವಾಗುತ್ತದೆ. ರಾಜಕಾರಣಿಗಳಿಗೆ ಇಂತಹ ಬೆಳವಣಿಗೆಗಳು ಅಸಹ್ಯ ಹುಟ್ಟಿಸುತ್ತಿವೆ. ಬೆಳಗಾದರೆ ಅವನು ಹೀಗೆ ಮಾಡಿದ, ಇವನು ಹಾಗೆ ಮಾಡಿದ ಎಂದು ನೋಡುವುದರಲ್ಲೇ ಕಾಲ ಕಳೆಯುವಂತಾಗಿದೆ. ಅಧಿಕಾರ ಕೊಟ್ಟಿರುವುದು ನಾಲ್ಕು ಜನರಿಗೆ ಒಳ್ಳೆಯದನ್ನು ಮಾಡಲು. ಒಳಿತು ಮಾಡು ಮನುಷ ಎಂಬಂತೆ ಎಲ್ಲರೂ ಒಳ್ಳೆಯ ಕೆಲಸ ಮಾಡಬೇಕು’ ಎಂದು ಹೇಳಿದರು.

ಅಧಿಕಾರ ಸಿಕ್ಕಿರುವುದು ಅಭಿವೃದ್ಧಿ ಕೆಲಸಗಳನ್ನು ಮಾಡಲು. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದೇ ನಮ್ಮ ಗುರಿ. ಘೋಷಣೆ ಮಾಡಿದ ಕೆಲಸಗಳನ್ನು ಮಾಡದಿದ್ದರೆ 2028ರ ಚುನಾವಣೆಯಲ್ಲಿ ನಮ್ಮನ್ನು ಅಧಿಕಾರಕ್ಕೆ ತರಬೇಡಿ. ಇದು ನಮ್ಮ ಸವಾಲು. ನಾವು ಕೆಲಸ ಮಾಡಿದರೆ ವಿರೋಧ ಪಕ್ಷದವರನ್ನು ಅಧಿಕಾರಕ್ಕೆ ತರಬೇಡಿ ಎಂದು ಸಚಿವ ಬಾಲಕೃಷ್ಣ ಹೇಳಿದರು. ಚುನಾವಣೆಯಲ್ಲಿ ವಿರೋಧಿಗಳಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ಜನರಿಗಾಗಿ ಕೆಲಸ ಮಾಡುವ ಮೂಲಕ ನಮ್ಮ ಸಾಧನೆಯನ್ನು ಸಾಬೀತುಪಡಿಸುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES