SOCIAL MEDIA

Newsletter

PARTNER SITES
Select Language Select State

ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ಪೊಲೀಸ್ ಅಧಿಕಾರಿಗೇ ಕಪಾಳಮೋಕ್ಷ

ಆರೋಪಿ ಸಚಿನ್ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದ ವೇಳೆ ಮನೆಯೊಂದರ ಗೋಡೆಗೆ ಕಾರು ಡಿಕ್ಕಿ ಹೊಡೆದಿದೆ.

Written By Chetana Devarmani
Published: Nov 14, 2026, 09:38 IST | Updated: Nov 14, 2026, 09:43 IST
Join

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ ಮಾಡಿದ ವ್ಯಕ್ತಿ ಯೊಬ್ಬರು ಕರ್ತವ್ಯ ದಲ್ಲಿದ್ದ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ಗೇ ಕಪಾಳ ಮೋಕ್ಷ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಕೃಷ್ಣ ಅವರಿಗೆ ಕಪಾಳ ಮೋಕ್ಷ ಮಾಡಿದ ಆರೋಪದ ಮೇಲೆ ಸಿಎಎಆರ್ ಕಾನ್ಸ್ಟೆಬಲ್ ಸಚಿನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಬ್ಯಾಡರಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮನೆ ಯೊಂದರ ಗೋಡೆಗೆ ಕಾರು ಡಿಕ್ಕಿ

ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಆರೋಪಿ ಸಚಿನ್ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದ ವೇಳೆ ಮನೆ ಯೊಂದರ ಗೋಡೆಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಆತಂಕಗೊಂಡ ಮನೆಯ ಮಾಲೀಕರು ತಕ್ಷಣವೇ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಆರೋಪಿ ಸಚಿನ್ ಸಂಚಾರಿ ಪೊಲೀಸ್ ಕಾನ್ಸ್ಟೆಬಲ್‌ ಗಳೊಂದಿಗೆ ಅತಿರೇಕವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.

 ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್

ಘಟನೆಯ ಮಾಹಿತಿ ತಿಳಿದು ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಕೃಷ್ಣ ಕೂಡ ಸ್ಥಳಕ್ಕೆ ಆಗಮಿಸಿದ್ದರು. ಅಪಘಾತದ ಬಗ್ಗೆ ಹಾಗೂ ಕಾರು ಚಾಲನೆ ಮಾಡುತ್ತಿದ್ದ ಸಂದರ್ಭದ ಕುರಿತು ಅವರು ಸಚಿನ್‌ ನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಮದ್ಯದ ಅಮಲಿ ನಲ್ಲಿದ್ದ ಸಚಿನ್, ಮಾತಿನ ಚಕಮಕಿ ನಡೆಸಿ ಏಕಾಏಕಿ ಸಬ್‌ ಇನ್‌ಸ್ಪೆಕ್ಟರ್ ಕೃಷ್ಣ ಅವರಿಗೆ ಕಪಾಳ ಮೋಕ್ಷ ಮಾಡಿದ್ದಾನೆ ಎಂದು ತಿಳಿದುಬಂದಿದೆ.

 ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲು:

ಘಟನೆಗೆ ಸಂಬಂಧಿಸಿದಂತೆ ಸಬ್‌ ಇನ್‌ಸ್ಪೆಕ್ಟರ್ ಕೃಷ್ಣ ಅವರು ಆರೋಪಿ ಸಚಿನ್ ವಿರುದ್ಧ ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬ್ಯಾಡರಹಳ್ಳಿ ಪೊಲೀಸರಿಂದ ಆರೋಪಿ ಬಂಧನ

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಪೊಲೀಸರು ಆರೋಪಿ ಸಚಿನ್‌ ನನ್ನು ಬಂಧಿಸಿದ್ದಾರೆ. ಕುಡಿದು ವಾಹನ ಚಲಾಯಿಸಿ ಅಪಘಾತ ಮಾಡಿದ್ದಲ್ಲದೆ, ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ಚರ್ಚೆಗೆ ಗ್ರಾಸವಾಗಿದೆ. 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES