• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ತೇಜಸ್ವಿ ಸೂರ್ಯ ಆಗ್ರಹ!

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ತೇಜಸ್ವಿ ಸೂರ್ಯ ಆಗ್ರಹ!

ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಹಳಿಗೆ ಬೀಳುತ್ತಿರುವ ಘಟನೆಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Written ByChetana Devarmani
Published: Nov 29, 2026, 14:27 IST|Updated: Nov 29, 2026, 14:28 IST
joinshare
ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ತೇಜಸ್ವಿ ಸೂರ್ಯ ಆಗ್ರಹ!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ!  ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ! ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

2

ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬಹುದು? ಪ್ಲಾಟ್‌ಫಾರಂ ಡೋರ್ ಹೊರತುಪಡಿಸಿ ಇರುವ ಪರ್ಯಾಯಗಳೇನು?

3

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ತೇಜಸ್ವಿ ಸೂರ್ಯ ಆಗ್ರಹ!

4

ವಿಜಯ್ ಸೇತುಪತಿ ಕಾಲರ್ ಹಿಡಿದ ರಾಜ್ ಬಿ ಶೆಟ್ಟಿ

5

ಇಂದಿನಿಂದ ನಂದಿನಿ ಮೊಸರು ದರ ಇಳಿಕೆ; ಹೊಸ ಬೆಲೆ ಎಷ್ಟು ಗೊತ್ತಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Bengaluru Metro: ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಹಳಿಗೆ ಬೀಳುತ್ತಿರುವ ಘಟನೆಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. 2024ರ ಜನವರಿಯಿಂದ ಈವರೆಗೆ ಮೆಟ್ರೋ ಹಳಿಗೆ ಪ್ರಯಾಣಿಕರು ಬಿದ್ದ 17 ಘಟನೆಗಳು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್‌ಗಳನ್ನು (Platform Screen Doors) ಅಳವಡಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮೂರನೇ ಬಾರಿಗೆ ಪತ್ರ ಬರೆದಿದ್ದಾರೆ.

ನವೆಂಬರ್ 27ರಂದು ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ದೃಷ್ಟಿಹೀನ ವಿಶೇಷಚೇತನ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ಹಳಿಗೆ ಬಿದ್ದ ಘಟನೆ ನಡೆದಿತ್ತು. ಈ ಘಟನೆಯ ಬೆನ್ನಲ್ಲೇ ತೇಜಸ್ವಿ ಸೂರ್ಯ ಅವರು ಮತ್ತೆ ಸರ್ಕಾರದ ಗಮನ ಸೆಳೆದಿದ್ದಾರೆ. ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಅಗತ್ಯವಾದ ಮೂಲಸೌಕರ್ಯಗಳ ಕೊರತೆಯಿದ್ದು, ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಅವರು ಸಚಿವರಿಗೆ ಬರೆದಿರುವ ಪತ್ರದಲ್ಲಿ 2024ರ ಜನವರಿಯಿಂದ ಈವರೆಗೆ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಒಟ್ಟು 17 ಪ್ರಯಾಣಿಕರು ಹಳಿಗೆ ಬಿದ್ದ ಘಟನೆಗಳು ವರದಿಯಾಗಿವೆ ಎಂದು ಉಲ್ಲೇಖಿಸಿದ್ದಾರೆ. ಈ ಘಟನೆಗಳಲ್ಲಿ ಆತ್ಮಹತ್ಯೆ, ಆತ್ಮಹತ್ಯೆ ಯತ್ನ ಹಾಗೂ ಆಕಸ್ಮಿಕವಾಗಿ ಹಳಿಗೆ ಬೀಳುವ ಪ್ರಕರಣಗಳೂ ಸೇರಿವೆ. ಹೀಗಾಗಿ ಎಲ್ಲ 17 ಘಟನೆಗಳನ್ನೂ ಆತ್ಮಹತ್ಯೆ ಯತ್ನಗಳೆಂದು ಪರಿಗಣಿಸುವಂತಿಲ್ಲ.

ಮೆಟ್ರೋ ನಿಲ್ದಾಣಗಳಲ್ಲಿ ಹಳಿಗಳ ಅಂಚಿನಲ್ಲಿರುವ ಸುರಕ್ಷತಾ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ. ವಿಶೇಷವಾಗಿ ಹಿರಿಯ ನಾಗರಿಕರು, ವಿಶೇಷಚೇತನರು ಹಾಗೂ ಜನದಟ್ಟಣೆಯ ಸಮಯದಲ್ಲಿ ರೈಲಿಗಾಗಿ ಕಾಯುವ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸಬೇಕು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ನವೆಂಬರ್ 10ರಂದು ಮೆಟ್ರೋ ನಿಲ್ದಾಣವೊಂದರಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿತ್ತು. ಇದರ ಬೆನ್ನಲ್ಲೇ ನವೆಂಬರ್ 27ರಂದು ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ದೃಷ್ಟಿಹೀನ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ಹಳಿಗೆ ಬಿದ್ದಿದ್ದರು. ತಕ್ಷಣವೇ ಮೆಟ್ರೋ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿತವಾಗಿ ಮೇಲಕ್ಕೆ ಕರೆತಂದಿದ್ದರು. ಈ ಘಟನೆಯಿಂದಾಗಿ ಸುಮಾರು 10 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು.

ಈ ಎರಡು ಘಟನೆಗಳು ಮೆಟ್ರೋ ನಿಲ್ದಾಣಗಳಲ್ಲಿನ ಸುರಕ್ಷತಾ ವ್ಯವಸ್ಥೆಯ ಕುರಿತು ಮತ್ತೆ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ವಿಶೇಷವಾಗಿ ದೃಷ್ಟಿಹೀನ ಪ್ರಯಾಣಿಕರು ಹಾಗೂ ಇತರ ವಿಶೇಷಚೇತನರು ಮೆಟ್ರೋ ನಿಲ್ದಾಣಗಳಲ್ಲಿ ಸುರಕ್ಷಿತವಾಗಿ ಸಂಚರಿಸಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕೆಂಬ ಬೇಡಿಕೆ ಹೆಚ್ಚಾಗಿದೆ.

ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್‌ಗಳನ್ನು ಅಳವಡಿಸುವಂತೆ ತೇಜಸ್ವಿ ಸೂರ್ಯ ಈ ಹಿಂದೆಯೂ ಸರ್ಕಾರದ ಗಮನ ಸೆಳೆದಿದ್ದರು. ಆದರೆ ಇದುವರೆಗೆ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಮೂರನೇ ಬಾರಿಗೆ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದು, ಈ ಯೋಜನೆಯನ್ನು ನಿಗದಿತ ಕಾಲಮಿತಿಯಲ್ಲಿ ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ.

ಹೆಚ್ಚಿನ ಪ್ರಯಾಣಿಕರು ಸಂಚರಿಸುವ ಮೆಟ್ರೋ ನಿಲ್ದಾಣಗಳು, ಇಂಟರ್‌ಚೇಂಜ್ ಕೇಂದ್ರಗಳು ಹಾಗೂ ಜನದಟ್ಟಣೆ ಹೆಚ್ಚಿರುವ ಪ್ಲಾಟ್‌ಫಾರಂಗಳಲ್ಲಿ ಮೊದಲ ಆದ್ಯತೆಯಾಗಿ ಈ ಬಾಗಿಲುಗಳನ್ನು ಅಳವಡಿಸಬೇಕು. ನಂತರ ಹಂತ ಹಂತವಾಗಿ ಉಳಿದ ಎಲ್ಲ ನಿಲ್ದಾಣಗಳಿಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಎಂದರೆ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರಂ ಮತ್ತು ರೈಲು ಹಳಿಗಳ ನಡುವೆ ಅಳವಡಿಸುವ ಗಾಜಿನ ಸುರಕ್ಷತಾ ಬಾಗಿಲುಗಳ ವ್ಯವಸ್ಥೆ. ರೈಲು ನಿಲ್ದಾಣಕ್ಕೆ ಬಂದು ನಿಂತಾಗ ರೈಲಿನ ಬಾಗಿಲುಗಳಿಗೆ ಹೊಂದಿಕೆಯಾಗುವಂತೆ ಈ ಬಾಗಿಲುಗಳು ತೆರೆದುಕೊಳ್ಳುತ್ತವೆ. ಪ್ರಯಾಣಿಕರು ರೈಲಿನೊಳಗೆ ಪ್ರವೇಶಿಸಿದ ನಂತರ ಅಥವಾ ಹೊರಬಂದ ಬಳಿಕ ಬಾಗಿಲುಗಳು ಮುಚ್ಚಿಕೊಳ್ಳುತ್ತವೆ.

ಇದರಿಂದ ಪ್ರಯಾಣಿಕರು ಆಕಸ್ಮಿಕವಾಗಿ ಹಳಿಗೆ ಬೀಳುವುದನ್ನು ತಡೆಯಲು ಸಾಧ್ಯವಾಗುತ್ತದೆ. ಅಲ್ಲದೆ, ಉದ್ದೇಶಪೂರ್ವಕವಾಗಿ ಹಳಿಗೆ ಇಳಿಯುವ ಸಾಧ್ಯತೆಯನ್ನೂ ಕಡಿಮೆ ಮಾಡಬಹುದು. ಜನದಟ್ಟಣೆಯ ಸಮಯದಲ್ಲಿ ಪ್ಲಾಟ್‌ಫಾರಂ ಅಂಚಿನಲ್ಲಿ ಸಂಭವಿಸಬಹುದಾದ ಅಪಘಾತಗಳನ್ನು ತಡೆಗಟ್ಟಲು ಈ ವ್ಯವಸ್ಥೆ ಸಹಕಾರಿಯಾಗಿದೆ.

ಈಗಾಗಲೇ ಕಾರ್ಯಾಚರಣೆಯಲ್ಲಿರುವ ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರವಲ್ಲದೆ, ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ಎಲ್ಲ ಹೊಸ ಮೆಟ್ರೋ ಮಾರ್ಗಗಳು ಮತ್ತು ನಿಲ್ದಾಣಗಳಲ್ಲೂ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್‌ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ.

ಹೊಸ ಮೆಟ್ರೋ ಯೋಜನೆಗಳ ವಿವರವಾದ ಯೋಜನಾ ವರದಿ (DPR) ಸಿದ್ಧಪಡಿಸುವ ಹಂತದಲ್ಲೇ ಈ ಸುರಕ್ಷತಾ ವ್ಯವಸ್ಥೆಗೆ ಅಗತ್ಯವಾದ ತಾಂತ್ರಿಕ ಹಾಗೂ ಹಣಕಾಸಿನ ವ್ಯವಸ್ಥೆ ಮಾಡಿಕೊಳ್ಳಬೇಕು. ಯೋಜನೆ ಪೂರ್ಣಗೊಂಡ ನಂತರ ಹೆಚ್ಚುವರಿ ವೆಚ್ಚ ಮಾಡಿ ಅಳವಡಿಸುವ ಬದಲು ಆರಂಭದಿಂದಲೇ ಸುರಕ್ಷತಾ ವ್ಯವಸ್ಥೆಯನ್ನು ಯೋಜನೆಯ ಭಾಗವಾಗಿಸಬೇಕು ಎಂದು ಹೇಳಿದ್ದಾರೆ.

ಬೆಂಗಳೂರು ನಗರದ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಸಮಗ್ರ ಸುರಕ್ಷತಾ ಆಡಿಟ್ ನಡೆಸಬೇಕು ಎಂಬುದು ಸಂಸದರ ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ. ಪ್ಲಾಟ್‌ಫಾರಂ ಅಂಚಿನ ಸುರಕ್ಷತೆ, ಪ್ರಯಾಣಿಕರ ಚಲನವಲನ, ಜನದಟ್ಟಣೆ ನಿರ್ವಹಣೆ ಹಾಗೂ ವಿಶೇಷಚೇತನರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಶೀಲಿಸಬೇಕು. ಈ ಪರಿಶೀಲನೆಯ ನಂತರ ಕೈಗೊಂಡ ಕ್ರಮಗಳ ಕುರಿತು ಕಾಲಮಿತಿಯ ಆಕ್ಷನ್ ಟೇಕನ್ ರಿಪೋರ್ಟ್ (Action Taken Report) ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದಲ್ಲದೆ, ಸಿಎಜಿಯ 2026ರ ಕಾರ್ಯಕ್ಷಮತೆ ಲೆಕ್ಕಪರಿಶೋಧನಾ ವರದಿ ಸಂಖ್ಯೆ 7ರಲ್ಲಿಯೂ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್‌ಗಳನ್ನು ಅಳವಡಿಸದಿರುವ ವಿಚಾರ ಪ್ರಸ್ತಾಪವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೆಟ್ರೋ ಜಾಲದ ವಿಸ್ತರಣೆಯಷ್ಟೇ ಪ್ರಯಾಣಿಕರ ಸುರಕ್ಷತೆಗೂ ಆದ್ಯತೆ ನೀಡಬೇಕು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಮೆಟ್ರೋ ಪ್ರಯಾಣಿಕರು ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಸಂಚರಿಸುತ್ತಿದ್ದು, ಅವರಿಗೆ ಸುರಕ್ಷಿತ ಪ್ರಯಾಣದ ಭರವಸೆ ಕಲ್ಪಿಸುವುದು ಸರ್ಕಾರ ಮತ್ತು ಬಿಎಂಆರ್‌ಸಿಎಲ್‌ನ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ಅವರು ವೈಯಕ್ತಿಕವಾಗಿ ಮಧ್ಯಪ್ರವೇಶಿಸಿ, ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ಸ್ಪಷ್ಟ ಯೋಜನೆ ಹಾಗೂ ಕಾಲಮಿತಿ ನಿಗದಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ಪತ್ರದ ಪ್ರತಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೂ ಕಳುಹಿಸಿದ್ದಾರೆ. 2024ರಿಂದ ವರದಿಯಾಗಿರುವ 17 ಘಟನೆಗಳ ಹಿನ್ನೆಲೆಯಲ್ಲಿ ಮೆಟ್ರೋ ಸುರಕ್ಷತೆ ಮತ್ತೆ ಚರ್ಚೆಗೆ ಬಂದಿದ್ದು, ಸಂಸದರ ಮೂರನೇ ಪತ್ರಕ್ಕೆ ರಾಜ್ಯ ಸರ್ಕಾರ ಮತ್ತು ಬಿಎಂಆರ್‌ಸಿಎಲ್ ಯಾವ ರೀತಿಯಲ್ಲಿ ಪ್ರತಿಕ್ರಿಯಿಸಲಿವೆ ಎಂಬುದು ಕುತೂಹಲ ಮೂಡಿಸಿದೆ.
 

Add Zee News as a Preferred Source
TAGS:
Kannada News